Homeಮುಖಪುಟ2 ವರ್ಷದ ಶಿಕ್ಷೆ ವಿರುದ್ಧ ಮೇಲ್ಮನವಿ ಸಲ್ಲಿಸಿದ ರಾಹುಲ್ ಗಾಂಧಿ: ನಾಳೆ ಅರ್ಜಿ ವಿಚಾರಣೆ

2 ವರ್ಷದ ಶಿಕ್ಷೆ ವಿರುದ್ಧ ಮೇಲ್ಮನವಿ ಸಲ್ಲಿಸಿದ ರಾಹುಲ್ ಗಾಂಧಿ: ನಾಳೆ ಅರ್ಜಿ ವಿಚಾರಣೆ

- Advertisement -
- Advertisement -

ಕಳ್ಳರೆಲ್ಲ ಮೋದಿ ಉಪನಾಮದವರೆ ಏಕಿದ್ದಾರೆ ಎಂಬ ಹೇಳಿಕೆಗೆ ಸೂರತ್ ಕೋರ್ಟ್‌ನಿಂದ 2 ವರ್ಷಗಳ ಜೈಲುಶಿಕ್ಷೆಗೆ ಒಳಗಾಗಿರುವ ರಾಹುಲ್ ಗಾಂಧಿಯವರು ತಮ್ಮ ವಿರುದ್ಧದ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರೆ. ಸೋಮವಾರ ಅವರ ಮೇಲ್ಮನವಿ ಅರ್ಜಿ ಸೂರತ್ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ ಎನ್ನಲಾಗಿದೆ.

2019 ರ ರಾಹುಲ್ ಗಾಂಧಿ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಅವರನ್ನು ತಪ್ಪಿತಸ್ಥರೆಂದು ಘೋಷಿಸಿದ ಮ್ಯಾಜಿಸ್ಟ್ರೇಟ್ ನ್ಯಾಯಮೂರ್ತಿ ಎಚ್ ಎಚ್ ವರ್ಮಾ ಅವರ ಮಾರ್ಚ್ 23ರ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗಿದೆ. ಮ್ಯಾಜಿಸ್ಟ್ರೇಟ್ ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದರು. ನಂತರ ಅವರ ಲೋಕಸಭಾ ಸದಸ್ಯತ್ವ ಅನರ್ಹಗೊಳಿಸಲಾಯಿತು.

ಮಾರ್ಚ್ 23ರ ಆದೇಶದ ಸಂದರ್ಭದಲ್ಲಿಯೇ 15,000 ರೂಪಾಯಿಗಳ ಶ್ಯೂರಿಟಿಯ ಮೇಲೆ ರಾಹುಲ್ ಗಾಂಧಿಯವರಿಗೆ ಜಾಮೀನು ನೀಡಿದ್ದು, ಮೇಲ್ಮನವಿ ಸಲ್ಲಿಸಲು 30 ದಿನಗಳವರೆಗೆ ತಮ್ಮ ಆದೇಶವನ್ನು ಅಮಾನತುಗೊಳಿಸಿದೆ.

2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಕೋಲಾರದಲ್ಲಿ ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ರಾಹುಲ್‌, ”ಕಳ್ಳರೆಲ್ಲರಿಗೂ ಸಾಮಾನ್ಯವಾಗಿ ಮೋದಿ ಎಂಬ ಸರ್‌ನೇಮ್ ಏಕಿರುತ್ತದೆ?” ಎಂದು ಪ್ರಶ್ನಿಸಿದ್ದರು. ಈ ಹೇಳಿಕೆಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಎರಡು ಕಡೆ ಮಾನನಷ್ಟ ಮೊಕದ್ದಮೆಗಳು ದಾಖಲಾಗಿವೆ.

ಅಲ್ಲದೆ  ”ಆರ್‌ಎಸ್‌ಎಸ್ ಸದಸ್ಯರು 21 ನೇ ಶತಮಾನದ ಕೌರವರು” ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಮತ್ತೊಂದು ಮಾನನಷ್ಟ ಮೊಕ್ಕದ್ದಮೆ ದಾಖಲಾಗಿದೆ. ಜನವರಿ 9, 2023ರಂದು ಹರಿಯಾಣದ ಅಂಬಾಲಾದಲ್ಲಿ ಭಾರತ್ ಜೋಡೋ ಯಾತ್ರೆಯ ನಂತರ ಸ್ಟ್ರೀಟ್ ಕಾರ್ನರ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಅವರು, ”ಕೌರವರು ಯಾರು? ನಾನು ಮೊದಲು ನಿಮಗೆ 21 ನೇ ಶತಮಾನದ ಕೌರವರ ಬಗ್ಗೆ ಹೇಳುತ್ತೇನೆ ಕೇಳಿ, ಅವರು ಖಾಕಿ ಹಾಫ್ ಪ್ಯಾಂಟ್ ಧರಿಸುತ್ತಾರೆ, ಕೈಯಲ್ಲಿ ಲಾಠಿ ಹಿಡಿದು ಮತ್ತು ಶಾಖಾಗಳನ್ನು ನಡೆಸುತ್ತಾರೆ. ಭಾರತದ ಇಬ್ಬರು, ಮೂವರು ಕೋಟ್ಯಾಧಿಪತಿಗಳು ಕೌರವರ ಜೊತೆ ನಿಂತಿದ್ದಾರೆ” ಎಂದು RSS ಗುರಿಯಾಗಿಸಿಕೊಂಡು ರಾಹುಲ್ ಹೇಳಿದ್ದರು.

ಇದನ್ನೂ ಓದಿ: RSS ಸದಸ್ಯರು 21ನೇ ಶತಮಾನದ ಕೌರವರು ಹೇಳಿಕೆಗೆ ರಾಹುಲ್ ವಿರುದ್ಧ ಮತ್ತೊಂದು ಮಾನನಷ್ಟ ಕೇಸ್ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ವಿಜಯಪುರ: ಗೋ ಸಾಗಾಟಗಾರನ ಮೇಲೆ ಬಜರಂಗದಳದಿಂದ ಥಳಿತ

0
ರಾಜ್ಯದಲ್ಲಿ ಮತ್ತೆ ಗೂಂಡಾಗಿರಿ ವರದಿಯಾಗಿದ್ದು, ದನ-ಕರುಗಳನ್ನು ಸಾಗಾಟ ಮಾಡುವಾಗ ವಾಹನ ತಡೆದು ಯುವಕನಿಗೆ ಬಜರಂಗದಳ ಕಾರ್ಯಕರ್ತರು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲ್ಲೂಕಿನ ಸಾರವಾಡ ಬ್ರಿಡ್ಜ್ ಬಳಿ ನಡೆದಿದೆ. ಬಂದೇನವಾಝ್‌...