Homeಕರ್ನಾಟಕಒಪಿಎಸ್ ಜಾರಿ ಸಾಧ್ಯವಿಲ್ಲ ಎಂಬ ಸಿದ್ಧ ಉತ್ತರ ಬದಿಗಿಟ್ಟು ಸದನದಲ್ಲಿ ಚರ್ಚೆ ಮಾಡಲಿ: ಹೋರಾಟಗಾರರ ಪಟ್ಟು

ಒಪಿಎಸ್ ಜಾರಿ ಸಾಧ್ಯವಿಲ್ಲ ಎಂಬ ಸಿದ್ಧ ಉತ್ತರ ಬದಿಗಿಟ್ಟು ಸದನದಲ್ಲಿ ಚರ್ಚೆ ಮಾಡಲಿ: ಹೋರಾಟಗಾರರ ಪಟ್ಟು

- Advertisement -
- Advertisement -

“ನೂತನ ಪಿಂಚಣಿ ಯೋಜನೆ (ಎನ್‌ಪಿಸ್‌) ಕುರಿತು ಚುಕ್ಕಿ ಗುರುತಿನ ಪ್ರಶ್ನೆಯನ್ನು ಕೇಳಿದವರಿಗೆ ಸರ್ಕಾರ ಸಿದ್ಧ ಉತ್ತರವನ್ನು ಈವರೆಗೆ ನೀಡುತ್ತಾ ಬಂದಿದೆ. ಶಾಸಕ ರೇಣುಕಾಚಾರ್ಯರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಒಪಿಎಸ್ (ಹಳೆಯ ಪಿಂಚಣಿ ಯೋಜನೆ) ಜಾರಿಗೊಳಿಸುವ ಯೋಜನೆ ಇಲ್ಲ ಎಂದಿದ್ದಾರೆ. ಇದನ್ನು ಬದಿಗಿಟ್ಟು ಸದನದಲ್ಲಿ ಸರ್ಕಾರ ಚರ್ಚೆ ಮಾಡಬೇಕು” ಎಂದು ’ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’ದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್.ದಯಾನಂದ್ ಒತ್ತಾಯಿಸಿದರು.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ಸಿದ್ಧ ಉತ್ತರವನ್ನು ಈಗ ನೀಡಿದ್ದಾರೆ. ಚರ್ಚೆ ಮಾಡುವುದಾಗಿಯೂ ಹೇಳಿದ್ದಾರೆ. ನಾವು ಅದಕ್ಕಾಗಿ ಕಾಯುತ್ತಿದ್ದೇವೆ. ಈ ಚರ್ಚೆ ಆದ ನಂತರ ಸದನದಲ್ಲಿ ಕೈಗೊಂಡ ನಿರ್ಧಾರದ ಆಧಾರದಲ್ಲಿ ನಮ್ಮ ಹೋರಾಟದ ನಿಲುವನ್ನು ವ್ಯಕ್ತಪಡಿಸುತ್ತೇವೆ” ಎಂದಿದ್ದಾರೆ.

“ಒಪಿಎಸ್‌ನಿಂದ ಆರ್ಥಿಕ ಹೊರೆಯಾಗುತ್ತದೆ” ಎಂಬ ಸರ್ಕಾರದ ನಿಲುವನ್ನು ಟೀಕಿಸಿದ ಅವರು, “ಆರ್ಥಿಕ ಹೊರೆಯಾಗುತ್ತದೆ ಎಂಬುದು ಸುಳ್ಳು. ಇಲ್ಲಿಯವರೆಗೆ ಎನ್‌ಪಿಎಸ್ ಜಾರಿಗೊಳಿಸದೆ ಒಪಿಎಸ್‌ ಅನ್ನೇ ಮುಂದುವರಿಸುತ್ತಿರುವ ಪಶ್ಚಿಮ ಬಂಗಾಳದ ಆರ್ಥಿಕ ಸ್ಥಿತಿ ಉತ್ತಮವಾಗಿರುವುದು ಹೇಗೆ? 2021- 22ರಲ್ಲಿ ಪಶ್ಚಿಮ ಬಂಗಾಳದ ಅಭಿವೃದ್ಧಿ ಪ್ರಮಾಣ ಶೇ. 12.8ರಷ್ಟಿದೆ. ಕರ್ನಾಟಕದಲ್ಲಿ ಶೇ. 9.5ರಷ್ಟಿದೆ” ಎಂದು ವಿವರಿಸಿದರು.

“ರಾಜಸ್ಥಾನ, ಛತ್ತೀಸ್‌ಘಡ, ಜಾರ್ಖಾಂಡ್‌ ರಾಜ್ಯಗಳಂತೆ ಸರ್ಕಾರ ಚಿಂತನೆ ಮಾಡಬೇಕು. ಹಿಮಾಚಲ ಪ್ರದೇಶದಲ್ಲಿ ವೋಟ್ ಫಾರ್‌ ಒಪಿಎಸ್ ಅಭಿಯಾನ ಮಾಡಿದ್ದೆವು. ಸರ್ಕಾರ ಬದಲಾಗಲು ಕಾರಣವಾದೆವು. ಈಗ ಮೊದಲ ಕ್ಯಾಬಿನೇಟ್‌ನಲ್ಲಿಯೇ ಒಪಿಎಸ್ ಜಾರಿಗೊಳಿಸುವುದಾಗಿ ಸರ್ಕಾರ ಹೇಳಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ನೌಕರರ ಮತಗಳು ನಿರ್ಣಾಯಕವಾಗಲಿವೆ. ಒಂದು ಕ್ಷೇತ್ರದಲ್ಲಿ ಕನಿಷ್ಠ ಮೂರು ಸಾವಿರ ಮತಗಳು ಒಪಿಎಸ್‌ಗಾಗಿ ಬಿದ್ದರೆ, ಫಲಿತಾಂಶ ವ್ಯತಿರಿಕ್ತವಾಗಿರುತ್ತದೆ. ಈ ಎಚ್ಚರಿಕೆ ಆಡಳಿತರೂಢ ಪಕ್ಷಗಳಿಗೆ ಖಂಡಿತ ಇದೆ. ಹೀಗಾಗಿ ಸದನದಲ್ಲಿ ಎನ್‌ಪಿಎಸ್ ರದ್ದುಗೊಳಿಸುವ ಚರ್ಚೆ ಮಾಡುತ್ತಾರೆಂಬ ವಿಶ್ವಾಸವಿದೆ” ಎಂದರು.

“ಪ್ರಸ್ತುತ ಒಬ್ಬ ಮನುಷ್ಯನ ಜೀವಿತಾವಧಿ ಸರಾಸರಿ 72 ವರ್ಷಗಳು. 60 ವರ್ಷಕ್ಕೆ ನಾವು ನಿವೃತ್ತಿಯಾದರೆ 12 ವರ್ಷಗಳು ಮಾತ್ರ ಪಿಂಚಣಿಯನ್ನು ಸರ್ಕಾರ ಕೊಡಬೇಕಾಗುತ್ತದೆ. ಸರ್ಕಾರ ಮತ್ತು ಸಮಾಜಕ್ಕಾಗಿ ದುಡಿದ ವರ್ಗಕ್ಕೆ ಒಪಿಎಸ್‌ ನೀಡಲು ಸಾಧ್ಯವಿಲ್ಲವಾ? ಎಷ್ಟೋ ಮಂದಿ ನೌಕರರು ಈಗ 500, 1000 ಪಿಂಚಣಿ ಪಡೆಯುತ್ತಾ, ಇಳಿ ವಯಸ್ಸಿನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ದುಡಿಯುತ್ತಿದ್ದಾರೆ” ಎಂದು ವಿಷಾದಿಸಿದರು.

“ಇತ್ತೀಚೆಗೆ ಗಂಗಾವತಿಗೆ ಹೋಗಿದ್ದೆ. ಅನ್ನದಾನಪ್ಪ ಎಂಬುವರ ನೋವಿನ ಕತೆ ಕೇಳಿ ಆತಂಕಗೊಂಡೆ. ಅವರು ಒಟ್ಟು 33 ವರ್ಷ ಸರ್ಕಾರಕ್ಕೆ ಸೇವೆ ಸಲ್ಲಿಸಿದ್ದಾರೆ. 2009ರಲ್ಲಿ ಪರ್ಮನೆಂಟ್ ಮಾಡಲಾಗುತ್ತದೆ. 13 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಅವರಿಗೆ 548 ರೂಪಾಯಿ ಪಿಂಚಣಿ ನಿಗದಿಯಾಗುತ್ತದೆ. ಈ ಹಣದಲ್ಲಿ ಅವರು ಒಂದು ಗ್ಯಾಸ್ ಸಿಲಿಂಡರ್‌ ಕೂಡ ಖರೀದಿಸಲು ಸಾಧ್ಯವಿಲ್ಲ. ವಾರದ ಸಂತೆ ಖರ್ಚು, ಮನೆಯ ಬಾಡಿಗೆ ಕಟ್ಟಲು ಆಗುತ್ತದೆಯಾ? ಸರ್ಕಾರಿ ನೌಕರರು ಒತ್ತಡದ ಸೇವೆಯನ್ನು ಸಲ್ಲಿಸುತ್ತಾ ನಲವತ್ತು ವರ್ಷಕ್ಕೆ ಮಧುಮೇಹ, ರಕ್ತದೊತ್ತಡ ಮೊದಲಾದ ರೋಗಗಳಿಗೆ ತುತ್ತಾಗುತ್ತಾರೆ. ನಿವೃತ್ತಿಯಾದ ಬಳಿಕ ಕನಿಷ್ಠ ಮಾತ್ರೆಗಳನ್ನು ಖರೀದಿಸಲು ಸಾಧ್ಯವಾಗದ ಸ್ಥಿತಿಗೆ ಎನ್‌ಪಿಎಸ್ ತಂದಿಟ್ಟಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿರಿ: ’ವೋಟ್ ಫಾರ್ ಒಪಿಎಸ್’; ಸರ್ಕಾರಿ ನೌಕರರ ಕೂಗು ಆಲಿಸುವರೇ ಬೊಮ್ಮಾಯಿ?

ಎನ್‌ಪಿಎಸ್‌ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರಾದ ಚಂದ್ರಕಾಂತ ತಳವಾರ ಪ್ರತಿಕ್ರಿಯಿಸಿ, “ಸರ್ಕಾರಿ ನೌಕರರ ಸಮಸ್ಯೆಯ ಕುರಿತು ಚರ್ಚಿಸಬೇಕು ಎಂದು ನೂರಕ್ಕೂ ಹೆಚ್ಚು ಶಾಸಕರು ಆಗ್ರಹಿಸುತ್ತಿದ್ದಾರೆ. ಸದನದಲ್ಲಿ ಮುಖ್ಯಮಂತ್ರಿಯವರು ನೀಡುವ ಮೌಖಿಕವಾದ ಉತ್ತರ ರೆಕಾರ್ಡ್ ಆಗುತ್ತದೆ. ಅವರ ಉತ್ತರದ ಬಳಿಕ ನಮ್ಮ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ. ಒಂದು ಗಟ್ಟಿಯಾದ ಹೋರಾಟಕ್ಕೆ ನಾವು ಮುನ್ನುಡಿಯನ್ನು ಬರೆದಿದ್ದೇವೆ. ಹತ್ತುಗಳಿಂದ ಮಾಡುತ್ತಿರುವ ಅಹೋರಾತ್ರಿ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ಎನ್‌ಪಿಎಸ್ ನೌಕರರ ಸಂಘದ ಸುಮಾರು 20 ಜನ ಮುಖಂಡರು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಕ್ಷರಿಯವರನ್ನು ಭೇಟಿಯಾಗಿ ಮಾತನಾಡಿದ್ದಾರೆ. ನಮ್ಮ ಸಂಧ್ಯಾಕಾಲದ ಬದುಕಿನ ಸವಾಲನ್ನು ತಿಳಿಸಿದ್ದೇವೆ. ಚುನಾವಣೆಗೆ ನಿಂತಿದ್ದ ಸಂದರ್ಭದಲ್ಲಿ ಎನ್‌ಪಿಎಸ್ ರದ್ದತಿ ಮಾಡಲು ಹೋರಾಡುವುದಾಗಿ ತಾವು ನೀಡಿದ್ದ ಭರವಸೆಗೆ ಬದ್ಧರಾಗಿರಬೇಕೆಂದು ಕೋರಿದ್ದೇವೆ. ಹೋರಾಟಕ್ಕೆ ಬೆಂಬಲ ನೀಡಬೇಕೆಂದು ತಿಳಿಸಿದ್ದೇವೆ. ಅವರು ತಮ್ಮ ನಿಲುವನ್ನು ಬದಲಿಸಿಕೊಂಡು ನಮ್ಮ ಹೋರಾಟದ ಪರವಾಗಿ ಮಾತನಾಡಿದ್ದಾರೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...