Homeಮುಖಪುಟಬಿಜೆಪಿ ಆದಿವಾಸಿಗಳಿಂದ ಭೂಮಿ ಕಿತ್ತುಕೊಂಡು ಕಾರ್ಪೊರೇಟ್ ಸಂಸ್ಥೆಗಳಿಗೆ ವರ್ಗಾಯಿಸಿದೆ: ರಾಹುಲ್‌ ಗಾಂಧಿ

ಬಿಜೆಪಿ ಆದಿವಾಸಿಗಳಿಂದ ಭೂಮಿ ಕಿತ್ತುಕೊಂಡು ಕಾರ್ಪೊರೇಟ್ ಸಂಸ್ಥೆಗಳಿಗೆ ವರ್ಗಾಯಿಸಿದೆ: ರಾಹುಲ್‌ ಗಾಂಧಿ

- Advertisement -
- Advertisement -

ಆಡಳಿತರೂಢ ಬಿಜೆಪಿ ಆದಿವಾಸಿಗಳಿಂದ ನೀರು, ಕಾಡು ಮತ್ತು ಭೂಮಿಯನ್ನು ಕಿತ್ತುಕೊಂಡು ಎರಡು ಕಾರ್ಪೊರೇಟ್ ಸಂಸ್ಥೆಗಳಿಗೆ ವರ್ಗಾಯಿಸಿ, ಆದಿವಾಸಿಗಳನ್ನು ನಿರಾಶ್ರಿತರನ್ನಾಗಿ ಮಾಡಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೋ ನ್ಯಾಯ ಯಾತ್ರೆ ಕೊನೆಯ ಘಟ್ಟವನ್ನು ತಲುಪಿದೆ. ಭಾರತ್‌ ಜೋಡೋ ನ್ಯಾಯ ಯಾತ್ರೆ ಗುಜರಾತ್‌ನಿಂದ ಮಹಾರಾಷ್ಟ್ರ ಪ್ರವೇಶಿಸಿ ನಂದುರ್ಬಾರ್‌ನಲ್ಲಿ ಮುಂದುವರಿದಿದೆ.  ಗಡಿಯಲ್ಲಿ ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಶಕ್ತಿ ಸಿಂಗ್ ಗೋಯಲ್ ಅವರು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆಯವರಿಗೆ ಧ್ವಜ ಹಸ್ತಾಂತರ ಮಾಡಿದ್ದರು.

ನಂದುರ್ಬಾರ್ ಆದಿವಾಸಿ ನ್ಯಾಯ ಸಮ್ಮೇಳನದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಆದಿವಾಸಿಗಳು ಭಾರತದ ಮೊದಲ ಮಾಲಿಕರು, ದೇಶದಲ್ಲಿ ಇರುವ ಜಲ, ಜಮೀನು ಮತ್ತು ಧನಸಂಪತ್ತಿನ ನಿಜ ಮಾಲೀಕರು ಎಂದರೆ ಆದಿವಾಸಿಗಳು, ಅದಿವಾಸಿ ಶಬ್ದದೊಂದಿಗೆ ಜಲ, ಜಂಗಲ್ ಜಮೀನಿನ ಅಧಿಕಾರ ಜೋಡಿಕೊಂಡಿದೆ, ವನವಾಸಿ ಎಂಬುದರಲ್ಲಿ ಆ ಅಧಿಕಾರ ಇಲ್ಲ, ಆದ್ದರಿಂದ ನಿಮ್ಮನ್ನು ಬಿಜೆಪಿ ವನವಾಸಿ ಎಂದು ಕರೆಯುತ್ತಿದೆ. ಆಡಳಿತಾರೂಢ ಬಿಜೆಪಿ ಆದಿವಾಸಿಗಳಿಂದ ನೀರು, ಕಾಡು ಮತ್ತು ಭೂಮಿಯನ್ನು ಕಿತ್ತುಕೊಂಡು ಎರಡು ಕಾರ್ಪೊರೇಟ್ ಸಂಸ್ಥೆಗಳಿಗೆ ವರ್ಗಾಯಿಸಿ, ಆದಿವಾಸಿಗಳನ್ನು ನಿರಾಶ್ರಿತರನ್ನಾಗಿ ಮಾಡಿದೆ ಎಂದು ಹೇಳಿದ್ದಾರೆ.

ದೇಶದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದರೆ, ಅರಣ್ಯ ಹಕ್ಕು ಅಧಿನಿಯಮದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಷ್ಟ್ರೀಯ ಮಿಶನ್ ಸ್ಥಾಪಿಸಲಾಗುವುದು, ಒಂದು ವಿಶೇಷ ಬಜೆಟ್ ಇರಿಸಲಾಗುವುದು, ವಿಶೇಷ ಕಾರ್ಯ ಯೋಜನೆ ತಯಾರಿಸಲಾಗುವುದು. ಮೋದಿ ಸರಕಾರದ ಮೂಲಕ ಅರಣ್ಯ ಸಂರಕ್ಷಣೆ ಮತ್ತು ಭೂಮಿ ಅಧಿಗ್ರಹಣ ಅಧಿನಿಯಮಗಳಲ್ಲಿ ಮಾಡಿರುವ ಎಲ್ಲ ತಿದ್ದುಪಡಿಗಳನ್ನು ಕಾಂಗ್ರೆಸ್ ವಾಪಸ್ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಯಾವ ಬಸ್ತಿಗಳಲ್ಲಿ ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಹೆಚ್ಚು ಇದೆಯೋ ಆ ಬಸ್ತಿಗಳನ್ನು ಪರಿಶಿಷ್ಟ ಪ್ರದೇಶ ಎಂದು ಘೋಷಿಸಲು ಬದ್ಧವಾಗಿದೆ. ಕಾಂಗ್ರೆಸ್ PESA  ಪ್ರಕಾರ ರಾಜ್ಯಗಳಲ್ಲಿ ಕಾನೂನು ರೂಪಿಸಲು ಬದ್ಧವಾಗಿದೆ. ಆಗ ‘ಗ್ರಾಮ ಸರಕಾರ’ ಮತ್ತು ‘ಸ್ವಾಯತ್ತ ಜಿಲ್ಲಾ ಸರಕಾರ’ ಸ್ಥಾಪನೆ ಸಾಧ‍್ಯವಾಗುತ್ತದೆ. ಕಾಂಗ್ರೆಸ್ ಪಕ್ಷವು ಕನಿಷ್ಠ ಬೆಂಬಲ ಬೆಲೆ (MSP)ಯ ಅಧಿಕಾರದ ಕಾನೂನು ತರಲಿದೆ. ಇದರಲ್ಲಿ ಲಘು ಅರಣ್ಯ ಉತ್ಪತ್ತಿ (M‍FP)ಯನ್ನು ಸೇರ್ಪಡೆಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ.

ಭಾರತ ಜೋಡೋ ನ್ಯಾಯ ಯಾತ್ರೆ ಜನವರಿ 14ರಂದು ಹಿಂಸಾಚಾರ ಪೀಡಿತ ಮಣಿಪುರದಿಂದ ಪ್ರಾರಂಭವಾಗಿದ್ದು, 6,700 ಕಿಲೋಮೀಟರ್ ಪಾದಯಾತ್ರೆ ಬಳಿಕ ಮಾ.15ರಂದು ಮಹಾರಾಷ್ಟ್ರದ ಥಾಣೆ ಜಿಲ್ಲೆಯನ್ನು ಪ್ರವೇಶಿಸಲಿದೆ.

ಇದನ್ನು ಓದಿ: ಎಸ್‌ಬಿಐ ಮುಖ್ಯಸ್ಥರ ರಾಜೀನಾಮೆಗೆ ನೌಕರರ ಒಕ್ಕೂಟ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...