Homeಮುಖಪುಟ'ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ಅಂಶಗಳನ್ನು ಬೇಕಾದರೆ ಕದಿಯಿರಿ: ಮೋದಿಗೆ ರಾಹುಲ್ ಸಲಹೆ..

‘ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ಅಂಶಗಳನ್ನು ಬೇಕಾದರೆ ಕದಿಯಿರಿ: ಮೋದಿಗೆ ರಾಹುಲ್ ಸಲಹೆ..

- Advertisement -
- Advertisement -

ಸರ್ಕಾರಿ ಕಂಪನಿಗಳ ಖಾಸಗೀಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿದಾಳಿ ನಡೆಸಿದ್ದಾರೆ. ದೇಶದ ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಾತ್ರ ಇದರ ಸುಳಿವು ಸಹ ಇಲ್ಲವೇನೋ ಎಂಬಂತೆ ನಟಿಸುತ್ತಿದೆ. ಪ್ರಧಾನಿ ಮೋದಿ ಮತ್ತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾಂಗ್ರೆಸ್ ಪ್ರಣಾಳಿಕೆಯ ವಿಚಾರಗಳು ಮತ್ತು ಅಂಶಗಳನ್ನು ಬೇಕಾದರೆ ಕದ್ದು ಅಳವಡಿಸಿಕೊಳ್ಳಬಹುದು ಎಂದು ರಾಹುಲ್ ಹೇಳಿದ್ದಾರೆ.

ಪ್ರಧಾನಿ ಮೋದಿ ಹೇಳಿಕೆಯನ್ನು ಖಂಡಿಸಿ, ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಗ್ರಾಮೀಣ ಪ್ರದೇಶಗಳು ಹಲವು ಸಮಸ್ಯೆಗಳಿಂದ ಬಳಲುತ್ತಿವೆ. ದೇಶದ ಅರ್ಥವ್ಯವಸ್ಥೆ ನೆಲಕಚ್ಚಿದೆ. ಆದರೆ ಕೇಂದ್ರ ಸರ್ಕಾರ ಮಾತ್ರ ಇದ್ಯಾವುದರ ಅರಿವೂ ಇಲ್ಲವೆಂಬಂತೆ ನಟಿಸುತ್ತಿದೆ. ಪ್ರಧಾನಿ ಮೋದಿ ಮತ್ತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ಕೆಲವು ಅಂಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಮಸ್ಯೆಗೆ ಕಡಿವಾಣ ಹಾಕಬೇಕು ಎಂದಿದ್ದಾರೆ. ಕಳೆದ ಆರು ವರ್ಷಗಳಲ್ಲೇ ಭಾರತದ ಜಿಡಿಪಿ ಪ್ರಮಾಣ ಶೇ. 5ರಷ್ಟು ಕುಸಿದಿದೆ. ಆರ್ಥಿಕತೆ ಬೆಳವಣಿಗೆಯಿಲ್ಲದೆ, ಮಂದಗತಿಯಲ್ಲಿ ಸಾಗುತ್ತಿದೆ. ಕಳೆದ ಐದು ತಿಂಗಳಲ್ಲಿ ಆಟೋಮೊಬೈಲ್ ವಲಯ ಸೇರಿದಂತೆ ಅನೇಕ ವಲಯಗಳು ಉತ್ಪಾದನೆ ಮತ್ತು ಬೇಡಿಕೆ ಕುಸಿದಿದೆ.

ಕೇಂದ್ರ ಸರ್ಕಾರ ಆರ್ಥಿಕತೆಯ ಸುಧಾರಣೆಗೆ ಮತ್ತು ಪುನರುಜ್ಜೀವನಕ್ಕಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಆದರೆ ಸಾರ್ವಜನಿಕ ಬ್ಯಾಂಕ್ ಗಳನ್ನು ವಿಲೀನಗೊಳಿಸಿದೆ. ಕಾರ್ಪೋರೇಟ್ ತೆರಿಗೆಯನ್ನು ಕಡಿತಗೊಳಿಸಿದೆ. ಕಾಂಗ್ರೆಸ್ ಮತ್ತು ವಿಪಕ್ಷಗಳು ಕೇಂದ್ರ ಸರ್ಕಾರದ ಆರ್ಥಿಕತೆ ನೀತಿಯ ಧೋರಣೆಯನ್ನು ಖಂಡಿಸಿವೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡ ಕುಸಿಯುತ್ತಿರುವ ಆರ್ಥಿಕತೆ ಬಗ್ಗೆ ಮಾತನಾಡಿ, ಮಂದಗತಿಯಲ್ಲಿ ಸಾಗುತ್ತಿರುವ ಆರ್ಥಿಕತೆ ಸಾಕಷ್ಟು ಸಮಸ್ಯೆಗಳಿಗೆ ಕಾರಣವಾಗಲಿದೆ. ಹೀಗೆ ನಡೆದರೆ 2024ರ ವೇಳೆಗೆ 5 ಟ್ರಿಲಿಯನ್ ಡಾಲರ್ ಅಭಿವೃದ್ಧಿ ಕಾಣುವುದು ಅಸಾಧ್ಯ ಎಂದು ವ್ಯಂಗ್ಯವಾಡಿದ್ದರು.

ಇನ್ನು ಹರ್ಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಪ್ರಯುಕ್ತ ರ್ಯಾಲಿ ನಡೆಸಿರುವ ರಾಹುಲ್ ಗಾಂಧಿ, ಕುಸಿಯುತ್ತಿರುವ ಆರ್ಥಿಕತೆ, ನಿರುದ್ಯೋಗ ಮತ್ತು ಉತ್ಪಾದನೆ, ಬೇಡಿಕೆ, ಹೂಡಿಕೆ ಕುಸಿತದ ಪ್ರಶ್ನೆಗಳನ್ನು ಮುಂದಿಟ್ಟು, ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ದೇಶದಲ್ಲಿ ಸಾರ್ವಜನಿಕ ವಲಯದ ಉದ್ಯಮಗಳನ್ನು ಮೋದಿ ಸರ್ಕಾರ ಸೂಟು-ಬೂಟು ಗೆಳೆಯರಿಗೆ ಮಾರಿಕೊಳ್ಳುತ್ತಿದೆ. ಸಾವಿರಾರು ಕಾರ್ಮಿಕರು ಅನಿಶ್ಚಿತತೆ ಮತ್ತು ಉದ್ಯೋಗ ಕಳೆದುಕೊಳ್ಳುವ ಭಯದಲ್ಲಿ ಬದುಕುತ್ತಿದ್ದಾರೆ. ದೇಶವನ್ನು ಲೂಟಿ ಮಾಡುತ್ತಿರುವ ಇಂತಹ ಕ್ರಮಗಳನ್ನು ವಿರೋಧಿಸುತ್ತೇನೆ. ಎಂದೆಂದಿಗೂ ಕಾರ್ಮಿಕರ ಹೆಗಲಿಗೆ ಹೆಗಲು ಕೊಟ್ಟು ಹೋರಾಟ ನಡೆಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...