Homeಕರ್ನಾಟಕಪುತ್ತೂರು: ಹಿಂದೂ ಯುವತಿಯ ಜೊತೆಗಿದ್ದ ಕಾರಣಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ

ಪುತ್ತೂರು: ಹಿಂದೂ ಯುವತಿಯ ಜೊತೆಗಿದ್ದ ಕಾರಣಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ

- Advertisement -
- Advertisement -

ಕೋಮು ಸೂಕ್ಷ್ಮ ಜಿಲ್ಲೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇಂದು ಪುತ್ತೂರು ತಾಲೂಕಿನಲ್ಲಿ ಹಿಂದೂ ಯುವತಿಯೊಂದಿಗೆ ಮಾತನಾಡಿದ ಮುಸ್ಲಿಂ ಯುವಕನಿಗೆ ಸ್ಥಳೀಯರು ಹಿಗ್ಗಾಮುಗ್ಗವಾಗಿ ಥಳಿಸಿದ ಘಟನೆ ನಡೆದಿದೆ.

ಹಿಂದೂ ಧರ್ಮದ ಯುವತಿಯೊಂದಿಗೆ ಸಿನಿಮಾ ನೋಡಲು ಹೋಗಿದ್ದ ಮುಸ್ಲಿಂ ಯುವಕನೊಬ್ಬನ ಮೇಲೆ ಪುಂಡರ ಗುಂಪೊಂದು ದಾಳಿ ಮಾಡಿರುವ ಘಟನೆ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.

ಮರೀಲ್ ಕಾಡುಮನ ನಿವಾಸಿ ಇಬ್ರಾಹಿಂ ಅವರ ಪುತ್ರ ಮಹಮ್ಮದ್ ಪಾಲಿಶ್ (18) ಮೇಲೆ ದಾಳಿ ನಡೆದಿದ್ದು, ಈ ವಿದ್ಯಾರ್ಥಿಯ ಮೇಲೆ ಮನಸೋಇಚ್ಛೆ ಹಲ್ಲೆ ಮಾಡಿದ್ದಾರೆ. ಯುವಕನ ಮೈಮೇಲೆ ಬಾಸುಂಡೆಗಳು ಎದ್ದಿವೆ.

ಮಹಮ್ಮದ್ ಪಾಲಿಶ್ ಹಾಗೂ ಆತನ ಜೊತೆಗಿದ್ದ ಯುವತಿ ಇಬ್ಬರೂ ವಿದ್ಯಾರ್ಥಿಗಳಾಗಿದ್ದು, ಇಬ್ಬರೂ ನಗರದ ಮಾಲ್‌ವೊಂದರ ಚಿತ್ರಮಂದಿರದಲ್ಲಿ ಒಟ್ಟಿಗೆ ಸಿನಿಮಾ ಸಿನಿಮಾ ವೀಕ್ಷಿಸಿದ್ದರು. ಬಳಿಕ ಜ್ಯೂಸ್ ಕುಡಿಯಲು ಜೊತೆಯಲ್ಲೇ ಹೋಗಿದ್ದರು. ಈ ವೇಳೆ ಅಲ್ಲಿಗೆ ಬಂದ ಯುವಕರ ಗುಂಪೊಂದು ಮಹಮ್ಮದ್ ಪಾರಿಕ್‌ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ” ಎಂದು ಹೇಳಲಾಗಿದೆ.

”ಸಧ್ಯ ಹಲ್ಲೆಗೊಳದಾಗ ಯುವಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹಲ್ಲೆ ನಡೆಸಿದ ಮೂವರಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಮತ್ತೋರ್ವ ಬಾಲಕನೇ ಅಥವಾ ವಯಸ್ಕನೇ ಎಂಬ ಬಗ್ಗೆ ವಯಸ್ಸನ್ನು ಇನ್ನಷ್ಟೇ ಖಾತರಿಪಡಿಸಿಕೊಳ್ಳಬೇಕಿದೆ. ಮೂರನೇ ಆರೋಪಿಯ ಸುಳಿವು ಸಿಕ್ಕಿದ್ದು, ಶೀಘ್ರವೇ ಬಂಧಿಸಲಿದ್ದೇವೆ” ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವಿಕ್ರಮ್ ಅಮಟೆ ತಿಳಿಸಿದ್ದಾರೆ.

”ಘಟನೆ ಬಗ್ಗೆ ಹಲ್ಲೆಗೊಳಗಾದ ಮಹಮ್ಮದ್ ಪಾರಿಶ್ ದೂರು ನೀಡಿದ್ದು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕ ಯುವತಿ ಜೊತೆಯಲ್ಲಿ ಸಿನಿಮಾ ವೀಕ್ಷಿಸಲು ತೆರಳಿದ ಬಗ್ಗೆ ದೂರಿನಲ್ಲಿ ಉಲ್ಲೇಖವಿಲ್ಲ. ಐದಾರು ಮಂದಿಯ ಗುಂಪೊಂದು ಬಸ್ ನಿಲ್ದಾಣದ ಬಳಿ ಹಲ್ಲೆ ನಡೆಸಿದೆ ಎಂದು ಮಾತ್ರ ಉಲ್ಲೇಖಿಸಿದ್ದಾರೆ. ಆರೋಪಿಗಳ ಪತ್ತೆಗೆ ಕ್ರಮ ವಹಿಸಿದ್ದೇವೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪೊಲೀಸ್ ಇನ್‌ಸ್ಪೆಕ್ಟರ್ ಸುನಿಲ್ ಕುಮಾರ್ ಹಾಗೂ ಪಿಎಸ್‌ಐ ಶ್ರೀಕಾಂತ್‌ ರಾಥೋಡ್ ನೇತೃತ್ವದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದು ‘ಮತೀಯ ಗೂಂಡಾಗಿರಿ’ ಎಂದು ಎಸ್‌ಡಿಪಿಐ ಹಾಗೂ ಮುಸ್ಲಿಂ ಯುವಜನ ಪರಿಷತ್‌ ಖಂಡಿಸಿವೆ.

ಇತ್ತೀಚೆಗಷ್ಟೇ ಹಿಂದೂ ಹುಡುಗಿಯೊಂದಿಗೆ ತಿರುಗಾಡುತ್ತಿದ್ದ ಮುಸ್ಲಿಂ ಯುವಕನಿಗೆ ಥಳಿಸಿದ ಘಟನೆ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿತ್ತು. ವಿದ್ಯಾರ್ಥಿನಿಯೊಂದಿಗೆ ತಿರುಗಾಡುತ್ತಿದ್ದ ಬಗ್ಗೆ ಮಾಹಿತಿಯಿದ್ದು, ಕುಕ್ಕೆ ಸುಬ್ರಹ್ಮಣ್ಯ ಬಸ್​ಸ್ಟ್ಯಾಂಡ್​ನಲ್ಲಿ ಈ ಜೋಡಿ ಕಂಡು ಬಂದಿದೆ. ಬಳಿಕ ಕುಮಾರಧಾರ ಬಳಿ ಬಂದಾಗ ಗುಂಪೊಂದು ಯುವಕನಿಗೆ ಥಳಿಸಿದ್ದಾರೆ. ಯುವಕನ ದೂರಿನಂತೆ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿದ್ದರು. ವಿದ್ಯಾರ್ಥಿನಿ ಅಪ್ರಾಪ್ತೆಯಾಗಿದ್ದು, ಆಕೆಯ ತಂದೆ ನೀಡಿದ ದೂರಿನ ಅನ್ವಯ ಯುವಕನ ವಿರುದ್ದ ಸುಬ್ರಹ್ಮಣ್ಯ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...