Homeಅಂತರಾಷ್ಟ್ರೀಯ8 ಮಂದಿ ಭಾರತೀಯರಿಗೆ ವಿಧಿಸಿದ್ದ ಶಿಕ್ಷೆ ಇಳಿಸಿದ ಕತಾರ್ ಕೋರ್ಟ್‌

8 ಮಂದಿ ಭಾರತೀಯರಿಗೆ ವಿಧಿಸಿದ್ದ ಶಿಕ್ಷೆ ಇಳಿಸಿದ ಕತಾರ್ ಕೋರ್ಟ್‌

- Advertisement -
- Advertisement -

ಕತಾರ್‌ನಲ್ಲಿ ಗೂಢಚರ್ಯೆಯ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗಳ ಮರಣದಂಡನೆಯನ್ನು ಕತಾರ್‌ನ ಮೇಲ್ಮನವಿ ನ್ಯಾಯಾಲಯವು ಇಳಿಸಿದ್ದು, ಮರಣದಂಡನೆಯನ್ನು ಜೈಲು ಶಿಕ್ಷೆಗೆ ಪರಿವರ್ತಿಸಿದೆ.

ಅಕ್ಟೋಬರ್‌ನಲ್ಲಿ ಕತಾರ್‌ನ ನ್ಯಾಯಾಲಯವು 8 ಭಾರತೀಯ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿತ್ತು. ಇದರ ಬೆನ್ನಲ್ಲೇ ಭಾರತ ನವೆಂಬರ್‌ನಲ್ಲಿ ಈ ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಿತ್ತು.

8 ಮಾಜಿ ಭಾರತೀಯ ನೌಕಾ ಅಧಿಕಾರಿಗಳ ಮರಣದಂಡನೆಯನ್ನು ಜೈಲು ಶಿಕ್ಷೆಗೆ ಪರಿವರ್ತಿಸಿದ ಕತಾರ್‌ನ ಮೇಲ್ಮನವಿ ನ್ಯಾಯಾಲಯದ ತೀರ್ಪನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ವಾಗತಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಭಾರತದ ವಿದೇಶಾಂಗ ಸಚಿವಾಲಯ, ಮೇಲ್ಮನವಿ ನ್ಯಾಯಾಲಯದ ವಿವರವಾದ ತೀರ್ಪು ಬಿಡುಗಡೆಯಾಗಬೇಕಿದೆ. ಮುಂದಿನ ನಡೆಯ ಬಗ್ಗೆ ನಿರ್ಧರಿಸಲು ಕಾನೂನು ತಂಡ ಮತ್ತು ಆರೋಪಿಗಳ ಕುಟುಂಬದ ಸದಸ್ಯರೊಂದಿಗೆ ನಿಕಟ ಸಂಪರ್ಕದಲ್ಲಿದ್ದೇವೆ. ಕತಾರ್‌ನಲ್ಲಿರುವ ನಮ್ಮ ರಾಯಭಾರಿ ಮತ್ತು ಇತರ ಅಧಿಕಾರಿಗಳು ಇಂದು ಮೇಲ್ಮನವಿ ನ್ಯಾಯಾಲಯಕ್ಕೆ ಕುಟುಂಬದ ಸದಸ್ಯರೊಂದಿಗೆ ಹಾಜರಿದ್ದರು. ಈ ವಿಷಯದ ಆರಂಭದಿಂದಲೂ ನಾವು  ಅಧಿಕಾರಿಗಳ ಕುಟುಂಬಕ್ಕೆ ಬೆಂಬಲಕ್ಕೆ ನಿಂತಿದ್ದೇವೆ ಮತ್ತು ಕಾನೂನು ನೆರವು ನೀಡುವುದನ್ನು ಮುಂದುವರಿಸಿದ್ದೇವೆ. ನಾವು ಕತಾರ್ ಸರಕಾರದ ಜೊತೆ ಕೂಡ ಈ ವಿಷಯದ ಬಗ್ಗೆ ಮಾತುಕತೆ ನಡೆಸುತ್ತೇವೆ. ಪ್ರಕರಣದ ಸೂಕ್ಷ್ಮತೆ ಗಮನಿಸಿ ಈ ಹಂತದಲ್ಲಿ ಯಾವುದೇ ಹೆಚ್ಚಿನ ಕಾಮೆಂಟ್ ಮಾಡುವುದು ಸೂಕ್ತವಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಕತಾರ್‌ನ ಸಶಸ್ತ್ರ ಪಡೆಗಳು ಮತ್ತು ಭದ್ರತಾ ಏಜೆನ್ಸಿಗಳಿಗೆ ತರಬೇತಿ ನೀಡುವ ಖಾಸಗಿ ಸಂಸ್ಥೆಯಾದ ಅಲ್ ದಹ್ರಾ ಗ್ಲೋಬಲ್ ಟೆಕ್ನಾಲಜೀಸ್ ಮತ್ತು ಕನ್ಸಲ್ಟೆನ್ಸಿ ಸರ್ವಿಸಸ್‌ಗಾಗಿ ಕೆಲಸ ಮಾಡುತ್ತಿದ್ದ 8 ಮಂದಿ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳನ್ನು ಕಳೆದ ವರ್ಷದ ಆಗಸ್ಟ್‌ನಲ್ಲಿ ಕತಾರ್‌ ಪೊಲೀಸರು ಬಂಧಿಸಿದ್ದರು.

ಬಂಧಿತರ ಮೇಲೆ ಬೇಹುಗಾರಿಕೆಯ ಆರೋಪವನ್ನು ಹೊರಿಸಲಾಗಿದೆ. ಈ 8 ಮಾಜಿ ಅಧಿಕಾರಿಗಳ ಜಾಮೀನು ಅರ್ಜಿಗಳನ್ನು ಹಲವಾರು ಬಾರಿ ತಿರಸ್ಕರಿಸಲಾಗಿದೆ ಮತ್ತು ಅವರ ಬಂಧನವನ್ನು ಕತಾರ್ ಅಧಿಕಾರಿಗಳು ವಿಸ್ತರಿಸಿದ್ದರು. ಬಂಧಿತ ಭಾರತೀಯರಲ್ಲಿ ನಿವೃತ್ತ ಕಮಾಂಡರ್ ಪೂರ್ಣೇಂದು ತಿವಾರಿ ಅವರು ಅಲ್ ದಹ್ರಾ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಪ್ರಕರಣದಲ್ಲಿ 8 ಮಂದಿ ಅಧಿಕಾರಿಗಳಿಗೆ ಕತಾರ್‌ನ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿತ್ತು. ದಹ್ರಾ ಗ್ಲೋಬಲ್ ಪ್ರಕರಣವು 8 ಮಂದಿ ಅಧಿಕಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಆದೇಶದ ಬಳಿಕ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿತ್ತು.

ಇದನ್ನು ಓದಿ: ಕೆನಡಾ ಪೊಲೀಸ್ ಕಣ್ಗಾವಲಿನಲ್ಲಿ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಆರೋಪಿಗಳು?

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...