Homeಮುಖಪುಟಬೆಲ್ಲವನ್ನು ಹೇಗೆ ತಯಾರಿಸುತ್ತಾರೆ ಎಂಬುದೂ ರಾಹುಲ್ ಗಾಂಧಿಗೆ ಗೊತ್ತಿಲ್ಲ: ಶಿವರಾಜ್ ಸಿಂಗ್ ಚೌಹಾಣ್ ವ್ಯಂಗ್ಯ

ಬೆಲ್ಲವನ್ನು ಹೇಗೆ ತಯಾರಿಸುತ್ತಾರೆ ಎಂಬುದೂ ರಾಹುಲ್ ಗಾಂಧಿಗೆ ಗೊತ್ತಿಲ್ಲ: ಶಿವರಾಜ್ ಸಿಂಗ್ ಚೌಹಾಣ್ ವ್ಯಂಗ್ಯ

"ರಾಹುಲ್ ಗಾಂಧಿಗೆ ಕೃಷಿಯ ಬಗ್ಗೆ ಏನಾದರೂ ತಿಳಿದಿದೆಯೇ? ಬೆಲ್ಲವನ್ನು ಕಬ್ಬಿನಿಂದ ತಯಾರಿಸಲಾಗಿದೆಯೇ ಅಥವಾ ಯಂತ್ರದಿಂದ ಹೊರಬರುತ್ತದೆಯೆ ಎಂಬುದೂ ಅವರಿಗೆ ತಿಳಿದಿಲ್ಲ"

- Advertisement -
- Advertisement -

ಕೇಂದ್ರ ಸರ್ಕಾರ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿರುವ ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿಯ ವಿರುದ್ಧ ವಾಗ್ದಾಳಿ ಮಾಡಿದ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, “ರಾಹುಲ್ ಗಾಂಧಿಗೆ ಬೆಲ್ಲವನ್ನು ಹೇಗೆ ತಯಾರಿಸುತ್ತಾರೆ ಎಂಬುದೂ ಗೊತ್ತಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

ಈ ಕುರಿತು ಶಿವರಾಜ್ ಸಿಂಗ್ ಮಾತನಾಡಿರುವ ವೀಡಿಯೋವೊಂದನ್ನು ಎಎನ್‌ಐ ಟ್ವೀಟಿ ಮಾಡಿದ್ದು, ಅದರಲ್ಲಿ “ರಾಹುಲ್ ಗಾಂಧಿಗೆ ಕೃಷಿಯ ಬಗ್ಗೆ ಏನಾದರೂ ತಿಳಿದಿದೆಯೇ? ಬೆಲ್ಲವನ್ನು ಕಬ್ಬಿನಿಂದ ತಯಾರಿಸಲಾಗಿದೆಯೇ ಅಥವಾ ಯಂತ್ರದಿಂದ ಹೊರಬರುತ್ತದೆಯೆ ಎಂಬುದೂ ಅವರಿಗೆ ತಿಳಿದಿಲ್ಲ. ರಾಷ್ಟ್ರದ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುವ ಜನರು ರೈತರ ಆಂದೋಲನಕ್ಕೆ ಪ್ರವೇಶಿಸಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟವನ್ನು ಬೆಂಬಲಿಸಿ ಅಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಸಿಖ್ ಪಾದ್ರಿ!

ಇದನ್ನೂ ಓದಿ: ಕೇರಳದ ಜನರು ಮೋದಿಯ ಕಲ್ಯಾಣ ಕ್ರಮಗಳನ್ನು ಒಪ್ಪಿಕೊಂಡಿದ್ದಾರೆ: ರಾಜ್ಯ ಬಿಜೆಪಿ ಮುಖಂಡ

ಕಳೆದ ಮೂರು ವಾರಗಳಿಂದ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್ ಸೇರಿದಂತೆ ಅನೇಕ ವಿರೋಧ ಪಕ್ಷಗಳು ಬೆಂಬಲ ಸೂಚಿಸಿದ್ದವು. ಕಳೆದ ತಿಂಗಳು ಪಂಜಾಬಿನ ರೈತರು ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಟ್ರ್ಯಾಕ್ಟರ್ ರ್ಯಾಲಿಯನ್ನು ಕೈಗೊಂಡಿದ್ದರು.

ಮೊದಲಿನಿಂದಲೂ ರೈತರ ಪ್ರತಿಭಟನೆಗೆ ವಿರೋಧ ಪಕ್ಷಗಳು ಪ್ರಚೋದನೆ ನೀಡುತ್ತಿವೆ ಎಂದು ಆಡಳಿತಾರೂಢ ಬಿಜೆಪಿ ನಾಯಕರು ಆರೋಪಿಸುತ್ತಲೇ ಇದ್ದಾರೆ.


ಇದನ್ನೂ ಓದಿ: ಸಮಯ ವ್ಯರ್ಥ ಎಂದು ರಕ್ಷಣಾ ಸಂಸದೀಯ ಸಮಿತಿ ಸಭೆಯಿಂದ ಹೊರನಡೆದ ರಾಹುಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...