Homeಕರ್ನಾಟಕಅನರ್ಹ ಶಾಸಕರಿಗೆ ಜನತೆ ಸರಿಯಾದ ಪಾಠ ಕಲಿಸುತ್ತಾರೆ: ಸಿದ್ದರಾಮಯ್ಯ

ಅನರ್ಹ ಶಾಸಕರಿಗೆ ಜನತೆ ಸರಿಯಾದ ಪಾಠ ಕಲಿಸುತ್ತಾರೆ: ಸಿದ್ದರಾಮಯ್ಯ

- Advertisement -
- Advertisement -

ಸ್ವಯಂಪ್ರೇರಿತವಲ್ಲದ ರಾಜೀನಾಮೆ ಹಾಗೂ ವಿಪ್ ಉಲ್ಲಂಘಿಸಿದ್ದಕ್ಕಾಗಿ ಸಭಾಧ್ಯಕ್ಷರಾಗಿದ್ದ ರಮೇಶ್ ಕುಮಾರ್ ಅವರು 17 ಜನ ಶಾಸಕರನ್ನು ಅನರ್ಹಗೊಳಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇನೆ. ಈ ತೀರ್ಪಿನಲ್ಲಿ ಸಭಾಧ್ಯಕ್ಷರ ಆದೇಶವನ್ನು ಸುಪ್ರೀಂ ಕೋರ್ಟ್ ಭಾಗಶಃ ಎತ್ತಿಹಿಡಿದಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭಾಧ್ಯಕ್ಷರಾಗಿದ್ದ ರಮೇಶ್ ಕುಮಾರ್ ಅವರ ನಿರ್ಣಯದಲ್ಲಿ ಎರಡು ಭಾಗಗಳಿವೆ. ಮೊದಲನೆಯದು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿ ಸಂವಿಧಾನದ ನಿಯಮ ಉಲ್ಲಂಘಿದ್ದಕ್ಕಾಗಿ ಅನರ್ಹಗೊಳಿಸಲಾಗಿತ್ತು. ಎರಡನೆಯದು ತಪ್ಪಿತಸ್ಥರೆಂಬ ಕಾರಣಕ್ಕೆ ಈ ಅವಧಿ ಮುಗಿಯುವವರೆಗೆ ಚುನಾವಣೆಗೆ ಸ್ಪರ್ಧಿಸದಂತೆ ಅವರ ಮೇಲೆ ನಿರ್ಬಂಧ ಹೇರಲಾಗಿತ್ತು. ಇಂದಿನ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಸಭಾಧ್ಯಕ್ಷರ ನಿರ್ಣಯದ ಮೊದಲ ಭಾಗವನ್ನು ಎತ್ತಿಹಿಡಿಯಲಾಗಿದೆ ಮತ್ತು ಎರಡನೇ ಭಾಗವನ್ನು ಬದಲಾವಣೆಗೊಳಪಡಿಸಿ ಅನರ್ಹ ಶಾಸಕರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನೈತಿಕ ಹೊಣೆಗಾರಿಕೆ ಅತಿ ಮುಖ್ಯವಾದುದ್ದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಒಂದು ಪಕ್ಷದಿಂದ ಗೆದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಇನ್ನೊಂದು ಪಕ್ಷ ಸೇರುವುದು ಅನೈತಿಕ ಮತ್ತು ಪ್ರಜಾಪ್ರಭುತ್ವ ವಿರೋಧಿ ನಡೆ. ಇದು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅನರ್ಹ ಶಾಸಕರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿರುವುದನ್ನೂ ಸ್ವಾಗತಿಸುತ್ತೇನೆ. ಆದರೆ ಪಕ್ಷದಿಂದ ಪಕ್ಷಕ್ಕೆ ಹಾರುವವರನ್ನು ಜನರು ಸಹಿಸಲ್ಲ, ಅವರನ್ನು ಖಂಡಿತಾ ಸೋಲಿಸುತ್ತಾರೆ. ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಪಕ್ಷಾಂತರಿಗಳು ಸೋತಿದ್ದಾರೆ, ಅದೇ ಫಲಿತಾಂಶ ಕರ್ನಾಟಕದಲ್ಲಿಯೂ ಮರುಕಳಿಸುತ್ತದೆ ಎಂದರು.

ಮೇಲ್ನೋಟಕ್ಕೆ ಅನರ್ಹ ಶಾಸಕರ ಉದ್ದೇಶ ಈಡೇರಿದಂತೆ ಕಂಡರೂ, ನೈತಿಕತೆ ಆಧಾರದಲ್ಲಿ ಇದು ಅವರಿಗೆ ಅತಿ ದೊಡ್ಡ ಹಿನ್ನಡೆ. ಸಂವಿಧಾನದ ನಿಯಮಗಳನ್ನು ಪಾಲಿಸಿಲ್ಲ ಎಂಬ ಕಾರಣಕ್ಕೆ ಶಾಸಕರು ಅನರ್ಹರಾಗುವುದು ಅವರ ನೈತಿಕತೆಯ ಸೋಲು. ಇದನ್ನು ಜನರು ಗಮನಿಸಿದ್ದರೆ ಮತ್ತು ಮುಂದಿನ‌ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

0
ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್...