Homeಮುಖಪುಟರಾಹುಲ್ ಗಾಂಧಿಗೆ ಲೋಕಸಭೆಯ ವಿಪಕ್ಷ ನಾಯಕನ ಪಟ್ಟ?

ರಾಹುಲ್ ಗಾಂಧಿಗೆ ಲೋಕಸಭೆಯ ವಿಪಕ್ಷ ನಾಯಕನ ಪಟ್ಟ?

- Advertisement -
- Advertisement -

ರಾಹುಲ್ ಗಾಂಧಿ ‘ಮ್ಯಾನ್ ಆಫ್ ದಿ ಮ್ಯಾಚ್’ ಆಗಿದ್ದಾರೆ. ಅವರು ಸದನದಲ್ಲಿ ವಿರೋಧ ಪಕ್ಷದ ನಾಯಕನಾಗಬೇಕು ಎಂದು ಕಾಂಗ್ರೆಸ್‌ ಹಿರಿಯ ನಾಯಕ ಶಶಿ ತರೂರ್ ಆಗ್ರಹಿಸಿದ್ದು, ಇದೇ ರೀತಿಯ ಬೇಡಿಕೆಯನ್ನು ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಸೇರಿ ಹಲವು ಕಾಂಗ್ರೆಸ್‌ ನಾಯಕರು ಮುಂದಿಟ್ಟಿದ್ದಾರೆ.

ಇದಲ್ಲದೆ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ಪಕ್ಷದ ನಾಯಕರನ್ನಾಗಿ ನೇಮಿಸಬೇಕು ಎಂದು ಸಿಡಬ್ಲ್ಯುಸಿ ಸದಸ್ಯರು ನಿರ್ಣಯ ಅಂಗೀಕರಿಸಿದ್ದಾರೆ.

ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಶಶಿ ತರೂರ್, ಈ ಜನಾದೇಶವು ಬಿಜೆಪಿಯ ದುರಹಂಕಾರ ಮತ್ತು ವರ್ತನೆಗೆ ಮತದಾರರು ನೀಡಿರುವ ಜನಾದೇಶದ ಸಂದೇಶವಾಗಿದೆ. ಸರ್ಕಾರವನ್ನು ನಡೆಸುವಾಗ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದ ಮೋದಿ ಮತ್ತು ಅಮಿತ್ ಶಾ ಅವರಿಗೆ ಇದು ಒಂದು ಸವಾಲಾಗಿದೆ ಮತ್ತು ಇದು ಅವರ ಕಾರ್ಯಚಟುವಟಿಕೆಯನ್ನು ಬದಲಾಯಿಸುವ ಮತ್ತು ಹೆಚ್ಚು ಹೊಂದಿಕೊಳ್ಳುವ ಸಾಮರ್ಥ್ಯವನ್ನು ಪರೀಕ್ಷಿಸಲಿದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ಈ ಬಾರಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ಕೆಲವು ವಿಷಯಗಳಲ್ಲಿ ‘ಮಜ್ಬೂರ್ ಸರ್ಕಾರ’ (ಅಸಹಾಯಕ ಸರ್ಕಾರ) ಎಂದು ಸಾಬೀತುಪಡಿಸಬಹುದು, ಏಕೆಂದರೆ ಎನ್‌ಡಿಎ ಭಾಗವಾಗಿರುವ ಎಲ್ಲಾ ಪಕ್ಷಗಳು ಎಲ್ಲವನ್ನೂ ಒಪ್ಪಿಕೊಳ್ಳಬೇಕಾಗುತ್ತದೆ ಹೇಳಿದ್ದಾರೆ.

ಈಗಾಗಲೇ ಅಗ್ನಿವೀರ್ ಯೋಜನೆಯ ಬಗ್ಗೆ ಒಂದು ಪಕ್ಷವು ಪ್ರಶ್ನೆಗಳನ್ನು ಎತ್ತಿದೆ, ಅದನ್ನು ಪರಿಶೀಲಿಸಬೇಕಾಗಿದೆ. ಆಂದ್ರಕ್ಕೆ ಬಿಜೆಪಿ ಸರ್ಕಾರವು ಈವರೆಗೆ ನೀಡಲು ನಿರಾಕರಿಸಿದ್ದ ವಿಶೇಷ ವರ್ಗದ ಸ್ಥಾನಮಾನಕ್ಕೆ ಬೇಡಿಕೆ ಕೇಳಿ ಬಂದಿದೆ, ಅದನ್ನು ಮರುಪರಿಶೀಲಿಸಬೇಕಾಗಿದೆ ಎಂದು ಅವರು ಹೇಳಿದರು.

ಮೋದಿ ಸರಕಾರವು ಕಳೆದ 10 ವರ್ಷಗಳಲ್ಲಿ ಸಂಸತ್ತನ್ನು ಸೂಚನಾ ಫಲಕದಂತೆ ಪರಿಗಣಿಸಿದೆ. ಈಗ 230ಕ್ಕೂ ಹೆಚ್ಚು ಸಂಸದರ ಪ್ರಬಲ ವಿರೋಧವಿರುವ ಕಾರಣ ಈಗ ಅದು ಸಾಧ್ಯವಿಲ್ಲ. ರಾಹುಲ್ ಹಾಗೂ ಮಲ್ಲಿಕಾರ್ಜುನ ಖರ್ಗೆ ದೇಶದಾದ್ಯಂತ ವ್ಯಾಪಕ ಪ್ರಚಾರ ನಡೆಸಿದ್ದಾರೆ. ಖರ್ಗೆ ಅವರು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಹಾಗಾಗಿ ರಾಹುಲ್ ಗಾಂಧಿ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹುದ್ದೆ ವಹಿಸುವುದು ಸೂಕ್ತವೆನಿಸಲಿದೆ ಎಂದು ಹೇಳಿದ್ದಾರೆ.

ಲೋಕಸಭೆಯಲ್ಲಿ ಬಿಜೆಪಿ ಬಳಿಕ 99 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಅಲ್ಲದೆ ಆಡಳಿತ ಪಕ್ಷವನ್ನು ಎದುರಿಸಲು ಹೆಚ್ಚಿನ ಸಂಖ್ಯಾ ಬಲ ಹೊಂದಿರುವ ಪಕ್ಷದ ಜನಪ್ರಿಯ ನಾಯಕ ವಿಪಕ್ಷದ ಸ್ಥಾನ ವಹಿಸುವುದು ಹೆಚ್ಚು ಸೂಕ್ತವೆನಿಸಲಿದೆ ಎಂದು  ಶಶಿ ತರೂರ್‌ ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ವಹಿಸಿಕೊಳ್ಳಬೇಕು ಎಂದು ಹಲವಾರು ಕಾಂಗ್ರೆಸ್ ನಾಯಕರು ತಮ್ಮ ಬೇಡಿಕೆಯನ್ನು ವ್ಯಕ್ತಪಡಿಸಿದ್ದಾರೆ.

ಎಲ್ಲವನ್ನೂ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ರಾಹುಲ್ ಗಾಂಧಿ ಅವರು ಪ್ರತಿಪಕ್ಷದ ಪ್ರಮುಖ ನಾಯಕರಾಗಿ ಹೊರಹೊಮ್ಮಬೇಕು ಎಂದು ಇಡೀ ದೇಶ ಒತ್ತಾಯಿಸುತ್ತದೆ. ಈ ಸ್ಥಾನವು ಅವರಿಗೆ ಸೂಕ್ತವಾಗಿದೆ ಎಂದು ಪ್ರತಾಪ್ ಸಿಂಗ್ ಬಾಜ್ವಾ ಹೇಳಿದ್ದಾರೆ.

ಲುಧಿಯಾನದಿಂದ ಆಯ್ಕೆಯಾಗಿರುವ ಸಂಸದ, ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್, ಅಂತಿಮ ನಿರ್ಧಾರವು ಪಕ್ಷದ ನಾಯಕತ್ವದ ಮೇಲಿದೆ ಮತ್ತು ಈ ಪಾತ್ರವನ್ನು ವಹಿಸಬೇಕೇ ಎಂಬುದನ್ನು ನಿರ್ಧರಿಸುವುದು ರಾಹುಲ್ ಗಾಂಧಿ ಅವರದ್ದಾಗಿದೆ. ರಾಹುಲ್ ಗಾಂಧಿ ಮುಂದೆ ಬಂದು ಎಲ್ಲವನ್ನೂ ನಿಭಾಯಿಸಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ ಆದರೆ ನಾಯಕತ್ವದ ಅಂತಿಮ ನಿರ್ಧಾರ ರಾಹುಲ್ ಗಾಂಧಿ ಅವರೇ ನಿರ್ಧರಿಸಬೇಕು ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಅಲಂಕರಿಸಬೇಕು. ರಾಹುಲ್ ಗಾಂಧಿ ಮಹಿಳೆಯರು ಮತ್ತು ನಿರುದ್ಯೋಗಿಗಳ ಪರ ಹೋರಾಟ ನಡೆಸುತ್ತಿದ್ದಾರೆ. ಇದು 140 ಕೋಟಿ ಭಾರತೀಯರ ಬೇಡಿಕೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹೇಳಿದ್ದಾರೆ.

ಗುರುದಾಸ್‌ಪುರದಿಂದ ಲೋಕಸಭೆ ಚುನಾವಣೆಯಲ್ಲಿ ಗೆದ್ದಿರುವ ಕಾಂಗ್ರೆಸ್ ಸಂಸದ ಸುಖ್‌ಜಿಂದರ್ ಸಿಂಗ್ ರಾಂಧವಾ ಈ ಬಗ್ಗೆ ಮಾತನಾಡಿದ್ದು, ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಪ್ರಧಾನಿಗೆ ಪ್ರತ್ಯುತ್ತರ ನೀಡಬಲ್ಲವರು ಮತ್ತು ಆದ್ದರಿಂದ ಅವರು ವಿಪಕ್ಷದ ನಾಯಕನ ಸ್ಥಾನವನ್ನು ವಹಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಇದನ್ನು ಓದಿ: ಲೋಕಸಭೆಯ ತೀರ್ಪನ್ನು ಹೆಚ್ಚಿನ ಮುಸ್ಲಿಮರು ಭರವಸೆಯಿಂದ ಏಕೆ ನೋಡುತ್ತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...