Homeಮುಖಪುಟಎಎಪಿ ಸಂಸದ ರಾಘವ್ ಚಡ್ಡಾ ರಾಜ್ಯ ಸಭೆಯಿಂದ ಅಮಾನತು

ಎಎಪಿ ಸಂಸದ ರಾಘವ್ ಚಡ್ಡಾ ರಾಜ್ಯ ಸಭೆಯಿಂದ ಅಮಾನತು

- Advertisement -
- Advertisement -

ಎಎಪಿ ಸಂಸದ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯಲ್ಲಿ ಸಹಿ ನಕಲು ಮಾಡಿದ ಆರೋಪದ ಮೇಲೆ ಶುಕ್ರವಾರ ರಾಜ್ಯಸಭೆಯಿಂದ  ಅಮಾನತುಗೊಳಿಸಲಾಗಿದೆ.

ದೆಹಲಿ ಸೇವಾ ಮಸೂದೆ ಬಿಲ್‌ನ್ನು ಸೆಲೆಕ್ಟ್‌ ಕಮಿಟಿಗೆ ಕಳುಹಿಸಬೇಕು ಎಂದು ಆಗ್ರಹಿಸಲು ಸದಸ್ಯರ ಸಹಿ ಇರುವ ಪತ್ರವನ್ನು ಫೋರ್ಜರಿ ಮಾಡಿದ ಆರೋಪ ರಾಘವ್‌ ಚಡ್ಡಾ ಮೇಲಿದೆ. ಈ ಬಗ್ಗೆ ನಾಲ್ವರು ಸಂಸದರು ನಮ್ಮ ಒಪ್ಪಿಗೆ ಪಡೆಯದೆ ನಮ್ಮ ಹೆಸರನ್ನು ಅವರು ನಿರ್ಣಯದಲ್ಲಿ ಉಲ್ಲೇಖಿಸಿದ್ದಾರೆ ಎಂದು ಆರೋಪಿಸಿದ್ದರು.

ಇನ್ನು ಈ ಕುರಿತು ವಿಶೇಷಾಧಿಕಾರಿ ಸಮಿತಿ ತನ್ನ ವರದಿಯನ್ನು ಸಲ್ಲಿಸುವವರೆಗೆ ರಾಘವ್‌ ಚಡ್ಡಾ ಅವರನ್ನು ರಾಜ್ಯಸಭೆಯಿಂದ ಅನಿರ್ದಿಷ್ಟಾವಧಿಗೆ ಅಮಾನತು ಮಾಡಲಾಗುತ್ತದೆ ಎಂದು ವರದಿ ತಿಳಿಸಿದೆ.

ರಾಘವ್ ಚಡ್ಡಾ ಅವರ ಕ್ರಮ ಅನೈತಿಕ ಎಂದು ಪಿಯೂಷ್ ಗೋಯಲ್ ಅವರು ಅಮಾನತುಗೊಳಿಸುವ ಪ್ರಸ್ತಾಪವನ್ನು ಮಂಡಿಸಿದ್ದರು.

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು ಬುಧವಾರ ಈ ವಿಷಯವನ್ನು ಪರಿಶೀಲಿಸಲು ವಿಶೇಷಾಧಿಕಾರ ಸಮಿತಿಗೆ ಸಂಸದರ ದೂರುಗಳನ್ನು ಕಳುಹಿಸಿದ್ದು, ಇಂದು ರಾಘವ್‌ ಚಡ್ಡಾ ಅವರನ್ನು ರಾಜ್ಯಸಭೆಯಿಂದ ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಲಾಗಿದೆ.

ರಾಜ್ಯಸಭಾ ಸಂಸದರಾದ ಎಸ್ ಫಾಂಗ್ನಾನ್ ಕೊನ್ಯಾಕ್, ನರಹರಿ ಅಮೀನ್ ಮತ್ತು ಬಿಜೆಪಿಯ  ಸುಧಾಂಶು ತ್ರಿವೇದಿ, ಎಐಎಡಿಎಂಕೆಯ ಎಂ ತಂಬಿದುರೈ ಮತ್ತು ಬಿಜೆಡಿಯ ಸಸ್ಮಿತ್ ಪಾತ್ರ ಅವರು ರಾಘವ್ ಚಡ್ಡಾ ಅವರು  ಬಿಲ್ ನ್ನು ಆಯ್ಕೆ ಸಮಿತಿಗೆ ಕಳುಹಿಸುವ ವಿಚಾರದಲ್ಲಿ ತಮ್ಮ ಒಪ್ಪಿಗೆಯಿಲ್ಲದೆ ತಮ್ಮ ಹೆಸರನ್ನು ಸೇರಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಗುಂಪು ಹತ್ಯೆ ಪ್ರಕರಣಗಳಲ್ಲಿ ಮರಣದಂಡನೆ ಶಿಕ್ಷೆ ನೀಡಲಾಗುವುದು- ಅಮಿತ್ ಶಾ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

0
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತದ...