Homeಮುಖಪುಟವಿದ್ಯಾರ್ಥಿಗಳನ್ನು ಮಸೀದಿಗೆ ಕಾರ್ಯಾಗಾರಕ್ಕೆ ಕರೆದೊಯ್ದ ಪ್ರಾಂಶುಪಾಲರ ವಿರುದ್ಧ ದೂರು ದಾಖಲು

ವಿದ್ಯಾರ್ಥಿಗಳನ್ನು ಮಸೀದಿಗೆ ಕಾರ್ಯಾಗಾರಕ್ಕೆ ಕರೆದೊಯ್ದ ಪ್ರಾಂಶುಪಾಲರ ವಿರುದ್ಧ ದೂರು ದಾಖಲು

- Advertisement -
- Advertisement -

ವಿದ್ಯಾರ್ಥಿಗಳನ್ನು ಮಸೀದಿಗೆ ಕಾರ್ಯಾಗಾರಕ್ಕೆ ಕರೆದೊಯ್ದ ಪ್ರಾಂಶುಪಾಲರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದ್ದು, ಇದೀಗ ಅವರನ್ನು ಅಮಾನತುಗೊಳಿಸಿದ ಘಟನೆ ದಕ್ಷಿಣ ಗೋವಾದಲ್ಲಿ ನಡೆದಿದೆ.

ಕೇಶವ್ ಸ್ಮೃತಿ ಹೈಯರ್ ಸೆಕೆಂಡರಿ ಶಾಲೆಯ 11ನೇ ತರಗತಿಯ ವಿದ್ಯಾರ್ಥಿಗಳನ್ನು ಮಸೀದಿಗೆ ಕಾರ್ಯಾಗಾರಕ್ಕೆ ಕರೆದುಕೊಂಡು ಹೋಗಿದ್ದಕ್ಕೆ ಶಾಲಾ ಆಡಳಿತ ಮಂಡಳಿಯು ಪ್ರಾಂಶುಪಾಲರನ್ನು ಅಮಾನತುಗೊಳಿಸಿದೆ. ಈ ಕುರಿತು ರಾಜ್ಯ ಶಿಕ್ಷಣ ಇಲಾಖೆ ಕೂಡ ಶಾಲಾ ಆಡಳಿತ ಮಂಡಳಿಯಿಂದ ವಿವರಣೆ ಕೇಳಿದೆ.

ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು, ದೇಶವಿರೋಧಿ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲರ ವಿರುದ್ಧ ವಾಸ್ಕೋದಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕಾರ್ಯಾಗಾರವನ್ನು ನಿಷೇಧಿತ ಪಾಪ್ಯುಲರ್ ಫ್ರಂಟ್‌ನೊಂದಿಗೆ ಸಂಬಂಧ ಹೊಂದಿರುವ ಸಂಘಟನೆಯು ಆಯೋಜಿಸಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಶಿಕ್ಷಣ ಇಲಾಖೆಯ ನಿರ್ದೇಶಕ ಶೈಲೇಶ್ ಜಿಂಗ್ಡೆ ಈ ಕುರಿತು ಮಾತನಾಡಿದ್ದು, ಆಲ್ಟೊ-ಡಬೋಲಿಮ್‌ನಲ್ಲಿರುವ ಕೇಶವ್ ಸ್ಮೃತಿ ಹೈಯರ್ ಸೆಕೆಂಡರಿ ಶಾಲೆಯ 11 ನೇ ತರಗತಿಯ ವಿದ್ಯಾರ್ಥಿಗಳನ್ನು ಮಸೀದಿಗೆ ಕಾರ್ಯಾಗಾರಕ್ಕೆ ಕರೆದುಕೊಂಡು ಹೋಗಲಾಗಿದೆ. ಈ ಕುರಿತು ಇಲಾಖೆಯು ಶಾಲಾ ಆಡಳಿತ ಮಂಡಳಿಯಿಂದ ವಿವರಣೆ ಕೇಳಿದೆ. ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಶಾಲಾ ಮುಖ್ಯೋಪಾಧ್ಯಾಯ ಶಂಕರ್ ಗಾಂವ್ಕರ್ ಈ ಕುರಿತು ಮಾತನಾಡಿದ್ದು, ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್‌ಐಒ) ಆಹ್ವಾನದ ಮೇರೆಗೆ ಕೋಮು ಸೌಹಾರ್ದತೆಯನ್ನು ಉತ್ತೇಜಿಸಲು ದಾಬೋಲಿಮ್‌ನಲ್ಲಿರುವ ಮಸೀದಿಗೆ ಭೇಟಿ ನೀಡಲಾಗಿದೆ. ನಮ್ಮ ಶಾಲೆಯ ಮೂವರು ವಿದ್ಯಾರ್ಥಿನಿಯರು ಮತ್ತು ಶಿಕ್ಷಕಿ ಸೇರಿದಂತೆ ಒಟ್ಟು 21 ವಿದ್ಯಾರ್ಥಿಗಳನ್ನು ಮಸೀದಿಗೆ ಕರೆದೊಯ್ಯಲಾಗಿತ್ತು. ಮಸೀದಿಯಲ್ಲಿ ಪ್ರಾರ್ಥನೆಯನ್ನು ಎಲ್ಲಿ ನಡೆಸಲಾಗುತ್ತದೆ ಮತ್ತು ಪ್ರವೇಶ-ನಿರ್ಗಮನ ಪ್ರದೇಶಗಳನ್ನು ವಿದ್ಯಾರ್ಥಿಗಳಿಗೆ ತೋರಿಸಲಾಯಿತು. ಕೆಲವು ವಿದ್ಯಾರ್ಥಿಗಳು ಗೌರವಾರ್ಥವಾಗಿ ತಲೆ ಮುಚ್ಚಿಕೊಂಡಿರಬಹುದು. ವಿದ್ಯಾರ್ಥಿಗಳನ್ನು ಹಿಜಾಬ್ ಧರಿಸಲು ಅಥವಾ ಆಚರಣೆಗಳನ್ನು ಮಾಡಲು ಬಲವಂತಪಡಿಸಲಾಗಿದೆ ಎಂಬುವುದು ಸುಳ್ಳು ಎಂದು ಹೇಳಿದ್ದಾರೆ.

ಈ ಹಿಂದೆಯೂ ಕೂಡ ನಾವು ದೇವಾಲಯಗಳು, ಚರ್ಚ್‌ಗಳು ಮತ್ತು ಮಸೀದಿಗಳಿಗೆ ವಿದ್ಯಾರ್ಥಿಗಳ ಭೇಟಿಯನ್ನು ಆಯೋಜಿಸಿದ್ದೇವೆ. ಎಲ್ಲಾ ಧರ್ಮದ ಮಕ್ಕಳು ಶಾಲೆಯಲ್ಲಿ ಓದುತ್ತಾರೆ. ಬೇರೆ ಶಾಲೆಯ ಕೆಲವು ವಿದ್ಯಾರ್ಥಿಗಳು ಕೂಡ ಮಸೀದಿಗೆ ಭೇಟಿ ನೀಡಿದ್ದರು. ನನ್ನನ್ನು ಏಕೆ ಅಮಾನತುಗೊಳಿಸಲಾಗಿದೆ ಎಂದು ನನಗೆ ತಿಳಿದಿಲ್ಲ ಎಂದು ಗಾಂವ್ಕರ್ ಹೇಳಿದ್ದಾರೆ.

ಇದನ್ನು ಓದಿ; ಜಲ ಜೀವನ್ ಮಿಷನ್‌ ಹಗರಣ ಬಯಲಿಗೆಳೆದ ದಲಿತ ಐಎಎಸ್ ಅಧಿಕಾರಿಗೆ ಕಿರುಕುಳ: ಕಾಂಗ್ರೆಸ್ ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನೀವು ಕಾನೂನಿಗಿಂತ ಮೇಲಲ್ಲ: ಜಾರಿ ನಿರ್ದೇಶನಾಲಯಕ್ಕೆ ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್‌

0
ಜಾರಿ ನಿರ್ದೇಶನಾಲಯವು (ಇಡಿ) ಕಾನೂನಿನ ಚೌಕಟ್ಟಿಗೆ ಒಳಪಟ್ಟಿದೆ ಮತ್ತು ಸಾಮಾನ್ಯ ನಾಗರಿಕರ ವಿರುದ್ಧ ಬಲಪ್ರದರ್ಶನ ಮಾಡುವಂತಿಲ್ಲ ಎಂದು ದೆಹಲಿ ಹೈಕೋರ್ಟ್‌ ಜಾರಿ ನಿರ್ದೇಶನಾಲಯಕ್ಕೆ ಹೇಳಿದ್ದು, ನೀವು ಕಾನೂನಿಗಿಂತ ಮೇಲಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಮಧ್ಯಂತರ...