Homeಮುಖಪುಟತಮಿಳುನಾಡು ಸರ್ಕಾರದ ಆರ್ಥಿಕ ಸಲಹಾ ಮಂಡಳಿಯ ಭಾಗವಾದ ರಘುರಾಂ ರಾಜನ್, ಎಸ್ತರ್ ಡುಫ್ಲೊ

ತಮಿಳುನಾಡು ಸರ್ಕಾರದ ಆರ್ಥಿಕ ಸಲಹಾ ಮಂಡಳಿಯ ಭಾಗವಾದ ರಘುರಾಂ ರಾಜನ್, ಎಸ್ತರ್ ಡುಫ್ಲೊ

2003-2006 ರವರೆಗೆ ಐಎಂಎಫ್‌ನ ಮುಖ್ಯ ಹಣಕಾಸು ತಜ್ಞರು ಮತ್ತು ಸಂಶೋಧನಾ ನಿರ್ದೇಶಕರಾಗಿದ್ದ ರಘುರಾಂ ರಾಜನ್‌ರವರು 2007-2008ರ ಸಮಯದಲ್ಲಿ ಜಾಗತಿಕ ಆರ್ಥಿಕ ಕುಸಿತದ ಕುರಿತು ಎಚ್ಚರಿಕೆ ನೀಡಿದ ಮೊದಲಿಗರಾಗಿದ್ದರು.

- Advertisement -
- Advertisement -

ಮಹತ್ವದ ಬೆಳವಣಿಗೆಯೊಂದರಲ್ಲಿ ತಮಿಳುನಾಡು ಸರ್ಕಾರವು ‘ನೂತನ ಮುಖ್ಯಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಗೆ’ ಜಗತ್ಪ್ರಸಿದ್ದ ಅರ್ಥಶಾಸ್ತ್ರಜ್ಞರನ್ನು ನೇಮಿಸಿಕೊಂಡು ಗಮನ ಸೆಳೆದಿದೆ.

ಸಮಿತಿಯಲ್ಲಿ ಆರ್‌ಬಿಐನ್‌ ಮಾಜಿ ಗರ್ವನರ್ ರಘುರಾಮ್ ರಾಜನ್, ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞೆ ಎಸ್ತರ್ ಡುಫ್ಲೊ, ಕೇಂದ್ರ ಸರ್ಕಾರದ ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣಿಯನ್, ಅಭಿವೃದ್ಧಿ ಅರ್ಥಶಾಸ್ತ್ರಜ್ಞ ಜೀನ್ ಡ್ರೆಜ್ ಮತ್ತು ಮಾಜಿ ಕೇಂದ್ರ ಹಣಕಾಸು ಕಾರ್ಯದರ್ಶಿ ಎಸ್ ನಾರಾಯಣ್ ಸೇರಿದ್ದಾರೆ.

ಇಂದು ತಮಿಳುನಾಡು ರಾಜ್ಯಪಾಲರಾದ ಭನ್ವಾರಿಲಾಲ್ ಪುರೋಹಿತ್ ಸಮಿತಿಯನ್ನು ಘೋಷಿಸಿ “ಈ ಮಂಡಳಿಯ ಶಿಫಾರಸುಗಳನ್ನು ಆಧರಿಸಿ, ಸರ್ಕಾರವು ರಾಜ್ಯದ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸುತ್ತದೆ ಮತ್ತು ಆರ್ಥಿಕ ಬೆಳವಣಿಗೆಯ ಅನುಕೂಲಗಳು ಸಮಾಜದ ಎಲ್ಲಾ ವಿಭಾಗಗಳನ್ನು ತಲುಪುವಂತೆ ನೋಡಿಕೊಳ್ಳುತ್ತದೆ” ಎಂದು ತಿಳಿಸಿದ್ದಾರೆ.

ರಾಜ್ಯ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ರಾಜ್ಯಕ್ಕೆ ತ್ವರಿತ ಮತ್ತು ಒಳಗೊಳ್ಳುವ ಆರ್ಥಿಕ ಬೆಳವಣಿಗೆಯ ಹಾದಿಯನ್ನು ರೂಪಿಸುವ ನಿಟ್ಟಿನಲ್ಲಿ ಈ ಮಂಡಳಿ ಕಾರ್ಯನಿರ್ವಹಿಸಲಿದೆ. ಹಣಕಾಸು ನೀತಿಗಳು ಜಿಲ್ಲೆಗಳ ಕೈಗಾರಿಕಾ ನೆಲೆಯನ್ನು ವೈವಿಧ್ಯಗೊಳಿಸುವುದು ಮತ್ತು ತಾಂತ್ರಿಕ ಉನ್ನತೀಕರಣವನ್ನು ಖಾತರಿಪಡಿಸಲು ಇದು ಶ್ರಮಿಸುತ್ತದೆ” ಎಂದು ತಿಳಿಸಿದ್ದಾರೆ.

ಎಂಎಸ್‌ಎಂಇಗಳನ್ನು ಪುನರುಜ್ಜೀವನಗೊಳಿಸುವ ಯೋಜನೆಗಳನ್ನು ರೂಪಿಸಲು ಕೈಗಾರಿಕೋದ್ಯಮಿಗಳು, ಬ್ಯಾಂಕಿಂಗ್ ಮತ್ತು ಹಣಕಾಸು ತಜ್ಞರು ಮತ್ತು ಸರ್ಕಾರಿ ಅಧಿಕಾರಿಗಳನ್ನು ಒಳಗೊಂಡ ತಜ್ಞರ ಸಮಿತಿಯನ್ನು ರಚಿಸಲಾಗುವುದು. ಆರ್ಥಿಕ ಸಲಹಾ ಸಮಿತಿ ಮತ್ತು ಇತರ ಗುಂಪುಗಳು ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಅಧ್ಯಯನ ಮಾಡುತ್ತವೆ ಮತ್ತು ರಾಜ್ಯದ ಆರ್ಥಿಕತೆಯನ್ನು ಸದೃಢವಾಗಿಸಲು ಬದಲಾವಣೆಗಳನ್ನು ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ಅಲ್ಲದೆ ತಮಿಳುನಾಡು ಸರ್ಕಾರವು ಕೃಷಿ ಮತ್ತು ತಮಿಳು ಮಾಧ್ಯಮದ ವಿದ್ಯಾರ್ಥಿಗಳಿಗೆ ಉದ್ಯೋಗಕ್ಕಾಗಿ ಪ್ರತ್ಯೇಕ ಬಜೆಟ್‌ ಅನ್ನು ಮೀಸಲಿಡುತ್ತದೆ ಎಂದು ಅವರು ಘೋಷಿಸಿದ್ದಾರೆ.

ಈ ಆರ್ಥಿಕ ಸಲಹಾ ಮಂಡಳಿಯ ಸದಸ್ಯರು ಖ್ಯಾತ ಅರ್ಥಶಾಸ್ತ್ರಜ್ಞರಾಗಿದ್ದು, ಅಪಾರ ಅನುಭವವುಳ್ಳವರಾಗಿದ್ದಾರೆ. ಕೆಲವರು ಕೇಂದ್ರ ಸರ್ಕಾರದ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು ಮೋದಿ ಸರ್ಕಾರದ ನೀತಿಗಳನ್ನು ಖಂಡಿಸಿ ಹೊರಬಂದಿದ್ದಾರೆ. ಅಂತವರನ್ನು ತಮಿಳುನಾಡು ಸರ್ಕಾರ ತಮ್ಮ ಸಲಹಾ ಸಮಿತಿಗೆ ನೇಮಿಸಿಕೊಂಡು ದೇಶದ ಗಮನ ಸೆಳೆದಿದೆ.

2003-2006 ರವರೆಗೆ ಐಎಂಎಫ್‌ನ ಮುಖ್ಯ ಹಣಕಾಸು ತಜ್ಞರು ಮತ್ತು ಸಂಶೋಧನಾ ನಿರ್ದೇಶಕರಾಗಿದ್ದ ರಘುರಾಂ ರಾಜನ್‌ರವರು 2007-2008ರ ಸಮಯದಲ್ಲಿ ಜಾಗತಿಕ ಆರ್ಥಿಕ ಕುಸಿತದ ಕುರಿತು ಎಚ್ಚರಿಕೆ ನೀಡಿದ ಮೊದಲಿಗರಾಗಿದ್ದರು.

ಎಸ್ತರ್ ಡುಫ್ಲೊರವರು ಜಾಗತಿಕ ಬಡತನವನ್ನು ಹೋಗಲಾಡಿಸುವ ಪ್ರಾಯೋಗಿಕ ವಿಧಾನಕ್ಕಾಗಿ 2019ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ಪಡೆದ ಅರ್ಥಶಾಸ್ತ್ರಜ್ಞೆಯಾಗಿದ್ದಾರೆ.

2014 ರಿಂದ 2018ರವರೆಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದ ಅರವಿಂದ್ ಸುಬ್ರಮಣಿಯನ್‌ಯವರು ಸರ್ಕಾರದ ನೀತಿಗಳನ್ನು ಟೀಕಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಹೊರಬಂದಿದ್ದರು.

ಇಂತಹ ಅನುಭವಿಗಳನ್ನು ನೇಮಿಸಿಕೊಂಡು ರಾಜ್ಯದ ಆರ್ಥಿಕತೆಯನ್ನು ರೂಪಿಸಲು ತಮಿಳುನಾಡು ಸರ್ಕಾರ ಹೊರಟಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.


ಇದನ್ನೂ ಓದಿ: ಈಗ ಸರ್ಕಾರವೇನು ಮಾಡಬೇಕು?: ಅಭಿಜಿತ್ ಬ್ಯಾನರ್ಜಿ, ಎಸ್ತರ್ ಡಫ್ಲೊ ಸಲಹೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತಮಿಳುನಾಡಿನ ಸ್ಟಾಲಿನ (ಪ್ರಪಂಚದ ಖ್ಯಾತ ಅರ್ಥ ಶಾಸ್ತ್ರಜ್ಞರನ್ನು ಒಳಗೊಂಡ ಸಲಹಾ ಮಂಡಳಿಯ ನೇಮಕಾತಿ )ಹಾಗು ಕೇರಳದ ವಿಜಯನ್ ರವರು (ನವ್ಯ ಹಾಗೂ ವಿನೂತನ ಮಂತ್ರಿ ಮಂಡಲ ), ರಾಜ್ಯಗಳ ಆಡಳಿತದಲ್ಲಿ ಹೊಸ ಅಧ್ಯಯವನ್ನೇ ಬರೆಯುತ್ತಿದ್ದಾರೆ.
    ಅವರ ಯಶಸ್ಸಿನಲ್ಲೇ ದೇಶದ ಯಶಸ್ಸಿದೆ
    ??????????????

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...