Homeಮುಖಪುಟಆರ್‌ಜಿ ಕರ್ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ : ಅಪರಾಧಿಗೆ ಮರಣದಂಡನೆ ವಿಧಿಸುವಂತೆ ಕೋರಿ ಹೈಕೋರ್ಟ್...

ಆರ್‌ಜಿ ಕರ್ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ : ಅಪರಾಧಿಗೆ ಮರಣದಂಡನೆ ವಿಧಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಬಂಗಾಳ ಸರ್ಕಾರ

- Advertisement -
- Advertisement -

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದ ಅಪರಾಧಿಗೆ ಮರದಂಡನೆ ವಿಧಿಸುವಂತೆ ಕೋರಿ ಪಶ್ಚಿಮ ಬಂಗಾಳ ಸರ್ಕಾರ ಮಂಗಳವಾರ (ಜ.21) ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದೆ.

ಸೋಮವಾರ (ಜ.20) ಅಪರಾಧಿ ಸಂಜಯ್ ರಾಯ್‌ಗೆ ಜೀವಾವಧಿ ಶಿಕ್ಷೆ (ಮರಣದವರೆಗೆ) ವಿಧಿಸಿ ಕೋಲ್ಕತ್ತಾದ ಸಿಯಾಲದಹ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ಬನ್ ದಾಸ್ ತೀರ್ಪು ಪ್ರಕಟಿಸಿದ್ದರು.

ಸಿಯಾಲದಹ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ನ್ಯಾಯಾಲಯದ ಅನುಮತಿ ಕೋರಿ ಅಡ್ವೊಕೇಟ್ ಜನರಲ್ ಕಿಶೋರ್ ದತ್ತ ಅವರು ಮಂಗಳವಾರ (ಜ. 21) ನ್ಯಾಯಮೂರ್ತಿ ದೇಬಾಂಗ್ಸು ಬಸಕ್ ಮತ್ತು ನ್ಯಾಯಮೂರ್ತಿ ಮೊಹಮ್ಮದ್ ಶಬ್ಬರ್ ರಶೀದಿ ಅವರ ಹೈಕೋರ್ಟ್ ವಿಭಾಗೀಯ ಪೀಠದ ಮುಂದೆ ಅರ್ಜಿ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೆಷನ್ಸ್ ನ್ಯಾಯಾಲಯದ ತೀರ್ಪಿಗೆ ಅತೃಪ್ತಿ ವ್ಯಕ್ತಪಡಿಸಿದ ಬೆನ್ನಲ್ಲೇ ಸರ್ಕಾರ ಹೈಕೋರ್ಟ್‌ ಮೆಟ್ಟಿಲೇರಿದೆ. “ಜೀವಾವಧಿ ಶಿಕ್ಷೆಯ ಅರ್ಥವೇನು? ಅನೇಕ ಪ್ರಕರಣಗಳಲ್ಲಿ, ಘೋರ ಅಪರಾಧಗಳನ್ನು ಮಾಡಿದ ನಂತರವೂ ಅಪರಾಧಿಗಳನ್ನು ಪೆರೋಲ್ ಮೇಲೆ ಬಿಡುಗಡೆ ಮಾಡಲಾಗುತ್ತದೆ. ಆರ್‌ಜಿ ಕರ್ ಪ್ರಕರಣದ ತೀರ್ಪಿನಿಂದ ನಾನು ನಿಜವಾಗಿಯೂ ಆಘಾತಕ್ಕೊಳಗಾಗಿದ್ದೇನೆ” ಎಂದು ಮುಖ್ಯಮಂತ್ರಿ ಮಂಗಳವಾರ (ಜ. 21) ಹೇಳಿದ್ದರು.

“ನಾವೂ ಕಾನೂನು ಅಧ್ಯಯನ ಮಾಡಿದ್ದೇವೆ ಮತ್ತು ಅದನ್ನು ಅರ್ಥಮಾಡಿಕೊಂಡಿದ್ದೇವೆ. ಮರಣದಂಡನೆ ವಿಧಿಸಲು ಇದು ‘ಅಪರೂಪದಲ್ಲಿ ಅಪರೂಪದ ಪ್ರಕರಣವಲ್ಲ’ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ. ನಾವು ನ್ಯಾಯಾಧೀಶರ ಹೇಳಿಕೆಯನ್ನು ವಿರೋಧಿಸುತ್ತಿಲ್ಲ. ಆದರೆ, ಇದು ನಿಜಕ್ಕೂ ಅಪರೂಪದ, ಸೂಕ್ಷ್ಮ ಮತ್ತು ಘೋರ ಅಪರಾಧ ಎಂದು ನಾನು ಭಾವಿಸುತ್ತೇನೆ. ಒಬ್ಬ ಅಪರಾಧಿಯನ್ನು ಬಿಡುಗಡೆ ಮಾಡಿದರೆ ಅಥವಾ ಶಿಕ್ಷೆಗೆ ಒಳಪಡಿಸದಿದ್ದರೆ, ಆತ ಇನ್ನಷ್ಟು ದುಷ್ಕೃತ್ಯ ಎಸಗಬಹುದು” ಎಂದಿದ್ದರು.

ಅಪರಾಧಿಗೆ ಮರಣದಂಡನೆ ವಿಧಿಸಲು ನಿರಾಕರಿಸುವ ವೇಳೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ಬನ್ ದಾಸ್ ಅವರು, “ಜೀವಕ್ಕೆ ಮತ್ತೊಂದು ಜೀವ” ಎಂಬ ಹಳೆಯ ಪದ್ದತಿಯನ್ನು ಮೀರಿ ನಾವು ಮುಂದುವರಿಯಬೇಕು ಎಂದು ಅಭಿಪ್ರಾಯಪಟ್ಟಿದ್ದರು.

“ಆಧುನಿಕ ನ್ಯಾಯ ಕ್ಷೇತ್ರದಲ್ಲಿ, ನಾವು ‘ಕಣ್ಣಿಗೆ ಕಣ್ಣು’, ‘ಹಲ್ಲಿಗೆ ಹಲ್ಲು’, ‘ಉಗುರಿಗೆ ಉಗುರು’ ಮತ್ತು ‘ಜೀವಕ್ಕೆ ಜೀವ’ ಎಂಬ ಪ್ರಾಚೀನ ಪ್ರವೃತ್ತಿಯನ್ನು ಮೀರಿ ಮುಂದುವರಿಯಬೇಕು. ಕ್ರೌರ್ಯವನ್ನು ಕ್ರೌರ್ಯದೊಂದಿಗೆ ಹೋಲಿಸುವುದು ನಮ್ಮ ಕರ್ತವ್ಯವಲ್ಲ, ಬದಲಿಗೆ ಬುದ್ಧಿವಂತಿಕೆ, ಕರುಣೆ ಮತ್ತು ನ್ಯಾಯದ ಆಳವಾದ ತಿಳುವಳಿಕೆಯ ಮೂಲಕ ಮಾನವೀಯತೆಯನ್ನು ಎತ್ತಿ ಹಿಡಿಯುವುದು ನಮ್ಮ ಕೆಲಸ” ಎಂದು ನ್ಯಾಯಾಧೀಶರು ಆದೇಶದಲ್ಲಿ ಉಲ್ಲೇಖಿಸಿದ್ದರು.

“ಈ ಪ್ರಕರಣವು “ಅಪರೂಪದಲ್ಲಿ ಅಪರೂಪ” ಎಂದು ವರ್ಗೀಕರಿಸಲು ಇರುವ ಕಠಿಣ ಮಾನದಂಡಗಳನ್ನು ಪೂರೈಸುವುದಿಲ್ಲ. ಹಾಗಾಗಿ, ಮರಣದಂಡನೆಗಾಗಿ ಪ್ರಾಸಿಕ್ಯೂಷನ್ ಮಾಡಿರುವ ಮನವಿಯನ್ನು ಪರಿಗಣಿಸುವುದು ಸೂಕ್ತವಲ್ಲ” ಎಂದು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ತಮ್ಮ ಆದೇಶದಲ್ಲಿ ಹೇಳಿದ್ದರು.

ಅದಾಗ್ಯೂ, ಮಮತಾ ಬ್ಯಾನರ್ಜಿ ನ್ಯಾಯಾಲಯದ ಆದೇಶಕ್ಕೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ. “ಯಾರಾದರೊಬ್ಬ ರಾಕ್ಷಸನಾಗಿದ್ದರೆ ನಮ್ಮ ಸಮಾಜ ಮಾನವೀಯತೆ ತೋರಿಸುತ್ತಿತ್ತಾ? ನಮ್ಮ ತಾಯಂದಿರು ಮತ್ತು ಸಹೋದರಿಯರ ಕಡೆಗೆ ಸಮಾಜವನ್ನು ಮಾನವೀಯಗೊಳಿಸಬೇಕು. ಇಂತಹ ಪ್ರಕರಣಗಳಲ್ಲಿ ಮರಣದಂಡನೆ ವಿಧಿಸುವ ‘ಪಶ್ಚಿಮ ಬಂಗಾಳ ಅಪರಾಧ ಕಾನೂನು ತಿದ್ದುಪಡಿ ಮಸೂದೆ-2024 ಅನ್ನು ನಮ್ಮ ಸರ್ಕಾರ ಅಂಗೀಕರಿಸಿದೆ” ಎಂದು ಹೇಳಿದ್ದಾರೆ.

“ಆಸಿಡ್ ದಾಳಿ ಮತ್ತು ಇತರ ಘೋರ ಅಪರಾಧಗಳ ಪ್ರಕರಣಗಳಲ್ಲಿ ಕಠಿಣ ಶಿಕ್ಷೆ ವಿಧಿಸಲು ನಾವು ಮಸೂದೆ ತಂದಿದ್ದೇವೆ. ಆದರೆ, ಕೇಂದ್ರ ಸರ್ಕಾರ ಇದರ ಬಗ್ಗೆ ಗಮನಹರಿಸದ ಕಾರಣ ಮಸೂದೆ ಇನ್ನೂ ಬಾಕಿ ಇದೆ. ಈ ಮಸೂದೆಯು ಮಾದರಿಯಾಗಬೇಕೆಂದು ಮತ್ತು ದೇಶದಾದ್ಯಂತ ಜಾರಿಗೆ ಬರಬೇಕೆಂದು ನಾವು ಬಯಸುತ್ತೇವೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಹೈದರಾಬಾದ್| ಮಕ್ಕಳ ಅಶ್ಲೀಲ ಚಿತ್ರ ಡೌನ್‌ಲೋಡ್ ಮಾಡಿ ಹಂಚಿಕೆ; ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...