Homeಕರ್ನಾಟಕಹಸಿದ ಮಾಧ್ಯಮಗಳಿಗೆ ತಿಳಿಗೇಡಿಗಳು ಕೊಟ್ಟ ಅಸ್ತ್ರ: ಡಿ.ಜೆ ಹಳ್ಳಿ ಪ್ರಕರಣ ಎತ್ತುತ್ತಿರುವ ಪ್ರಶ್ನೆಗಳು

ಹಸಿದ ಮಾಧ್ಯಮಗಳಿಗೆ ತಿಳಿಗೇಡಿಗಳು ಕೊಟ್ಟ ಅಸ್ತ್ರ: ಡಿ.ಜೆ ಹಳ್ಳಿ ಪ್ರಕರಣ ಎತ್ತುತ್ತಿರುವ ಪ್ರಶ್ನೆಗಳು

ಮಾಧ್ಯಮಗಳು ಹಸಿದಿತ್ತು, ಕೊರೋನ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾಗಿತ್ತು. ದೆಹಲಿಯ ಜಾಮಿಯತ್ ಮೇಲೆ ಎಲ್ಲರ ಕಣ್ಣಿತ್ತು. ಕೆಲದಿನಗಳು ಕಳೆದ ನಂತರ ಕೊರೋನ ಜಾತ್ಯಾತೀತ ಅಂತ ತಿಳಿದ ಮೇಲೆ ಕೆಲ ಕನ್ನಡ ಸುದ್ದಿ ವಾಹಿನಿಗಳು ವಿಷಯಗಳೇ ಇಲ್ಲದೆ ಬರಗೆಟ್ಟು ಹೋಗಿದ್ದವು. ಆದರೆ ಕೆಲ ಮುಸ್ಲಿಮ್ ಮತಿಗೇಡಿ ಅಜ್ಞಾನಿಗಳು ನಿನ್ನೆ ರಾತ್ರಿ ಅದನ್ನು ಸರಿದೂಗಿಸಿದರು.

- Advertisement -
- Advertisement -

ಪುಲಕೇಶಿ ನಗರ ಕಾಂಗ್ರೆಸ್ ಶಾಸಕ‌ ಅಖಂಡ ಶ್ರೀನಿವಾಸ ಮೂರ್ತಿಯವರ ತಂಗಿಯ ಮಗ ನವೀನ್‌ ಎಂಬಾತ ಪ್ರವಾದಿ ಮುಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾನೆ ಎಂದು ಆರೋಪಿಸಿ ಆತನ ವಿರುದ್ಧ ದೂರು ನೀಡಲು ಹಲವರು ಮುಂದಾಗಿದ್ದರು. ಅದೇ ಸಮಯದಲ್ಲಿ ತಮ್ಮ ಪ್ರವಾದಿ ಮುಹಮ್ಮದ್ ಪೈಗಂಬರರ ಬಗ್ಗೆ ಅವಹೇಳನಕಾರಿ ಕಮೆಂಟ್ ನೋಡಿ ಇನ್ನೊಂದೆಡೆ ಶಾಸಕ ಅಖಂಡ ಶ್ರೀನಿವಾಸ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕ್ಯಾಂಪೇನ್‌ಗಳು ಆರಂಭವಾಗಿತ್ತು ಎನ್ನಲಾಗಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಒಂದು ನಿರ್ದಿಷ್ಟ ಗುಂಪು ರಾತ್ರಿ ಸಮಯದಲ್ಲಿ ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಮುಂದೆ ಜಮಾಯಿಸಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಉದ್ರಿಕ್ತಗೊಂಡ ಗುಂಪೊಂದು ಶಾಸಕರ ಮನೆ ಮೇಲೆ ಕಲ್ಲು ತೂರಾಟ ನಡೆಸಿ, ಕೆಲವು ವಾಹನಗಳಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿತ್ತು. ಬಳಿಕ ಪರಿಸ್ಥಿತಿ ನಿಯಂತ್ರಣ ಕೈತಪ್ಪಿತ್ತಲ್ಲದೆ, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಹರ ಸಾಹಸಪಟ್ಟರು.

ಇದರ ನಡುವೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ವೀಡಿಯೋ ಒಂದರ ಮೂಲಕ ಪ್ರತಿಕ್ರಿಯಿಸಿ, “ಕಿಡಿಗೇಡಿಗಳ ತಪ್ಪಿಗೆ ಯಾರೂ ಗಲಾಟೆ ಮಾಡಬಾರದು, ತಪ್ಪು ಮಾಡಿದವರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಲಿ”. ಯಾವುದೇ ಕಾರಣಕ್ಕೂ ಗಲಾಟೆ ಮಾಡದಂತೆ ವಿನಂತಿಸಿದರು.

ಅಷ್ಟೊತ್ತಿಗಾಗಲೇ ಪ್ರತಿಭಟನೆಯ ಸ್ವರೂಪ ಬದಲಾಗಿತ್ತು, ಪೊಲೀಸ್ ಠಾಣೆಗಳಿಗೆ ಕಲ್ಲು ತೂರಾಟ, ಪೊಲೀಸರ ಮೇಲೆ ಕಲ್ಲು ತೂರುವ ಮೂಲಕ ಗುಂಪೊಂದು ಪರಿಸ್ಥಿತಿ ಕೈಮೀರುವಂತೆ ಮಾಡಿತು.

ಈ ಸಂದರ್ಭದಲ್ಲಿ ಶಾಸಕ ಝಮೀರ್ ಹಾಗೂ ರಿಝ್ವಾನ್ ಅರ್ಶದ್ ಅವರನ್ನು ಸ್ಥಳಕ್ಕೆ ಕರೆಸಿಕೊಂಡ ಪೊಲೀಸರು ಗಲಭೆಯಲ್ಲಿ ಪಾಲ್ಗೊಂಡವರನ್ನು ಸಮಾಧಾನ ಪಡಿಸುವ ಪ್ರಯತ್ನಕ್ಕೆ ಮುಂದಾದರೂ ಸಹ ಪರಿಸ್ಥಿತಿ ನಿಯಂತ್ರಣ ಸಾಧ್ಯವಾಗಿಲ್ಲ. ಶಾಸಕ ಝಮೀರ್ ಅವರ ಕೈಗೂ ಈ ಸಂದರ್ಭದಲ್ಲಿ ಗಾಯವಾಗಿತ್ತು ಎನ್ನಲಾಗಿದೆ.

ಪೊಲೀಸರು ಗಲಭೆ ನಿತಂತ್ರಣಕ್ಕೆ ಅಶ್ರುವಾಯು ಪ್ರಯೋಗ, ಗೊಲೀಬಾರ್ ನಡೆಸಿದರು. ಈ ವೇಳೆ ಗೋಲಿಬಾರ್ ಗೆ 3 ಮಂದಿ ಗಾಯಾಳುಗಳು ಬಲಿಯಾಗಿದ್ದಾರೆ.

ಏನು ಮಾಡಬೇಕಾಗಿತ್ತು…

ಪ್ರವಾದಿ ನಿಂದನೆ ಮಾಡಿದ್ದು ಖಂಡನೀಯ. ೧೦ ಜನ ಹೋಗಿ ಪ್ರಕರಣ ದಾಖಲಿಸಬಹುದಿತ್ತು. ಆದರೆ ಇದೆ ಕೋಪದಲ್ಲಿ ಸಾರ್ವಜನಿಕ ಆಸ್ತಿ ಹಾಳು ಮಾಡಿದ್ದು ಸರಿ ಅಲ್ಲ. ಬೆಂಕಿ ಹಚ್ಚುವುದು, ಅಮಾಯಾಕರ ಆಸ್ತಿಗಳನ್ನು ನಷ್ಟ ಮಾಡುವುದು ಯಾರು ಕೂಡ ಮಾಡಬಾರದು.

ಪ್ರವಾದಿ (ಸ) ನೈಜ ಅನುಯಾಯಿಗಳು ಎಂದಿಗೂ ಬೆಂಕಿ ಹಚ್ಚುವವರಲ್ಲ ಮತ್ತು ಅದನ್ನು ಸಮರ್ಥಿಸುವವರಲ್ಲ. ತೀವ್ರವಾಗಿ ಕಲ್ಲು ತೂರಾಟ ಆದಾಗ ಅಲ್ಲೇ ಸಮೀಪದಲ್ಲಿರುವ ದೇವಸ್ಥಾನಕ್ಕೆ ಹಾನಿಯಾಗದಂತೆ ರಕ್ಷಣೆಗೆ ನಿಂತಿದ್ದು ಮುಸ್ಲಿಂ ಸಹೋದರರು.. ಇದು ನಮ್ಮ ಪ್ರವಾದಿ ಕಲಿಸಿದ ಶಿಕ್ಷಣ.

ಮಾಧ್ಯಮಗಳು ಹಸಿದಿತ್ತು, ಕೊರೋನ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾಗಿತ್ತು. ದೆಹಲಿಯ ಜಾಮಿಯತ್ ಮೇಲೆ ಎಲ್ಲರ ಕಣ್ಣಿತ್ತು. ಕೆಲದಿನಗಳು ಕಳೆದ ನಂತರ ಕೊರೋನ ಜಾತ್ಯಾತೀತ ಅಂತ ತಿಳಿದ ಮೇಲೆ ಕೆಲ ಕನ್ನಡ ಸುದ್ದಿ ವಾಹಿನಿಗಳು ವಿಷಯಗಳೇ ಇಲ್ಲದೆ ಬರಗೆಟ್ಟು ಹೋಗಿದ್ದವು. ಆದರೆ ಕೆಲ ಮುಸ್ಲಿಮ್ ಮತಿಗೇಡಿ ಅಜ್ಞಾನಿಗಳು ನಿನ್ನೆ ರಾತ್ರಿ ಅದನ್ನು ಸರಿದೂಗಿಸಿದರು.

ಒಟ್ಟಾರೆ ಈ ಘಟನೆ ನಡೆಯಬಾರದಿತ್ತು. ಆದರೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರವಾದಿ ನಿಂದನೆ, ಇದರ ವಿರುದ್ಧ ಒಂದೆಡೆ ಆಕೋಶದ ಮಾತುಗಳು ಕೇಳಿ ಬರುತ್ತಲೇ ಇದ್ದರೂ ಸರಕಾರಕ್ಕೆ ಈ ಗಲಭೆಯ ಮುನ್ಸೂಚನೆ ಯಾಕೆ ಸಿಕ್ಕಿಲ್ಲ? ಪೊಲೀಸರು ಎಫ್‌ಐಆರ್‌ ದಾಖಲಿಸಲು ವಿಳಂಬ ಮಾಡಿದ್ದೇಕೆ? ಗುಪ್ತಚರ ಇಲಾಖೆ ಏನು ಮಾಡ್ತಾ ಇತ್ತು? ಗಲಭೆ ಸುಮಾರು 3 ಗಂಟೆಗಳ ಕಾಲ ನಡೆಯುತ್ತಿದ್ದರೂ ಹೆಚ್ಚಿನ ಪೊಲೀಸರ ನಿಯೋಜನೆ ಯಾಕೆ ವಿಳಂಬವಾಯಿತು? ಈ ಎಲ್ಲಾ ಪ್ರಶ್ನೆಗಳು ಪ್ರಶ್ನೆಯಾಗಿಯೇ ಉಳಿದಿದೆ.

-ನಾಝಿಯಾ ಕೌಸರ್. (ಯುವ ಪತ್ರಕರ್ತರು, ಅಭಿಪ್ರಾಯಗಳು ವಯಕ್ತಿಕವಾದವು)


ಇದನ್ನೂ ಓದಿ: ಡಿಜೆ ಹಳ್ಳಿ ಫೇಸ್‌‌ಬುಕ್ ಪ್ರಚೋದನೆ ಮತ್ತು ಗುಂಪು ಗಲಭೆ: ನವೀನ್ ಮತ್ತು 110 ಜನರ ಬಂಧನ – ಶಾಂತಿ ಕಾಪಾಡಲು ಮುಖಂಡರ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...