Homeಮುಖಪುಟಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿ ಮಾಡುತ್ತೇವೆ: ರಾಹುಲ್‌ ಗಾಂಧಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿ ಮಾಡುತ್ತೇವೆ: ರಾಹುಲ್‌ ಗಾಂಧಿ

- Advertisement -
- Advertisement -

ಜಾತಿ ಗಣತಿ ನನ್ನ ಜೀವನದ ಪ್ರಮುಖ ಗುರಿಯಾಗಿದೆ. ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿಯನ್ನು ಮಾಡುತ್ತೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಸಂಪತ್ತು ಮರುಹಂಚಿಕೆ ವಿವಾದದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್‌ ಗಾಂಧಿ, ಕಾಂಗ್ರೆಸ್‌ನ ಕ್ರಾಂತಿಕಾರಿ ಪ್ರಣಾಳಿಕೆಯನ್ನು ಓದಿದ ನಂತರ ಅವರು ಭಯಗೊಂಡಿದ್ದಾರೆ. ಬಿಜೆಪಿಯು 22-25 ದೊಡ್ಡ ಉದ್ಯಮಿಗಳಿಗೆ ಮಾಡಿದ ಸಾಲ ಮನ್ನಾದ 16 ಲಕ್ಷ ಕೋಟಿಯನ್ನು ಮರಳಿ ಪಡೆದು ಅದರ ಸಣ್ಣ ಭಾಗವನ್ನು 90ಶೇ.ಜನರಿಗೆ ಪರಿಹಾರ ನೀಡುವ ಗುರಿಯನ್ನು ಕಾಂಗ್ರೆಸ್‌ ಪಕ್ಷ ಹೊಂದಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಸಾಮಾಜಿಕ ನ್ಯಾಯ ಸಮ್ಮೇಳನದಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಅನ್ಯಾಯ ಎದುರಿಸುತ್ತಿರುವ ದೇಶದ ಶೇ 90ರಷ್ಟು ಜನರಿಗೆ ನ್ಯಾಯ ದೊರಕಿಸುವುದು ನನ್ನ ಜೀವನದ ಉದ್ದೇಶ. ಜಾತಿ ಗಣತಿ ನನಗೆ ರಾಜಕೀಯವಲ್ಲ, ಅದು ನನ್ನ ಜೀವನದ ಧ್ಯೇಯವಾಗಿದೆ. ಜಾತಿ ಗಣತಿಯನ್ನು ತಡೆಯಲು ಜಗತ್ತಿನ ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಆಯ್ಕೆಯಾದಾಗ ನಾವು ತೆಗೆದುಕೊಳ್ಳುವ ಮೊದಲ ಕೆಲಸವೆಂದರೆ ಜನಗಣತಿ. ಇದು ನನ್ನ ಗ್ಯಾರಂಟಿ ಎಂದು ಹೇಳಿದ್ದಾರೆ.

ಸಂಪತ್ತು ಮರುಹಂಚಿಕೆ ವಿವಾದದ ಬಗ್ಗೆ ಮಾತನಾಡಿದ ರಾಹುಲ್‌ ಗಾಂಧಿ, ನಾವು ಇನ್ನೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿಲ್ಲ, ಎಷ್ಟು ಅನ್ಯಾಯವಾಗಿದೆ ಎಂಬುವುದನ್ನು ಮೊದಲು ಕಂಡು ಹಿಡಿಯೋಣ ಎಂದು ನಾನು ಹೇಳುತ್ತಿದ್ದೇನೆ. ಜಾತಿ ಗಣತಿಯು ಕೇವಲ ಜಾತಿ ಸಮೀಕ್ಷೆಯಾಗಿರದೆ “ಆರ್ಥಿಕ” ಮತ್ತು “ಸಾಂಸ್ಥಿಕ” ಅಂಶಗಳನ್ನು ಹೊಂದಿರುತ್ತದೆ. ದಲಿತರು ಮತ್ತು ಬುಡಕಟ್ಟು ಜನಾಂಗದವರ ಇತಿಹಾಸವನ್ನು ಬಿಜೆಪಿ ಅಳಿಸಿ ಹಾಕುತ್ತಿದೆ. ನನಗೆ ಜಾತಿಯಲ್ಲಿ ಆಸಕ್ತಿ ಇಲ್ಲ ಆದರೆ ನ್ಯಾಯದಲ್ಲಿ ಆಸಕ್ತಿ ಇದೆ, ಪ್ರಧಾನಿ ಮೋದಿ ಅವರು ಕಳೆದ ಹತ್ತು ವರ್ಷಗಳಿಂದ ತಾನು ಒಬಿಸಿ ಎಂದು ಹೇಳುತ್ತಿದ್ದಾರೆ ಆದರೆ ನಾನು ಜಾತಿ ಗಣತಿಯ ಬಗ್ಗೆ ಮಾತನಾಡುವಾಗ, ಜಾತಿ ಇಲ್ಲ ಎಂದು ಮೋದಿ ಹೇಳಿದರು. ಜಾತಿ ಇಲ್ಲದಿದ್ದರೆ ನೀವು ಒಬಿಸಿ ಆಗೋದು ಹೇಗೆ? ಭಾರತದಲ್ಲಿ ಬಡವರು ಮತ್ತು ಶ್ರೀಮಂತರು ಎಂಬ ಎರಡು ಜಾತಿಗಳು ಮಾತ್ರ ಇದೆ ಎಂದು ಮೋದಿ ಹೇಳುತ್ತಾರೆ. ಅಗಿದ್ದರೆ ಬಡವರು ಮತ್ತು ಶ್ರೀಮಂತರ ಪಟ್ಟಿಯನ್ನು ಹೊರತನ್ನಿ. ಒಬಿಸಿಗಳು, ದಲಿತರು, ಆದಿವಾಸಿಗಳನ್ನು ಬಡವರ ಪಟ್ಟಿಯಲ್ಲಿ ಕಾಣಬಹುದು ಆದರೆ ಅವರು ಶ್ರೀಮಂತರ ಪಟ್ಟಿಯಲ್ಲಿ ಅವರನ್ನು ಕಾಣಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ರಾಮಮಂದಿರ ಶಂಕುಸ್ಥಾಪನೆ ಸಮಾರಂಭದ ಬಗ್ಗೆ ಮಾತನಾಡಿದ ರಾಹುಲ್‌ ಗಾಂಧಿ, ರಾಮಮಂದಿರ ಮತ್ತು ಸಂಸತ್ತಿನ ಕಟ್ಟಡ ಉದ್ಘಾಟನೆಯಲ್ಲಿ ಒಬ್ಬ ದಲಿತ, ಬುಡಕಟ್ಟು ಜನಾಂಗದವರು ಕೂಡ ಕಾಣಿಸಿಕೊಂಡಿಲ್ಲ, 90% ಜನಸಂಖ್ಯೆಯು ಇದನ್ನು ಅರ್ಥಮಾಡಿಕೊಂಡಿದೆ. ಜನವರಿ 22ರಂದು ನಡೆದ ರಾಮಮಂದಿರ ಸಮಾರಂಭಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದ ಬಿಜೆಪಿ ವಿರುದ್ಧ ಅವರು ಟೀಕಿಸಿದ್ದಾರೆ.

ಮಾಧ್ಯಮಗಳು ನನ್ನನ್ನು ಗಾಂಭೀರ್ಯವಿಲ್ಲದ ರಾಜಕಾರಣಿ ಎಂದು ಬಿಂಬಿಸಿತು. MGNREGA, ಭೂಸ್ವಾಧೀನ ಮಸೂದೆ ವಿರುದ್ಧದ ಹೋರಾಟ ಗಂಭೀರವಲ್ಲದ ವಿಷಯಗಳಾಗಿ ತೋರಿಸಲಾಗಿದೆ. ಆದರೆ ಅಮಿತಾಬ್ ಬಚ್ಚನ್, ಐಶ್ವರ್ಯಾ ರೈ, ವಿರಾಟ್ ಕೊಹ್ಲಿಯನ್ನು ಮಾಧ್ಯಮಗಳು ಗಂಭೀರವಾಗಿ ತೋರಿಸಿವೆ. ನಾನು ಮಾಧ್ಯಮಗಳ ಹೂಡಿಕೆದಾರರನ್ನು ಪರಿಶೀಲಿಸಿದೆ. ಒಬಿಸಿ, ದಲಿತ, ಬುಡಕಟ್ಟು ಸಮುದಾಯದ ಒಬ್ಬ ದೊಡ್ಡ ಆ್ಯಂಕರ್ ಇಲ್ಲ. ಹಾಗಾಗಿ ನಿಮ್ಮ ಧ್ವನಿ ಇಲ್ಲ. ಮಾಧ್ಯಮಗಳಲ್ಲಿ ಇವರಿಗೆ ಪ್ರಾತಿನಿಧ್ಯವಿಲ್ಲ. ಯಾರ ಹಣ ಮಾಧ್ಯಮಕ್ಕೆ ಹೋಗುತ್ತದೆ? ಸರಕಾರಗಳು ಹಣ ನೀಡುತ್ತವೆ. ಜಿಎಸ್‌ಟಿಯಲ್ಲಿ ಯಾರ ಹಣ ಬರುತ್ತದೆ? ಇದು ಶೇ. 90ರಷ್ಟು ಜನರ ಹಣ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಇದನ್ನು ಓದಿ: ನನ್ನ ತಾಯಿ ದೇಶಕ್ಕಾಗಿ ಮಂಗಳಸೂತ್ರವನ್ನು ತ್ಯಾಗ ಮಾಡಿದ್ದಾರೆ: ಪ್ರಿಯಾಂಕ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...