Homeಮುಖಪುಟಈ ಸರ್ಕಾರದಿಂದ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಖ್ಯಾತಿ - ರಾಹುಲ್ ಗಾಂಧಿ

ಈ ಸರ್ಕಾರದಿಂದ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಖ್ಯಾತಿ – ರಾಹುಲ್ ಗಾಂಧಿ

"ಸಾಫ್ಟ್ ಪವರ್ ನಮ್ಮ ಅತಿದೊಡ್ಡ ಶಕ್ತಿ. ಬಿಜೆಪಿ-ಆರ್‌ಎಸ್‌ಎಸ್ ಮನಸ್ಥಿತಿ ಅದನ್ನು ಚೂರುಚೂರು ಮಾಡಿದೆ" ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದರು.

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ರೈತರು ಪ್ರತಿಭಟಿಸುತ್ತಿರುವ ದೆಹಲಿಯ ಗಡಿಗಳಲ್ಲಿ ಸರ್ಕಾರ ಮಾಡಿರುವ ಬ್ಯಾರಿಕೇಡಿಂಗ್ ಕಾರಣದಿಂದ ಭಾರತದ ಜಾಗತಿಕ ಸ್ಥಾನಮಾನಕ್ಕೆ ದೊಡ್ಡ ಪೆಟ್ಟು ಬಿದ್ದಿದೆ ಎಂದು ಹೇಳಿದ್ದಾರೆ. ದೆಹಲಿಯ ಕಾಂಗ್ರೆಸ್‌ನ ಕೇಂದ್ರ ಕಚೇರಿಯಲ್ಲಿ ನಡೆದ ವಿಶೇಷ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದರು.

ರೈತರು ಪ್ರತಿಭಟಿಸುತ್ತಿರುವ ದೆಹಲಿಯ ಗಡಿಯಲ್ಲಿ ಬ್ಯಾರಿಕೇಡಿಂಗ್ ಮತ್ತು ಸರ್ಕಾರ ರೈತರನ್ನು ನಡೆಸಿಕೊಳ್ಳುವ ರೀತಿಯಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸ್ಥಾನಮಾನಕ್ಕೆ ಹೊಡೆತ ಬೀಳುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, “ಖಂಡಿತವಾಗಿಯೂ ಹೌದು. ಭಾರತದ ಸ್ಥಾನಮಾನಕ್ಕೆ ದೊಡ್ಡ ಹೊಡೆತ ಬಿದ್ದಿದೆ. ನಾವು ನಮ್ಮ ರೈತರನ್ನು ಹೇಗೆ ಉಪಚರಿಸುತ್ತಿದ್ದೇವೆ ಎಂಬುದರ ಬಗ್ಗೆ ಮಾತ್ರವಲ್ಲ, ನಮ್ಮ ಜನರೊಂದಿಗೆ ನಾವು ಹೇಗೆ ವರ್ತಿಸುತ್ತೇವೆ, ಪತ್ರಕರ್ತರೊಂದಿಗೆ ನಾವು ಹೇಗೆ ವರ್ತಿಸುತ್ತೇವೆ ಎಂಬುದೂ ಇದಕ್ಕೆ ಕಾರಣ” ಎಂದಿದ್ದಾರೆ.

“ಸಾಫ್ಟ್ ಪವರ್ ನಮ್ಮ ಅತಿದೊಡ್ಡ ಶಕ್ತಿ. ಬಿಜೆಪಿ-ಆರ್‌ಎಸ್‌ಎಸ್ ಮನಸ್ಥಿತಿ ಅದನ್ನು ಚೂರುಚೂರು ಮಾಡಿದೆ” ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರೈತ ಹೋರಾಟಕ್ಕೆ ಅಂತರಾಷ್ಟ್ರೀಯ ಸೆಲೆಬ್ರಿಟಿಗಳ ಬೆಂಬಲ: ಗರಂ ಆಯಿತೇ ವಿದೇಶಾಂಗ ಸಚಿವಾಲಯ?

ರೈತರ ಪ್ರತಿಭಟನೆಗೆ ಅಂತಾರಾಷ್ಟ್ರೀಯ ಪಾಪ್ ಗಾಯಕಿ ರಿಹಾನ್ನಾ, ಸ್ವೀಡನ್‌ನ ಕಿರಿಯ ಪರಿಸರವಾದಿ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಮತ್ತು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಸಂಬಂಧಿ ಮೀನಾ ಹ್ಯಾರಿಸ್, ಬ್ರಿಟನ್ ಸಂಸದೆ ಕ್ಲೌಡಿಯಾ ವೆಬ್ಬೆ, ಅಮೆರಿಕ ಕಾಂಗ್ರೆಸ್‌ಮನ್, ವಿದೇಶಾಂಗ ವ್ಯವಹಾರ ಸಮಿತಿ ಸದಸ್ಯ ಡೆಮಾಕ್ರಟ್ ಜಿಮ್ ಕೋಸ್ಟಾ ಕೂಡ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದರು.

ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಈ ಬಿಕ್ಕಟ್ಟು ಮುಂದುವರಿದಂತೆ, ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಎರಡು ವರ್ಷಗಳ ಕಾಲ ಮುಂದೂಡುವ ಮೋದಿ ಸರಕಾರದ ಪ್ರಸ್ತಾಪವನ್ನು ರಾಹುಲ್ ಪ್ರಶ್ನಿಸಿದರು. ಈ ವಿಷಯದಲ್ಲಿ ಕೇಂದ್ರವು ತನ್ನ ನಿಲುವನ್ನು ಖಚಿತಪಡಿಸಿಕೊಳ್ಳುವಂತೆ ಸಲಹೆ ನೀಡಿದರು.

“ಎರಡು ವರ್ಷಗಳವರೆಗೆ ಕಾನೂನುಗಳನ್ನು ಮುಂದೂಡುವ ಪ್ರಸ್ತಾಪವು ಇನ್ನೂ ಮೇಜಿನ ಮೇಲಿದೆ ಎಂದು ಪ್ರಧಾನಿ ಹೇಳುತ್ತಿದ್ದಾರೆ. ಅದರ ಅರ್ಥವೇನು? ಇದು ಗೊಂದಲದ ಹಾದಿಯಾಗಿದೆ” ಎಂದು ಅವರು ಹೇಳಿದರು. ನಾಗರಿಕರಿಗೆ ಆಹಾರವನ್ನು ಒದಗಿಸುವ ರೈತರು ನೆರೆದಿರುವ ರಾಜಧಾನಿಯ ಗಡಿಗಳನ್ನು ಕೋಟೆಯಾಗಿ ಏಕೆ ಪರಿವರ್ತಿಸಲಾಗಿದೆ ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿದ ರಿಹಾನ್ನಾ: ಗೌರವಾರ್ಥವಾಗಿ ಹಾಡು ಸಮರ್ಪಿಸಿದ ದಿಲ್ಜಿತ್‌!

ಸಮಸ್ಯೆಯನ್ನು ಪರಿಹರಿಸಲು ಆಂದೋಲನ ನಡೆಸುತ್ತಿರುವ ರೈತರೊಂದಿಗೆ ಮಾತನಾಡಲು ಸರ್ಕಾರ ಏಕೆ ಆಸಕ್ತಿ ಹೊಂದಿಲ್ಲ ಎಂದು ಆಶ್ಚರ್ಯಪಟ್ಟ ಅವರು, ಈ ಪರಿಸ್ಥಿತಿ ಭಾರತಕ್ಕೆ ಒಳ್ಳೆಯದಲ್ಲ ಎಂದು ಹೇಳಿದರು. ಈ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಬೇಕಾಗಿದೆ ಮತ್ತು ಸರ್ಕಾರವು ರೈತರ ಧ್ವನಿಯನ್ನು ಕೇಳಿಸಿಕೊಳ್ಳಬೇಕು. ಅಲ್ಲಿವರೆಗೆ ರೈತರು ಇಲ್ಲಿಯೇ ಇರುತ್ತಾರೆ ಎಂದರು.

ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಹೆಚ್ಚಿನ ರೈತರು ಪ್ರತಿಭಟನಾಕಾರರ ಜೊತೆ ಸೇರುತ್ತಾರೆ ಎಂಬ ಆತಂಕದ ಮಧ್ಯೆ ದೆಹಲಿ ಪೊಲೀಸರು ಮೂರು ಪ್ರತಿಭಟನಾ ಸ್ಥಳಗಳಲ್ಲಿ ಬ್ಯಾರಿಕೇಡ್, ಬಂಡೆಗಳು ಮತ್ತು ಮುಳ್ಳುತಂತಿಗಳನ್ನು ಹಾಕಿ ಭದ್ರತಾ ವ್ಯವಸ್ಥೆಯನ್ನು ಮಾಡಿದ್ದು, ಸರ್ಕಾರ ಇಂಟರ್‌ನೆಟ್ ಸ್ಥಗಿತಗೊಳಿಸಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ.


ಇದನ್ನೂ ಓದಿ: ಅದಾನಿಗೆ ಮಂಗಳೂರು ಏರ್‌ಪೋರ್ಟ್ ಗುತ್ತಿಗೆ: ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Hogale hogu Namna deshana soft target madi eega yeno soft power anta bogaltha iddita.Neenu ninna vidyabyasa munduvarisi kanista jnana samoadisuvavaregu matadabeda.Sarina

LEAVE A REPLY

Please enter your comment!
Please enter your name here

- Advertisment -

‘ಏಕರೂಪ ಭಾರತವನ್ನಲ್ಲ, ಏಕೀಕೃತ ಭಾರತವನ್ನ ಸಂಭ್ರಮಿಸೋಣ’: ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ 

ಚೆನ್ನೈ: ಗಣರಾಜ್ಯೋತ್ಸವವನ್ನು ಏಕರೂಪ ಭಾರತದಂತಲ್ಲದೇ ಏಕೀಕೃತ ಭಾರತವಾಗಿ ಆಚರಿಸಬೇಕೆಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ ನೀಡಿದ್ದಾರೆ.  ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಸ್ಟಾಲಿನ್, "ಏಕರೂಪದ ಭಾರತವಲ್ಲ, ಏಕೀಕೃತ ಭಾರತವನ್ನು...

ಗಣರಾಜ್ಯೋತ್ಸವ ಪರೇಡ್ : ಸಿಆರ್‌ಪಿಎಫ್ ಪುರುಷರ ತುಕಡಿ ಮುನ್ನಡೆಸಿ ಗಮನಸೆಳೆದ ಮಹಿಳಾ ಅಧಿಕಾರಿ ಸಿಮ್ರಾನ್ ಬಾಲಾ

ದೆಹಲಿಯ ಕರ್ತವ್ಯ ಪಥದಲ್ಲಿ ನಡೆದ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಸಿಆರ್‌ಪಿಎಫ್ ಸಹಾಯಕ ಕಮಾಂಡೆಂಟ್ ಸಿಮ್ರಾನ್ ಬಾಲಾ ಅವರು ಅರೆಸೈನಿಕ ಪಡೆಯ ಸಂಪೂರ್ಣ ಪುರುಷರ ತುಕಡಿಯನ್ನು ಮುನ್ನಡೆಸುವ ಮೂಲಕ ಇತಿಹಾಸ ನಿರ್ಮಿಸಿದರು. ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯವರಾದ...

ಉತ್ತರಾಖಂಡ: ಸೂಫಿ ಕವಿ ಬಾಬಾ ಬುಲ್ಲೆ ಶಾ ಅವರ ಮಂದಿರವನ್ನು ಧ್ವಂಸಗೊಳಿಸಿದ ಹಿಂದೂ ರಕ್ಷಣಾ ದಳದ ದುಷ್ಕರ್ಮಿಗಳು

ಉತ್ತರಾಖಂಡದ ಮಸ್ಸೂರಿಯಲ್ಲಿರುವ 18 ನೇ ಶತಮಾನದ ಸೂಫಿ ಕವಿ ಬಾಬಾ ಬುಲ್ಲೆಹ್ ಷಾ ಅವರ ದೇವಾಲಯವನ್ನು ಶುಕ್ರವಾರ ಹಿಂದೂ ರಕ್ಷಾ ದಳದೊಂದಿಗೆ ಸಂಪರ್ಕ ಹೊಂದಿರುವವರು ಧ್ವಂಸಗೊಳಿಸಿದ್ದಾರೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ. "ಜೈ...

ಅಕ್ಷರಧಾಮ ದೇವಾಲಯ ದಾಳಿ ಪ್ರಕರಣ: 6 ವರ್ಷಗಳ ನಂತರ ಮೂವರ ಮುಸ್ಲಿಂ ವ್ಯಕ್ತಿಗಳನ್ನು ಖುಲಾಸೆಗೊಳಿಸಿದ ಅಹಮದಾಬಾದ್ ಪೋಟಾ ನ್ಯಾಯಾಲಯ

ಅಕ್ಷರಧಾಮ ದೇವಾಲಯದ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಮೂವರು ಮುಸ್ಲಿಂ ಪುರುಷರನ್ನು ಕಳೆದ ವಾರ ಅಹಮದಾಬಾದ್‌ನ ವಿಶೇಷ ಭಯೋತ್ಪಾದನಾ ತಡೆ ಕಾಯ್ದೆ (ಪೋಟಾ) ನ್ಯಾಯಾಲಯವು ಖುಲಾಸೆಗೊಳಿಸಿದ್ದು, ವರ್ಷಗಳ ಕಾನೂನು ಪ್ರಕ್ರಿಯೆಗಳ ನಂತರ...

ಡಿಜಿ-ಐಜಿಪಿ ಎಂ.ಎ ಸಲೀಂ ವಿರುದ್ಧ ಸುಳ್ಳಾರೋಪ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಮಹಾನಿರೀಕ್ಷಕ (ಡಿಜಿ-ಐಜಿಪಿ) ಎಂ.ಎ ಸಲೀಂ ಅವರ ವಿರುದ್ಧ ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ದ ಬೆಂಗಳೂರಿನ ಸೈಬರ್ ಅಪರಾಧ ಪೊಲೀಸರು...

ಭಾರತ-ಯುರೋಪ್ ಒಕ್ಕೂಟ ವ್ಯಾಪಾರ ಒಪ್ಪಂದ: ಬಿಎಂಡಬ್ಲ್ಯು, ವೋಕ್ಸ್‌ವ್ಯಾಗನ್, ಮರ್ಸಿಡಿಸ್ ಬೆಂಜ್ ಮೇಲಿನ ಸುಂಕ ಶೇ. 110 ರಿಂದ ಶೇ. 40ಕ್ಕೆ ಇಳಿಕೆಯಾಗುವ ಸಾಧ್ಯತೆ

ಯುರೋಪಿಯನ್ ಒಕ್ಕೂಟದಿಂದ ಆಮದು ಮಾಡಿಕೊಳ್ಳುವ ಕಾರುಗಳ ಮೇಲಿನ ಸುಂಕವನ್ನು ಪ್ರಸ್ತುತ ಶೇ. 110 ರಿಂದ ಶೇ. 40 ಕ್ಕೆ ಇಳಿಸಲು ಭಾರತ ಯೋಜಿಸಿದೆ, ಇದು ದೇಶದ ವಿಶಾಲ ಮಾರುಕಟ್ಟೆಯಲ್ಲಿ ಇದುವರೆಗಿನ ಅತಿದೊಡ್ಡ ಆರಂಭವಾಗಿದೆ,...

ಗಣರಾಜ್ಯೋತ್ಸವ : ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣ ಯಥಾವತ್ ಓದಿದ ರಾಜ್ಯಪಾಲ ಗೆಹ್ಲೋಟ್

ಸಂವಿಧಾನವು ತನ್ನ ಮೊದಲ ಅನುಚ್ಛೇದದಲ್ಲಿಯೇ ಭಾರತವನ್ನು ಒಂದು ರಾಜ್ಯಗಳ ಒಕ್ಕೂಟ ಎಂದು ಘೋಷಿಸುತ್ತದೆ. ಸಶಕ್ತ ರಾಜ್ಯಗಳ ಮೂಲಕ ಸಶಕ್ತ ಭಾರತ ನಿರ್ಮಿಸುವುದು ನಮ್ಮ ಸಂವಿಧಾನದ ನಿರ್ಮಾತೃಗಳ ಕನಸಾಗಿತ್ತು. ಆ ಕನಸಿಗೆ ಕುಂದುಂಟಾಗದಂತೆ ನಮ್ಮ...

‘ಪುಸ್ತಕ ಮನೆʼಯ ಅಂಕೇಗೌಡ ಸೇರಿ ರಾಜ್ಯದ ಮೂವರಿಗೆ ಪದ್ಮಶ್ರೀ ಪ್ರಶಸ್ತಿ

ಕರ್ನಾಟಕದ ಮೂವರು ಸೇರಿದಂತೆ ದೇಶದ ಒಟ್ಟು 45 ಸಾಧಕರನ್ನು 2026ನೇ ಸಾಲಿನ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ. ಮಂಡ್ಯ ಮೂಲದ ಪುಸ್ತಕ ಪ್ರೇಮಿ ಅಂಕೇಗೌಡ, ದಾವಣಗೆರೆಯ ಹಿಮೋಫಿಲಿಯಾ ಸೊಸೈಟಿಯ ವೈದ್ಯ...

ದೆಹಲಿ ಲೆಫ್ಟಿನೆಂಟ್ ಗವರ್ನರ್ ಮಾನನಷ್ಟ ಪ್ರಕರಣ : ಹೋರಾಟಗಾರ್ತಿ ಮೇಧಾ ಪಾಟ್ಕರ್ ಖುಲಾಸೆ

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು 20 ವರ್ಷಗಳ ಹಿಂದಿನ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನು ದೆಹಲಿ ನ್ಯಾಯಾಲಯ ಶನಿವಾರ (ಜ.24) ಖುಲಾಸೆಗೊಳಿಸಿದೆ ಎಂದು ಬಾರ್...

ಆರ್‌ಜೆಡಿ ರಾಷ್ಟ್ರೀಯ ಕಾರ್ಯಕಾರಿ ಸಭೆ; ಕಾರ್ಯಕಾರಿ ಅಧ್ಯಕ್ಷರಾಗಿ ತೇಜಸ್ವಿ ನೇಮಕ

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಅವರ ಕಿರಿಯ ಪುತ್ರ ತೇಜಸ್ವಿ ಯಾದವ್ ಅವರನ್ನು, ಇಂದು (ಜ.25) ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಪಕ್ಷದ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. 'ಮಹಾಘಟಬಂಧನ್' 36...