Homeಕರ್ನಾಟಕಸೂರತ್‌ ಸೆಷನ್ಸ್‌ ನ್ಯಾಯಾಲಯದಿಂದ ರಾಹುಲ್‌ ಗಾಂಧಿಗೆ ಜಾಮೀನು

ಸೂರತ್‌ ಸೆಷನ್ಸ್‌ ನ್ಯಾಯಾಲಯದಿಂದ ರಾಹುಲ್‌ ಗಾಂಧಿಗೆ ಜಾಮೀನು

- Advertisement -
- Advertisement -

ಏಪ್ರಿಲ್ 2019ರಲ್ಲಿ ಕೋಲಾರದಲ್ಲಿ ನಡೆದ ರಾಜಕೀಯ ಪ್ರಚಾರದ ಸಂದರ್ಭದಲ್ಲಿ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೊಳಗಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಸೂರತ್‌ ಸೆಷನ್ಸ್ ಕೋರ್ಟ್ ಜಾಮೀನು ನೀಡಿದೆ.

“ಎಲ್ಲಾ ಕಳ್ಳರು ಮೋದಿ ಎಂಬ ಉಪನಾಮವನ್ನು ಏಕೆ ಹೊಂದಿದ್ದಾರೆ” ಎಂಬ ಹೇಳಿಕೆಯನ್ನು ನೀಡಿರುವ ಸಂಬಂಧ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಶಿಕ್ಷೆ ವಿಧಿಸಿತ್ತು.

ಪ್ರಕರಣದ ಮುಂದಿನ ವಿಚಾರಣೆಯು ಮೇ 3ರಂದು ನಡೆಯಲಿದೆ. ರಾಹುಲ್‌ ಗಾಂಧಿಯವರ ಮೇಲೆ ಹೊರಿಸಲಾಗಿರುವ ದೋಷಾರೋಪಣೆಗೆ ನ್ಯಾಯಾಲಯ ಇನ್ನೂ ತಡೆಯಾಜ್ಞೆ ನೀಡಿಲ್ಲ. ಇಂದು ಬೆಳಿಗ್ಗೆ ರಾಹುಲ್ ಗಾಂಧಿ ಅವರು ತಮ್ಮ ಶಿಕ್ಷೆಯನ್ನು ಪ್ರಶ್ನಿಸಿ ಸೂರತ್ ಸೆಷನ್ಸ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದರು.

ಮೇಲ್ಮನವಿಯು ಎರಡು ಅರ್ಜಿಗಳನ್ನು ಒಳಗೊಂಡಿದೆ.  ನಿಯಮಿತ ಜಾಮೀನು ನೀಡಿ ಶಿಕ್ಷೆಯನ್ನು ಅಮಾನತು ಮಾಡಬೇಕೆಂದು ಮೊದಲನೇ ಅರ್ಜಿಯಲ್ಲಿ ಕೋರಲಾಗಿದೆ. ಎರಡನೆಯ ಅರ್ಜಿಯಲ್ಲಿ ಶಿಕ್ಷೆಯನ್ನು ರದ್ದುಗೊಳಿಸಲು ಕೋರಲಾಗಿದೆ.

ಎರಡನೇ ಅರ್ಜಿಯನ್ನು ಅನುಮತಿಸಿದರೆ, ಲೋಕಸಭೆಯ ಅವರ ಸದಸ್ಯತ್ವ ಮರಳಿ ಸಿಗುತ್ತದೆ.

ಮಾರ್ಚ್ 23 ರಂದು, ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ರಾಹುಲ್ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ನಂತರ ರಾಹುಲ್ ಅವರ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಲಾಗಿತ್ತು. ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಕೋರ್ಟ್ 30 ದಿನಗಳ ಕಾಲಾವಕಾಶ ನೀಡಿತ್ತು.

ಅನರ್ಹತೆ ಪ್ರಕಟವಾದ ಬಳಿಕ ರಾಹುಲ್ ಗಾಂಧಿಯವರ ವಿರುದ್ಧ ಮತ್ತೊಂದು ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಈ ವರ್ಷದ ಜನವರಿಯಲ್ಲಿ ಅವರ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ವಿರುದ್ಧ ಅವರು ಹೇಳಿಕೆಯೊಂದನ್ನು ನೀಡಿದ್ದರು. ಆ ಹೇಳಿಕೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಆರ್‌ಎಸ್‌ಎಸ್ ಕಾರ್ಯಕರ್ತ ಕಮಲ್ ಭದೌರಿಯಾ ಅವರ ದೂರಿನ ಮೇರೆಗೆ ವಕೀಲ ಅರುಣ್ ಭದೌರಿಯಾ ಅವರು ಉತ್ತರಾಖಂಡದ ಹರಿದ್ವಾರ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಜನವರಿ 9, 2023ರಂದು ಹರಿಯಾಣದ ಅಂಬಾಲಾದಲ್ಲಿ ಭಾರತ್ ಜೋಡೋ ಯಾತ್ರೆಯ ನಂತರ ಸ್ಟ್ರೀಟ್ ಕಾರ್ನರ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಅವರು, ”ಆರ್‌ಎಸ್‌ಎಸ್ ಸದಸ್ಯರು 21 ನೇ ಶತಮಾನದ ಕೌರವರು” ಎಂದು ಹೇಳಿದ್ದರು.

”ಕೌರವರು ಯಾರು? ನಾನು ಮೊದಲು ನಿಮಗೆ 21 ನೇ ಶತಮಾನದ ಕೌರವರ ಬಗ್ಗೆ ಹೇಳುತ್ತೇನೆ ಕೇಳಿ, ಅವರು ಖಾಕಿ ಹಾಫ್ ಪ್ಯಾಂಟ್ ಧರಿಸುತ್ತಾರೆ, ಕೈಯಲ್ಲಿ ಲಾಠಿ ಹಿಡಿದು ಮತ್ತು ಶಾಖಾಗಳನ್ನು ನಡೆಸುತ್ತಾರೆ. ಭಾರತದ ಇಬ್ಬರು, ಮೂವರು ಕೋಟ್ಯಾಧಿಪತಿಗಳು ಕೌರವರ ಜೊತೆ ನಿಂತಿದ್ದಾರೆ” ಎಂದು ಆರ್‌ಎಸ್‌ಎಸ್‌ ಗುರಿಯಾಗಿಸಿಕೊಂಡು ರಾಹುಲ್ ಹೇಳಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೊಪ್ಪಳ: ಬಿಜೆಪಿ ಭದ್ರಕೋಟೆಯನ್ನು ಛಿದ್ರಗೊಳಿಸಲು ಕಾಂಗ್ರೆಸ್‌ಗೆ ಸುವರ್ಣಾವಕಾಶ!?

0
ಹಿಂದುತ್ವ ರಾಜಕಾರಣದ ವಿಚಾರದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರ ಕಳೆದ ಒಂದೂವರೆ ದಶಕದಿಂದ ಥೇಟ್ ಚಿಕ್ಕಮಗಳೂರು-ಶಿವಮೊಗ್ಗದ ತದ್ರೂಪಿ. ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಹಿಂದುತ್ವದ ಅಜೆಂಡಾ ಇಲ್ಲಿ ನಿರ್ಣಾಯಕ. ಆದರೆ, 2014ರಲ್ಲಿ ಲೋಕಸಭಾ ಕಣಕ್ಕೆ ಸಂಗಣ್ಣ ಕರಡಿ...