Homeಮುಖಪುಟನಾವಿಬ್ಬರು ನಮಗಿಬ್ಬರು ಎನ್ನುವ ಸತ್ಯ ಬಹಿರಂಗಗೊಳ್ಳುತ್ತಿದೆ: ಮೋದಿ ಕ್ರೀಡಾಂಗಣದ ಬಗ್ಗೆ ರಾಹುಲ್ ವ್ಯಂಗ್ಯ

ನಾವಿಬ್ಬರು ನಮಗಿಬ್ಬರು ಎನ್ನುವ ಸತ್ಯ ಬಹಿರಂಗಗೊಳ್ಳುತ್ತಿದೆ: ಮೋದಿ ಕ್ರೀಡಾಂಗಣದ ಬಗ್ಗೆ ರಾಹುಲ್ ವ್ಯಂಗ್ಯ

- Advertisement -
- Advertisement -

ಗುಜರಾತ್‌ನ ಕ್ರೀಡಾಂಗಣವೊಂದಕ್ಕೆ ನರೇಂದ್ರ ಮೋದಿಯವರ ಹೆಸರನ್ನು ಮರುನಾಮಕರಣ ಮಾಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತೊಮ್ಮೆ ಕೇಂದ್ರ ಸರ್ಕಾರದ ಕಾಲೆಳೆದಿದ್ದಾರೆ. “ನಾವಿಬ್ಬರು ನಮಗಿಬ್ಬರು ಎನ್ನುವ ಸತ್ಯ ಹೇಗೆ ಕಳಚಿಕೊಳ್ಳುತ್ತಿದೆ ನೋಡಿ” ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಅದ್ಭುತ! ಸತ್ಯ ತಾನಾಗಿಯೇ ಬಹಿರಂಗಗೊಳ್ಳುತ್ತಿದೆ. ನರೇಂದ್ರ ಮೋದಿ ಕ್ರೀಡಾಂಗಣ, ಅದಾನಿ ಎಂಡ್ ಮತ್ತು ರಿಲಯನ್ಸ್‌ ಎಂಡ್. ಜೇ ಶಾ ಅವರ ಅಧ್ಯಕ್ಷತೆಯಲ್ಲಿ. #HumDoHumareDo” ಎಂದು ಮೋದಿ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ನರೇಂದ್ರ ಮೋದಿ ಸ್ಟೇಡಿಯಂ ಟ್ರೋಲ್: ಸರ್ದಾರ್‌ ಪಟೇಲ್‌ಗೆ ಅವಮಾನ ಎಂದ ನೆಟ್ಟಿಗರು!

ನರೇಂದ್ರ ಮೋದಿಯವರ ಸರ್ಕಾರವು ನಾವಿಬ್ಬರು ನಮಗಿಬ್ಬರು ಎನ್ನುವಂತೆ ವರ್ತಿಸುತ್ತಿದೆ ಎಂದು ರಾಹುಲ್ ಗಾಂಧಿ ಇತ್ತೀಚೆಗೆ ಹೇಳಿದ್ದರು. ಮೋದಿ-ಶಾ ಎನ್ನುವ ಇಬ್ಬರಿಗೆ ಅಂಬಾನಿ-ಅದಾನಿ ಎನ್ನುವ ಇಬ್ಬರಿದ್ದಾರೆ ಎಂದು ಹೇಳಿದ್ದರು. ಅಂದರೆ ಕೇಂದ್ರ ಸರ್ಕಾರವು ತನ್ನ ಎಲ್ಲಾ ಕ್ರಮಗಳನ್ನೂ ಸಹ ಕಾರ್ಪೋರೇಟ್‌ಗಳ ಪರವಾಗಿಯೇ ಮಾಡುತ್ತಿದೆ ಎಂದು ಆರೋಪಿಸಿದ್ದರು.

ಈಗ ಗುಜರಾತ್‌ ನ ಅಹ್ಮದಾಬಾದ್‌ ನಲ್ಲಿನ ಸರ್ದಾರ್‌ ಪಟೇಲ್‌ ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಕ್ರೀಡಾಂಗಣ ಎಂದು ಹೆಸರಿಡಲಾಗಿದೆ. ಕೊನೆಯ ಕ್ಷಣದವರೆಗೂ ಈ ಕುರಿತಾದಂತೆ ಯಾವುದೇ ಮಾಹಿತಿಯೂ ಹೊರ ಬಿದ್ದಿರಲಿಲ್ಲ. ಇದೀಗ ʼನರೇಂದ್ರ ಮೋದಿʼ ಸ್ಟೇಡಿಯಂನಲ್ಲಿ ʼಅದಾನಿ ಪೆವಿಲಿಯನ್‌ʼ ಮತ್ತು ʼರಿಲಯನ್ಸ್‌ ಎಂಡ್‌ʼ ಇರುವುದು ಬೆಳಕಿಗೆ ಬಂದಿದೆ.

ರಾಹುಲ್‌ ಗಾಂಧಿ ಪಾರ್ಲಿಮೆಂಟ್‌ ನಲ್ಲಿ ಹೇಳಿದ್ದ ʼಹಮ್‌ ದೋ ಹಮಾರೆ ದೋʼ ಎಂಬ ಹೇಳಿಕೆಯು ಇಲ್ಲಿ ಅನ್ವರ್ಥವಾಗಿದೆ ಎಂದು ಬಳಕೆದಾರರೊಬ್ಬರು ವ್ಯಂಗ್ಯವಾಡಿದ್ದಾರೆ. “ಎಲ್ಲವೂ ಆಯಿತು, ಇನ್ನು ಗುಜರಾತ್‌ ಅನ್ನು ಮೋದಿಸ್ತಾನ್‌ ಎಂದೂ ರಾಜ್‌ ಕೋಟ್‌ ಅನ್ನು ರಿಲಯನ್ಸ್‌ ಕೋಟ್‌ ಎಂದು ಮರುನಾಮಕರಣ ಮಾಡಲಿಕ್ಕಿದೆಯೇ?”, ಇಬ್ಬರು ಬಂಡವಾಳಶಾಹಿಗಳ ಹೆಸರಿರುವ ಸ್ಟೇಡಿಯಂಗೆ ಮೋದಿ ಹೆಸರಿಟ್ಟದ್ದು ಒಳ್ಳೆಯದಾಯಿತು, ಇಲ್ಲವಾದಲ್ಲಿ ಸರ್ದಾರ್‌ ಪಟೇಲರಿಗೆ ಅವಮಾನವಾಗುತ್ತಿತ್ತು” ಎಂದು ಟ್ವಿಟರ್ ಬಳಕೆದಾರರು ಬರೆದುಕೊಂಡಿದ್ದಾರೆ.

ಒಟ್ಟಾರೆಯಾಗಿ ರಾಹುಲ್ ಗಾಂಧಿ ಮಾಡಿರುವ ಆರೋಪ ಈ ಮೂಲಕ ಬಹಿರಂಗಗೊಳ್ಳುತ್ತಿದೆ.


ಇದನ್ನೂ ಓದಿ: ದಲಿತ ಮದುಮಗ ಪೇಟ ಧರಿಸಿದರೆ ಸಹಿಸಲ್ಲ: ಮದುವೆ ಮೆರವಣಿಗೆಯಲ್ಲಿ ಕಲ್ಲು ತೂರಿದ ಮೇಲ್ಜಾತಿ ಜನರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...