Homeಮುಖಪುಟಕ್ವಾರಂಟೈನ್‌ ಸಮಯದಲ್ಲಿ ಈ ವಲಸೆ ಕಾರ್ಮಿಕರು ಮಾಡಿದ ಜನ ಮೆಚ್ಚುವ ಕೆಲಸ ಯಾವುದೇ ಗೊತ್ತೆ?

ಕ್ವಾರಂಟೈನ್‌ ಸಮಯದಲ್ಲಿ ಈ ವಲಸೆ ಕಾರ್ಮಿಕರು ಮಾಡಿದ ಜನ ಮೆಚ್ಚುವ ಕೆಲಸ ಯಾವುದೇ ಗೊತ್ತೆ?

ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ದೇಶದ ಇತರ ಸ್ಥಳಗಳಿಂದ ವಲಸೆ ಬಂದ ಕಾರ್ಮಿಕರು ಆ ಶಾಲೆಯಲ್ಲಿ ಉಳಿದುಕೊಂಡಿದ್ದರು. ಗ್ರಾಮಸ್ಥರು ನೀಡಿದ ಸೇವೆಯಿಂದ ತುಂಬಾ ಸಂತೋಷಗೊಂಡಿದ್ದ ಅವರು ಶಾಲೆಯನ್ನು ಚೆನ್ನಾಗಿ ಮಾಡುವು ಮೂಲಕ ಮಾದರಿಯಾಗಿದ್ದಾರೆ.

- Advertisement -
- Advertisement -

ದೇಶಾದ್ಯಂತ ಲಾಕ್‌ಡೌನ್‌ ಘೋಷಿಸಿ ಹತ್ತಿರ ಹತ್ತಿರ ಒಂದು ತಿಂಗಳಾಗುತ್ತಿದೆ. ಮನೆಯಲ್ಲಿರಲಾರದೇ ಲಾಕ್‌ಡೌನ್‌ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ರಾಜ್ಯದಲ್ಲಿ 71,000 ಪ್ರಕರಣಗಳು ದಾಖಲಾಗಿವೆ ಎಂಬ ವರದಿಗಳು ಬರುತ್ತಿವೆ. ಇಂತಹ ಸಮಯದಲ್ಲಿ ಶಾಲೆಯೊಂದರಲ್ಲಿ ಕ್ವಾರಂಟೈನ್‌‌ಗೆ ಒಳಗಾಗಿದ್ದ ಹತ್ತಾರು ವಲಸೆ ಕಾರ್ಮಿಕರು ಸೇರಿ ಆ ಶಾಲೆಗೆ ಸುಣ್ಣ ಬಣ್ಣ ಬಳಿದು ಮಿಂಚುವಂತೆ ಮಾಡಿದ್ದಾರೆ. ಆ ಮೂಲಕ ಅವರು ದೇಶದ ಗಮನಸೆಳೆದಿದ್ದಾರೆ.

ರಾಜಸ್ಥಾನದ ಸಿಕಾರ್‌ ಎಂಬ ಗ್ರಾಮದಲ್ಲಿ ಹತ್ತಾರು ವಲಸೆ ಕಾರ್ಮಿಕರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು. ಆ ಕಾರ್ಮಿಕರನ್ನು ಆ ಊರಿನ ಜನ ಉತ್ತಮ ಊಟ ಬಟ್ಟೆ ನೀಡಿ ಪ್ರೀತಿಯಿಂದ ನೋಡಿಕೊಂಡಿದ್ದರು. ಪ್ರತಿದಿನವೂ ಕೆಲಸ ಮಾಡುತ್ತಾ ಕ್ರಿಯಾಶೀಲರಾಗಿದ್ದ ಅಲ್ಲಿನ ಕಾರ್ಮಿಕರಿಗೆ ಸುಮ್ಮನೆ ಕೂರುವುದಕ್ಕಿಂತ ಇದ್ದಲ್ಲೇ ಏನಾದರೂ ಮಾಡುವ ಆಸೆಯಾಯಿತು. ಶಾಲೆಗೆ ಬಣ್ಣ ಬಳಿದು ಬಹಳ ದಿನಗಳಾಗಿದ್ದನ್ನು ಗಮನಿಸಿದ ಅವರು ಗ್ರಾಮದ ಸರಪಂಚರಲ್ಲಿ ನೀವು ಬಣ್ಣ ಕೊಡಿಸುವುದಾದರೆ ಶಾಲೆಗೆ ಬಣ್ಣ ಬಳಿಯುತ್ತೇವೆ ಎಂದು ಮನವಿ ಮಾಡಿದ್ದರು.

ಇದಕ್ಕೆ ಸರಪಂಚರು ಒಪ್ಪಿ ಬಣ್ಣ ಕೊಡಿಸಿದ್ದೆ ತಡ ಎಲ್ಲಾ ಕಾರ್ಮಿಕರು ಸೇರಿ ಶಾಲೆಗೆ ಬಣ್ಣ ಹೊಡೆದು ನಳನಳಿಸುವಂತೆ ಮಾಡಿದ್ದಾರೆ. ಆ ಮೂಲಕ ಊರಿನವರು ತಮ್ಮನ್ನು ನೋಡಿಕೊಂಡ ಋಣ ತೀರಿಸಿದ ಭಾವನೆ ಅವರಲ್ಲಿದೆ.

ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ದೇಶದ ಇತರ ಸ್ಥಳಗಳಿಂದ ವಲಸೆ ಬಂದ ಕಾರ್ಮಿಕರು ಆ ಶಾಲೆಯಲ್ಲಿ ಉಳಿದುಕೊಂಡಿದ್ದರು. ಗ್ರಾಮಸ್ಥರು ನೀಡಿದ ಸೇವೆಯಿಂದ ತುಂಬಾ ಸಂತೋಷಗೊಂಡಿದ್ದ ಅವರು ಶಾಲೆಯನ್ನು ಚೆನ್ನಾಗಿ ಮಾಡುವು ಮೂಲಕ ಮಾದರಿಯಾಗಿದ್ದಾರೆ.

ಶಾಲೆಯ ಹೊರಾಂಗಣವನ್ನು ಎಲ್ಲರೂ ಸೇರಿ ಸ್ವಚ್ಛಗೊಳಿಸಿದ್ದಲ್ಲದೇ ಶಾಲೆಯ ಗೋಡೆಗಳ ಮೇಲೆ ಚಿತ್ರಬಿಡಿಸಲು ಸಹ ಮುಂದಾಗಿದ್ದಾರೆ ಎಂದು ಹಲವು ಹಿಂದಿ ಪತ್ರಿಕೆಗಳು ವರದಿ ಮಾಡಿವೆ.

ಕಳೆದ ಒಂಬತ್ತು ವರ್ಷಗಳಿಂದ ಶಾಲೆಗೆ ಬಣ್ಣ ಬಳಿದಿರಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಕಾರ್ಮಿಕರ ಕೆಲಸಕ್ಕೆ ಸರಪಂಚರು ವೇತನ ನೀಡಲು ಮುಂದಾದಾದ ಆ ವಲಸೆ ಕಾರ್ಮಿಕರು ಯಾವುದೇ ಹಣವನ್ನು ತೆಗೆದುಕೊಳ್ಳಲು ನಿರಾಕರಿಸಿದ್ದಾರೆ. ಕ್ವಾರಂಟೈನ್‌ ಸಮಯದಲ್ಲಿ ಗ್ರಾಮಸ್ಥರು ತಮ್ಮನ್ನು ಚೆನ್ನಾಗಿ ನೋಡಿಕೊಂಡಿದ್ದರಿಂದ ಇದು ನಮ್ಮ ಪ್ರತಿ ಕೊಡುಗೆಯಾಗಿದ್ದು ನಮಗೆ ಯಾವುದೇ ಹಣ ಬೇಡ ಎಂದು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಈ ಮಾದರಿ ನಡೆಯಿಂದಾಗಿ ಆ ವಲಸೆ ಕಾರ್ಮಿಕರು ಮತ್ತು ಸಿಕಾರ್ ಗ್ರಾಮಸ್ಥರು ಭಾರೀ ಪ್ರಶಂಸೆಗೆ ಒಳಗಾಗಿದ್ದಾರೆ. ಊರಿನ ಶಾಲೆಯನ್ನು ಎಲ್ಲರೂ ಸೇರಿ ಉತ್ತಮ ಪಡಿಸಿದ ಸಾರ್ಥಕ ಮನೋಭಾವ ಅವರದಾಗಿದೆ. ಇತ್ತ ವಲಸೆ ಕಾರ್ಮಿಕರ ಕ್ವಾರಂಟೈನ್‌ ಅವಧಿ ಸಹ ಮುಗಿದಿದ್ದು ಅವರು ಒಳ್ಳೆಯ ಕೆಲಸ ಮಾಡಿದ ಭಾವದಲ್ಲಿದ್ದಾರೆ. ಆ ಮೂಲಕ ಇದೊಂದು ಸಣ್ಣ ಕೆಲಸವಾದರೂ ಸಹ ಈ ಊರು ದೇಶಕ್ಕೆ ಒಂದು ಸೌಹಾರ್ದಯುತ ಉದಾಹರಣೆಯಾಗಿದೆ.


ಇದನ್ನೂ ಓದಿ: ಮೂರು ಆಸ್ಪತ್ರೆ ಅಲೆದರು. ಕೊನೆಗೆ ಬೆಡ್ ಸಿಕ್ಕಿತ್ತು. ಆದರೆ ತುಂಬಾ ತಡವಾಗಿತ್ತು: ನ್ಯೂಯಾರ್ಕ್‌‌ನ ಮನಮಿಡಿಯುವ ಘಟನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....