Homeಮುಖಪುಟಮುಖ್ಯ ಚುನಾವಣಾ ಆಯುಕ್ತ 'ಮತಗಳ್ಳರ ರಕ್ಷಕ' ಎಂದ ರಾಹುಲ್ ಗಾಂಧಿ: ಆಳಂದ ಮತಗಳ್ಳತನದ ದಾಖಲೆ ಬಿಡುಗಡೆ

ಮುಖ್ಯ ಚುನಾವಣಾ ಆಯುಕ್ತ ‘ಮತಗಳ್ಳರ ರಕ್ಷಕ’ ಎಂದ ರಾಹುಲ್ ಗಾಂಧಿ: ಆಳಂದ ಮತಗಳ್ಳತನದ ದಾಖಲೆ ಬಿಡುಗಡೆ

- Advertisement -
- Advertisement -

ನವದೆಹಲಿಯಲ್ಲಿ ಗುರುವಾರ (ಸೆ.18) ಮಹತ್ವದ ಸುದ್ದಿಗೋಷ್ಠಿ ನಡೆಸಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಲಬುರಗಿ ಜಿಲ್ಲೆ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 2023ರಲ್ಲಿ ನಡೆದ ಮತಗಳ್ಳತನ ಪ್ರಯತ್ನದ ಬಗ್ಗೆ ದಾಖಲೆ ಬಿಡುಗಡೆ ಮಾಡಿದರು.

ಇದೇ ವೇಳೆ ಚುನಾವಣಾ ಆಯೋಗದ ವಿರುದ್ದ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು “ಮತಗಳ್ಳರನ್ನು ರಕ್ಷಿಸುತ್ತಿದ್ದಾರೆ” ಎಂದು ಆರೋಪಿಸಿದರು.

“ಭಾರತದ ಪ್ರಜಾಪ್ರಭುತ್ವವನ್ನು ನಾಶಪಡಿಸಿದ ಜನರನ್ನು ಮುಖ್ಯ ಚುನಾವಣಾ ಆಯುಕ್ತರು ರಕ್ಷಿಸುತ್ತಿದ್ದಾರೆ ಎಂಬುದಕ್ಕೆ ನಾನು ಕಣ್ಣಿಗೆ ಕಟ್ಟುವ ಪುರಾವೆಯನ್ನು ತೋರಿಸುತ್ತೇನೆ ಮತ್ತು ಹೇಗೆ ರಕ್ಷಿಸಲಾಗುತ್ತಿದೆ ಎಂಬುದನ್ನು ಕೂಡ ತಿಳಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದರು.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿ ನನ್ನ ಜವಾಬ್ದಾರಿಯನ್ನು ಸಂಪೂರ್ಣವಾಗಿ ಅರಿತುಕೊಂಡೇ ನಾನು ಈ ಹೇಳಿಕೆಗಳನ್ನು ನೀಡುತ್ತಿದ್ದೇನೆ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದರು.

ಕೆಲ ವರ್ಷಗಳಿಂದ ವಿವಿಧ ಚುನಾವಣೆಗಳಲ್ಲಿ ಕೆಲ ಶಕ್ತಿಗಳು ಭಾರತದಾದ್ಯಂತ ಲಕ್ಷಾಂತರ ಮತದಾರರನ್ನು ವ್ಯವಸ್ಥಿತವಾಗಿ ಗುರಿಯಾಗಿಸಿಕೊಂಡು ಮತಗಳನ್ನು ಅಳಿಸಿ ಹಾಕುತ್ತಿವೆ. ವಿರೋಧ ಪಕ್ಷಕ್ಕೆ ಮತ ಹಾಕುತ್ತಿರುವ ದಲಿತರು, ಅಲ್ಪಸಂಖ್ಯಾತರು, ಒಬಿಸಿಗಳು ಮತ್ತು ಆದಿವಾಸಿಗಳು ಸೇರಿದಂತೆ ನಿರ್ದಿಷ್ಟ ಸಮುದಾಯಗಳನ್ನು ಗುರಿಯಾಗಿಸಿಕೊಳ್ಳಲಾಗಿದೆ ಎಂದರು.

ಶೇಕಡ 100ರಷ್ಟು ಸತ್ಯವಲ್ಲದ ಯಾವುದನ್ನೂ ನಾನು ಈ ವೇದಿಕೆಯಲ್ಲಿ ಹೇಳುವುದಿಲ್ಲ. ನಾನು ನನ್ನ ದೇಶವನ್ನು ಪ್ರೀತಿಸುವ ವ್ಯಕ್ತಿ, ನನ್ನ ಸಂವಿಧಾನವನ್ನು ಪ್ರೀತಿಸುತ್ತೇನೆ, ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಪ್ರೀತಿಸುತ್ತೇನೆ ಮತ್ತು ನಾನು ಆ ಪ್ರಕ್ರಿಯೆಯನ್ನು ರಕ್ಷಿಸುತ್ತಿದ್ದೇನೆ. ಹಾಗಾಗಿ, ಶೇ. 100ರಷ್ಟು ಪುರಾವೆಗಳು ಇಲ್ಲದ ಯಾವುದನ್ನೂ ನಾನು ಇಲ್ಲಿ ಹೇಳುವುದಿಲ್ಲ ಎಂದು ರಾಹುಲ್ ಗಾಂಧಿ ಒತ್ತಿ ಹೇಳಿದರು.

ಕರ್ನಾಟಕದ ಕಾಂಗ್ರೆಸ್ ಭದ್ರಕೋಟೆಯಾದ ಆಳಂದ ಕ್ಷೇತ್ರದಲ್ಲಿ, ಮತದಾರರಿಗೆ ಗೊತ್ತಾಗದಂತೆ 6000ಕ್ಕೂ ಹೆಚ್ಚು ಮತಗಳನ್ನು ಅಳಿಸಿ ಹಾಕುವ ಪ್ರಯತ್ನ ಮಾಡಲಾಗಿತ್ತು. ಯಾರೂ 6,018 ಮತದಾರರ ಹೆಸರುಗಳನ್ನು ಅಳಿಸುವಾಗ ಸಿಕ್ಕಿ ಬಿದ್ದಿದ್ದರು. ಅಲ್ಲಿ ಒಟ್ಟು ಎಷ್ಟು ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ನಮಗೆ ತಿಳಿದಿಲ್ಲ. ಆದರೆ, 6018 ಮತದಾರರ ಹೆಸರುಗಳನ್ನು ಅಳಿಸಲು ಪ್ರಯತ್ನಿಸಿರುವುದು ನಮ್ಮ ಗಮನಕ್ಕೆ ಬಂದಿದೆ. ಎಂದರು.

ಆಳಂದ ಕ್ಷೇತ್ರದಲ್ಲಿ ಬೂತ್‌ ಮಟ್ಟದ ಅಧಿಕಾರಿ (ಬಿಎಲ್‌ಒ) ಒಬ್ಬರ ಚಿಕ್ಕಪ್ಪನ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸುವ ಪ್ರಯತ್ನ ಮಾಡಲಾಗಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದಾಗ ನೆರಮನೆಯ ವ್ಯಕ್ತಿಯೇ ಹೆಸರು ಅಳಿಸಲು ಅರ್ಜಿ ಹಾಕಿರುವುದು ಗೊತ್ತಾಗಿದೆ. ಈ ಬಗ್ಗೆ ಅವರನ್ನು ವಿಚಾರಿಸಿದಾಗ ಈ ವಿಷಯವೇ ಗೊತ್ತಿಲ್ಲ ಎಂದಿದ್ದರು. ಹಾಗಾಗಿ, ಯಾವುದೋ ಒಂದು ಶಕ್ತಿ ಇಡೀ ಪ್ರಕ್ರಿಯೆಯನ್ನು ಹೈಜಾಕ್ ಮಾಡಿ ಮತದಾರರ ಪಟ್ಟಿಯಿಂದ ಹೆಸರು ಅಳಿಸಿ ಹಾಕಿತ್ತು. ಸುದೈವವಶಾತ್ ನಮಗೆ ಅದು ಸಿಕ್ಕಿತು ಎಂದು ರಾಹುಲ್ ಗಾಂಧಿ ವಿವರಿಸಿದರು.

ಇದೇ ವೇಳೆ ಆಳಂದ ಶಾಸಕ ಬಿ.ಆರ್ ಪಾಟೀಲ್ ಮತ್ತು ಮತಗಳ್ಳತನ ವಂಚನೆಗೆ ಒಳಗಾದ ಇಬ್ಬರು ವ್ಯಕ್ತಿಗಳನ್ನು ರಾಹುಲ್ ಗಾಂಧಿ ವೇದಿಕೆಗೆ ಕರೆತಂದರು. ಈ ಪೈಕಿ ಸೂರ್ಯಕಾಂತ್ ಎಂಬವರು ಮಾತನಾಡಿ “ನಾನು ಅಳಂದದ ಸರಸಂಬಾ ಗ್ರಾಮದ ನಿವಾಸಿ. ನನ್ನ ಹೆಸರಿನಲ್ಲಿ12 ಜನರ ಹೆಸರನ್ನು ಅಳಿಸಿ ಹಾಕಲು ಅರ್ಜಿ ಸಲ್ಲಿಸಲಾಗಿತ್ತು. ನನಗೆ ಈ ವಿಷಯ ಗೊತ್ತಿರಲಿಲ್ಲ” ಎಂದರು. ಪಕ್ಕದಲ್ಲಿದ್ದ ಮಹಿಳೆಯನ್ನು ತೋರಿಸಿ..”ಇವರು ನನ್ನ ಹೆಸರನ್ನು ಏಕೆ ಡಿಲೀಟ್ ಮಾಡಿಸಿದಿರಿ?” ಎಂದು ಕೇಳಿದಾಗ ನನಗೆ ವಿಷಯ ಗೊತ್ತಾಯ್ತು. ನಾನು ಶಾಸಕ ಬಿ.ಆರ್‌ ಪಾಟೀಲ್‌ಗೆ ಮಾಹಿತಿ ನೀಡಿದೆ. ಆ ಬಳಿಕ ತಹಶೀಲ್ದಾರ್‌ಗೆ ದೂರು ನೀಡಿದೆವು. ನಂತರ ಜಿಲ್ಲಾಧಿಕಾರಿ ಪೊಲೀಸ್‌ ದೂರು ದಾಖಲಿಸಿದರು” ಎಂದು ಹೇಳಿದರು.

ಆಳಂದ ಕ್ಷೇತ್ರದಲ್ಲಿ ನಿರ್ದಿಷ್ಟವಾಗಿ ಕಾಂಗ್ರೆಸ್ ಮತದಾರರನ್ನು ಗುರಿಯಾಗಿಸಿ ಹೆಸರು ಅಳಿಸಲಾಗಿದೆ. ಈ ಪ್ರಕ್ರಿಯೆಗೆ ಅತ್ಯಾಧುನಿಕ ಕೇಂದ್ರೀಕೃತ ವ್ಯವಸ್ಥೆಯನ್ನು ಬಳಸಲಾಗಿದೆ. ಮತದಾರರ ಹೆಸರನ್ನು ಅಳಿಸಲು ಅರ್ಜಿಗಳನ್ನು ‘ಸ್ವಯಂಚಾಲಿತವಾಗಿ ಸಾಫ್ಟ್‌ವೇರ್ ಬಳಸಿ’ ಸಲ್ಲಿಸಲಾಗಿದೆ. ಕರ್ನಾಟಕದ ಹೊರಗಿನಿಂದ, ವಿವಿಧ ರಾಜ್ಯಗಳ ಮೊಬೈಲ್ ಸಂಖ್ಯೆಗಳನ್ನು ಇದಕ್ಕೆ ಬಳಸಲಾಗಿದೆ ಎಂದ ರಾಹುಲ್ ಗಾಂಧಿ, ಅರ್ಜಿದಾರರ ಸೀರಿಯಲ್ ನಂಬರ್‌ಗಳಲ್ಲಿ ಹೋಲಿಕೆಗಳನ್ನು ಎತ್ತಿ ತೋರಿಸಿದರು.

ಸೀರಿಯಲ್ ನಂಬರ್‌ಗಳನ್ನು ಗಮನಿಸಿ…ಒಂದು ಸಾಫ್ಟ್‌ವೇರ್ ಬೂತ್‌ನ ಮೊದಲ ಮತದಾರರ ಹೆಸರನ್ನು ಬಳಸಿಕೊಂಡು ಹೆಸರುಗಳನ್ನು ಅಳಿಸುತ್ತಿದೆ. ಯಾರೋ ಒಬ್ಬರು ಸ್ವಯಂಚಾಲಿತ ಪ್ರೋಗ್ರಾಂ ರಚಿಸಿದ್ದಾರೆ, ಇದರಿಂದ ಮತಗಟ್ಟೆಯಲ್ಲಿ ಮೊದಲ ಮತದಾರನೇ ಅರ್ಜಿದಾರನಾಗಿರುವಂತೆ ಮಾಡಲಾಗಿದೆ. ಅದೇ ವ್ಯಕ್ತಿಯು ರಾಜ್ಯದ ಹೊರಗಿನಿಂದ ಮೊಬೈಲ್ ಫೋನ್‌ಗಳನ್ನು ತೆಗೆದುಕೊಂಡು, ಅವುಗಳನ್ನು ಬಳಸಿ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಇದು ಕೇಂದ್ರೀಕೃತ ರೀತಿಯಲ್ಲಿ ಮತ್ತು ದೊಡ್ಡ ಪ್ರಮಾಣದಲ್ಲಿ ನಡೆದಿದೆ ಎಂದು ನಮಗೆ ಖಾತ್ರಿಯಿದೆ. ಇದನ್ನು ಕೆಳಮಟ್ಟದ ಕಾರ್ಯಕರ್ತರಿಂದ ಮಾಡಲಾಗಿಲ್ಲ; ಇದು ಒಂದು ಸರಳವಾದ, ಆದರೆ ದೊಡ್ಡ ಮಟ್ಟದಲ್ಲಿ ಯೋಜಿತವಾಗಿ ನಡೆದ ಕಾರ್ಯವಾಗಿದೆ,” ಎಂದು ರಾಹುಲ್ ಗಾಂಧಿ ಆರೋಪಿಸಿದರು.

ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಕರ್ನಾಟಕದ ತನಿಖಾ ಸಂಸ್ಥೆಗಳು ಪದೇ ಪದೇ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಳ್ಳಲು ಮತ್ತು ನಿರ್ಣಾಯಕ ಡೇಟಾವನ್ನು ಒದಗಿಸಲು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಿರಾಕರಿಸಿದ್ದಾರೆ, ಅವರು ಮತ ಅಳಿಸುವಿಕೆಯಲ್ಲಿ ನೇರ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು.

ಜ್ಞಾನೇಶ್ ಕುಮಾರ್ ಬಗ್ಗೆ ನಾನು ಯಾಕೆ ನೇರ ಆರೋಪ ಮಾಡುತ್ತಿದ್ದೇನೆ ಎಂಬುದನ್ನು ನೋಡೋದಾರೆ, ಕರ್ನಾಟಕದಲ್ಲಿ ಈ ಪ್ರಕರಣದ ತನಿಖೆ ನಡೆಯುತ್ತಿದೆ. ಕರ್ನಾಟಕದ ಸಿಐಡಿ 18 ತಿಂಗಳಲ್ಲಿ ಚುನಾವಣಾ ಆಯೋಗಕ್ಕೆ 18 ಪತ್ರಗಳನ್ನು ಕಳುಹಿಸಿದೆ ಮತ್ತು ಅವರು ಚುನಾವಣಾ ಆಯೋಗವನ್ನು ಕೆಲವು ಸರಳ ಸಂಗತಿಗಳನ್ನು ಕೇಳಿದ್ದಾರೆ. ಮೊದಲನೆಯದು, ಈ ಫಾರ್ಮ್‌ಗಳನ್ನು ಭರ್ತಿ ಮಾಡಿದ ಡೆಸ್ಟಿನೇಶನ್ ಐಪಿಯನ್ನು ನಮಗೆ ನೀಡಿ. ಎರಡನೆಯದು, ಈ ಅರ್ಜಿಗಳನ್ನು ಸಲ್ಲಿಸಿದ ಸಾಧನದ ಡೆಸ್ಟಿನೇಶನ್ ಪೋರ್ಟ್‌ಗಳನ್ನು ನಮಗೆ ನೀಡಿ ಮತ್ತು ಮೂರನೆಯದು, ಮುಖ್ಯವಾಗಿ, ನಮಗೆ ಒಟಿಪಿ ಟ್ರೇಲ್‌ಗಳನ್ನು ನೀಡಿ, ಏಕೆಂದರೆ ಅರ್ಜಿ ಸಲ್ಲಿಸುವಾಗ ಒಟಿಪಿ ಪಡೆಯಬೇಕಾಗುತ್ತದೆ” ಎಂದು ರಾಹುಲ್ ಗಾಂಧಿ ಹೇಳಿದರು.

“18 ತಿಂಗಳಲ್ಲಿ 18 ಬಾರಿ ಕರ್ನಾಟಕದ ಸಿಐಡಿ ಚುನಾವಣಾ ಆಯೋಗಕ್ಕೆ ಇದಕ್ಕಾಗಿ ಪತ್ರ ಬರೆದಿದೆ. ಆದರೂ, ಚುನಾವಣಾ ಆಯೋಗ ಮಾಹಿತಿ ನೀಡುತ್ತಿಲ್ಲ ಏಕೆ? ಏಕೆಂದರೆ ಇದು ಕಾರ್ಯಾಚರಣೆಯನ್ನು ಎಲ್ಲಿಗೆ ಕೊಂಡೊಯ್ಯತ್ತದೆ ಮತ್ತು ಇದು ಎಲ್ಲಿಗೆ ಹೋಗುತ್ತದೆ ಎಂದು ನಮಗೆ ಸಂಪೂರ್ಣವಾಗಿ ಮನವರಿಕೆಯಾಗಿದೆ” ರಾಹುಲ್ ಗಾಂಧಿ ತಿಳಿಸಿದರು.

‘ಆಳಂದ’ ಕ್ಷೇತ್ರದಲ್ಲಿ ಮತಗಳ್ಳತನ ಪ್ರಕರಣ: ಸಿಐಡಿ ತನಿಖೆಗೆ ಸ್ಪಂದಿಸದ ಚುನಾವಣಾ ಆಯೋಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...