Homeಮುಖಪುಟಬಿಹಾರದಲ್ಲಿ 'ವೋಟರ್ ಅಧಿಕಾರ್' ಯಾತ್ರೆಗೆ ಚಾಲನೆ ನೀಡಿದ ರಾಹುಲ್ ಗಾಂಧಿ: ದೇಶದಾದ್ಯಂತ ಮತಗಳ್ಳನ ನಡೆದಿದೆ ಎಂದು...

ಬಿಹಾರದಲ್ಲಿ ‘ವೋಟರ್ ಅಧಿಕಾರ್’ ಯಾತ್ರೆಗೆ ಚಾಲನೆ ನೀಡಿದ ರಾಹುಲ್ ಗಾಂಧಿ: ದೇಶದಾದ್ಯಂತ ಮತಗಳ್ಳನ ನಡೆದಿದೆ ಎಂದು ಆರೋಪ

- Advertisement -
- Advertisement -

ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟ ಬಿಹಾರದಲ್ಲಿ ಹಮ್ಮಿಕೊಂಡಿರುವ 16 ದಿನಗಳ ‘ವೋಟರ್ ಅಧಿಕಾರ್ ಯಾತ್ರಾ’ಗೆ(ಮತದಾರನ ಅಧಿಕಾರ ಯಾತ್ರೆ) ಸಸಾರಾಮ್‌ನಲ್ಲಿ ಭಾನುವಾರ ಚಾಲನೆ ನೀಡಲಾಗಿದೆ.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ, 2024ರ ಲೋಕಸಭೆ ಚುನಾವಣೆಯಲ್ಲಿ ದೇಶದಾದ್ಯಂತ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ ಈ ಯಾತ್ರೆ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ,”ಬಿಹಾರದಲ್ಲಿ ‘ಮತ ಕಳ್ಳತನ’ ಮಾಡುವುದಕ್ಕೆ ಬಿಜೆಪಿಗರು ಮತ್ತು ಚುನಾವಣಾ ಆಯೋಗಕ್ಕೆ ನಾವು ಅವಕಾಶ ನೀಡುವುದಿಲ್ಲ. ಬಡವರ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ’ ಎಂದು ಹೇಳಿದ್ದಾರೆ.

ದೇಶದಾದ್ಯಂತ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಮತ ಕಳ್ಳತನ ನಡೆದಿದೆ. ನಮ್ಮದು ಸಂವಿಧಾನ ಉಳಿಸುವ ಹೋರಾಟವಾಗಿದ್ದರೆ, ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂವಿಧಾನವನ್ನು ನಾಶಪಡಿಸಲು ಪ್ರಯತ್ನಿಸುತ್ತಿದೆ” ಎಂದು ರಾಹುಲ್ ಗಾಂಧಿ ದೂರಿದ್ದಾರೆ.

‘ವೋಟ್‌ ಚೋರಿ’ (ಮತಗಳ್ಳತನ) ಬಗ್ಗೆ ನಾವು ಧ್ವನಿ ಎತ್ತಿದ ಬೆನ್ನಲ್ಲೇ ಅಫಿಡವಿಟ್ ಸಲ್ಲಿಸಲು ಚುನಾವಣಾ ಆಯೋಗ ನನ್ನನ್ನು ಕೇಳಿದೆ. ಆದರೆ, ಅಫಿಡವಿಟ್ ಸಲ್ಲಿಸುವ ಕುರಿತು ಬಿಜೆಪಿ ನಾಯಕರನ್ನು ಆಯೋಗ ಪ್ರಶ್ನಿಸುವುದಿಲ್ಲ ಎಂದು ಕಿಡಿಕಾರಿದ್ದಾರೆ.

ವೋಟರ್ ಅಧಿಕಾರ್ ಯಾತ್ರಾ 16 ದಿನಗಳಲ್ಲಿ 1,300 ಕಿಲೋಮೀಟರ್ ಕ್ರಮಿಸಲಿದ್ದು, ಸೆಪ್ಟೆಂಬರ್ 1 ರಂದು ಪಾಟ್ನಾದಲ್ಲಿ ಬೃಹತ್ ರ‍್ಯಾಲಿಯೊಂದಿಗೆ ಮುಕ್ತಾಯಗೊಳ್ಳಲಿದೆ. ಅಲ್ಲಿನ ಕಾರ್ಯಕ್ರಮದಲ್ಲಿ ಇಂಡಿಯಾ ಒಕ್ಕೂಟದ ವಿವಿಧ ಪಕ್ಷಗಳ ನಾಯಕರು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಮ್ಮ ಯಾತ್ರೆಯ ವಿವರಗಳನ್ನು ಹಂಚಿಕೊಂಡಿರುವ ರಾಹುಲ್ ಗಾಂಧಿ, “16 ದಿನಗಳು, 20ಕ್ಕೂ ಹೆಚ್ಚು ಜಿಲ್ಲೆಗಳು, 1,300ಕ್ಕೂ ಹೆಚ್ಚು ಕಿ.ಮೀ ದೂರ ಮತದಾರರ ಹಕ್ಕುಗಳ ಯಾತ್ರೆಯೊಂದಿಗೆ ನಾವು ಜನರ ನಡುವೆ ಬರುತ್ತಿದ್ದೇವೆ” ಎಂದು ಹೇಳಿದ್ದಾರೆ.

“ಇದು ಅತ್ಯಂತ ಮೂಲಭೂತ ಪ್ರಜಾಪ್ರಭುತ್ವದ ಹಕ್ಕನ್ನು ರಕ್ಷಿಸುವ ಹೋರಾಟ.’ಒಬ್ಬ ವ್ಯಕ್ತಿ, ಒಂದು ಮತ. ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ” ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.

ಸಸಾರಾಮ್‌ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲಾಲೂ ಪ್ರಸಾದ್ ಯಾದವ್, ತೇಜಸ್ವಿ ಯಾದವ್, ದೀಂಪಕರ್ ಭಟ್ಟಾಚಾರ್ಯ ಸೇರಿದಂತೆ ಪ್ರಮುಖರು ಇದ್ದರು.

Bihar SIR| ಉತ್ತರದ ಬದಲು ಸಮಜಾಯಿಷಿ ನೀಡುತ್ತಿರುವ ಚು.ಆಯೋಗ: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...