Homeಕರ್ನಾಟಕ’ರಾಗಿಣಿ ಬಿಜೆಪಿ ಸದಸ್ಯರಲ್ಲ; ಅವರ ಕಾರ್ಯಚಟುವಟಿಕೆಗಳಿಗೆ ಪಕ್ಷ ಹೊಣೆಯಾಗದು: ಬಿಜೆಪಿ

’ರಾಗಿಣಿ ಬಿಜೆಪಿ ಸದಸ್ಯರಲ್ಲ; ಅವರ ಕಾರ್ಯಚಟುವಟಿಕೆಗಳಿಗೆ ಪಕ್ಷ ಹೊಣೆಯಾಗದು: ಬಿಜೆಪಿ

ರಾಗಿಣಿ ಬಿಜೆಪಿಯ ರಾಯಭಾರಿ ಎಂದು ಕಾಂಗ್ರೆಸ್ ಆರೋಪಿಸಿದೆ

- Advertisement -
- Advertisement -

ಡ್ರಗ್ಸ್‌ ಜಾಲದಲ್ಲಿ ನಟಿ ರಾಗಿಣಿ ದ್ವಿವೇದಿ ಅವರ ಬಂಧನವಾದ ನಂತರ ಅವರಿಗೂ ಬಿಜೆಪಿಗೂ ಇರುವ ನಂಟಿನ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಆದರೆ ಬಿಜೆಪಿ ಅವರಿಂದ ಅಂತರ ಕಾಯ್ದುಕೊಳ್ಳಲು ಪ್ರಯತ್ನಿಸುತ್ತಿದ್ದು, ನಟಿ ರಾಗಿಣಿ ಬಿಜೆಪಿ ಸದಸ್ಯರಲ್ಲ. ಅವರ ವೈಯಕ್ತಿಕ ಅಥವಾ ವೃತ್ತಿ ಜೀವನದ ಕಾರ್ಯಚಟುವಟಿಕೆಗಳಿಗೆ ಪಕ್ಷ ಹೊಣೆಯಾಗದು ಎಂದು ಹೇಳಿದೆ.

ಬಿಜೆಪಿಯ ರಾಜ್ಯ ವಕ್ತಾರ ಕ್ಯಾಪ್ಟನ್ ಗಣೇಶ್‌ ಕಾರ್ಣಿಕ್, “ರಾಗಿಣಿ ಬಿಜೆಪಿ ಸದಸ್ಯರಲ್ಲ. ಪಕ್ಷವು ಅವರಿಗೆ ಚುನಾವಣೆಯಲ್ಲಿ ಯಾವುದೇ ಜವಾಬ್ದಾರಿ ವಹಿಸಿರಲಿಲ್ಲ. 2019 ರ ಉಪಚುನಾವಣೆ ವೇಳೆ ಸ್ವಇಚ್ಛೆಯಿಂದ ಬಿಜೆಪಿಯ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದರು. ಅವರ ವೈಯಕ್ತಿಕ ಅಥವಾ ವೃತ್ತಿ ಜೀವನದ ಕಾರ್ಯಚಟುವಟಿಕೆಗಳಿಗೆ ಪಕ್ಷ ಹೊಣೆಯಾಗದು. ಅದಕ್ಕೆ ಉತ್ತರಿಸುವ ಅಗತ್ಯವು ಇಲ್ಲ. ಈ ಘಟನೆಗೂ ನಮಗೂ ಸಂಬಂಧವಿಲ್ಲ. ಈ ಪ್ರಕರಣದಿಂದ ಪಕ್ಷವು ಅಂತರ ಕಾಯ್ದುಕೊಳ್ಳಲಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ಮಾಫಿಯ ಪ್ರಕರಣ: ಪೊಲೀಸರ ವಶದಲ್ಲಿರುವ ಡ್ರಗ್ ಪೆಡ್ಲರ್ ಕಾರ್ತಿಕ್ ರಾಜ್ ಬಿಜೆಪಿ ಕಾರ್ಯಕರ್ತನೆ?

ಆದರೆ ನಟಿ ರಾಗಿಣಿಗೆ ಬಿಜೆಪಿಯೊಂದಿಗೆ ನಿರಂತರ ಸಂಪರ್ಕವಿದ್ದು, ಎಪ್ರಿಲ್ 13, 2019 ರಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರ ರಾವ್‌ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗುವ ಕಾರ್ಯಕ್ರಮ ನಿಗದಿಯಾಗಿತ್ತಾದರೂ, ಕಾರಣಾತರಗಳಿಂದ ರದ್ದಾಗಿತ್ತು.

ಕೆಳೆದ ವಾರ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿ ವಿಚಾರಣೆ ಎದುರಿಸಿದ್ದ ಆರೋಪಿ ಕಾರ್ತಿಕ್ ರಾಜ್ ಬಿಜೆಪಿ ಪಕ್ಷದ ಕಾರ್ಯಕರ್ತನೆಂಬ ಆರೋಪ ಕೇಳಿಬಂದಿತ್ತು. ಅಷ್ಟೇ ಅಲ್ಲದೆ ಬಿಜೆಪಿ ನಾಯಕ ಮಾಜಿ ಸಚಿವ ಜನಾರ್ಧನ ರೆಡ್ಡಿಯೊಂದಿಗೆ ಕಾರ್ತಿಕ್ ರಾಜ್ ನಿಂತ ಪೋಟೋ ಕೂಡಾ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

ಈ ನಡುವೆ ಮಾಜಿ ಸಚಿವ ದಿವಂಗತ ಜೀವರಾಜ್ ಆಳ್ವ ಅವರ ಮಗ ಆದಿತ್ಯ ಆಳ್ವ ನಾಪತ್ತೆಯಾಗಿದ್ದು, ಇವರು ಪ್ರಕರಣದಲ್ಲಿ ಆರನೆ ಆರೋಪಿ ಎಂದು ಕನ್ನಡ ಪ್ರಭ ವರದಿ ಮಾಡಿದೆ. ಆದಿತ್ಯನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದು, ಪತ್ತೆಗಾಗಿ ಮೂರು ವಿಶೇಷ ತಂಡ ರಚಿಸಿದ್ದಾರೆ.

ರಾಗಿಣಿ ದ್ವಿವೇದಿ ಆಪ್ತ ರವಿಶಂಕರ್‌, ಸೆನೆಗಲ್‌ ಮೂಲದ ಡ್ರಗ್‌ ಪೆಡ್ಲರ್‌ ಲೂಮ್ ಪೆಪ್ಪೆರ್‌‌, ವಿರೇನ್‌ ಖನ್ನಾ ಹಾಗೂ ರಾಹುಲ್‌ನನ್ನು ಪೊಲೀಸರು ನಿನ್ನೆಯು ತೀವ್ರ ವಿಚಾರಣೆ ನಡೆಸಿದ್ದಾರೆ. ಲೂಮ್ ಪೆಪ್ಪೆರ್ ಅಂತರಾಷ್ಟ್ರೀಯ ಡ್ರಗ್ ಪೆಡ್ಲೆರ್ ಎಂದು ತಿಳಿದು ಬಂದಿದ್ದು, ಆತ ವಿಚಾರಣೆ ವೇಳೆ ಹಲವರು ಹೆಸರನ್ನು ಬಾಯಿಬಿಟ್ಟಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್‌ ದಂಧೆ; ನಟಿಯರಿಂಲೇ ಹೆಚ್ಚು ಬೇಡಿಕೆ: ತನಿಖೆಯಿಂದ ಬಹಿರಂಗ

ನಿನ್ನೆ ರಾಗಿಣಿ  ಮನೆಯಲ್ಲಿ ಗಾಂಜಾ ತುಂಬಿಟ್ಟಿದ್ದ ಸಿಗರೇಟ್‌ ಪತ್ತೆಯಾಗಿದ್ದು, ಸಿಸಿಬಿ ಕಸ್ಟಡಿಯಲ್ಲಿರುವ ರಾಗಿಣಿ “ನನಗೂ ಸಿಗರೇಟ್‌ಗಳಿಗೂ ಯಾವುದೇ ಸಂಬಂಧವಿಲ್ಲ, ನಾನು ಧೂಮಪಾನಿಯಲ್ಲ” ಎಂದು ಹೇಳಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಈ ಮಧ್ಯೆ ಕಾಂಗ್ರೆಸ್ ಬಿಜೆಪಿ ವಿರುದ್ದ ತೀವ್ರ ದಾಳಿ ಮಾಡಿದ್ದು, ರಾಗಿಣಿ ಬಿಜೆಪಿಯ ರಾಯಭಾರಿ ಎಂದು ಆರೋಪಿಸಿದೆ. “2019 ರ ಲೋಕಸಭಾ ಚುನಾವಣೆಯಲ್ಲಿ ಸಿ.ಟಿ.ರವಿ ವಿಧಾನಸಭಾ ಕ್ಷೇತ್ರ ಚಿಕ್ಕಮಗಳೂರಿನಲ್ಲಿ ರಾಗಿಣಿ ಬಿಜೆಪಿ ಪರ ಪ್ರಚಾರ ನಡೆಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ, ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಜೊತೆಯೂ ರಾಗಿಣಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದಾರೆ” ಎಂದು ಆರೋಪಿಸಿರುವ ಕೆಪಿಸಿಸಿಯ ವಕ್ತಾರ ಎಂ. ಲಕ್ಷ್ಮಣ್ ಕೆಲವು ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ.

ನಿನ್ನೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯದಲ್ಲಿ ಡ್ರಗ್ಸ್ ದಂಧೆಗೆ ಸಂಬಂಧಿಸಿದಂತೆ ಕಳೆದ 10 ವರ್ಷಗಳ ಜಿಲ್ಲಾವಾರು ವಿವರಗಳನ್ನು ನೀಡಿ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ದಂಧೆ: ಜಿಲ್ಲಾವಾರು ಮಾಹಿತಿ ಕೋರಿ ಗೃಹಸಚಿವರಿಗೆ ಪತ್ರ ಬರೆದ ಸಿದ್ಧರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...