ಕಾಂಗ್ರೆಸ್ ನಾಯಕ ಮತ್ತು ಸಂಸದ ರಾಹುಲ್ ಗಾಂಧಿ ಭಾರತೀಯರ ವಿರುದ್ಧ ಯುದ್ಧ ಸಾರಿದ್ದಾರೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಆರೋಪಿಸಿದ್ದಾರೆ. ಕೇಂದ್ರ ಸರ್ಕಾರ ಕೃಷಿ ಕಾನೂನುಗಳನ್ನು ಶೀಘ್ರವೇ ರದ್ದುಗೊಳಿಸದಿದ್ದರೆ ರೈತರ ಪ್ರತಿಭಟನೆ ದೇಶವ್ಯಾಪಿ ಹರಡಲಿದೆ ಎಂದು ಎಚ್ಚರಿಕೆ ನೀಡಿದ ಬೆನ್ನಲ್ಲೇ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ಮೃತಿ ಇರಾನಿ, “ರಾಹುಲ್ ಗಾಂಧಿ ಭಾರತೀಯರ ವಿರುದ್ಧ ಯುದ್ಧ ಸಾರಿದ್ದಾರೆ. ಪ್ರಧಾನಿ ಮೋದಿಯವರು ತಮ್ಮ ರಾಜಕೀಯ ನಿಲುವುಗಳನ್ನು ಬೆಂಬಲಿಸದಿದ್ದರೆ ನಗರಗಳು ಹೊತ್ತಿ ಉರಿಯುವುದಾಗಿ ಹೇಳಿದ್ದಾರೆ. ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ನಾಯಕರು ಶಾಂತಿಗೆ ಬದಲು ಹಿಂಸಾಚಾರಕ್ಕೆ ಕರೆ ನೀಡಿರುವುದನ್ನು ಹಿಂದೆಂದೂ ನಾವು ನೋಡಿಲ್ಲ” ಎಂದು ಹೇಳಿದರು.
ಇದನ್ನೂ ಓದಿ: Israeli embassy | ದೆಹಲಿಯ ಇಸ್ರೇಲಿ ರಾಯಭಾರಿ ಕಚೇರಿ ಬಳಿ ಸ್ಪೋಟ
ಶುಕ್ರವಾರ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ರೈತರ ಪ್ರತಿಭಟನೆಯನ್ನು ಒಡೆಯುವ ಪ್ರಯತ್ನ ಮಾಡಬೇಡಿ. ಇಡೀ ದೇಶ ರೈತರೊಂದಿಗೆ ನಿಂತಿದೆ” ಎಂದು ಬರೆದುಕೊಂಡಿದ್ದಾರೆ.
ना ग़ाज़ीपुर में पुलिस तैनात करके
ना #SinghuBorder पर पथराव करके
ना किसी और साज़िश सेकिसान का हौसला तोड़ पाओगे
पूरा देश उनके साथ खड़ा है, उन्हें आप डरा-धमका नहीं सकते।
— Rahul Gandhi (@RahulGandhi) January 29, 2021
ಇದನ್ನೂ ಓದಿ: ರೈತರನ್ನು ಗೌರವಿಸದ ದೇಶ ದೇಶವೇ ಅಲ್ಲ: ಮಾಜಿ ಸ್ಪೀಕರ್ ರಮೇಶ್ ಕುಮಾರ್
ಈ ಮೊದಲು ಹೇಳಿಕೆ ನೀಡಿರುವ ರಾಹುಲ್ ಗಾಂಧಿ, ಕೃಷಿ ಕಾಯ್ದೆಗಳನ್ನು ಕಸದ ಬುಟ್ಟಿಗೆ ಎಸೆಯುವುದೊಂದೇ ಏಕೈಕ ಪರಿಹಾರ. ಇಲ್ಲವಾದಲ್ಲಿ ಆಂದೋಲನ ದೇಶದೆಲ್ಲೆಡೆ ವ್ಯಾಪಿಸಲಿದೆ ಎಂದು ಎಚ್ಚರಿಸಿದ್ದರು.
ರೈತರ ಹೋರಾಟದ ಬಗ್ಗೆ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿರುವ ರಾಹುಲ್ ಗಾಂಧಿ, “ಕೇಂದ್ರ ಸರ್ಕಾರ ರೈತರು ಪ್ರತಿಭಟನೆಯನ್ನು ಕೈಬಿಡುತ್ತಾರೆ ಎಂದುಕೊಂಡಿದೆ. ಆದರೆ ರೈತರು ಪ್ರತಿಭಟನಾ ಸ್ಥಳದಿಂದ ತೆರಳುವುದಿಲ್ಲ. ಸರ್ಕಾರ ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದು, ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವುದೇ ಸಮಸ್ಯೆಗೆ ಪರಿಹಾರ” ಎಂದು ಹೇಳಿದ್ದಾರೆ.
“ಕೆಂಪು ಕೋಟೆಗೆ ಗೂಂಡಾಗಳನ್ನು ಬಿಟ್ಟಿದ್ದು ಯಾರು ಮತ್ತು ಯಾಕೆ? ಎಂಬ ಪ್ರಶ್ನೆಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರಿಸಬೇಕು. ರೈತರು ತಮ್ಮ ಹೋರಾಟದಿಂದ ಒಂದೇ ಒಂದು ಇಂಚು ಹಿಂದೆ ಸರಿಯಬೇಡಿ. ನಾವು ನಿಮ್ಮ ಜೊತೆಗೆ ಇದ್ದೇವೆ” ಎಂದು ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.
ಇದನ್ನೂ ಓದಿ: ಒಂದೇ ಒಂದು ಇಂಚು ಹಿಂದೆ ಸರಿಯದಿರಿ, ನಿಮ್ಮ ಜೊತೆ ನಾವಿದ್ದೇವೆ: ರೈತರಿಗೆ ರಾಹುಲ್ ಗಾಂಧಿ



ಹೌದೇ ಡೂಪ್ ರಾಣಿ ರೈತರಿಗೆ ನೀವು ಗುನ್ನ ಹೊಡೆಯುತ್ತಿದ್ದರೆ ನೋಡಿಕೊಂಡು ಸುಮ್ಮನೆ ಕೂರಬೇಕೆ