Homeಮುಖಪುಟಪಟ್ಟು ಬಿಡದೇ ಕೊನೆಗೂ ಹತ್ರಾಸ್‌ ಸಂತ್ರಸ್ತ ಕುಟುಂಬ ಭೇಟಿಗೆ ಹೊರಟ ರಾಹುಲ್, ಪ್ರಿಯಾಂಕ ಗಾಂಧಿ

ಪಟ್ಟು ಬಿಡದೇ ಕೊನೆಗೂ ಹತ್ರಾಸ್‌ ಸಂತ್ರಸ್ತ ಕುಟುಂಬ ಭೇಟಿಗೆ ಹೊರಟ ರಾಹುಲ್, ಪ್ರಿಯಾಂಕ ಗಾಂಧಿ

"ನಾನು ಹತ್ರಾಸ್‌ನ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡುವ ಹಾಗೂ ಅವರ ನೋವು ಹಂಚಿಕೊಳ್ಳುವುದನ್ನು ಜಗತ್ತಿನ ಯಾವುದೂ ತಡೆಯಲು ಸಾಧ್ಯವಿಲ್ಲ" - ರಾಹುಲ್ ಗಾಂಧಿ

- Advertisement -
- Advertisement -

ಎರಡು ದಿನಗಳ ಹಿಂದೆಯಷ್ಟೇ ಹತ್ರಾಸ್ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಲು ಹೊರಟಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿಯನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದರು. ಆದರೆ ಅವರು ಇಂದು ಪಟ್ಟು ಬಿಡದೆ ಹತ್ರಾಸ್‌ಗೆ ಪ್ರಯಾಣಿಸಿದ್ದಾರೆ.

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಇತರ ಮೂವರೊಂದಿಗೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಗೆ ಪ್ರಯಾಣಿಸುತ್ತಿದ್ದಾರೆ. ಮುಂದಿನ ಸೀಟಿನಲ್ಲಿ ರಾಹುಲ್ ಗಾಂಧಿ ಕುಳಿತಿದ್ದು, ಟೊಯೋಟಾ ಇನ್ನೋವಾ ಕಾರನ್ನು ಸ್ವತಃ ಪ್ರಿಯಾಂಕಾ ಗಾಂಧಿ ಚಲಾಯಿಸುತ್ತಿರುವ ಫೋಟೊಗಳನ್ನು ಎನ್‌ಡಿಟಿವಿ ಪ್ರಕಟಿಸಿದೆ.

ಇದನ್ನೂ ಓದಿ: ಹತ್ರಾಸ್ ಕುರಿತು ನೀವು ದನಿಯೆತ್ತದಿದ್ದರೆ..: ರಮ್ಯಾ ದಿವ್ಯಸ್ಪಂದನ ಮನವಿ ಮಾಡಿದ್ದೇನು?

ಸಿಆರ್‌ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ವಿಧಿಸಿರುವ ನಿರ್ಬಂಧಗಳನ್ನು ಪರಿಗಣಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದ ಸಂಸದರ ನಿಯೋಗದ ಐವರು ಸದಸ್ಯರಿಗೆ ಮಾತ್ರ ನೋಯ್ಡಾ ಮೂಲಕ ಹತ್ರಾಸ್‌ಗೆ ಹೋಗಲು ಅನುಮತಿ ನೀಡಲಾಗಿದೆ ಎಂದು ಗೌತಮ ಬುದ್ಧ ನಗರ ಪೊಲೀಸರು ತಿಳಿಸಿದ್ದಾರೆ.

“ಐದು ಜನರಿಗಿಂತ ಹೆಚ್ಚಿನ ಜನರಿಲ್ಲದ ಯಾವುದೇ ಗುಂಪಿಗೆ ಹತ್ರಾಸ್ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಲು ಅವಕಾಶವಿದೆ” ಎಂದು ಯುಪಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನಿಶ್ ಅವಸ್ಥಿ ಹೇಳಿದ್ದಾರೆ.

ದೆಹಲಿ-ನೋಯ್ಡಾ ಡೈರೆಕ್ಟ್ (ಡಿಎನ್‌ಡಿ) ಫ್ಲೈಓವರ್‌ನ ಟೋಲ್ ಪ್ಲಾಜಾದಲ್ಲಿ ಸುಮಾರು 200 ಮಂದಿ ಶಸ್ತ್ರಸಜ್ಜಿತ ಯುಪಿ ಪೊಲೀಸರು ಅವರನ್ನು ತಡೆದರಾದರೂ, ಸ್ವಲ್ಪ ಸಮಯದ ನಂತರ ತಮ್ಮ ಪ್ರಯಾಣವನ್ನು ಮುಂದುವರಿಸಲು ಅವಕಾಶ ನೀಡಲಾಯಿತು.

ಕಾಂಗ್ರೆಸ್ ಸಂಸದ ಶಶಿ ತರೂರ್ ಕಾರು ಚಾಲನೆ ಮಾಡುತ್ತಿರುವ ಚಿತ್ರವನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿ ದೆಹಲಿಯಿಂದ 180 ಕಿ.ಮೀ ದೂರದಲ್ಲಿರುವ ಹತ್ರಾಸ್‌ಗೆ ತೆರಳುತ್ತಿದ್ದಾರೆ ಎಂದು ಹೇಳಿದ್ದರು.

ಇದನ್ನೂ ಓದಿ: ಹತ್ರಾಸ್: ಸಂತ್ರಸ್ತ ಕುಟುಂಬದ ಪರವಾಗಿ ಹೈಕೋರ್ಟ್ ಮೆಟ್ಟಿಲೇರಿದ ರಾಜರತ್ನ ಅಂಬೇಡ್ಕರ್

“ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸಂಸದರು ಇಂದು ಮಧ್ಯಾಹ್ನ ಹತ್ರಾಸ್‌ಗೆ ತೆರಳಿ ಉತ್ತರ ಪ್ರದೇಶದಲ್ಲಿ ಅತ್ಯಾಚಾರದಿಂದ ಮೃತಪಟ್ಟ 19 ವರ್ಷದ ಮಗಳ ಕುಟುಂಬವನ್ನು ಭೇಟಿಯಾಗಲಿದ್ದಾರೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಕೂಡಾ ಟ್ವೀಟ್ ಮಾಡಿದ್ದಾರೆ.

ಸಾಮೂಹಿಕ ಅತ್ಯಾಚಾರದಿಂದ ಸಾವಿಗೀಡಾದ 19 ವರ್ಷದ ದಲಿತ ಯುವತಿಯ ಕುಟುಂಬವನ್ನು ಭೇಟಿಯಾಗಲು ಕಾಂಗ್ರೆಸ್ ನಾಯಕರ ಎರಡನೇ ಪ್ರಯತ್ನ ಇದಾಗಿದ್ದು, ಗುರುವಾರ ಕುಟುಂಬವನ್ನು ಭೇಟಿ ಮಾಡಲು ಪ್ರಯತ್ನಿಸಿದ್ದರು ಕೂಡಾ ಹತ್ರಾಸ್ ಜಿಲ್ಲಾ ಗಡಿಯಲ್ಲಿ ಅವರನ್ನು ಪೊಲೀಸರು ತಡೆದಿದ್ದರು.

ಈ ಬಾರಿ ರಾಹುಲ್ ಮತ್ತು ಪ್ರಿಯಾಂಕ ಗಾಂಧಿ ದೆಹಲಿಯಿಂದ ಮಧ್ಯಾಹ್ನ 2.30 ರ ಸುಮಾರಿಗೆ 30 ಕಾಂಗ್ರೆಸ್ ಸಂಸದರೊಂದಿಗೆ ಪ್ರಯಾಣ ಪ್ರಾರಂಭಿಸಿದ್ದಾರೆ ಎಂದು ಆನ್ ಮನೋರಮ ವರದಿ ಮಾಡಿದೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣ: ಎಸ್‌ಪಿ ಸೇರಿ 5 ಪೊಲೀಸರು ವಜಾ; ಜಿಲ್ಲೆಯಲ್ಲಿ ಒಂದು ತಿಂಗಳು ನಿಷೇದಾಜ್ಞೆ

#HathrasHorror ಎಂಬ ಹ್ಯಾಶ್‌ಟ್ಯಾಗ್ ಬಳಸಿ ಹಿಂದಿಯಲ್ಲಿ ಟ್ವೀಟ್‌ ಮಾಡಿರುವ ರಾಹುಲ್ ಗಾಂಧಿ, “ಈ ಪ್ರೀತಿಯ ಹುಡುಗಿ ಮತ್ತು ಅವರ ಕುಟುಂಬದೊಂದಿಗೆ ಯುಪಿ ಸರ್ಕಾರ ಮತ್ತು ಅದರ ಪೊಲೀಸರು ನಡೆದುಕೊಳ್ಳುತ್ತಿರುವ ರೀತಿಯನ್ನು ನಾನು ಒಪ್ಪುವುದಿಲ್ಲ, ಭಾರತೀಯರು ಇದನ್ನು ಒಪ್ಪಿಕೊಳ್ಳಬಾರದು” ಎಂದು ಹೇಳಿದ್ದಾರೆ.

“ನಾನು ಹತ್ರಾಸ್‌ನ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡುವ ಹಾಗೂ ಅವರ ನೋವು ಹಂಚಿಕೊಳ್ಳುವುದನ್ನು ಜಗತ್ತಿನ ಯಾವುದೂ ತಡೆಯಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

“ಯುಪಿ ಸರ್ಕಾರ ನೈತಿಕವಾಗಿ ಭ್ರಷ್ಟವಾಗಿದೆ. ಸಂತ್ರಸ್ತೆಗೆ ಚಿಕಿತ್ಸೆ ನೀಡಲಿಲ್ಲ, ಸಮಯಕ್ಕೆ ದೂರು ಪಡೆಯಲಿಲ್ಲ, ದೇಹವನ್ನು ಬಲವಂತವಾಗಿ ಸುಟ್ಟುಹಾಕಿದರು, ಕುಟುಂಬವು ಬಂಧನದಲ್ಲಿದೆ, ಅವರ ಮೇಲೆ ಒತ್ತಡ ಹೇರುತ್ತಿದ್ದಾರೆ. ಈಗ ಅವರಿಗೆ ಮಂಪರು ಪರೀಕ್ಷೆ ನಡೆಯಲಿದೆ ಎಂದು ಬೆದರಿಕೆ ಹಾಕಲಾಗುತ್ತಿದೆ. ಈ ನಡೆಯನ್ನು ದೇಶ ಒಪ್ಪುವುದಿಲ್ಲ. ಸಂತ್ರಸ್ತೆಯ ಕುಟುಂಬವನ್ನು ಬೆದರಿಸುವುದನ್ನು ನಿಲ್ಲಿಸಿ” ಎಂದು ಪ್ರಿಯಾಂಕ ಗಾಂಧಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪೊಲೀಸರು ನಮಗೆ ಬೆದರಿಕೆ ಒಡ್ಡುತ್ತಿದ್ದಾರೆ: ಹತ್ರಾಸ್ ಪ್ರಕರಣ ಸಂತ್ರಸ್ತೆಯ ಸಹೋದರ ಆರೋಪ

 

ಸೆಪ್ಟೆಂಬರ್ 14 ರಂದು ಹತ್ರಾಸ್‌ನ ಹಳ್ಳಿಯಲ್ಲಿ ದಲಿತ ಯುವತಿಯ ಮೇಲೆ ನಾಲ್ಕು ಮೇಲ್ಜಾತಿಯ ಪುರುಷರು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಯುವತಿಯ ಸ್ಥಿತಿ ಹದಗೆಟ್ಟ ನಂತರ ಅವರನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಯುವತಿ ಮೃತಪಟ್ಟಿದ್ದರು.

ಆದರೆ ಮೃತದೇಹವನ್ನು ರಾತ್ರಿಯೆ ಕುಟುಂಬಕ್ಕೂ ನೀಡದೆ ಪೊಲೀಸರೇ ಸುಟ್ಟು ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಇದ ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದೆ. ಹಲವಾರು ಮಂದಿ ಸಾಕ್ಷಿ ಇಲ್ಲವಾಗಿಸಲು ಯುವತಿಯನ್ನು ಕೊಂದು ಸುಡಲಾಗಿದೆ ಎಂದು ಆರೋಪಿಸಿದ್ದರೆ, ಇನ್ನು ಕೆಲವರು ಸುಟ್ಟಿರುವುದು ಯಾರನ್ನು ಎಂದು ಪ್ರಶ್ನೆ ಎತ್ತಿದ್ದಾರೆ.

ಇದನ್ನೂ ಓದಿ: ಹತ್ರಾಸ್: ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ 200 ಕಾರ್ಯಕರ್ತರ ವಿರುದ್ಧ FIR

ವಿಡಿಯೋ ನೋಡಿ: ರಾಮ ರಾಜ್ಯ ಎಂದರೆ ದಲಿತ, ಮಹಿಳೆ, ಅಲ್ಪ ಸಂಖ್ಯಾತರ ಮೇಲೆ ಅತ್ಯಾಚಾರ, ದಾಳಿ ಮಾಡುವಂತದ್ದೇ ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಕೊಲೆಗೆ ರಾಜಕೀಯ ಬಣ್ಣ ಬಳಿದ ಅಣ್ಣಾಮಲೈ: ಪ್ರಕರಣ ದಾಖಲು

0
ಮಹಿಳೆಯೋರ್ವರ ಸಾವಿಗೆ ಸಂಬಂಧಿಸಿ ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಮಾಹಿತಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬಿಜೆಪಿಯ ತಮಿಳುನಾಡು ರಾಜ್ಯ ಘಟಕದ ಮುಖ್ಯಸ್ಥ ಕೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತಮಿಳುನಾಡಿನ ಕಡಲೂರು ಜಿಲ್ಲೆಯ ಪಕ್ಕಿರಿಮಣಿಯಂ...