Homeಮುಖಪುಟರಾಹುಲ್ ಗಾಂಧಿ 'ಮ್ಯಾಚ್ ಫಿಕ್ಸಿಂಗ್' ಹೇಳಿಕೆ; ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ಬಿಜೆಪಿ

ರಾಹುಲ್ ಗಾಂಧಿ ‘ಮ್ಯಾಚ್ ಫಿಕ್ಸಿಂಗ್’ ಹೇಳಿಕೆ; ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ಬಿಜೆಪಿ

- Advertisement -
- Advertisement -

ನವ ದೆಹಲಿಯಲ್ಲಿ ನಿನ್ನೆ ನಡೆದ ಪ್ರಜಾಪ್ರಭುತ್ವ ಉಳಿಸಿ ರ್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನೀಡಿದ “ಮ್ಯಾಚ್ ಫಿಕ್ಸಿಂಗ್” ಹೇಳಿಕೆ ಮತ್ತು ಇತರ ಟೀಕೆಗಳಿಗಾಗಿ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಬಿಜೆಪಿ ಸೋಮವಾರ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಅವರನ್ನೊಳಗೊಂಡ ಬಿಜೆಪಿ ನಿಯೋಗವು ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಸಮಿತಿಗೆ ದೂರು ಸಲ್ಲಿಸಿದೆ.

ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಪುರಿ, “ಸಾರ್ವಜನಿಕ ಸಭೆಯಲ್ಲಿ ಮಾಜಿ ಕಾಂಗ್ರೆಸ್ ಮುಖ್ಯಸ್ಥರ ಕಾಮೆಂಟ್‌ಗಳು ಅತ್ಯಂತ ಆಕ್ಷೇಪಾರ್ಹ. ಏಕೆಂದರೆ, ಅವು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುವುದಿಲ್ಲ; ಆದರೆ ಗಂಭೀರ ಪರಿಣಾಮಗಳನ್ನು ಬೀರಬಹುದು” ಎಂದು ಹೇಳಿದ್ದಾರೆ.

ನಿನ್ನೆ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಇದು (ಲೋಕಸಭಾ ಚುನಾವಣೆ) ನಿಶ್ಚಿತ ಪಂದ್ಯವಾಗಿದೆ; ಕೇಂದ್ರ ಸರ್ಕಾರವು ಚುನಾವಣಾ ಆಯೋಗದಲ್ಲಿ ತನ್ನ ಜನರನ್ನು ನಿಯೋಜಿಸಿದೆ ಎಂದು ಹೇಳಿದರು. ಅವರು ಇವಿಎಂಗಳ ವಿಶ್ವಾಸಾರ್ಹತೆಯ ಬಗ್ಗೆಯೂ ಪ್ರಶ್ನೆಗಳನ್ನು ಎತ್ತಿದರು.

“ರಾಹುಲ್ ಗಾಂಧಿ, ಇತರ ಕಾಂಗ್ರೆಸ್ ನಾಯಕರು ಮತ್ತು ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಾವು ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದೇವೆ” ಎಂದು ಪುರಿ ಹೇಳಿದರು.

‘ರಾಹುಲ್ ಗಾಂಧಿ ಪದೇಪದೆ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ’ ಎಂದು ಅರುಣ್ ಕುಮಾರ್  ಆರೋಪಿಸಿದರು. ‘ಕಾಂಗ್ರೆಸ್ ನಾಯಕರು ಇಂತಹ ಟೀಕೆಗಳನ್ನು ಮಾಡುವುದನ್ನು ನಿಲ್ಲಿಸುವುದಿಲ್ಲವಾದ್ದರಿಂದ ಲೋಕಸಭಾ ಚುನಾವಣೆಯ ಸಮಯದಲ್ಲಿ ಮಾತನಾಡದಂತೆ ಚುನಾವಣಾ ಆಯೋಗ ಅವರನ್ನು ಖಂಡಿಸುವ ಬಗ್ಗೆ ಯೋಚಿಸಬೇಕು’ ಎಂದು ಹೇಳಿದರು.

ಇದನ್ನೂ ಓದಿ; ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳ ಪ್ರಾರ್ಥನೆಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ; ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...