Homeಸಿನಿಮಾಕ್ರೀಡೆಮೊಹಮ್ಮದ್ ಶಮಿ ಪರ ನಿಂತ ರಾಹುಲ್ ಗಾಂಧಿ, ಸಚಿನ್ ತೆಂಡೂಲ್ಕರ್

ಮೊಹಮ್ಮದ್ ಶಮಿ ಪರ ನಿಂತ ರಾಹುಲ್ ಗಾಂಧಿ, ಸಚಿನ್ ತೆಂಡೂಲ್ಕರ್

'ಮೊಹಮ್ಮದ್ ಶಮಿ ಭಯ್ಯಾ, ನಿಮ್ಮ ಬಗ್ಗೆ ನಮಗೆ ತುಂಬಾ ಹೆಮ್ಮೆ ಇದೆ' ಎಂದು ಯಜುವೇಂದ್ರ ಚಹಲ್ ಟ್ವೀಟ್ ಮಾಡಿದರೆ 'ನಾವು ನಿಮ್ಮನ್ನು ಪ್ರೀತಿಸುತ್ತೇವೆ ಶಮಿ' ಎಂದು ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದಾರೆ. 

- Advertisement -
- Advertisement -

ಭಾರತ ತಂಡವು ಪಾಕಿಸ್ತಾನ ಎದುರು ಟಿಟ್ವೆಂಟಿ ಪಂದ್ಯ ಸೋತಿದ್ದಕ್ಕಾಗಿ ದುಷ್ಕರ್ಮಿಗಳಿಂದ ನಿಂದನೆಗೆ ಒಳಗಾಗಿದ್ದ ಖ್ಯಾತ ವೇಗದ ಬೌಲರ್ ಮೊಹಮ್ಮದ್ ಶಮಿ ಪರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಭಾರತ ತಂಡದ ಹಿರಿಯ ಆಟಗಾರ ಸಚಿನ್ ತೆಂಡೂಲ್ಕರ್ ದನಿಗೂಡಿಸಿದ್ದಾರೆ.

“ಮೊಹಮ್ಮದ್ ಶಮಿ ನಾವೆಲ್ಲರೂ ನಿನ್ನ ಜೊತೆಗಿದ್ದೇವೆ. ಈ ಜನರ ಮನಸ್ಸು ದ್ವೇಷದಿಂದ ತುಂಬಿಹೋಗಿದೆ, ಏಕೆಂದರೆ ಅವರಿಗೆ ಪ್ರೀತಿ ನೀಡುವವರೇ ಇಲ್ಲ. ಅವರನ್ನು ಕ್ಷಮಿಸಿಬಿಡು” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಅದೇ ರೀತಿಯಾಗಿ ಟ್ವೀಟ್ ಮಾಡಿರುವ ಸಚಿನ್ ತೆಂಡೂಲ್ಕರ್, “ನಾವು ಭಾರತ ತಂಡವನ್ನು ಬೆಂಬಲಿಸಿದಾಗ, ತಂಡವನ್ನು ಪ್ರತಿನಿಧಿಸುವ ಪ್ರತಿಯೊಬ್ಬ ವ್ಯಕ್ತಿಯನ್ನು ಬೆಂಬಲಿಸುತ್ತೇವೆ. ಮೊಹಮ್ಮದ್ ಶಮಿ ಬದ್ಧತೆಯ, ವಿಶ್ವ ದರ್ಜೆಯ ಬೌಲರ್. ಇತರ ಕ್ರೀಡಾಪಟುಗಳಂತೆ ಆ ದಿನ ಅವರದಾಗಿರಲಿಲ್ಲ. ನಾನು ಶಮಿ ಮತ್ತು ಟೀಮ್ ಇಂಡಿಯಾದ ಹಿಂದೆ ನಿಂತಿದ್ದೇನೆ” ಎಂದಿದ್ದಾರೆ.

‘ಮೊಹಮ್ಮದ್ ಶಮಿ ಭಯ್ಯಾ, ನಿಮ್ಮ ಬಗ್ಗೆ ನಮಗೆ ತುಂಬಾ ಹೆಮ್ಮೆ ಇದೆ’ ಎಂದು ಭಾರತದ ಖ್ಯಾತ ಬೌಲರ್ ಯಜುವೇಂದ್ರ ಚಹಲ್ ಟ್ವೀಟ್ ಮಾಡಿದರೆ ‘ನಾವು ನಿಮ್ಮನ್ನು ಪ್ರೀತಿಸುತ್ತೇವೆ ಶಮಿ’ ಎಂದು ಹಿರಿಯ ಆಟಗಾರ ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದಾರೆ.

“ಮೊಹಮ್ಮದ್ ಶಮಿ ಮೇಲಿನ ಆನ್‌ಲೈನ್ ದಾಳಿ ಆಘಾತಕಾರಿಯಾದುದ್ದು. ನಾವು ಶಮಿ ಪರವಾಗಿ ನಿಲ್ಲುತ್ತೇವೆ. ಅವರು ಚಾಂಪಿಯನ್ ಆಗಿದ್ದಾರೆ ಮತ್ತು ಭಾರತದ ಕ್ಯಾಪ್ ಧರಿಸುವ ಯಾರೇ ಆಗಲಿ ಅವರು ಈ ಆನ್‌ಲೈನ್ ದ್ವೇಷ ಕಾರುವವರಿಗಿಂತ ಹೆಚ್ಚಿನ ಮಟ್ಟದಲ್ಲಿ ಭಾರತವನ್ನು ತಮ್ಮ ಹೃದಯದಲ್ಲಿಟ್ಟುಕೊಂಡಿರುತ್ತಾರೆ. ನಿನ್ನೊಂದಿಗಿದ್ದೇನೆ ಶಮಿ, ಮುಂದಿನ ಪಂದ್ಯದಲ್ಲಿ ನಿಮ್ಮ ಪರಾಕ್ರಮ ತೋರಿಸಿ” ಎಂದು ಹಿರಿಯ ಆಟಗಾರ ವಿರೇಂದ್ರ ಸೆಹ್ವಾಗ್ ಬರೆದಿದ್ದಾರೆ.

ಮೊಹಮ್ಮದ್ ಶಮಿ ಭಾರತದ ಹೆಮ್ಮೆ ಎಂದು ಅಮನ್ ಶರ್ಮಾರವರು 2019ರ ವಿಶ್ವಕಪ್ ಪಂದ್ಯದ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. ಭಾರತ – ಆಫ್ಘಾನಿಸ್ಥಾನ ನಡುವೆ ನಡೆದ ಪಂದ್ಯದಲ್ಲಿ ಕೊನೆಯ ಓವರ್‌ನಲ್ಲಿ ಗೆಲ್ಲಲು ಆಫ್ಘಾನಿಸ್ಥಾನ 16 ರನ್ ಗಳಿಸಬೇಕಿತ್ತು. ಆಗ ಬೌಲ್ ಮಾಡಿದ ಶಮಿ ಕೇವಲ ನಾಲ್ಕು ರನ್ ನೀಡಿ ಸತತ ಮೂರು ವಿಕೆಟ್ (ಹ್ಯಾಟ್ರಿಕ್) ಗಳಿಸಿ ಭಾರತಕ್ಕೆ ಗೆಲುವು ತಂದುಕೊಟ್ಟಿದ್ದರು. ಆಗ ಇಡೀ ದೇಶವೇ ಶಮಿಯವರನ್ನು ಕೊಂಡಾಡಿತ್ತು. ಈ ವಿಡಿಯೋವನ್ನು ಐಸಿಸಿ ಹಂಚಿಕೊಂಡಿದೆ.

ಭಾನುವಾರದ ಪಂದ್ಯದಲ್ಲಿ ಭಾರತ ಪಾಕ್ ಎದುರು 10 ವಿಕೆಟ್‌ಗಳ ಸೋಲೊಪ್ಪಿಕೊಂಡಿತ್ತು. ವಿರಾಟ್ ಕೊಹ್ಲಿ ಇಡೀ ತಂಡ ಚೆನ್ನಾಗಿ ಆಡಲಿಲ್ಲಿ ಎಂದು ವಿಮರ್ಶಿಸಿಕೊಂಡಿದ್ದರು. ಆದರೂ ಬಹಳಷ್ಟು ದುಷ್ಕರ್ಮಿಗಳು ಇನ್ಸ್ಟಾಗ್ರಾಮ್ ನಲ್ಲಿ ಮೊಹಮ್ಮದ್ ಶಮಿಯನ್ನು ಟ್ರೋಲ್ ಮಾಡಿ ನಿಂದಿಸಿದ್ದರು. ಅದಕ್ಕೆ ಮುಸ್ಲಿಂ ಧರ್ಮಿಯರಾಗಿದ್ದೇ ಏಕೈಕ ಕಾರಣವಾಗಿತ್ತು. 11 ಜನರ ತಂಡದಲ್ಲಿ ಶಮಿ ಒಬ್ಬರೆ ಮುಸ್ಲಿಂ ಆಗಿದ್ದರು. ಪಾಕಿಸ್ತಾನಕ್ಕೆ ಹೋಗು, ದೇಶದ್ರೋಹಿ ಎಂದು ಕೆಟ್ಟದಾಗಿ ದಾಳಿ ಮಾಡಿದ್ದರು. ಈ ದಾಳಿಯನ್ನು ಭಾರತದ ಹಲವಾರು ಕ್ರೀಡಾಪಟುಗಳು, ರಾಜಕಾರಣಿಗಳು ಖಂಡಿಸಿದ್ದರು.


ಇದನ್ನೂ ಓದಿ: ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!


ಭಾರತದ ಹಿರಿಯ ಆಟಗಾರ ಇರ್ಫಾನ್ ಪಠಾಣ್ ಟ್ವೀಟ್ ಮಾಡಿ, “ನಾನು ಕೂಡ ಭಾರತವು  ಪಾಕಿಸ್ತಾನದ ಎದುರು ಸೋತ ಕೆಲ ಪಂದ್ಯಗಳ ಭಾಗವಾಗಿದ್ದೇನೆ. ಆದರೆ ಆಗ ನನಗೆ ಯಾರೂ ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿರಲಿಲ್ಲ. ನಾನು ಕೆಲ ವರ್ಷಗಳ ಹಿಂದಿನ ಭಾರತದ ಬಗ್ಗೆ ಮಾತನಾಡುತ್ತಿದ್ದೇನೆ ಮತ್ತು ಈ ದುಷ್ಕರ್ಮಿಗಳನ್ನು ತಡೆಯಬೇಕಿದೆ” ಎಂದು ಒತ್ತಾಯಿಸಿದ್ದಾರೆ.

ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲ ಟ್ವೀಟ್ ಮಾಡಿ, “ನಿನ್ನೆ ರಾತ್ರಿ ಭಾರತ ಸೋತ ಪಂದ್ಯದಲ್ಲಿ 11 ಜನರ ತಂಡದಲ್ಲಿ ಮೊಹಮ್ಮದ್ ಶಮಿ ಒಬ್ಬರಾಗಿದ್ದರು. ಅವರೊಬ್ಬರೆ ಮೈದಾನದಲ್ಲಿರಲಿಲ್ಲ. ಸಾಮಾಜಿಕ ಮಾಧ್ಯಮದಲ್ಲಿ ಕ್ರೂರವಾಗಿ ನಿಂದಿಸಲ್ಪಟ್ಟ ಮತ್ತು ಟ್ರೋಲ್‌ಗೆ ಒಳಗಾದ ನಿಮ್ಮ ತಂಡದ ಸಹ ಆಟಗಾರನ ಪರವಾಗಿ ನಿಲ್ಲಲು ನಿಮಗೆ ಸಾಧ್ಯವಾಗದಿದ್ದರೆ ಟೀಮ್ ಇಂಡಿಯಾ, ನೀವು ಬ್ಲಾಕ್ ಲೈವ್ಸ್ ಮ್ಯಾಟರ್‌ಗಾಗಿ ಮಂಡಿಯೂರಿದ್ದ ಯಾವುದೇ ಲೆಕ್ಕಕ್ಕೆ ಬರುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ಸಂದರ್ಭದಲ್ಲಿ ಬಿಜೆಪಿ ಸಂಸದ ಮತ್ತು ಮಾಜಿ ಆಟಗಾರ ಗೌತಮ್ ಗಂಭೀರ್ “ಪಾಕ್ ಗೆದ್ದಾಗ ಪಟಾಕಿ ಸಿಡಿಸಿದವರು ಭಾರತೀಯರಲ್ಲ. ನಾವು ನಮ್ಮ ಹುಡುಗರ ಜೊತೆ ನಿಲ್ಲುತ್ತೇವೆ. ನಾಚಿಕೆಗೇಡು” ಎಂದು ಟ್ವೀಟ್ ಮಾಡಿದ್ದಾರೆ. ಅವರು ಶಮಿ ಬಗ್ಗೆ ಉಲ್ಲೇಖ ಮಾಡಿಲ್ಲ.

ಅದಕ್ಕೆ ವಿನಯ್ ಕುಮಾರ್ ಎಂಬುವವರು ಬ್ಲಾಕ್ ಲೈವ್ಸ್ ಮ್ಯಾಟರ್ ಗೆ ಗೌರವ ಸಲ್ಲಿಸಲು ಮಂಡಿಯೂರಿದ ಎಷ್ಟು ಆಟಗಾರರು ಶಮಿ ಪರವಾಗಿ ನಿಂತರು ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ‘Black Lives Matters’ ಬೆಂಬಲಿಸಿ ಮಂಡಿಯೂರಿದ ಭಾರತೀಯ ಕ್ರಿಕೆಟಿಗರು: ಮಿಶ್ರ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...