Homeಕರ್ನಾಟಕಬಸವಕಲ್ಯಾಣದ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನದಲ್ಲಿ ಎದ್ದ ಪ್ರಶ್ನೆಗಳು

ಬಸವಕಲ್ಯಾಣದ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನದಲ್ಲಿ ಎದ್ದ ಪ್ರಶ್ನೆಗಳು

- Advertisement -
- Advertisement -

ಸಮಾನತೆಯ ತತ್ವ ಸಾರಿದ ಬಸವಾದಿ ಶರಣರ ಆಶಯಗಳನ್ನು ಜನಮಾನಸಕ್ಕೆ ಮುಟ್ಟಿಸುವ ಉದ್ದೇಶವಷ್ಟೇ ಅಲ್ಲದೆ ’ಲಿಂಗಾಯತ ಸ್ವತಂತ್ರ ಧರ್ಮ’ ಆಗಬೇಕು, ಅದಕ್ಕೆ ಸಾಂವಿಧಾನಿಕ ಮಾನ್ಯತೆ ದೊರೆಯಬೇಕೆಂದು ರಾಜ್ಯದ ವಿವಿಧ ಮಠಾಧೀಶರು ಮತ್ತು ಬಸವಪರ ಸಂಘಟನೆಗಳ ನೇತೃತ್ವದಲ್ಲಿ ಹಿಂದಿನಿಂದಲೂ ಹೋರಾಟಗಳು ನಡೆಯುತ್ತಿವೆ. 2017ರಲ್ಲಿ ಮಾತೆ ಮಹಾದೇವಿ ಅವರ ನೇತೃತ್ವದಲ್ಲಿ ಮೊದಲು ಬೀದರ್‌ದಿಂದ ಆರಂಭವಾದ ಹೋರಾಟ ರಾಜ್ಯವಷ್ಟೇ ಅಲ್ಲದೆ ಮಹಾರಾಷ್ಟ್ರ, ದೆಹಲಿಗಳಲ್ಲಿಯೂ ನಡೆದು ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು

ಕಾಯಕ ಸಮುದಾಯಗಳು ಕೂಡಿ ಕಟ್ಟಿದ ಲಿಂಗಾಯತ ಧರ್ಮ ಹಿಂದೂ ಧರ್ಮದ ಭಾಗವಲ್ಲ; ಇದೊಂದು ಸ್ವತಂತ್ರ ಧರ್ಮ ಹಾಗೂ ಅಲ್ಪಸಂಖ್ಯಾತ ಧರ್ಮ. ಹೀಗಾಗಿ ಸಾಂವಿಧಾನಿಕ ಮಾನ್ಯತೆ ದೊರೆಯಬೇಕೆಂಬ ಪ್ರಬಲ ಒತ್ತಾಯವನ್ನು ಲಿಂಗಾಯತ ಸಮುದಾಯ ಹಲವು ವರ್ಷಗಳಿಂದ ಮಾಡುತ್ತಿದೆ. ಈ ಹೋರಾಟಗಳ ಪ್ರತಿಫಲವಾಗಿ 2013-18ರವರೆಗೆ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚಿಸಿದ್ದ ಅಂದಿನ ಸಿಎಂ ಸಿದ್ದರಾಮಯ್ಯ ಅವರು ನ್ಯಾ. ನಾಗಮೋಹನ ದಾಸ್ ನೇತೃತ್ವದಲ್ಲಿ ಸಮಿತಿ ರಚಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದರು; ಆ ಮಟ್ಟಕ್ಕೆ ಲಿಂಗಾಯತ ಸಮುದಾಯ ಯಶಸ್ಸು ಕಂಡಿತ್ತು. ಆದರೆ ಕೇಂದ್ರ ಸರ್ಕಾರ ಅದನ್ನು ಒಪ್ಪಿರಲಿಲ್ಲ. ಅಲ್ಲಿಂದ ಲಿಂಗಾಯತ ಧರ್ಮ ಮಾನ್ಯತೆ ಹೋರಾಟ ಮುಂದುವರಿಯಲಿಲ್ಲ. ನಂತರ ರಾಜ್ಯದಲ್ಲಿ ಸರ್ಕಾರ ಬದಲಾಯಿತು.

ಮಾತೆ ಮಹಾದೇವಿ

ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಾಬಲ್ಯ ಹೊಂದಿರುವ ಲಿಂಗಾಯತ ಸಮುದಾಯ ಸೇರಿದಂತೆ ದೇಶದ ನಾನಾ ರಾಜ್ಯಗಳ ಲಿಂಗಾಯತರನ್ನು ಒಗ್ಗೂಡಿಸಿ ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ಹೋರಾಟ ಆರಂಭಿಸಬೇಕೆಂಬ ಉದ್ದೇಶದಿಂದ ಜಾಗತಿಕ ಲಿಂಗಾಯತ ಮಹಾಸಭಾ ರಚನೆಯಾಯಿತು. ಅದರ ವತಿಯಿಂದ, ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ದೊರಕಿಸಿಕೊಳ್ಳುವುದಕ್ಕಾಗಿ, ಮುಂದಿನ ಹೋರಾಟದ ದಿಕ್ಕುದೆಸೆ ಕಂಡುಕೊಳ್ಳುವುದಕ್ಕಾಗಿ ಹಾಗೂ ಸಮುದಾಯದ ಜಾಗೃತಿಗಾಗಿ ಮಾರ್ಚ್ 4, 5ರಂದು ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನವನ್ನು ಹಮ್ಮಿಕೊಳ್ಳಲಾಗಿತ್ತು.

ದೇಶದ ನಾನಾ ಭಾಗಗಳಿಂದ ಲಿಂಗಾಯತ ಸಮುದಾಯದವರನ್ನು ಆಹ್ವಾನಿಸಿ ಧರ್ಮ ಮಾನ್ಯತೆಯ ಹೋರಾಟ, ಮೀಸಲಾತಿ, ಜನಗಣತಿ ಸೇರಿದಂತೆ ಇತರೆ ವಿಷಯಗಳನ್ನು ಕುರಿತು ಚರ್ಚಿಸುವುದು ಅಧಿವೇಶನದ ಘನ ಉದ್ದೇಶವಾಗಿತ್ತು.

ಇದನ್ನೂ ಓದಿ: ಒಕ್ಕಲಿಗ-ಲಿಂಗಾಯಿತರ ಮೀಸಲಾತಿ ಹೆಚ್ಚಳ; ಮೂಗಿಗೆ ತುಪ್ಪ ಸವರಿದ ಸರ್ಕಾರ

ರಾಷ್ಟ್ರೀಯ ಲಿಂಗಾಯತ ಅಧಿವೇಶನವನ್ನು ಎರಡುಮೂರು ವರ್ಷಗಳ ಹಿಂದೆಯೇ ಮಾಡಬೇಕಿತ್ತು. ಆದರೆ ಕೋವಿಡ್ ಕಾರಣ ಸಾಧ್ಯವಾಗದಿದ್ದರಿಂದ ಈ ವರ್ಷ ಮಾರ್ಚ್ 4-5ರಂದು ಆಯೋಜಿಸಲಾಗಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಶಿವಾನಂದ ಜಾಮದರ್ ಹೇಳಿದರು. ಅಧಿವೇಶನವು ಎರಡು ದಿನಗಳ ಕಾಲ ಬಸವಕಲ್ಯಾಣದ ಥೇರ ಮೈದಾನದಲ್ಲಿ ನಡೆಸಲು ಅನುಮತಿ ಪಡೆಯಲಾಗಿತ್ತು. ಎಲ್ಲಾ ಸಿದ್ಧತೆಗಳು ನಡೆದಿದ್ದವು.

ಅಧಿವೇಶನದ ಮುನ್ನಾ ದಿನವೇ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ

ಜಾಗತಿಕ ಲಿಂಗಾಯತ ಮಹಾಸಭಾ ಆಯೋಜಿಸಿದ್ದ ಎರಡು ದಿನದ ಅಧಿವೇಶನದ ಮುನ್ನಾ ದಿನ ಅಂದರೆ ಮಾರ್ಚ್ 3ರಂದು ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯನ್ನು ಏಕಾಏಕಿ ನಿಗದಿಗೊಳಿಸಿ ಅದೇ ಸ್ಥಳದಲ್ಲಿ ಆಯೋಜಿಸಲಾಯಿತು. ಪೂರ್ವ ನಿಯೋಜಿತವಾಗಿದ್ದ ಲಿಂಗಾಯತ ಮಹಾ ಅಧಿವೇಶನವನ್ನು ಅದೇ ಜಾಗದಲ್ಲಿ ನಡೆಸಲು ಒಂದಿಷ್ಟು ಮುಜುಗರವೂ ಉಂಟಾಯಿತು. ಬೃಹತ್ ವೇದಿಕೆ ಸೇರಿದಂತೆ ಬೇರೆ ರಾಜ್ಯಗಳಿಂದ ಅಧಿವೇಶನಕ್ಕೆ ಆಗಮಿಸುವ ವಿವಿಧ ಮಠಾಧೀಶರಿಗೆ, ಲಿಂಗಾಯತ ಅನುಯಾಯಿಗಳ ವಾಸ್ತವ್ಯಕ್ಕೆ ವಿವಿಧ ಕಾಲೇಜು, ಅನುಭವ ಮಂಟಪ ಸೇರಿದಂತೆ ನಾನಾ ಕಡೆ ವ್ಯವಸ್ಥೆ ಮಾಡಲಾಗಿತ್ತು. ಈ ಮಧ್ಯೆ ಬಿಜೆಪಿಯ ಕಾರ್ಯಕ್ರಮ ನಿಗದಿಯಾದ ಕಾರಣ ಹಲವರಿಗೆ ಅನುಮಾನ ಹುಟ್ಟಿಸಿತು.

ಅಧಿವೇಶನ ಮುನ್ನಾ ದಿನವೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವೇದಿಕೆ ಮೇಲಿದ್ದ ಬಿಜೆಪಿ ಕಾರ್ಯಕ್ರಮ ಆಯೋಜಿಸಿದ ಹಿಂದಿನ ಮರ್ಮವೇನು ಎಂಬುದು ಹಲವರಿಗೆ ಒಳಗೊಳಗೆ ಅನುಮಾನ ಕಾಡಿತು.

ಮಾರ್ಚ್ 3ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಸವಕಲ್ಯಾಣದ ಅನುಭವ ಮಂಟಪದಿಂದ ಯಾತ್ರೆಗೆ ಚಾಲನೆ ನೀಡಿ, ಬೃಹತ್ ರೋಡ್ ಶೋ ಹಾಗೂ ಬಹಿರಂಗ ಸಮಾವೇಶ ನಡೆಸಿದರು. ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿಯ ಘಟಾನುಘಟಿ ನಾಯಕರು ಭಾಗವಹಿಸಿದ್ದರು. ವಿಜಯ ಸಂಕಲ್ಪ ಯಾತ್ರೆ ನೆಪದಲ್ಲಿ ಲಿಂಗಾಯತ ಸಮುದಾಯವನ್ನು ಸೆಳೆಯುವ ಪ್ರಯತ್ನ ಈ ಕಾರ್ಯಕ್ರಮದಲ್ಲಿ ನಡೆಯಿತು. ಲಿಂಗಾಯತರ ’ಜನಪ್ರಿಯ’ ನಾಯಕ ಎಂದು ಗುರುತಿಸಿಕೊಂಡಿದ್ದ ಬಿಎಸ್‌ವೈ ಅವರಿಗೆ ದಿಢೀರನೆ ಸಿಎಂ ಕುರ್ಚಿಯಿಂದ ಕೆಳಗಿಳಿಸಿ ಲಿಂಗಾಯತ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದ್ದ ಬಿಜೆಪಿಗೆ ಲಿಂಗಾಯತ ಸಮುದಾಯದ ಸಿಟ್ಟನ್ನು ಶಮನಗೊಳಿಸುವುದು ಅತ್ಯಗತ್ಯವಾಗಿತ್ತು. ಅದಕ್ಕಾಗಿ ಈ ವೇದಿಕೆ ಸಜ್ಜಾಗಿತ್ತು. ಈ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಅವರಿಂದ ಮಾತನಾಡಿಸಿ, ’ನನಗೆ ಯಾರೂ ಕುರ್ಚಿಯಿಂದ ಕೆಳಗಿಳಿಸಲಿಲ್ಲ, ನಾನೇ ಸ್ವಇಚ್ಛೆಯಿಂದ ಇಳಿದಿದ್ದೇನೆ, ಆದರೆ ಬಿಜೆಪಿ ಪಕ್ಷ ಸಂಘಟಿಸಲು ಉಸಿರಿರುವವರೆಗೆ ಶ್ರಮಿಸುವೆ’ ಎಂಬ ಸಂದೇಶವನ್ನು ರವಾನಿಸಲಾಗಿದೆ. ಇದರಿಂದ ಲಿಂಗಾಯತ ಸಮುದಾಯದ ಕೋಪ ಇಳಿಸಿದ್ದು ಅಷ್ಟೇ ಅಲ್ಲದೆ ಬಸವಕಲ್ಯಾಣದಲ್ಲಿ ಬಿಜೆಪಿ ಭದ್ರಕೋಟೆಯಾಗಿ ಕಟ್ಟಲು ಸಹಕಾರಿಯಾಗಿದೆ ಎಂದು ಮಾತನಾಡಿಕೊಳ್ಳಲಾಗುತ್ತಿದೆ.

ಬಸವಕಲ್ಯಾಣದ ಥೇರ ಮೈದಾನದಲ್ಲಿ ಆಯೋಜಿಸಿದ್ದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ವೇದಿಕೆ ಕಾರ್ಯಕ್ರಮ ಮುಗಿದ ಮರುದಿನವೇ ಅದೇ ಸ್ಥಳ ಹಾಗೂ ಅದೇ ವೇದಿಕೆಯಲ್ಲಿ ಲಿಂಗಾಯತ ಅಧಿವೇಶನ ಜರುಗಿತು. ರಾಜ್ಯ ಮತ್ತು ರಾಷ್ಟ್ರಮಟ್ಟದ ಬಿಜೆಪಿ ನಾಯಕರ ಅಬ್ಬರದ ಬ್ಯಾನರ್ ಮತ್ತು ಧ್ವಜಗಳು ಕಲ್ಯಾಣ ನೆಲದಲ್ಲಿ ರಾರಾಜಿಸುತ್ತಿದ್ದವು. ಅವುಗಳ ಮಧ್ಯೆ ಲಿಂಗಾಯತ ಅಧಿವೇಶನದ ಧ್ವಜಗಳು ಮತ್ತು ಬ್ಯಾನರ್‌ಗಳು ಸೇರಿದಂತೆ ಬಸವಾದಿ ಶರಣರ ಭಾವಚಿತ್ರಗಳು ಎದ್ದು ಕಾಣುತ್ತಿದ್ದವು.

ಜಾನಪದ ವಿದ್ವಾಂಸ ಗೋ.ರು. ಚನ್ನಬಸಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆದ ಈ ಅಧಿವೇಶನ ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ಪಡೆಯಲು ಮುಂದಿನ ಹೋರಾಟ ಏನು? ಮೀಸಲಾತಿ ಹೇಗೆ ಸಿಗುತ್ತದೆ? ಕೇಂದ್ರಕ್ಕೆ ಶಿಫಾರಸ್ಸು ಮಾಡುವುದು ಸೇರಿದಂತೆ ವೀರಶೈವ-ಲಿಂಗಾಯತ ಗೊಂದಲ ಕುರಿತು ಎರಡು ದಿನಗಳ ಕಾಲ ವಿವಿಧ ಗೋಷ್ಠಿಗಳು ನಡೆದವು.

ಬಾಲಾಜಿ ಕುಂಬಾರ ಚಟ್ನಾಳ

ಬಾಲಾಜಿ ಕುಂಬಾರ ಚಟ್ನಾಳ
ಬೀದರ್‌ನಲ್ಲಿ ವಾಸವಿರುವ ಬಾಲಾಜಿ ಕುಂಬಾರ ಚಟ್ನಾಳರವರು ಶಿಕ್ಷಕರು ಮತ್ತು ಯುವ ಬರಹಗಾರರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...