HomeUncategorizedಕೃಷಿ ಮಸೂದೆಗಳ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಟ್ರ್ಯಾಕ್ಟರ್‌ ರ್‍ಯಾಲಿ

ಕೃಷಿ ಮಸೂದೆಗಳ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಟ್ರ್ಯಾಕ್ಟರ್‌ ರ್‍ಯಾಲಿ

ವಿವಾದಾತ್ಮಕ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಅಕ್ಟೋಬರ್ 4 ರಿಂದ 6 ರವರೆಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪಂಜಾಬ್ ಮತ್ತು ಹರಿಯಾಣದಲ್ಲಿ ಟ್ರ್ಯಾಕ್ಟರ್ ರ್‍ಯಾಲಿಗಳನ್ನು ನಡೆಸಲಿದ್ದಾರೆ.

- Advertisement -
- Advertisement -

ವಿದಾದಿತ ಕೃಷಿ ಸುಗ್ರೀವಾಜ್ಞೆಗಳನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಲ್ಲಿ ತೀವ್ರ ವಿರೋಧಕ್ಕೆ ಕಾರಣವಾಗಿರುವ ಈ ಕಾಯ್ದೆಗಳ ವಿರುದ್ಧ ರೈಲ್ ರೋಕೋ, ಪಂಜಾಬ್‌ನಲ್ಲಿ ಬಂದ್‌ಗಳು ನಡೆದವು.  ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದ, ಮಾಜಿ ಸಚಿವೆ ಹರ್ಸಿಮ್ರತ್ ಕೌರ್‌ ಬಾದಲ್ ನಿನ್ನೆ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸಿ ಜೈಲು ಸೇರಿ ಬಿಡುಗಡೆಯಾಗಿದ್ದಾರೆ. ಇದೀಗ ಕೃಷಿ ಮಸೂದೆಗಳ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಟ್ರ್ಯಾಕ್ಟರ್ ರ್‍ಯಾಲಿ ನಡೆಯಲಿದೆ.

ವಿವಾದಾತ್ಮಕ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಅಕ್ಟೋಬರ್ 4 ರಿಂದ 6 ರವರೆಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪಂಜಾಬ್ ಮತ್ತು ಹರಿಯಾಣದಲ್ಲಿ ಟ್ರ್ಯಾಕ್ಟರ್ ರ್‍ಯಾಲಿಗಳನ್ನು ನಡೆಸಲಿದ್ದಾರೆ. ಇದಕ್ಕೂ ಮೊದಲು ಅಕ್ಟೋಬರ್ 3 ರಿಂದ 5ರವರೆಗೆ ರ್‍ಯಾಲಿ ನಿರ್ಧರಿಸಲಾಗಿತ್ತು.

ಈ ಕುರಿತು ಟ್ವೀಟ್ ಮಾಡಿರುವ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಮಾಧ್ಯಮ ಸಲಹೆಗಾರ ರವೀನ್ ತುಕ್ರಲ್, ರಾಹುಲ್ ಗಾಂಧಿ ಟ್ರ್ಯಾಕ್ಟರ್ ರ್‍ಯಾಲಿ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿದ್ದು, ಅಕ್ಟೋಬರ್ 4, 5, 6 ಕ್ಕೆ ಮರು ನಿಗದಿಪಡಿಸಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಕೃಷಿ ಕಾನೂನುಗಳು ನಮ್ಮ ರೈತರನ್ನು ಗುಲಾಮರನ್ನಾಗಿಸುತ್ತವೆ: ರಾಹುಲ್ ಗಾಂಧಿ

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸುನೀಲ್ ಜಖರ್, ಪಕ್ಷದ ಪಂಜಾಬ್ ಉಸ್ತುವಾರಿ ಹರೀಶ್ ರಾವತ್ ಮತ್ತು ಎಲ್ಲಾ ರಾಜ್ಯ ಸಚಿವರು ಮತ್ತು ಪಕ್ಷದ ಶಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ಟ್ರ್ಯಾಕ್ಟರ್ ರ್‍ಯಾಲಿಗಳಿಗೆ ರೈತರ ಸಂಘಟನೆಗಳು ಬೆಂಬಲ ನೀಡಲಿದ್ದು, ಮೂರು ದಿನಗಳಲ್ಲಿ 50 ಕಿ.ಮೀ ಗಿಂತಲೂ ಹೆಚ್ಚು ದೂರ ಕ್ರಮಿಸಲಿದೆ. ರ್‍ಯಾಲಿಗಳು ಪ್ರತಿದಿನ ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದ್ದು, ಕೊವೀಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತದೆ ಎಂದು ಪಂಜಾಬ್ ಕಾಂಗ್ರೆಸ್ ವಕ್ತಾರರು ತಿಳಿಸಿದ್ದಾರೆ.

ಕೇಂದ್ರದ ಕೃಷಿ ಮಸೂದೆಗಳು ಕನಿಷ್ಟ ಬೆಂಬಲ ಬೆಲೆ ವ್ಯವಸ್ಥೆಯನ್ನು ಕಿತ್ತುಹಾಕಲು ದಾರಿ ಮಾಡಿಕೊಡುತ್ತವೆ. ಮತ್ತು ಕಾರ್ಪೋರೇಟ್ ಕಂಪನಿಗಳಿಗೆ ಲಾಭದಾಯಕವಾಗಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಮೋದಿ ಸರ್ಕಾರದ ತಪ್ಪಾದ ಜಿಎಸ್‌ಟಿಯು ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು (ಎಂಎಸ್ಎಂಇ) ನಾಶಪಡಿಸಿತು. ಈಗ ಹೊಸ ಕೃಷಿ ಕಾನೂನುಗಳು ನಮ್ಮ ರೈತರನ್ನು ಗುಲಾಮರನ್ನಾಗಿ ಮಾಡುತ್ತವೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.

ಕಳೆದ ವಾರ ದೇಶಾದ್ಯಂತ ರೈತರು, ರೈತ ಸಂಘಟನೆಗಳು, ವಿರೋಧ ಪಕ್ಷಗಳು, ಕಾರ್ಮಿಕ ಸಂಘಟನೆಗಳು ಈ ಕೃಷಿ ಮಸೂದೆಗಳ ವಿರುದ್ಧ ಭಾರತ್ ಬಂದ್ ನಡೆಸಿ ಮಸೂದೆಗಳನ್ನು ವಾಪಸ್ ಪಡೆಯಲು ಒತ್ತಾಯಿಸಿದ್ದವು.


ಇದನ್ನೂ ಓದಿ: ಹತ್ರಾಸ್: ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ 200 ಕಾರ್ಯಕರ್ತರ ವಿರುದ್ಧ FIR

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ವಿಜಯಪುರ: ಗೋ ಸಾಗಾಟಗಾರನ ಮೇಲೆ ಬಜರಂಗದಳದಿಂದ ಥಳಿತ

0
ರಾಜ್ಯದಲ್ಲಿ ಮತ್ತೆ ಗೂಂಡಾಗಿರಿ ವರದಿಯಾಗಿದ್ದು, ದನ-ಕರುಗಳನ್ನು ಸಾಗಾಟ ಮಾಡುವಾಗ ವಾಹನ ತಡೆದು ಯುವಕನಿಗೆ ಬಜರಂಗದಳ ಕಾರ್ಯಕರ್ತರು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲ್ಲೂಕಿನ ಸಾರವಾಡ ಬ್ರಿಡ್ಜ್ ಬಳಿ ನಡೆದಿದೆ. ಬಂದೇನವಾಝ್‌...