Homeಮುಖಪುಟಸಂಭಾಲ್ ಹಿಂಸಾಚಾರ : ಸಂತ್ರಸ್ತರನ್ನು ಭೇಟಿಯಾದ ರಾಹುಲ್, ಪ್ರಿಯಾಂಕಾ

ಸಂಭಾಲ್ ಹಿಂಸಾಚಾರ : ಸಂತ್ರಸ್ತರನ್ನು ಭೇಟಿಯಾದ ರಾಹುಲ್, ಪ್ರಿಯಾಂಕಾ

- Advertisement -
- Advertisement -

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ಸಂಭಾಲ್ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಕುಟುಂಬಸ್ಥರನ್ನು ಮಂಗಳವಾರ (ಡಿ.10) ದೆಹಲಿಯಲ್ಲಿ ಭೇಟಿಯಾದರು.

ಸೋನಿಯಾ ಗಾಂಧಿಯ ನಿವಾಸದಲ್ಲಿ ಮೃತರ ಕುಟುಂಬಸ್ಥರನ್ನು ಭೇಟಿಯಾದ ಗಾಂಧಿ ಸಹೋದರರು, ಹಿಂಸಾಚಾರ ಮತ್ತು ಅದರ ಬಳಿಕದ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡರು.

ಡಿ.4ರಂದು ಸಂಭಾಲ್‌ಗೆ ತೆರಳಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ರಾಹುಲ್ ಗಾಂಧಿ ಹೊರಟ್ಟಿದ್ದರು. ಆದರೆ, ಅವರನ್ನು ದೆಹಲಿ-ಉತ್ತರ ಪ್ರದೇಶ ಗಡಿ ಘಾಝೀಪುರದಲ್ಲಿ ಸರ್ಕಾರ ತಡೆದಿತ್ತು.

ಪೊಲೀಸರು ತಡೆದಾಗ ರಾಹುಲ್ ಗಾಂಧಿ ಸ್ಥಳದಲ್ಲೇ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರತಿಪಕ್ಷ ನಾಯಕನಾಗಿ ಸಂಭಾಲ್‌ಗೆ ಹೋಗುವುದು ನನ್ನ ಹಕ್ಕು ಎಂದಿದ್ದರು. ನಾನು ಪೊಲೀಸರು ಜೊತೆ ಸಹಕರಿಸಲು ಸಿದ್ದ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಒಬ್ಬನೇ ಹೋಗುತ್ತೇನೆ. ಪೊಲೀಸರ ಜೊತೆ ಹೋಗುತ್ತೇನೆ ಎಂದು ಹೇಳಿದ್ದರು.

“ಸಂಭಾಲ್ ನಾನು ಹೋಗದಂತೆ ತಡೆಯುವುದು ಸಂವಿಧಾನ ನೀಡಿರುವ ಹಕ್ಕಿಗೆ ವಿರುದ್ದವಾಗಿದೆ. ಇದು ಹೊಸ ಭಾರತ..ಈ ಭಾರತ ಸಂವಿಧಾನವನ್ನು ಕೊನೆಗೊಳಿಸಲಿದೆ. ಈ ಭಾರತ ಅಂಬೇಡ್ಕರ್ ಅವರ ಸಂವಿಧಾವನ್ನು ಕೊನೆಗೊಳಿಸಲಿದೆ. ಇದರ ವಿರುದ್ದ ನಾವು ಹೋರಾಟ ಮುಂದುವರೆಸುತ್ತೇವೆ” ಎಂದಿದ್ದರು.

ಮೊಘಲ್ ಕಾಲದ ಪುರಾತನ ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ನ್ಯಾಯಾಲು ಆದೇಶಿಸಿದ ಬಳಿಕ, ನವೆಂಬರ್ 19ರಿಂದ ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ನ. 24ರಂದು ಅಧಿಕಾರಿಗಳು ಎರಡನೇ ಸಮೀಕ್ಷೆಗೆ ಆಗಮಿಸಿದಾಗ ಆಕ್ರೋಶಗೊಂಡ ಜನರು ಪ್ರತಿಭಟನೆ ನಡೆಸಿದ್ದದರು. ಅದು ಹಿಂಸಾಚಾರಕ್ಕೆ ತಿರುಗಿ ಭದ್ರತಾ ಪಡೆಗಳು ಗುಂಡು ಹಾರಿಸಿತ್ತು. ಈ ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಪೊಲೀಸರ ಗುಂಡಿಗೆ ಇವರು ಬಲಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ : ಸಿರಿಯಾ ಬಳಿಕ ಕೊರಿಯಾದಲ್ಲಿ ಅರಾಜಕತೆ : ಅಧ್ಯಕ್ಷರ ವಿರುದ್ಧ ಜನಾಕ್ರೋಶ ; ಆತ್ಮಹತ್ಯೆಗೆ ಯತ್ನಿಸಿದ ಮಾಜಿ ಸಚಿವ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...