Homeಮುಖಪುಟಭಾರತ್‌ ಜೋಡೋ ನ್ಯಾಯ ಯಾತ್ರೆ: ಪ.ಬಂಗಾಳದಲ್ಲಿ ಕಾರ್ಮಿಕರ ಜೊತೆ ರಾಹುಲ್‌ ಸಂವಾದ

ಭಾರತ್‌ ಜೋಡೋ ನ್ಯಾಯ ಯಾತ್ರೆ: ಪ.ಬಂಗಾಳದಲ್ಲಿ ಕಾರ್ಮಿಕರ ಜೊತೆ ರಾಹುಲ್‌ ಸಂವಾದ

- Advertisement -
- Advertisement -

ಪ.ಬಂಗಾಳದಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಮುಂದುವರಿದಿದ್ದು, ರಾಹುಲ್ ಗಾಂಧಿ ಬೀಡಿ ಕಾರ್ಮಿಕರನ್ನು ಭೇಟಿ ಮಾಡಿ, ಕಾರ್ಮಿಕರ ಜೊತೆ ಸಮಾಲೋಚನೆಯನ್ನು ನಡೆಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ಪಶ್ಚಿಮ ಬಂಗಾಳದ ಮಾಲ್ಡಾದಿಂದ ಭಾರತ್‌ ಜೋಡೋ ನ್ಯಾಯ ಯಾತ್ರೆಯನ್ನು ಪುನರಾರಂಭಿಸಿದ್ದಾರೆ,  ಮುರ್ಷಿದಾಬಾದ್‌ನ ರಘುನಾಥಗಂಜ್‌ನಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ನಿನ್ನೆ ಯಾತ್ರೆಯು ಮಾಲ್ಡಾ ಜಿಲ್ಲೆಯ ಹರಿಶ್ಚಂದ್ರಪುರದಿಂದ ಪಶ್ಚಿಮ ಬಂಗಾಳಕ್ಕೆ ಮರುಪ್ರವೇಶಿಸುತ್ತಿದ್ದಂತೆ, ಸಿಪಿಐ(ಎಂ) ಕಾರ್ಯಕರ್ತರು ಮತ್ತು ಬೆಂಬಲಿಗರು ಕಾಂಗ್ರೆಸ್‌ ಯಾತ್ರೆಯಲ್ಲಿ ಸೇರಿಕೊಂಡಿದ್ದಾರೆ. ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಮಾಲ್ಡಾ ಜಿಲ್ಲೆಯಲ್ಲಿ ಯಾತ್ರೆಯ ಮಾರ್ಗದುದ್ದಕ್ಕೂ ಸಿಪಿಐ(ಎಂ) ಬೆಂಬಲಿಗರು ಪಕ್ಷದ ಕೆಂಪು ಬಾವುಟಗಳನ್ನು ಹಿಡಿದು ರಾಹುಲ್‌ ಗಾಂಧಿ ಪರ ಘೋಷಣೆಗಳನ್ನು ಕೂಗುತ್ತಿದ್ದರು.

ಪಶ್ಚಿಮ ಬಂಗಾಳದಲ್ಲಿ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಿದ ರೀತಿಯನ್ನು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಇಂದು “ಅಭೂತಪೂರ್ವ” ಎಂದು ಬಣ್ಣಿಸಿದ್ದಾರೆ. ಪ.ಬಂಗಾಳದಲ್ಲಿ ರಾಹುಲ್ ಗಾಂಧಿ ಬೀಡಿ ಕಾರ್ಮಿಕರನ್ನು ಭೇಟಿ ಮಾಡಿ, ಈ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಮಾತುಕತೆ ನಡೆಸಿದ್ದಾರೆ.

ರಾಹುಲ್‌ ಗಾಂಧಿ ಕಾರಿಗೆ ಕಲ್ಲು ತೂರಾಟ ನಡೆಸಲಾಗಿದೆಯಾ?

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ವಾಹನದ ಮುಂದೆ ಬರುತ್ತಿದ್ದಂತೆ ಹಠಾತ್ ಬ್ರೇಕ್ ಹಾಕಿದಾಗ ರಾಹುಲ್ ಗಾಂಧಿ ಅವರ ಕಾರಿನ ಹಿಂದಿನ ಕಿಟಕಿ ಗಾಜು ಪುಡಿಪುಡಿಯಾಗಿದೆ ಎಂದು ಕಾಂಗ್ರೆಸ್ ಬುಧವಾರ ಹೇಳಿಕೊಂಡಿದೆ. ಕಾಂಗ್ರೆಸ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದು, ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ರಾಹುಲ್ ಜಿ ಅವರನ್ನು ಭೇಟಿಯಾಗಲು ಭಾರಿ ಜನರು ಬಂದಿದ್ದರು. ಈ ಗುಂಪಿನಲ್ಲಿ, ಮಹಿಳೆಯೊಬ್ಬರು ಇದ್ದಕ್ಕಿದ್ದಂತೆ ರಾಹುಲ್ ಜಿ ಅವರನ್ನು ಭೇಟಿ ಮಾಡಲು ಅವರ ಕಾರಿನ ಮುಂದೆ ಬಂದರು, ಇದರಿಂದಾಗಿ ಇದ್ದಕ್ಕಿದ್ದಂತೆ ಬ್ರೇಕ್ ಹಾಕಲಾಯಿತು. ಆಗ ಭದ್ರತಾ ವೃತ್ತದಲ್ಲಿ ಬಳಸಿದ ಹಗ್ಗದಿಂದ ಕಾರಿನ ಗಾಜಿಗೆ ಹಾನಿಯಾಗಿದೆ. ಜನನಾಯಕ ರಾಹುಲ್ ಗಾಂಧಿ ಜನರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುತ್ತಿದ್ದಾರೆ. ಸಾರ್ವಜನಿಕರು ಅವರೊಂದಿಗಿದ್ದಾರೆ, ಸಾರ್ವಜನಿಕರು ಅವರನ್ನು ಸುರಕ್ಷಿತವಾಗಿರಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ಇದಕ್ಕೂ ಮೊದಲು ಪ.ಬಂಗಾಳ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಅವರು ಮಾಲ್ಡಾ ಜಿಲ್ಲೆಯಲ್ಲಿ ‘ಭಾರತ್ ಜೋಡೋ ನ್ಯಾಯ ಯಾತ್ರೆ’ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಗಳು ಕಾರಿಗೆ “ಕಲ್ಲು ತೂರಾಟ” ಮಾಡದ್ದಾರೆ ಎಂದು ಹೇಳಿದ್ದರು.

ಈ ಕುರಿತು ಕಾಂಗ್ರೆಸ್‌ನ ಸುಪ್ರಿಯಾ ಶ್ರೀನಾಟೆ ಅವರು ಸ್ಪಷ್ಟನೆಯನ್ನು ನೀಡಿದ್ದು, ಸುಳ್ಳು ಸುದ್ದಿಗಳಿಗೆ ಸ್ಪಷ್ಟೀಕರಣದ ಅಗತ್ಯವಿದೆ. ರಾಹುಲ್ ಜೀ ಅವರನ್ನು ಭೇಟಿಯಾಗಲು ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರು. ಮಹಿಳೆಯೊಬ್ಬರು ಇದ್ದಕ್ಕಿದ್ದಂತೆ ಅವರನ್ನು ಭೇಟಿ ಮಾಡಲು ಮುಂದಾದಾಗ, ಕಾರು ನಿಲ್ಲಿಸಬೇಕಾಯಿತು. ಸೆಕ್ಯುರಿಟಿ ಸರ್ಕಲ್ ನಲ್ಲಿ ಬಳಸಿದ ಹಗ್ಗದಿಂದ ಕಾರಿನ ಗಾಜು ಮುರಿದಿದೆ ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ.

ಜನವರಿ 14ರಂದು ಮಣಿಪುರದಲ್ಲಿ ‘ಭಾರತ್ ಜೋಡೋ ನ್ಯಾಯ ಯಾತ್ರೆ ಆರಂಭವಾಗಿದ್ದು, 67 ದಿನಗಳಲ್ಲಿ 6,713 ಕಿಲೋಮೀಟರ್ ಕ್ರಮಿಸಲಿದೆ. 15 ರಾಜ್ಯಗಳ 110 ಜಿಲ್ಲೆಗಳ ಮೂಲಕ ಯಾತ್ರೆ ಸಾಗಿ ಮಾರ್ಚ್ 20 ರಂದು ಮುಂಬೈನಲ್ಲಿ ಯಾತ್ರೆ ಸಮಾಪ್ತಿಗೊಳ್ಳಲಿದೆ.

ಇದನ್ನು ಓದಿ: ವರರಿಲ್ಲದೆ ನೂರಾರು ವಧುಗಳ ಸಾಮೂಹಿಕ ವಿವಾಹ: ಉತ್ತರಪ್ರದೇಶದ ಮ್ಯಾರೇಜ್‌ ಸ್ಕೀಂ ಹಗರಣ ಬಯಲು

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

0
ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಪ್ರಯೋಗಿಸುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನು ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...