Homeಮುಖಪುಟಈ ದೇಶವನ್ನು ನಡೆಸುತ್ತಿರುವ ವ್ಯಕ್ತಿ ಹಿಂಸೆಯನ್ನು ನಂಬುತ್ತಾನೆ: ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಈ ದೇಶವನ್ನು ನಡೆಸುತ್ತಿರುವ ವ್ಯಕ್ತಿ ಹಿಂಸೆಯನ್ನು ನಂಬುತ್ತಾನೆ: ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

- Advertisement -
- Advertisement -

“ನಮ್ಮ ಸಾಂಸ್ಥಿಕ ರಚನೆಗಳ ವಿಘಟನೆಗೆ ಒಂದು ಕಾರಣವಿದೆ. ಜನರು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ, ಏಕೆಂದರೆ ಈ ದೇಶವನ್ನು ನಡೆಸುತ್ತಿರುವ ವ್ಯಕ್ತಿ ಹಿಂಸೆಯನ್ನು ನಂಬುತ್ತಾನೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಮೋದಿ ವಿರುದ್ಧ ಟೀಕಾಪ್ರಹಾರ ಮಾಡಿದ್ದಾರೆ.

ವಯನಾಡಿನಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು “ಭಾರತವನ್ನು ವಿಶ್ವದ ಅತ್ಯಾಚಾರ ರಾಜಧಾನಿ ಎಂದು ಕರೆಯಲಾಗುತ್ತದೆ. ಭಾರತವು ತನ್ನ ಹೆಣ್ಣುಮಕ್ಕಳನ್ನು, ಸಹೋದರಿಯರನ್ನು ನೋಡಿಕೊಳ್ಳಲು ಏಕೆ ಸಾಧ್ಯವಾಗುತ್ತಿಲ್ಲ ಎಂಬ ಪ್ರಶ್ನೆಯನ್ನು ವಿದೇಶಿ ರಾಷ್ಟ್ರಗಳು ಕೇಳುತ್ತಿವೆ” ಎಂದು ರಾಹುಲ್‌ ಗಾಂಧಿ ವಿಷಾಧ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದ ಉನ್ನಾವೊದಲ್ಲಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟ ಯುವತಿ ಮತ್ತು ತೆಲಂಗಾಣದಲ್ಲಿ ಪಶುವೈದ್ಯೆಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ನಡೆದ ಬಗ್ಗೆ ರಾಷ್ಟ್ರವ್ಯಾಪಿ ಆಕ್ರೋಶದ ಹಿನ್ನೆಲಯಲ್ಲಿ ರಾಹುಲ್‌ ಗಾಂಧಿಯವರ ಹೇಳಿಕೆಗಳು ಬಂದಿವೆ.

ಪ್ರತ್ಯೇಕ ಪ್ರಕರಣದಲ್ಲಿ ಉನ್ನಾವೊದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪವನ್ನು ಬಿಜೆಪಿಯ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಹೊತ್ತಿದ್ದಾರೆ. ಅವರ ಕುರಿತು ಪ್ರಧಾನಿ ಒಂದೇ ಒಂದು ಮಾತನ್ನೂ ಹೇಳುವುದಿಲ್ಲ” ಎಂದು ರಾಹುಲ್‌ ಟೀಕಿಸಿದ್ದಾರೆ.

“ದುಃಖ ಮತ್ತು ಹೃದಯ ಕದಡುವಿಕೆಯ ಉನ್ನಾವೊದ ಮುಗ್ಧ ಮಗಳ ಸಾವು ಮಾನವೀಯತೆಗೆ ಅವಮಾನಕರವಾಗಿದ್ದು ನನಗೆ ಕೋಪ ಮತ್ತು ದಿಗ್ಭ್ರಮೆ ತಂದಿದೆ. ನ್ಯಾಯ ಮತ್ತು ಸುರಕ್ಷತೆಗಾಗಿ ಕಾಯುತ್ತಿರುವಾಗ ಭಾರತದ ಮತ್ತೊಬ್ಬ ಮಗಳು ಪ್ರಾಣ ಕಳೆದುಕೊಂಡಿದ್ದಾಳೆ. ಈ ಸಮಯದಲ್ಲಿ ನಾನು ಅವರ ಕುಟುಂಬಕ್ಕೆ ದುಃಖದಿಂದ ನನ್ನ ಸಂತಾಪವನ್ನು ತಿಳಿಸುತ್ತೇನೆ” ಎಂದು ರಾಹುಲ್‌ ಗಾಂಧಿ ಟ್ವೀಟ್‌ ಮಾಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯ ಲೋಕಸಭಾ ಅಭ್ಯರ್ಥಿಗಳ ಪೈಕಿ ಶೇ. 25ರಷ್ಟು ಮಂದಿ ಇತರ ಪಕ್ಷಗಳಿಂದ ವಲಸೆ ಬಂದವರು

0
ಈ ಬಾರಿಯ ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪೈಕಿ ಶೇ 25ರಷ್ಟು ಮಂದಿ ಬೇರೆ ಪಕ್ಷಗಳಿಂದ ವಲಸೆ ಬಂದವರು ಎಂದು ವರದಿಗಳು ಹೇಳಿವೆ. ಬಿಜೆಪಿ ಕಣಕ್ಕಿಳಿಸಿರುವ 435 ಅಭ್ಯರ್ಥಿಗಳ ಪೈಕಿ 106 ಮಂದಿ...