Homeಮುಖಪುಟಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ (ಸರ್ ನೇಮ್) ಇದೆ ಎಂದ ರಾಹುಲ್ ಹೇಳಿಕೆಯ ಪರಿಣಾಮ...

ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ (ಸರ್ ನೇಮ್) ಇದೆ ಎಂದ ರಾಹುಲ್ ಹೇಳಿಕೆಯ ಪರಿಣಾಮ ಇಂದು ಪಾಟ್ನಾ ಕೋರ್ಟಿಗೆ ಹಾಜರು.

ನನ್ನನ್ನು ಬೆಂಬಲಿಸಲು ಮುಂಬೈನಲ್ಲಿ ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೆ ಹೊರಬಂದ ಎಲ್ಲರಿಗೂ ಧನ್ಯವಾದಗಳು, "ನಿಮ್ಮ ಪ್ರೀತಿ ಮತ್ತು ಬೆಂಬಲ ನನ್ನ ದೊಡ್ಡ ಶಕ್ತಿ, ಜೈ ಹಿಂದ್" ಎಂದು ರಾಹುಲ್ ಟ್ವೀಟ್ ಮಾಡಿದ್ದರು.

- Advertisement -
- Advertisement -

ಆರ್‌ಎಸ್‌ಎಸ್ / ಬಿಜೆಪಿಯಲ್ಲಿನ ನನ್ನ ರಾಜಕೀಯ ವಿರೋಧಿಗಳು, ನನಗೆ ಕಿರುಕುಳ ಮತ್ತು ಬೆದರಿಕೆ ಒಡ್ಡಲು ನನ್ನ ವಿರುದ್ಧ ಸಲ್ಲಿಸಿದ ಮತ್ತೊಂದು ಪ್ರಕರಣವನ್ನು ಎದುರಿಸಲು ಇಂದು ಮಧ್ಯಾಹ್ನ 2 ಗಂಟೆಗೆ ಪಾಟ್ನಾದ ಸಿವಿಲ್ ಕೋರ್ಟ್‌ ಗೆ ಖುದ್ದಾಗಿ ಹಾಜರಾಗುತ್ತೇನೆ. ಸತ್ಯಮೇವ ಜಯತೆ, ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ.

ಬಿಹಾರ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿಯವರು ರಾಹುಲ್ ಗಾಂಧಿಯವರ ವಿರುದ್ಧ ಮಾನಹಾನಿ ಮೊಕದ್ದಮೆ ಹೂಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಪಾಟ್ನಾದ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.

ಲೋಕಸಭಾ ಚುನಾವಣೆ ವೇಳೆ ಕರ್ನಾಟಕದ ಕೋಲಾರ ಜಿಲ್ಲೆಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿಯವರು “ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮವಿದೆ (ಸರ್ ನೇಮ್)” ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು, ಬ್ಯಾಂಕ್ ವಂಚನೆ ಆರೋಪಿ ನೀರವ್ ಮೋದಿ ಮತ್ತು ಭಾರತೀಯ ಪ್ರೀಮಿಯರ್ ಲೀಗ್ (ಐಪಿಎಲ್) ಮಾಜಿ ಆಯುಕ್ತ ಲಲಿತ್ ಮೋದಿ ಅವರನ್ನು ಉಲ್ಲೇಖಿಸಿ ವ್ಯಂಗ್ಯವಾಡಿದ್ದರು.

ಈ ಹೇಳಿಕೆಯನ್ನು ಉಲ್ಲೇಖಿನಿ ಮೋದಿ ಎಂಬ ಸರ್ ನೇಮ್ ಇರುವ ತಮಗೂ ಮಾನ ಹಾನಿಯಾಗಿದೆ ಎಂದು  ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ಮುಖಂಡರು, ಬಿಹಾರದ ಉಪಮುಖ್ಯಮಂತ್ರಿಯಾದ ಸುಶೀಲ್ ಕುಮಾರ್ ಮೋದಿಯವರು ಏಪ್ರಿಲ್‌ನಲ್ಲಿ ಪಾಟ್ನಾದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಸಿಜೆಎಂ) ನ್ಯಾಯಾಲಯಕ್ಕೆ ಮೊಕದ್ದಮೆ ಹೂಡಿದ್ದರು. ಈ ಪ್ರಕರಣದ ವಿಚಾರಣೆಗೆ ಇಂದು ರಾಹುಲ್ ಗಾಂಧಿ ಹಾಜರಾಗಲಿದ್ದಾರೆ.

ತಮ್ಮ ಪಕ್ಷದ ಲೋಕಸಭಾ ಚುನಾವಣಾ ಸೋಲಿನ ನೈತಿಕ ಹೊಣೆಗಾರಿಕೆಯನ್ನು ವಹಿಸಿಕೊಂಡು ಈ ವಾರದ ಆರಂಭದಲ್ಲಿ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಹುಲ್ ಗಾಂಧಿ ಅವರು ಮೇ ತಿಂಗಳಲ್ಲಿ ಕೊನೆಯದಾಗಿ ಬಿಹಾರದ ರಾಜಧಾನಿಗೆ ಭೇಟಿ ನೀಡಿದ್ದರು. ಮಾಧ್ಯಮ ವರದಿಯ ಪ್ರಕಾರ, ರಾಜ್ಯವ್ಯಾಪಿ ಮಿದುಳಿನ ಜ್ವರದಿಂದ ತೀವ್ರ ಬಾಧಿತವಾಗಿ 150 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡ ಮುಜಾಫರ್ ಪುರಕ್ಕೆ ರಾಹುಲ್ ಗಾಂಧಿಯವರು ಭೇಟಿ ನೀಡಬಹುದು ಎನ್ನಲಾಗಿದೆ. ಇದು ಪಾಟ್ನಾದಿಂದ ಸುಮಾರು 60 ಕಿ.ಮೀ ದೂರದಲ್ಲಿದೆ.

ಆದರೆ, ಬಿಹಾರ ಪ್ರದೇಶದ ಕಾಂಗ್ರೆಸ್ ಸಮಿತಿ (ಬಿಪಿಸಿಸಿ) ಕಾರ್ಯಕಾರಿ ಅಧ್ಯಕ್ಷ ಕೌಕಾಬ್ ಖಾದ್ರಿ ಪಿಟಿಐಗೆ ನೀಡಿದ ಮಾಹಿತಿಯಲ್ಲಿ, “ಮಾಜಿ ಪಕ್ಷದ ಮುಖ್ಯಸ್ಥರ ಭೇಟಿಯ ಸಂಪೂರ್ಣ ವಿವರ ಇನ್ನೂ ಲಭ್ಯವಾಗಿಲ್ಲ” ಎಂದು ಹೇಳಿದ್ದಾರೆ.

ನಿನ್ನೆ ತಾನೇ ಗೌರಿ ಲಂಕೇಶ್ ಹತ್ಯೆಯಲ್ಲಿ ಆರ್.ಎಸ್.ಎಸ್ ಪಾತ್ರವಿದೆ ಎಂಬ ಹೇಳಿಕೆ ನೀಡಿದ್ದಕ್ಕಾಗಿ ಮುಂಬೈ ಕೋರ್ಟಿಗೆ ರಾಹುಲ್ ಗಾಂಧಿ ಹಾಜರಾಗಿದ್ದರು. ನಂತರ “ಅನ್ಯಾಯ, ದ್ವೇಷ ಮತ್ತು ಹಿಂಸಾಚಾರದ ಶಕ್ತಿಗಳ ವಿರುದ್ಧದ ನನ್ನ ಹೋರಾಟದಲ್ಲಿ, ನನ್ನನ್ನು ಬೆಂಬಲಿಸಲು ಮುಂಬೈನಲ್ಲಿ ಇಂದು ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೆ ಹೊರಬಂದ ಎಲ್ಲರಿಗೂ ಧನ್ಯವಾದಗಳು, ನಿಮ್ಮ ಪ್ರೀತಿ ಮತ್ತು ಬೆಂಬಲ ನನ್ನ ದೊಡ್ಡ ಶಕ್ತಿ, ಜೈ ಹಿಂದ್” ಎಂದು ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...