Homeಮುಖಪುಟರಾಹುಲ್‌ ಗಾಂಧಿಯ ಪೌರತ್ವ ವಿಚಾರ : ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ಸುಬ್ರಮಣಿಯನ್‌ ಸ್ವಾಮಿ

ರಾಹುಲ್‌ ಗಾಂಧಿಯ ಪೌರತ್ವ ವಿಚಾರ : ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ಸುಬ್ರಮಣಿಯನ್‌ ಸ್ವಾಮಿ

- Advertisement -
- Advertisement -

ರಾಹುಲ್ ಗಾಂಧಿಯವರ ಭಾರತೀಯ ಪೌರತ್ವವನ್ನು ರದ್ದುಗೊಳಿಸಲು ಕೋರಿರುವ ತಮ್ಮ ಮನವಿ ಕುರಿತು ನಿರ್ಧರಿಸಲು ಗೃಹ ಸಚಿವಾಲಯಕ್ಕೆ ನಿರ್ದೇಶನ ನೀಡುವಂತೆ ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ವಕೀಲ ಸತ್ಯ ಸಬರ್ವಾಲ್ ಮೂಲಕ ಸುಬ್ರಮಣಿಯನ್‌ ಸ್ವಾಮಿ ಅರ್ಜಿ ಸಲ್ಲಿಸಿದ್ದಾರೆ. ಅದು ಮುಂದಿನ ವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ.

ಆಗಸ್ಟ್ 2019ರಲ್ಲಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದ ಸುಬ್ರಮಣಿಯನ್‌ ಸ್ವಾಮಿ, “ರಾಹುಲ್ ಗಾಂಧಿ ಸ್ವಯಂ ಪ್ರೇರಿತರಾಗಿ ತಾನು ಬ್ರಿಟನ್ ಪ್ರಜೆ ಎಂದು ಬ್ರಿಟಿಷ್ ಸರ್ಕಾರಕ್ಕೆ ಹೇಳಿದ್ದಾರೆ. ಅಲ್ಲದೆ, ಅವರು ಅಲ್ಲಿನ ಪಾಸ್‌ಪೋರ್ಟ್‌ ಕೂಡ ಹೊಂದಿದ್ದಾರೆ. ಈ ಮೂಲಕ ಭಾರತೀಯ ಪೌರತ್ವ ನಿಯಮಗಳನ್ನು ಉಲ್ಲಂಘಿಸಿದ್ದಾರೆ” ಎಂದು ಆರೋಪಿಸಿದ್ದರು.

ರಾಹುಲ್ ಗಾಂಧಿ ಭಾರತದ ಸಂವಿಧಾನ ವಿಧಿ 9 ಮತ್ತು ಭಾರತೀಯ ಪೌರತ್ವ ಕಾಯ್ದೆ-1955 ಅನ್ನು ಉಲ್ಲಂಘಿಸಿದ್ದಾರೆ. ಇದರಿಂದ ಅವರು ಭಾರತೀಯ ಪೌರತ್ವ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದರು.

ಭಾರತದ ಸಂವಿಧಾನದ 9ನೇ ವಿಧಿಯು ಯಾವುದೇ ವ್ಯಕ್ತಿಯು ಯಾವುದೇ ಇತರ ರಾಷ್ಟ್ರದ ಪೌರತ್ವವನ್ನು ಸ್ವಯಂ ಪ್ರೇರಣೆಯಿಂದ ಪಡೆದುಕೊಂಡರೆ, ಅವರನ್ನು ಭಾರತದ ಪ್ರಜೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ಹೇಳುತ್ತದೆ.

ರಾಹುಲ್‌ ಗಾಂಧಿಯವರು ಬ್ರಿಟನ್‌ನಲ್ಲಿ 2003ರಲ್ಲಿ ನೊಂದಾಯಿಸಿರುವ ಬ್ಯಾಕ್‌ಆಪ್ಸ್‌ ಲಿಮಿಟೆಡ್ ಹೆಸರಿನ ಕಂಪನಿಯ ನಿರ್ದೇಶಕರು ಮತ್ತು ಕಾರ್ಯದರ್ಶಿಗಳಲ್ಲಿ ಒಬ್ಬರಾಗಿದ್ದಾರೆ ಎಂದು ಸುಬ್ರಮಣಿಯನ್‌ ಸ್ವಾಮಿ ತನ್ನ ಪತ್ರದಲ್ಲಿ ಹೇಳಿದ್ದರು. ಅಕ್ಟೋಬರ್ 10,2005 ಮತ್ತು ಅಕ್ಟೋಬರ್ 31,2006 ರಂದು ಸಲ್ಲಿಸಿದ ಕಂಪನಿಯ ವಾರ್ಷಿಕ ರಿಟರ್ನ್ಸ್‌ನಲ್ಲಿ ಗಾಂಧಿಯವರು ತಮ್ಮ ರಾಷ್ಟ್ರೀಯತೆಯನ್ನು ಬ್ರಿಟಿಷ್ ಎಂದು ಘೋಷಿಸಿದ್ದರು ಎಂದು ಆರೋಪಿಸಿದ್ದರು.

ಮುಂದುವರೆದು, ಫೆಬ್ರವರಿ 17, 2009 ರಂದು ದಾಖಲಿಸಿರುವ ಕಂಪನಿಯ ವಿಸರ್ಜನೆಯ ಅರ್ಜಿಯಲ್ಲಿ ರಾಹುಲ್‌ ಗಾಂಧಿಯವರ ರಾಷ್ಟ್ರೀಯತೆಯನ್ನು ಮತ್ತೆ ಬ್ರಿಟಿಷ್ ಎಂದೇ ಉಲ್ಲೇಖಿಸಲಾಗಿದೆ ಎಂದಿದ್ದ ಸ್ವಾಮಿ, ಇದು ಭಾರತದ ಸಂವಿಧಾನ ವಿಧಿ 9 ಮತ್ತು ಭಾರತೀಯ ಪೌರತ್ವ ಕಾಯ್ದೆ-1955 ಉಲ್ಲಂಘಿಸುತ್ತದೆ ಎಂದಿದ್ದರು.

ಸ್ವಾಮಿ ಅವರ ಪತ್ರದ ಹಿನ್ನೆಲೆ ಗೃಹ ಇಲಾಖೆ ಏಪ್ರಿಲ್ 29,2019 ರಂದು ರಾಹುಲ್‌ ಗಾಂಧಿಯವರಿಗೆ ಪತ್ರ ಬರೆದು ಹದಿನೈದು ದಿನಗಳೊಳಗೆ ಈ ವಿಷಯದಲ್ಲಿ “ವಾಸ್ತವ ಸ್ಥಿತಿಯನ್ನು ತಿಳಿಸುವಂತೆ” ಕೇಳಿಕೊಂಡಿತ್ತು.

ಕಳೆದ ಆಗಸ್ಟ್ 10ರಂದು ತನ್ನ ಹಳೆಯ ಪತ್ರವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಸ್ವಾಮಿ, “ರಾಹುಲ್ ಗಾಂಧಿ 2003ರಲ್ಲಿ ಬ್ರಿಟಿಷ್ ಪೌರತ್ವ ಪಡೆದು ವಿದೇಶಿ ಪ್ರಜೆಯಾಗಿರುವಾಗ ಮತ್ತು ಲಂಡನ್‌ನಲ್ಲಿ ಬ್ಯಾಕ್ ಓಪ್ಸ್ ಎಂಬ ಕಂಪನಿಯನ್ನು ಪ್ರಾರಂಭಿಸಿರುವಾಗ ಮೋದಿ ಮತ್ತು ಶಾ ಅವರನ್ನು ರಕ್ಷಿಸುತ್ತಿರುವುದು ಏಕೆ? ಅವರ ಭಾರತೀಯ ಪೌರತ್ವ ಅಮಾನ್ಯವಾಗಿದೆ. ಮೋದಿ ರಕ್ಷಣೆ ಮುಂದುವರಿಸಿದರೆ ನಾನು ಮೋದಿ ಮತ್ತು ಶಾ ವಿರುದ್ಧ ಕೇಸು ದಾಖಲಿಸಬೇಕಾಗುತ್ತದೆ” ಎಂದು ಬರೆದುಕೊಂಡಿದ್ದರು.

ಇವತ್ತು (ಆ.16) ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಸ್ವಾಮಿ “ನನ್ನ ಅಸೋಸಿಯೇಟ್ ಅಡ್ವೊಕೇಟ್ ಸತ್ಯ ಸಬರ್ವಾಲ್ ಅವರು ರಾಹುಲ್ ಗಾಂಧಿಯವರನ್ನು ವಿಚಾರಣೆಗೆ ಒಳಪಡಿಸಲು ಮತ್ತು ಅವರ ಭಾರತೀಯ ಪೌರತ್ವವನ್ನು ಏಕೆ ಕಿತ್ತುಕೊಳ್ಳಬಾರದು ಎಂಬ ಕಾರಣವನ್ನು ತೋರಿಸಲು ಗೃಹ ಸಚಿವಾಲಯದ ವಿಫಲತೆಯ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ರಾಹುಲ್ ಗಾಂಧಿಯವರು ಗೃಹ ಸಚಿವಾಲಯಕ್ಕೆ ಉತ್ತರಿಸಲು ನಿರಾಕರಿಸಿದ್ದಾರೆ, ಆದ್ದರಿಂದ ಪಿಐಎಲ್. ನಾನು ಅಸೋಸಿಯೇಟ್ಸ್ ವಿಶೇಷ್ ಕನೋರಿಯಾ ಅವರಿಗೆ ಧನ್ಯವಾದ ಹೇಳುತ್ತೇನೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ : ನಾಳೆ (ಆ.17) ದೇಶದಾದ್ಯಂತ ವೈದ್ಯರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...