Homeಮುಖಪುಟಜಾರ್ಖಂಡ್‌ ಸಿಎಂಗೆ ರಾಹುಲ್ ಗಾಂಧಿ ಪತ್ರ, ಉದ್ಯೋಗಾಕಾಂಕ್ಷಿಗಳ ಬೆಂಬಲಕ್ಕೆ ಆಗ್ರಹ

ಜಾರ್ಖಂಡ್‌ ಸಿಎಂಗೆ ರಾಹುಲ್ ಗಾಂಧಿ ಪತ್ರ, ಉದ್ಯೋಗಾಕಾಂಕ್ಷಿಗಳ ಬೆಂಬಲಕ್ಕೆ ಆಗ್ರಹ

- Advertisement -
- Advertisement -

ಜಾರ್ಖಂಡ್‌ನಲ್ಲಿ ರಾಜ್ಯ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿವೆ ಎನ್ನಲಾದ ಅಕ್ರಮಗಳ ವಿರುದ್ಧ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಹೋರಾಟದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರಿಗೆ ಮಹತ್ವದ ಪತ್ರ ಬರೆದಿದ್ದಾರೆ. ಪ್ರತಿಭಟನಾನಿರತ ಅಭ್ಯರ್ಥಿಗಳನ್ನು ಖುದ್ದಾಗಿ ಭೇಟಿಯಾಗಿ, ಅವರ ಅ ಕುಂದುಕೊರತೆಗಳನ್ನು ಆಲಿಸುವಂತೆ ಅವರು ಸಿಎಂಗೆ ಮನವಿ ಮಾಡಿದ್ದಾರೆ.

ಆಗಸ್ಟ್ 14ರಂದು ಬರೆದಿದ್ದ ಈ ಪತ್ರವನ್ನು ಸೋಮವಾರ ಬಹಿರಂಗಪಡಿಸಿರುವ ರಾಹುಲ್ ಗಾಂಧಿ, ವಿದ್ಯಾರ್ಥಿಗಳ ಪ್ರತಿಭಟನೆ ಶಾಂತಿಯುತವಾಗಿದ್ದು, ಅವರ ಬೇಡಿಕೆಗಳು ಸಂಪೂರ್ಣ ನ್ಯಾಯಯುತವಾಗಿವೆ ಎಂದು ಪ್ರತಿಪಾದಿಸಿದ್ದಾರೆ.

ಪತ್ರದಲ್ಲಿ RSS ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ, “RSS ಮತ್ತು ಬಿಜೆಪಿ ದೇಶದ ಶೈಕ್ಷಣಿಕ ವ್ಯವಸ್ಥೆಯನ್ನು ಸಂಪೂರ್ಣವಾಗಿ ತಮ್ಮ ಹಿಡಿತಕ್ಕೆ ತೆಗೆದುಕೊಂಡಿವೆ. ಒಂದು ದಶಕದ ಹಿಂದೆ ಜ್ಞಾನಾರ್ಜನೆಯ ಕೇಂದ್ರವಾಗಿದ್ದ ಶಿಕ್ಷಣ ವ್ಯವಸ್ಥೆಯನ್ನು ಇಂದು ಯುವಕರನ್ನು ಶೋಷಿಸುವ ಮತ್ತು ದಬ್ಬಾಳಿಕೆ ನಡೆಸುವ ಸಾಧನವನ್ನಾಗಿ ಮಾಡಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳ ವಿರುದ್ಧ ಧ್ವನಿ ಎತ್ತುತ್ತಿರುವ ವಿದ್ಯಾರ್ಥಿಗಳ ಪರ ಕಾಂಗ್ರೆಸ್ ಸದಾ ನಿಲ್ಲಲಿದೆ” ಎಂದಿದ್ದಾರೆ.

ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದು ಸಂವಿಧಾನ ನೀಡಿರುವ ಮೂಲಭೂತ ಹಕ್ಕು ಹಾಗೂ ಪ್ರಜಾಪ್ರಭುತ್ವದ ಆಧಾರಸ್ತಂಭ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಸರ್ಕಾರ ಈಗಾಗಲೇ ವಿದ್ಯಾರ್ಥಿಗಳ ಜೊತೆ ಚರ್ಚಿಸಲು ಸಮಿತಿ ರಚಿಸಿರುವುದನ್ನು ಶ್ಲಾಘಿಸಿರುವ ಅವರು, ಕೆಲವು ಬೇಡಿಕೆಗಳಿಗೆ ಸಮ್ಮತಿ ಸಿಕ್ಕಿದ್ದರೂ ಹೋರಾಟ ಮುಂದುವರಿದಿದೆ. ಹೀಗಾಗಿ ಸಿಎಂ ಸೋರೆನ್ ತಾವೇ ನೇರವಾಗಿ ವಿದ್ಯಾರ್ಥಿಗಳನ್ನು ಭೇಟಿಯಾಗಬೇಕು.

ಹಲವು ಉದ್ಯೋಗಾಕಾಂಕ್ಷಿಗಳು ಪ್ರಾಣದ ಹಂಗು ತೊರೆದು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವುದು ಆತಂಕಕಾರಿ ಸಂಗತಿಯಾಗಿದ್ದು, ಸರ್ಕಾರ ತಕ್ಷಣವೇ ಸ್ಪಂದಿಸಬೇಕು. “ದೇಶದ ಯುವಕರೇ ಭಾರತದ ಭವಿಷ್ಯ. ಈ ಸಂಕಷ್ಟದ ಸಮಯದಲ್ಲಿ ನಾವು ಅವರ ಬೆಂಬಲಕ್ಕೆ ನಿಂತು, ಅವರ ಧ್ವನಿಗೆ ಕಿವಿಗೊಡಬೇಕಿದೆ” ಎಂದು ರಾಹುಲ್ ಸೋರೆನ್ ಅವರನ್ನು ಒತ್ತಾಯಿಸಿದ್ದಾರೆ.

ಜಾರ್ಖಂಡ್‌ನಲ್ಲಿ ಆಡಳಿತ ನಡೆಸುತ್ತಿರುವ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ನೇತೃತ್ವದ ಮೈತ್ರಿಕೂಟ ಸರ್ಕಾರದಲ್ಲಿ ಕಾಂಗ್ರೆಸ್ ಕೂಡ ಪ್ರಮುಖ ಪಾಲುದಾರ ಪಕ್ಷವಾಗಿದೆ ಎಂಬುದು ಗಮನಾರ್ಹ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ವಿಚಿತ್ರ ವರ್ತನೆ, ಗೆಜ್ಜೆ ಸದ್ದು: ದೆವ್ವದ ಕಾಟವೆಂದು ಹಾಸ್ಟೆಲ್ ತೊರೆದ 600 ಬುಡಕಟ್ಟು ವಿದ್ಯಾರ್ಥಿಗಳು

ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ದೂರದ ಮೆಲ್ಘಾಟ್ ಬುಡಕಟ್ಟು ಪ್ರದೇಶದಲ್ಲಿ ಮೂಢನಂಬಿಕೆ ಮತ್ತು ಮಾನಸಿಕ ಭಯದ ವಾತಾವರಣವು ಗಂಭೀರ ಶೈಕ್ಷಣಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಚಿಕಲ್ದಾರಾ ತಾಲ್ಲೂಕಿನ ಡೋಮಾ ಗ್ರಾಮದಲ್ಲಿರುವ ಸರ್ಕಾರಿ ಬುಡಕಟ್ಟು ವಸತಿ ಶಾಲೆಯ...

ಉತ್ತರ ಪ್ರದೇಶ| ಕನ್ವಾರಿ ಯಾತ್ರಿಕರ ಹಲ್ಲೆಯಿಂದ ಮುಸ್ಲಿಂ ಯುವಕ ಸಾವು; ಐವರ ಬಂಧನ

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಕನ್ವಾರಿ ಯಾತ್ರಿಕರ ಗುಂಪಿನಿಂದ ಹಲ್ಲೆಗೊಳಗಾದ ಮುಸ್ಲಿಂ ಯುವಕ ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಕನ್ವಾರಿಗಳನ್ನು ಬಂಧಿಸಲಾಗಿದೆ. ಬ್ರಿಜ್‌ಘಾಟ್ ಟೋಲ್ ಪ್ಲಾಜಾ ಬಳಿ ನಡೆದ ರಸ್ತೆ ಅಪಘಾತದ ನಂತರ ಮೊರಾದಾಬಾದ್...

“NTA ಮಾಡಿದ ತಪ್ಪಿಗೆ ವಿದ್ಯಾರ್ಥಿಗಳಿಗೆ ಶಿಕ್ಷೆ”: UGC-NET ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜಶಾಸ್ತ್ರ ಪತ್ರಿಕೆಗಳ ಮರುಪರೀಕ್ಷೆ ನಿರ್ಧಾರಕ್ಕೆ ದೇಶಾದ್ಯಂತ ಆಕ್ರೋಶ

ನವದೆಹಲಿ: ಕಳೆದ ಜೂನ್ ತಿಂಗಳಿನಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ್ದ ಯುಜಿಸಿ-ನೆಟ್ (UGC-NET) ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಸಾಲು ಸಾಲು ಗಂಭೀರ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ, ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜಶಾಸ್ತ್ರ...

ಬಿಹಾರದ ಅಶೋಕಧಾಮ ದೇಗುಲದಲ್ಲಿ ಕಾಲ್ತುಳಿತ: ಶ್ರಾವಣ ಸೋಮವಾರದ ಪೂಜೆ ವೇಳೆ 7 ಮಹಿಳೆಯರು ಸಾವು, 12 ಕ್ಕೂ ಹೆಚ್ಚು ಜನರಿಗೆ ಗಾಯ

ಪಾಟ್ನಾ/ಲಖಿಸರಾಯ್: ಶ್ರಾವಣ ಮಾಸದ ಪವಿತ್ರ ಸೋಮವಾರದಂದು ಧಾರ್ಮಿಕ ಕೇಂದ್ರವೊಂದರಲ್ಲಿ ಸಂಭವಿಸಿದ ಭೀಕರ ಅಪಘಾತ ಇಡೀ ರಾಜ್ಯವನ್ನೇ ದಿಗ್ಭ್ರಮೆಗೊಳಿಸಿದೆ. ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿರುವ ಐತಿಹಾಸಿಕ ಅಶೋಕಧಾಮ ದೇವಾಲಯದ ಆವರಣದ ಬಳಿ ಮುಂಜಾನೆ ನಡೆದ ಭೀಕರ...

ಎಲ್ಲಾ ಯೋಜನೆಗಳೂ ಗುಜರಾತ್‌ಗೇ ಏಕೆ?: ಬಿಜೆಪಿ ಕೇಂದ್ರ ನಾಯಕತ್ವ ವಿರುದ್ಧವೇ ಬಹಿರಂಗವಾಗಿ ತಿರುಗಿಬಿದ್ದ ಅಣ್ಣಾಮಲೈ!

BJP ನಾಯಕತ್ವದ ನಿರ್ಧಾರಗಳು ‘ದೆಹಲಿ ಕೇಂದ್ರಿತ’ ಹಾಗೂ ದೇಶದ ಅಭಿವೃದ್ಧಿ ಮಾದರಿಯು ‘ಗುಜರಾತ್‌ ಕೇಂದ್ರಿತ’ವಾಗುತ್ತಿದೆ ಎಂದು ತಮಿಳುನಾಡು ಬಿಜೆಪಿಯ ನಿಕಟಪೂರ್ವ ರಾಜ್ಯಾಧ್ಯಕ್ಷ ಹಾಗೂ ‘ವಿ ದಿ ಲೀಡರ್ಸ್’ ಸಂಘಟನೆಯ ಸಂಸ್ಥಾಪಕ ಕೆ. ಅಣ್ಣಾಮಲೈ...

ಜಾರ್ಖಂಡ್ ವಿದ್ಯಾರ್ಥಿಗಳ ಹೋರಾಟ; ಹೇಮಂತ್ ಸೊರೇನ್ – ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿದ ಪ್ರತಿಭಟನಾಕಾರರು

ಜಾರ್ಖಂಡ್ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಆಗಸ್ಟ್ 16 ರಂದು (ಭಾನುವಾರ) ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಹೇಮಂತ್ ಸೊರೇನ್, ರಾಹುಲ್ ಗಾಂಧಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ...

BJP ರಾಷ್ಟ್ರೀಯ ವಕ್ತಾರ ಹುದ್ದೆಗೆ ಮತ್ತೆ ರಾಜೀನಾಮೆ! ಕಾರಣ ಬಿಚ್ಚಿಟ್ಟ ಶೆಹಝಾದ್ ಪೂನಾವಾಲಾ

BJP ರಾಷ್ಟ್ರೀಯ ವಕ್ತಾರ ಶೆಹಝಾದ್ ಪೂನಾವಾಲಾ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ತಮ್ಮ ಹುದ್ದೆಗೆ ಮತ್ತೊಮ್ಮೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ತಕ್ಷಣವೇ ಅಂಗೀಕರಿಸುವಂತೆ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...

NALSAR ಘಟಿಕೋತ್ಸವ ವಿವಾದ: ಆಹ್ವಾನ ತಿರಸ್ಕರಿಸಿದ ಸಿಜೆಐ ಸೂರ್ಯಕಾಂತ್!

ಹೈದರಾಬಾದ್‌ನ ಪ್ರತಿಷ್ಠಿತ NALSAR ಕಾನೂನು ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸುವ ಕುರಿತು ಎದ್ದಿದ್ದ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ತಾವು ಈ ಆಹ್ವಾನವನ್ನು ಸ್ವೀಕರಿಸಿಲ್ಲ, ಹೀಗಾಗಿ ಘಟಿಕೋತ್ಸವದಲ್ಲಿ ಭಾಗವಹಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ...

ಹೈದರಾಬಾದ್ : ಡಿಜಿಟಲೀಕರಣಗೊಂಡ ಶೇ. 21ರಷ್ಟು ಮತದಾರರಿಗೆ SIR ನೋಟಿಸ್

ಹೈದರಾಬಾದ್ ಜಿಲ್ಲಾ ಚುನಾವಣಾ ಪ್ರಾಧಿಕಾರವು (ಡಿಇಎ) ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) 2026ರ ಅಡಿಯಲ್ಲಿ ಸೋಮವಾರ (ಆ. 17) ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ ನಂತರ, 5.82 ಲಕ್ಷ ಮತದಾರರಿಗೆ ನೋಟಿಸ್ ಜಾರಿ...

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...