Homeಅಂತರಾಷ್ಟ್ರೀಯಇಂಗ್ಲೆಂಡ್‌ನಲ್ಲಿ ಸಿಖ್ ಯುವತಿ ಮೇಲೆ 'ಜನಾಂಗೀಯ ಪ್ರೇರಿತ' ಅತ್ಯಾಚಾರ: ಖಂಡನೆ ವ್ಯಕ್ತಪಡಿಸಿದ 40 ಸಂಘಟನೆಗಳು, ನ್ಯಾಯಕ್ಕಾಗಿ...

ಇಂಗ್ಲೆಂಡ್‌ನಲ್ಲಿ ಸಿಖ್ ಯುವತಿ ಮೇಲೆ ‘ಜನಾಂಗೀಯ ಪ್ರೇರಿತ’ ಅತ್ಯಾಚಾರ: ಖಂಡನೆ ವ್ಯಕ್ತಪಡಿಸಿದ 40 ಸಂಘಟನೆಗಳು, ನ್ಯಾಯಕ್ಕಾಗಿ ಒತ್ತಾಯ

- Advertisement -
- Advertisement -

ಸೆಪ್ಟೆಂಬರ್ 9ರಂದು ಇಂಗ್ಲೆಂಡ್‌ನ ವೆಸ್ಟ್ ಮಿಡ್‌ಲ್ಯಾಂಡ್ಸ್‌ ಪ್ರಾಂತ್ಯದ ಓಲ್ಡ್‌ಬರಿ ಟೇಮ್ ರಸ್ತೆ ಬಳಿ ‘ಜನಾಂಗೀಯ ಪ್ರೇರಿತ ದಾಳಿ’ಯಲ್ಲಿ ಸಿಖ್ ಯುವತಿ ಮೇಲೆ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ.

20 ವರ್ಷದ ಯುವತಿ ಮೇಲೆ ಇಬ್ಬರು ಬಿಳಿಯ ಪುರುಷರು ಹಲ್ಲೆ ನಡೆಸಿ, ಅತ್ಯಾಚಾರವೆಸಗಿದ್ದಾರೆ. ಅಲ್ಲದೆ, “ನೀನು ಇಲ್ಲಿಗೆ ಸೇರಿದವಲಲ್ಲ, ಹೊರಟು ಹೋಗು” ಎಂಬುವುದಾಗಿ ಹೇಳಿದ್ದಾರೆ ಎಂದು ವರದಿಯಾಗಿದೆ.

ಘಟನೆ ಖಂಡಿಸಿ ಸಿಖ್ ಸಮುದಾಯದ ಜನರು ಪ್ರತಿಭಟನೆ ನಡೆಸಿದ ನಂತರ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ದುಷ್ಕೃತ್ಯ ಖಂಡಿಸಿ ಹಲವಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದರೆ, ಸಾಮಾಜಿಕ ಮಾಧ್ಯಮಗಳಲ್ಲಿ ನೂರಾರು ಜನರು ಆಕ್ರೋಶ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ.

ಅತ್ಯಾಚಾರ ಸಂತ್ರಸ್ತೆಯ ಪರವಾಗಿ ದಕ್ಷಿಣ ಏಷ್ಯಾದ 40 ಕಪ್ಪುವರ್ಣ, ವಲಸಿಗ, ನಿರಾಶ್ರಿತರ ಮತ್ತು ಜನಾಂಗೀಯ ವಿರೋಧಿ ಸಂಘಟನೆಗಳು ಒಗ್ಗಟ್ಟು ಪ್ರದರ್ಶಿಸಿವೆ.

ತಮ್ಮ ಹೇಳಿಕೆಯಲ್ಲಿ ಸಂಘಟನೆಗಳು, ಭಯಾನಕ ಲೈಂಗಿಕ ಮತ್ತು ಜನಾಂಗೀಯ ದೌರ್ಜನ್ಯವನ್ನು ಹೇಳಿಕೊಳ್ಳಲು ಮುಂದೆ ಬಂದ ಸಂತ್ರಸ್ತೆಯ ಧೈರ್ಯವನ್ನು ಶ್ಲಾಘಿಸಿವೆ. “ನಾವು ಸಂತ್ರಸ್ತೆಯ ಜೊತೆ ಬಲವಾದ ಒಗ್ಗಟ್ಟನ್ನು ವ್ಯಕ್ತಪಡಿಸುತ್ತೇವೆ ಮತ್ತು ಬೇಷರತ್ತಾಗಿ ಆಕೆಯ ಬೆಂಬಲಕ್ಕೆ ನಿಲ್ಲುತ್ತೇವೆ” ಎಂದು ಹೇಳಿವೆ.

ಸಿಖ್ ವುಮೆನ್ ಏಡ್, ಸೌತ್ ಏಷ್ಯಾ ಸಾಲಿಡಾರಿಟಿ ಗ್ರೂಪ್, ಮಿಲಿಯನ್ ವುಮೆನ್ ರೈಸ್ ಮೂವ್‌ಮೆಂಟ್, ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಯುಕೆ, ಬರ್ಮಿಂಗ್‌ಹ್ಯಾಮ್ ಬ್ಲ್ಯಾಕ್ ಸಿಸ್ಟರ್ಸ್, ಇಂಡಿಯನ್ ವರ್ಕರ್ಸ್ ಅಸೋಸಿಯೇಷನ್ ​​(ಜಿಬಿ), ವುಮೆನ್ ಅಸಿಲಮ್ ಸೀಕರ್ಸ್, ರೆಫ್ಯೂಜೀಸ್ ಅಂಡ್ ಮೈಗ್ರಂಟ್ಸ್ (ವಾರ್ಮ್), ಯುಕೆ ಇಂಡಿಯನ್ ಮುಸ್ಲಿಂ ಕೌನ್ಸಿಲ್ (ಯುಕೆ-ಐಎಂಸಿ), ಕ್ಯಾಸ್ಟ್‌ವಾಚ್ ಯುಕೆ, ಇಂಡಿಯಾ ಲೇಬರ್ ಸಾಲಿಡಾರಿಟಿ (ಐಎಲ್ಎಸ್), ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್ ಯುಕೆ, ಮುಸ್ಲಿಂ ಸೋಶಿಯಲ್ ಜಸ್ಟೀಸ್ ಇನಿಶಿಯೇಟಿವ್ ಮತ್ತು ಸ್ಟ್ರೈವ್ ಯುಕೆ ಸೇರಿದಂತೆ ಇತರ ಸಂಘಟನೆಗಳು ಸಂತ್ರಸ್ತೆಯ ಪರ ಹೇಳಿಕೆಗೆ ಸಹಿ ಹಾಕಿವೆ ಎಂದು ವರದಿಗಳು ಹೇಳಿವೆ.

ಸಂತ್ರಸ್ತ ಯುವತಿ ಸಿಖ್ ಫೆಡರೇಶನ್ (ಯುಕೆ) ಮೂಲಕ ಸಾರ್ವಜನಿಕ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ಸ್ಥಳೀಯ ಸಮುದಾಯ ತನಗೆ ತೋರಿಸಿದ ಪ್ರೀತಿಗೆ ನಿಜವಾಗಿಯೂ ವಿನಮ್ರಳಲಾಗಿದ್ದೇನೆ” ಎಂದು ಹೇಳಿರುವುದಾಗಿ ವರದಿಗಳು ವಿವರಿಸಿವೆ.

ಬಿಳಿಯರ ಪ್ರಾಬಲ್ಯವಾದಿ ಅಭಿಯಾನಗಳಿಗೆ ಹೆಸರುವಾಸಿಯಾದ ಟಾಮಿ ರಾಬಿನ್ಸನ್ ನೇತೃತ್ವದಲ್ಲಿ ಸಾವಿರಾರು ಬಲಪಂಥೀಯರು ಲಂಡನ್‌ನ ಬೀದಿಗಳಲ್ಲಿ ಇಸ್ಲಾಮೋಫೋಬಿಕ್, ವಲಸಿಗ ವಿರೋಧಿ ಮತ್ತು ಜನಾಂಗೀಯ ಘೋಷಣೆಗಳೊಂದಿಗೆ ಮೆರವಣಿಗೆ ನಡೆಸಿದ ಅದೇ ದಿನ ಓಲ್ಡ್‌ಬರಿ ಘಟನೆ ಬೆಳಕಿಗೆ ಬಂದಿದೆ.

ಸಂತ್ರಸ್ತೆಯ ಪರ ಹೇಳಿಕೆಗೆ ಸಹಿ ಹಾಕಿದವರು, ಬಲಪಂಥೀಯ ಅಭಿಯಾನಗಳು ಜನಾಂಗೀಯ ಅಲ್ಪಸಂಖ್ಯಾತರು, ವಲಸಿಗರು ಮತ್ತು ನಿರಾಶ್ರಿತರ ವಿರುದ್ದ ದೌರ್ಜನ್ಯವನ್ನು ಪ್ರಚೋದಿಸುತ್ತಿವೆ ಎಂದು ಆರೋಪಿಸಿವೆ. ಈ ವಾತಾವರಣವು ಜನಾಂಗೀಯ ಪ್ರೇರಿತ ಅತ್ಯಾಚಾರ ಸೇರಿದಂತೆ ಇಂತಹ ಘಟನೆಗಳಿಗೆ ಕಾರಣವಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿವೆ.

ಗಾಝಾ ನಗರದಲ್ಲಿ ಆಕ್ರಮಣ ವಿಸ್ತರಿಸಿದ ಇಸ್ರೇಲ್: ಅಸಹಾಯಕ ನಾಗರಿಕರಿಂದ ಮಹಾ ಪಲಾಯನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...

ಬುರ್ಖಾ ಧರಿಸದ ಕಾರಣಕ್ಕೆ ಪತ್ನಿ-ಮಕ್ಕಳ ಕೊಲೆ; ಮನೆಯೊಳಗೆ ಹೂತುಹಾಕಿದ ವ್ಯಕ್ತಿ

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಘೋರ ಘಟನೆಯಿಂದು ವರದಿಯಾಗಿದೆ, ತನ್ನ ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ತ್ರಿವಳಿ ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿ ಫಾರೂಕ್ ಎಂದು...

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ವಿಶೇಷ ಕಾರ್ಯಾಚರಣೆ: ಮೊಬೈಲ್ ಫೋನ್, ಗಾಂಜಾ ವಶ: ಡಿಜಿಪಿ ಅಲೋಕ್ ಕುಮಾರ್

ಕರ್ನಾಟಕದ ಕಾರಾಗೃಹಗಳಲ್ಲಿ 36 ಗಂಟೆಗಳ ಕಾಲ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು, ಚಾಕುಗಳು ಮತ್ತು ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿದ್ದುಪಡಿ ಸೌಲಭ್ಯಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು...