Homeಮುಖಪುಟಆನ್ ಲೈನ್ ತರಗತಿ ಕಡ್ಡಾಯಗೊಳಿಸಿದ ಯುಜಿಸಿಗೆ ಕೇಳಬೇಕಾದ ಪ್ರಶ್ನೆಗಳು

ಆನ್ ಲೈನ್ ತರಗತಿ ಕಡ್ಡಾಯಗೊಳಿಸಿದ ಯುಜಿಸಿಗೆ ಕೇಳಬೇಕಾದ ಪ್ರಶ್ನೆಗಳು

- Advertisement -
- Advertisement -

20, ಮೇ 2021ರಂದು ಯುಜಿಸಿ ಒಂದು ಸುತ್ತೋಲೆ ಹೊರಡಿಸಿ ‘ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ಶೇ. 40% ಪ್ರಮಾಣದಲ್ಲಿ ಆನ್ ಲೈನ್ ತರಗತಿಗಳನ್ನು ತೆಗೆದುಕೊಳ್ಳಬೇಕು ಮತ್ತು ಇದರ ಜೊತೆಗೆ ಈಗಾಗಲೇ ಇರುವ ಸ್ವಯಂ ಎನ್ನುವ ಆನ್ ಲೈನ್ ವೇದಿಕೆ ಮೂಲಕವೂ ವಾರಕ್ಕೆ ಹಲವು ಗಂಟೆಗಳ ಕಾಲ ಪಾಠ ಮಾಡಬೇಕು’ ಎಂದು ಆದೇಶ ಹೊರಡಿಸಿದೆ. ಬಹುಶಃ ಪದವಿ, ವಿವಿಗಳಲ್ಲಿ ಬೋಧಿಸುತ್ತಿರುವ ಪ್ರಾಧ್ಯಾಪಕರು ಇದನ್ನು ಗಮನಿಸಿದಂತಿಲ್ಲ, ಗಮನಿಸಿಯೂ ಈಗಾಗಲೇ ಒಂದು ವರ್ಷದಿಂದ ಆನ್ ಲೈನ್ ಕ್ಲಾಸ್ ಮಾಡುತ್ತಿದ್ದೇವೆ, ಇದನ್ನು ಮುಂದುವರಿಸಿದರಾಯಿತು ಎನ್ನುವ ಭಾವದಲ್ಲಿರಬಹುದು. ಇನ್ನುಳಿದಂತೆ ಇದರ ಅಪಾಯದ ಅರಿವಿರುವವರು ಏನೂ ಮಾಡಲಾಗದೆ ಅಸಹಾಯಕತೆಯಲ್ಲಿದ್ದಾರೆ.

 

ಈಗ ಆನ್ ಲೈನ್ ನ ಸಾಧಕ-ಬಾಧಕಗಳ ಚರ್ಚೆ ಸದ್ಯಕ್ಕೆ ಪಕ್ಕಕ್ಕೆ ಇಡೋಣ. ಈ ಆನ್ ಲೈನ್ ಕ್ಲಾಸ್ ಗಳ ಸಾಧ್ಯತೆ ಕುರಿತು ಪರಿಶೀಲಿಸೋಣ..

2018-19ರ ಅಧಿಕೃತ ಸಮೀಕ್ಷೆಯ ಪ್ರಕಾರ ಭಾರತದಲ್ಲಿ 993 ವಿಶ್ವವಿದ್ಯಾಲಯಗಳು, 39,000 ಕಾಲೇಜುಗಳು, 3.73 ಕೋಟಿ ವಿದ್ಯಾರ್ಥಿಗಳು ಮತ್ತು 14.13 ಲಕ್ಷ ಪ್ರಾಧ್ಯಾಪಕರಿದ್ದಾರೆ.

ಈಗ ಆನಲೈನ್ ತರಗತಿಗಳು ಮತ್ತು ಮುಂದಿನ ಶಿಕ್ಷಣಕ್ರಮ್ಕೆ ಸಂಬಂಧಪಟ್ಟಂತೆ ಯುಜಿಸಿಯ ಮುಂದೆ ಕೆಲವು ಮೂಲಭೂತ ಪ್ರಶ್ನೆಗಳಿವೆ. ಈ ಪ್ರಶ್ನೆಗಳಿಗೆ ಉತ್ತರ ದೊರೆಯದೇ ಹೊಸ ಶಿಕ್ಷಣ ಕ್ರಮವನ್ನು ಸಮರ್ಪಕವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ.

1. ಕೇಂದ್ರ ಸರಕಾರವು ಶಿಕ್ಷಣಕ್ಕೆ ಜಿಡಿಪಿಯ 1.9% ಪ್ರಮಾಣದಲ್ಲಿ, ತನ್ನ ಬಜೆಟ್ ಗಾತ್ರದ 6.2% ಪ್ರಮಾಣದಲ್ಲಿ, ರಾಜ್ಯ ಸರಕಾರಗಳು ಜಿಡಿಪಿಯ 3.2 % ಪ್ರಮಾಣದಲ್ಲಿ, ತನ್ನ ಬಜೆಟ್ ಗಾತ್ರದ 11% ಪ್ರಮಾಣದಲ್ಲಿ ಹಣವನ್ನು ಮೀಸಲಿಡುತ್ತಿವೆ. ಈ ಮೊತ್ತದಿಂದ ಆನ್ ಲೈನ್ ತರಗತಿಗೆ ಶೇ. 10% ಪ್ರಮಾಣದಲ್ಲಿ ಮಾತ್ರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸಾದ್ಯ. ಮಿಕ್ಕ 85% ಸೌಲಭ್ಯವನ್ನು ಯಾರು ಪೂರೈಸುತ್ತಾರೆ?

2. ಈ ನಿರ್ಧಾರಕ್ಕೆ ಬರುವುದಕ್ಕಿಂತ ಮೊದಲು ಇದರ ಹಕ್ಕುದಾರರಾದ ವಿದ್ಯಾರ್ಥಿಗಳ ಸಂಘಟನೆಗಳು, ಪೋಷಕರು, ಪ್ರಾಧ್ಯಾಪಕ ಸಂಘಟನೆಗಳು, ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸಿದ್ದೀರಾ? ಅವರ ಅಭಿಪ್ರಾಯ ಸಂಗ್ರಹಿಸಿದ್ದೀರಾ? ಹೌದು ಎಂದಾದರೆ ಅದರ ಮಾಹಿತಿಯನ್ನು ಸಾರ್ವಜನಿಕವಾಗಿ ಯುಜಿಸಿಯು ಪ್ರಕಟಿಸಬೇಕು.

3. ಗ್ರಾಮೀಣ ಬಾಗದಲ್ಲಿ ಕನಿಷ್ಠ 18 ತಾಸುಗಳ ಕಾಲ ನಿರಂತರವಾಗಿ ವಿದ್ಯುತ್ ಪೂರೈಕೆ ಒದಗಿಸುವಿರಾ? Hardware and software ಸೌಲಭ್ಯಗಳಿವೆಯೇ?

4. ವ್ಯಾಸಂಗ ಮಾಡುತ್ತಿರುವ 3.73 ಕೋಟಿ ವಿದ್ಯಾರ್ಥಿಗಳ ಬಳಿ ಸ್ಮಾರ್ಟ್ ಫೋನ್, ಲ್ಯಾಪ್ ಟಾಪ್ ಇದೆಯೇ? ಇದರ ದತ್ತಾಂಶ ಸಂಗ್ರಹಿಸಿದ್ದೀರಾ?

5. ಪ್ರತಿ ಗ್ರಾಮ, ಹೋಬಳಿಗೆ 4ಜಿ ನೆಟ್ ವರ್ಕ್ ಸಂಪರ್ಕ ಸತತವಾಗಿ ಯಾವುದೇ ಅಡೆತಡೆಗಳಿಲ್ಲದೆ ದೊರಕುವುದೇ? ಇದನ್ನು ಖಾತ್ರಿ ಪಡಿಸಿಕೊಂಡಿದ್ದೀರಾ?

6. ಎಲ್ಲಾ ಕಾಲೇಜುಗಳಲ್ಲಿ ಕಂಪ್ಯೂಟರ್ ಗಳಿವೆಯೇ? ಆನ್ ಲೈನ್ ಸಂಪರ್ಕ ಮತ್ತು ತಂತ್ರಜ್ಞಾನದ ಪೂರೈಕೆ ಸಮರ್ಪವಾಗಿದೆಯೇ?

7. ಆನ್ ಲೈನ್ ಕ್ಲಾಸ್ ಗಳಿಗೆ ಅಗತ್ಯವಾದ ‘ ವ್ಯಾಸಂಗ ಕ್ರಮ'(pedagogy) ಎಲ್ಲಿದೆ? Study materials ಎಲ್ಲಿದೆ? ಈ ಕುರಿತು ತಜ್ಞರ ಸಮಿತಿ ರಚಿಸಲಾಗಿದೆಯೇ?

8. ಪ್ರಾಧ್ಯಾಪಕರಿಗೆ ಆನ್ ಲೈನ್ ಭೋದನೆಗೆ ಅಗತ್ಯವಾದ ತರಬೇತಿ ದೊರಕಿದೆಯೇ?

9. ಮುಖ್ಯವಾಗಿ ಈ ಕೋವಿಡ್ ಸಾಂಕ್ರಾಮಿಕವನ್ನು ಸಂಪೂರ್ಣವಾಗಿ ನಿಯಂತ್ರಿಸಿ ಶೀಘ್ರದಲ್ಲೇ ಆಫ್ ಲೈನ್ ತರಗತಿಗಳನ್ನು ಪ್ರಾರಂಭಿಸಲು ಬೇಕಾದ ಕಾಲಮಿತಿಯನ್ನು ಸ್ಪಷ್ಟಪಡಿಸಬೇಕಿದೆ. ಮತ್ತು ಈ ಶೇ. 40% ಆನ್ ಲೈನ್ ನಿರಂತರವಾಗಿರುತ್ತದೆ ಎನ್ನುವುದು ನಿಮ್ಮ ನಿರ್ಧಾರವಾದರೆ ಅದಕ್ಕೆ ಸೂಕ್ತ ಸೌಲಭ್ಯಗಳು ಎಲ್ಲಿವೆ ಎಂಬುದನ್ನು ಯುಜಿಸಿಯೇ ಹೇಳಬೇಕು.

ಇನ್ನೂ ಹತ್ತಾರು ಪ್ರಶ್ನೆಗಳಿವೆ. ಈ ಎಲ್ಲದಕ್ಕೂ ಶಿಕ್ಷಣ ಇಲಾಖೆ ಮತ್ತು ಯುಜಿಸಿ ಸೂಕ್ತ ರೀತಿಯಲ್ಲಿ ಉತ್ತರಿಸಬೇಕು.

ಮುಖ್ಯವಾಗಿ ಪ್ರಾಧ್ಯಾಪಕರು, ವಿದ್ಯಾರ್ಥಿ ಸಂಘಟನೆಗಳು, ಪೋಷಕರು, ಶಿಕ್ಷಣ ತಜ್ಞರು ಯುಜಿಸಿಯ ಹೊಸ ಮಾರ್ಗಸೂಚಿಯಿಂದ ಗೊಂದಲಕ್ಕೀಡಾಗಿದ್ದಾರೆ. ನಿಧಾನಕ್ಕೆ ಕೊರೋನಾ, ಮತ್ತು ಮೂಲಭೂತ ಸೌಕರ್ಯಗಳ ಕೊರತೆ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕತ್ತಲಾವರಿಸುವಂತೆ ಮಾಡುತ್ತಿದೆ.


ಇದನ್ನೂ ಓದಿ: ಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...