Homeಮುಖಪುಟಪ್ರಶ್ನೆಪತ್ರಿಕೆ ಸೋರಿಕೆ ವಿವಾದ; ಅರುಣಾಚಲದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಪ್ರಶ್ನೆಪತ್ರಿಕೆ ಸೋರಿಕೆ ವಿವಾದ; ಅರುಣಾಚಲದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

- Advertisement -
- Advertisement -

ಅರುಣಾಚಲ ಪ್ರದೇಶ ಲೋಕಸೇವಾ ಆಯೋಗದ ವಿರುದ್ಧ ಶುಕ್ರವಾರ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಬಳಿಕ ಇಟಾನಗರದಲ್ಲಿ ನಾಲ್ವರು ಭದ್ರತಾ ಅಧಿಕಾರಿಗಳು ಸೇರಿದಂತೆ ಹತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಪ್ರತಿಭಟನಾಕಾರರ ವಿರುದ್ಧ ಭದ್ರತಾ ಸಿಬ್ಬಂದಿ ಅಶ್ರುವಾಯು ಪ್ರಯೋಗಿಸಿ, ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ಪೊಲೀಸ್ ಮಹಾನಿರೀಕ್ಷಕ ಚುಕು ಅಪಾ ಹೇಳಿದ್ದಾರೆ.

“ಕೆಲವು ಪ್ರತಿಭಟನಾಕಾರರು ಮೋಟಾರ್ ಸೈಕಲ್, ನಾಲ್ಕು ಚಕ್ರದ ವಾಹನವನ್ನು ಸುಟ್ಟುಹಾಕಿದಾಗ ಪರಿಸ್ಥಿತಿ ಹಿಂಸಾತ್ಮಕವಾಗಿ ಮಾರ್ಪಟ್ಟಿತು. ಆಸ್ತಿಪಾಸ್ತಿಗಳನ್ನು ಹಾನಿಗೊಳಿಸಲಾಗಿದೆ. ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆದಿದೆ” ಎಂದು ಅಪಾ ತಿಳಿಸಿದ್ದಾರೆ.

“ಯಾವುದೇ ಅಹಿತಕರ ಪರಿಸ್ಥಿತಿಯನ್ನು ಎದುರಿಸಲು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಇಟಾನಗರ ಪ್ರದೇಶದಲ್ಲಿ ಸಾಕಷ್ಟು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಅರುಣಾಚಲ ಪ್ರದೇಶ ಲೋಕಸೇವಾ ಆಯೋಗದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಇತ್ತೀಚೆಗೆ ಸೋರಿಕೆಯಾಗಿರುವುದನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಜೊತೆಗೆ ಶಂತನು ದಯಾಳ್ ಅವರನ್ನು ಅರುಣಾಚಲ ಪ್ರದೇಶ ಲೋಕಸೇವಾ ಆಯೋಗದ ಪರೀಕ್ಷೆಯ ಅಧ್ಯಕ್ಷರನ್ನಾಗಿ ನೇಮಿಸುವುದಕ್ಕೂ ಪ್ರತಿಭಟನಾಕಾರರು ವಿರೋಧ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯ ನೇತೃತ್ವ ವಹಿಸಿರುವ ಪ್ಯಾನ್ ಅರುಣಾಚಲ ಜಂಟಿ ಸ್ಟೀರಿಂಗ್ ಕಮಿಟಿ (ಪಿಎಜೆಎಸ್‌ಸಿ) ಪ್ರತಿಕ್ರಿಯಿಸಿದ್ದು, “ದಯಾಳ್ ಅವರಿಗೆ 61 ವರ್ಷ ವಯಸ್ಸಾಗಿದೆ. ಅವರು ಅಧ್ಯಕ್ಷರಾಗಿ ಸೇವೆ ಸಲ್ಲಿಸಲು ಕೇವಲ ಒಂದು ವರ್ಷ ಮಾತ್ರ ಸಾಧ್ಯ. 62 ವರ್ಷಗಳಿಗೆ ಆಯೋಗದಿಂದ ನಿವೃತ್ತಿ ಹೊಂದುವುದು ಕಡ್ಡಾಯವಾಗಿದೆ” ಎಂದಿದೆ.

“ಸರ್ಕಾರ ಮತ್ತು ಆಯೋಗವು ತಮ್ಮ ಪತ್ರಿಕೆ-ಮಾರಾಟದ ವ್ಯವಹಾರವನ್ನು ಪೂರ್ಣಗೊಳಿಸುವ ಉದ್ದೇಶದಲ್ಲಿದೆ. ಅದಕ್ಕಾಗಿಯೇ ಅವರು ಕೇವಲ ಒಂದು ವರ್ಷ ಅಧಿಕಾರದಲ್ಲಿ ಉಳಿಯಲಿರುವ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ನೇಮಿಸಲು ಆತುರಪಡಲಾಗುತ್ತಿದೆ” ಎಂದು ಪಿಎಜೆಎಸ್‌ಸಿ ಸದಸ್ಯ ಗ್ಯಾಮರ್ ಪಡಂಗ್ ಗುರುವಾರ ಆರೋಪಿಸಿದ್ದಾರೆ.

ಇಟಾನಗರದಲ್ಲಿ ವ್ಯಾಪಾರ ಸಂಸ್ಥೆಗಳು, ಮಾರುಕಟ್ಟೆಗಳು, ಬ್ಯಾಂಕ್‌ಗಳು, ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಮತ್ತು ಖಾಸಗಿ ಕಚೇರಿಗಳನ್ನು ಮುಚ್ಚಿ ಒಂದು ದಿನದ ಬಂದ್‌ಗೆ ಕರೆ ನೀಡಲಾಗಿತ್ತು ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿರಿ: ಹರಿರ್ಯಾಣ- ರಾಜಸ್ಥಾನ ಗಡಿ: ಇಬ್ಬರು ಮುಸ್ಲಿಮರನ್ನು ಜೀವಂತವಾಗಿ ಸುಟ್ಟ ದುಷ್ಕರ್ಮಿಗಳು; ಸ್ಥಳೀಯರಲ್ಲಿ ಭೀತಿ

ರಾಜ್ಯದಲ್ಲಿನ ಎಲ್ಲಾ ನೇಮಕಾತಿ ಪರೀಕ್ಷೆಗಳನ್ನು ಕೇಂದ್ರ ಲೋಕಸೇವಾ ಆಯೋಗವು ನಡೆಸುತ್ತದೆ, ಪತ್ರಿಕೆ ಸೋರಿಕೆ ಕುರಿತು ತ್ರಿಸದಸ್ಯ ಸಮಿತಿಯ ವರದಿಯನ್ನು ಸಾರ್ವಜನಿಕಗೊಳಿಸಬೇಕು, ರಾಜ್ಯ ಆಯೋಗದ ಅಡಿಯಲ್ಲಿ ನಿಯೋಜಿಸಲಾದ ಮೂವರು ರಾಜ್ಯ ಸರ್ಕಾರಿ ಅಧಿಕಾರಿಗಳನ್ನು ಹಿಂಪಡೆಯಬೇಕು. ನೊಂದ ಅಭ್ಯರ್ಥಿಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಪಿಎಜೆಎಸ್‌ಸಿ ಒತ್ತಾಯಿಸಿದೆ.

ಅರುಣಾಚಲ ಪ್ರದೇಶ ಲೋಕಸೇವಾ ಆಯೋಗದ ವಿರುದ್ಧದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆ, ರಾಜ್ಯ ಸಚಿವ ಸಂಪುಟವು ದಯಾಳ್ ಮತ್ತು ಇತರ ಅಧಿಕಾರಿಗಳ ಪ್ರಮಾಣವಚನ ಸಮಾರಂಭವನ್ನು ಶುಕ್ರವಾರ ರದ್ದುಗೊಳಿಸಿತು.

“ಈ ವಿಷಯವನ್ನು ಅರುಣಾಚಲ ಪ್ರದೇಶದ ಎಲ್ಲಾ ಸಮುದಾಯ-ಆಧಾರಿತ ಸಂಸ್ಥೆಗಳು ಮತ್ತು ಭಾಗಿಧಾರರೊಂದಿಗೆ ಚರ್ಚಿಸಲಾಗುವುದು” ಎಂದು ಕ್ಯಾಬಿನೆಟ್ ತಿಳಿಸಿರುವುದಾಗಿ ಅರುಣಾಚಲ ಟೈಮ್ಸ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...