Homeಮುಖಪುಟದ್ರೌಪದಿ ಮುರ್ಮು ವಿರುದ್ಧ ಜನಾಂಗೀಯ ನಿಂದನೆ: ಬೇಷರತ್ ಕ್ಷಮೆಯಾಚಿಸಿದ ವಿಶ್ವೇಶ್ವರ ಭಟ್

ದ್ರೌಪದಿ ಮುರ್ಮು ವಿರುದ್ಧ ಜನಾಂಗೀಯ ನಿಂದನೆ: ಬೇಷರತ್ ಕ್ಷಮೆಯಾಚಿಸಿದ ವಿಶ್ವೇಶ್ವರ ಭಟ್

- Advertisement -
- Advertisement -

ತಮ್ಮ ಅಂಕಣ ಬರಹದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುರವರ ಬಣ್ಣವನ್ನು ಅವಮಾನಕರ ರೀತಿಯಲ್ಲಿ ಚಿತ್ರಿಸಿ ಜನಾಂಗೀಯ ನಿಂದನೆಗೈದ ಪ್ರಕರಣದಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್ ರಾಷ್ಟ್ರೀಯ ಮಹಿಳಾ ಆಯೋಗದ ಎದುರು ಬೇಷರತ್ ಕ್ಷಮೆಯಾಚಿಸಿದ್ದಾರೆ.

ಗೌರವಾನ್ವಿತ ರಾಷ್ಟ್ರಪತಿಯವರ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವುದನ್ನು ರಾಷ್ಟ್ರೀಯ ಮಹಿಳಾ ಆಯೋಗವು (NCW) ಗುರುತಿಸಿದೆ. ಈ ಕುರಿತು ಅಕ್ಟೋಬರ್ 26ರಂದು ವಿಚಾರಣೆಗೆ ಹಾಜರಾಗುವಂತೆ ಪತ್ರಕರ್ತ ವಿಶ್ವೇಶ್ವರ ಭಟ್‌ರವರಿಗೆ ನೋಟಿಸ್ ನೀಡಲಾಗಿದೆ ಎಂದು NCW ಈ ಹಿಂದೆ ತಿಳಿಸಿತ್ತು.

ಈ ಹಿನ್ನೆಲೆಯಲ್ಲಿ ಆಯೋಗದ ಮುಂದೆ ಹಾಜರಾದ ವಿಶ್ವೇಶ್ವರ ಭಟ್ “ಭಾರತದ ರಾಷ್ಟ್ರಪತಿಯವರನ್ನು ಅವಮಾನಿಸುವ ಯಾವುದೇ ದುರುದ್ದೇಶ ತನಗೆ ಇಲ್ಲ ಎಂಬುದಾಗಿ ಸ್ಪಷ್ಟಪಡಿಸಿ ಕ್ಷೆಮೆ ಯಾಚಿಸಿದ್ದಾರೆ, ಲಿಖಿತವಾಗಿಯೂ ಕ್ಷಮೆ ಕೇಳಿದ್ದಾರೆ” ಎಂದು ಆಯೋಗದ ಅಧ್ಯಕ್ಷೆ ರೇಖಾ ಶರ್ಮಾರವರ ಹೇಳಿಕೆ ಉಲ್ಲೇಖಿಸಿ ಪ್ರಜಾವಾಣಿ ವರದಿ ಮಾಡಿದೆ. ರಾಷ್ಟ್ರೀಯ ಮಹಿಳಾ ಆಯೋಗವು ಕ್ಷಮಾಪಣೆ ಪತ್ರದ ವಿವರಗಳನ್ನು ರಾಷ್ಟ್ರಪತಿ ಭವನಕ್ಕೆ ಕಳುಹಿಸಲಿದೆ ಎಂದು ಅವರು ಹೇಳೀದ್ದಾರೆ ಎನ್ನಲಾಗಿದೆ.

ವಿಶ್ವವಾಣಿ ಪತ್ರಿಕೆಯ ಅಕ್ಟೋಬರ್ 06ರ ನೂರೆಂಟು ವಿಶ್ವ ಎಂಬ ಅಂಕಣದಲ್ಲಿ ವಿಶ್ವೇಶ್ವರ್ ಭಟ್‌ ನದಿಯ ಹೆಸರಿಟ್ಟುಕೊಂಡು ನೀರಿಗಾಗಿ ನರಳುವ ಜೋರ್ಡಾನ್! ಎಂಬ ಬರಹದಲ್ಲಿ “ಸುಟ್ಟು ಕರಕಲಾದ ಕಾಗೆ! ಥೇಟು ‘ಮುರ್ಮು’ ಅವತಾರ!” ಎಂದು ಬರೆಯುವ ಮೂಲಕ ರಾಷ್ಟ್ರಪತಿಯವರ ಮೈಬಣ್ಣವನ್ನು ಅವಹೇಳನ ಮಾಡಿದ್ದರು.

ವಿಶ್ವೇಶ್ವರ ಭಟ್ ತಮ್ಮ ಅಂಕಣದಲ್ಲಿ ಜೋರ್ಡಾನ್ ದೇಶದ ಬಿಸಿಲಿನ ಝಳವನ್ನು ವರ್ಣಿಸುವಾಗ “ಅಪ್ಪಟ ಬೀನ್ಕಿ ಕೆಂಡ! ಅರ್ಧಗಂಟೆ ಆ ಮರುಭೂಮಿಯಲ್ಲಿ ನಿಂತರೆ ಇಡೀ ಶರೀರವೆಲ್ಲ ಸುಟ್ಟು ಕರಕಲಾದ ಕಾಗೆ! ಥೇಟು ‘ಮುರ್ಮು’ ಅವತಾರ! ಕಣ್ಮುಚ್ಚಿದರೂ ಜೋಗದ ಜಲಪಾತದಂತೆ ಸುರಿಯುವ ನಿಗಿನಿಗಿ ಬಿಸಿಲ ಧಾರೆ” ಎಂದು ಬರೆದಿದ್ದಾರೆ. ಆ ಮೂಲಕ ನಮ್ಮ ರಾಷ್ಟ್ರಪತಿಯವರ ಬಣ್ಣವನ್ನು ಅಪಹಾಸ್ಯ ಮಾಡಿದ್ದರು.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಪತ್ರಕರ್ತ ವಿಶ್ವೇಶ್ವರ್ ಭಟ್‌ರನ್ನು ಬಂಧಿಸಬೇಕೆಂದು ಆಗ್ರಹಗಳು ಕೇಳಿಬಂದಿದ್ದವು. ಹಿಂದೆಲ್ಲ ರಾಷ್ಟ್ರಪತಿಗಳನ್ನು ಅವಮಾನಿಸಿದಾಗ ಪ್ರತಿಭಟಿಸಿದ್ದ ಬಿಜೆಪಿ ಹೀಗೇಕೆ ಸುಮ್ಮನಿದೆ ಎಂದು ಪ್ರಶ್ನಿಸಲಾಗಿತ್ತು.

ಆದರೆ ವಿಶ್ವೇಶ್ವರ ಭಟ್ ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದರು. ರಾಷ್ಟ್ರಪತಿಗಳಿಗೆ ಅವಮಾನವಾಗಿಲ್ಲ ಎಂದು ವಾದಿಸಿದ್ದರು. ಆ ಸಂದರ್ಭದಲ್ಲಿ ಮೊಹಮ್ಮದ್ ಮಫಾಜ್ ಎಂಬುವವರು ಸೇರಿದಂತೆ ಹಲವಾರು ಜನರು ರಾಷ್ಟ್ರೀಯ ಮಹಿಳಾ ಆಯೋಗವನ್ನು, ರಾಷ್ಟ್ರಪತಿ ಭವನವನ್ನು ಟ್ವಿಟರ್‌ನಲ್ಲಿ ಟ್ಯಾಗ್ ಮಾಡಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು. ಕೊನೆಗೂ ಮಹಿಳಾ ಆಯೋಗ ವಿಶ್ವೇಶ್ವರ್ ಭಟ್‌ಗೆ ಸಮನ್ಸ್ ನೀಡಿ ಕ್ಷಮೆ ಯಾಚಿಸುವಂತೆ ಮಾಡಿದೆ.

ಇದನ್ನೂ ಓದಿ: ಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ – ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದು ನಿಜವೇ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...