Homeಮುಖಪುಟಅಮೇಥಿಯಿಂದಲೇ ರಾಹುಲ್ ಗಾಂಧಿ ಸ್ಪರ್ಧೆ: ಯುಪಿ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರಾಯ್

ಅಮೇಥಿಯಿಂದಲೇ ರಾಹುಲ್ ಗಾಂಧಿ ಸ್ಪರ್ಧೆ: ಯುಪಿ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರಾಯ್

- Advertisement -
- Advertisement -

2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅಮೇಥಿಯಿಂದಲೇ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ನೂತನ ಉತ್ತರ ಪ್ರದೇಶ ಮುಖ್ಯಸ್ಥ ಅಜಯ್ ರಾಯ್ ಶುಕ್ರವಾರ ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯಿಸಿದ ಅಜಯ್ ರಾಯ್, ಅವರು ಪ್ರಿಯಾಂಕಾ ಗಾಂಧಿ ಅವರು ಎಲ್ಲಿ ಬೇಕಾದರೂ ಸ್ಪರ್ಧಿಸುತ್ತಾರೆ. ಅವರು ವಾರಣಾಸಿಯಿಂದ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಲು ಬಯಸಿದರೆ, ಪ್ರತಿಯೊಬ್ಬ ಕಾರ್ಯಕರ್ತರು ಅವರ ಗೆಲುವಿಗೆ ಶ್ರಮಿಸುತ್ತಾರೆ ಎಂದಿದ್ದಾರೆ.

ಲೋಕಸಭೆ ಚುನಾವಣೆ 2024ಕ್ಕೆ ಇನ್ನೇನು ತಿಂಗಳುಗಳು ಬಾಕಿ ಇರುವಾಗ ಬ್ರಿಜ್ಲಾಲ್ ಖಾಬ್ರಿ ಬದಲಿಗೆ ಅಜಯ್ ರಾಯ್ ಅವರನ್ನು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಲಾಗಿದೆ.

ಬಿಜೆಪಿ ನಾಯಕಿ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಕುರಿತು ಮಾತನಾಡಿದ ರಾಯ್, ”ಅವರು ಭರವಸೆ ನೀಡಿದಂತೆ ಪ್ರತಿ ಕಿಲೋಗೆ 13ರೂ.ಗೆ ಸಕ್ಕರೆ ಲಭ್ಯವಾಗಬಹುದೇ? ಎಂದು ಅವರನ್ನು ಕೇಳಿ, ಸಕ್ಕರೆ ಎಲ್ಲಿ ಹೋಯಿತು ಎಂದು ಅವರು ಸಾರ್ವಜನಿಕರಿಗೆ ಉತ್ತರಿಸಬೇಕು ಎಂದರು.

2019ರ ಚುನಾವಣೆಯಲ್ಲಿ ಗಾಂಧಿ ಅವರು 15 ವರ್ಷಗಳ ಕಾಲ ಪ್ರತಿನಿಧಿಸಿದ್ದ ಅಮೇಥಿ ಕ್ಷೇತ್ರವನ್ನು 52,000 ಮತಗಳಿಂದ ಕಳೆದುಕೊಂಡರು. ಕಾಂಗ್ರೆಸ್ ಸೋಲಿನ ಹೊಣೆ ಹೊತ್ತು ರಾಹುಲ್ ಗಾಂಧಿ ಕೂಡ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ರಾಹುಲ್ ಗಾಂಧಿ ಪ್ರಸ್ತುತ ಕೇರಳದ ವಯನಾಡ್ ಕ್ಷೇತ್ರದಿಂದ ಲೋಕಸಭಾ ಸಂಸದರಾಗಿದ್ದಾರೆ.

2019 ರಲ್ಲಿ ಪ್ರಿಯಾಂಕಾ ಗಾಂಧಿ ಅವರು ವಾರಣಾಸಿಯಿಂದ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸುವ ಬಗ್ಗೆ ಹಲವು ಬಾರಿ ಸುಳಿವು ನೀಡಿದ್ದರು. ಆದರೆ ಪ್ರಿಯಾಂಕಾ ಚುನಾವಣಾ ಕಣಕ್ಕೆ ಇಳಿಯಲಿಲ್ಲ ಮತ್ತು ಪಕ್ಷದ ಸೂಚನೆಯನ್ನು ಪಾಲಿಸಿದ್ದೇನೆ ಎಂದು ಹೇಳಿದರು.

2019ರಲ್ಲಿ ರಾಹುಲ್ ಗಾಂಧಿ ಅವರು ಅಮೇಥಿ ಮತ್ತು ವಯನಾಡ್ ಎರಡರಿಂದಲೂ ಸ್ಪರ್ಧಿಸಿದ್ದರು. ವಯನಾಡ್ ಸ್ಪರ್ಧೆಯು ದಕ್ಷಿಣ ಭಾರತದಲ್ಲಿ ಅವರ ಮೊದಲ ಪ್ರವೇಶವಾಗಿತ್ತು. ಅಮೇಥಿಯಲ್ಲಿ ಸ್ಮೃತಿ ಇರಾನಿ ಅವರ ವಿರುದ್ಧ ರಾಹುಲ್ ಗಾಂಧಿ ಸೋಲು ಕಂಡರು ಆದರೆ ಅವರು ವಯನಾಡಿನಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.

ಮೋದಿ ಉಪನಾಮ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಅವರು ತಮ್ಮ ಲೋಕಸಭಾ ಸದಸ್ಯತ್ವವನ್ನು ಕಳೆದುಕೊಂಡಿದ್ದರು. ಆ ನಂತರ ಅವರು 2024 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುತ್ತದೆಯೇ ಎಂಬುದು ಅನುಮಾನವಾಗಿತ್ತು. ರಾಹುಲ್ ಗಾಂಧಿ ಅವರ ದೋಷಾರೋಪಣೆಗೆ ಸುಪ್ರೀಂಕೋರ್ಟ್ ಮಧ್ಯಂತರ ತಡೆ ನೀಡಿದ್ದರಿಂದ ಅವರ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ.

ಇದನ್ನೂ ಓದಿ: ನೆಹರು ಮ್ಯೂಸಿಯಂ ಮರುನಾಮಕರಣ: ಪ್ರಧಾನಿಗೆ ಪರೋಕ್ಷವಾಗಿ ಟೀಕಿಸಿದ ರಾಹುಲ್ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಂಧನ

0
ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಮತ್ತು ಮಾಜಿ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಶನಿವಾರ ದೆಹಲಿ...