Homeಮುಖಪುಟಭಾರತ್ ಜೋಡೋ ಯಾತ್ರೆಗೆ ವಿರಾಮ: ಗುಜರಾತ್ ಚುನಾವಣಾ ಪ್ರಚಾರಕ್ಕೆ ರಾಹುಲ್ ಗಾಂಧಿ

ಭಾರತ್ ಜೋಡೋ ಯಾತ್ರೆಗೆ ವಿರಾಮ: ಗುಜರಾತ್ ಚುನಾವಣಾ ಪ್ರಚಾರಕ್ಕೆ ರಾಹುಲ್ ಗಾಂಧಿ

- Advertisement -
- Advertisement -

ಭಾರತ್ ಜೋಡೋ ಯಾತ್ರೆ ಮುನ್ನಡೆಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ವಿರಾಮ ದಿನವಾದ ನವೆಂಬರ್ 22 ರಂದು ಗುಜರಾತ್ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.

ನವೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ನಡೆಯುವ ಗುಜರಾತ್ ಚುನಾವಣೆಗೆ ಈಗಾಗಲೇ ಭರ್ಜರಿ ಪ್ರಚಾರ ಆರಂಭವಾಗಿದೆ. ನವೆಂಬರ್ 22 ರಂದು ರಾಹುಲ್ ಗಾಂಧಿ ಸಹ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.

ಗುಜರಾತ್‌ನ 182 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವು ಈಗಾಗಲೇ ಹಲವು ಹಂತಗಳಲ್ಲಿ 142 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನೂ 40 ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆಗೆ ಕಸರತ್ತು ನಡೆಸಿದೆ.

1995ರವರೆಗೆ ಗುಜರಾತ್ ರಾಜ್ಯವನ್ನು ಕಾಂಗ್ರೆಸ್, ಸಂಸ್ಥಾ ಕಾಂಗ್ರೆಸ್ ಮತ್ತು ಜನತಾದಳ ಪಕ್ಷಗಳು ಆಳಿದ್ದರೆ 1995ರಿಂದೀಚೆಗೆ ನಡೆದ 6 ಚುನಾವಣೆಗಳಲ್ಲಿ ಬಿಜೆಪಿ ಸತತವಾಗಿ ಗೆದ್ದು ಅಧಿಕಾರದಲ್ಲಿದೆ. ಇತ್ತೀಚಿನ ವರ್ಷಗಳಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆಯೆ ಅಧಿಕಾರಕ್ಕಾಗಿ ಪೈಪೋಟಿ ನಡೆಯುತ್ತಿತ್ತು. ಆದರೆ ಮುಂದಿನ ತಿಂಗಳು ನಡೆಯುವ ಚುನಾವಣೆಯಲ್ಲಿ ಆಪ್ ಕೂಡ ಬಿರುಸಿನ ಪೈಪೋಟಿ ನೀಡಲು ಮುಂದಾಗಿದೆ. ಅದಕ್ಕೆ ಇಂಬು ಕೊಡುವಂತೆ ಕೆಲ ಸಮೀಕ್ಷೆಗಳು ಈ ಬಾರಿಯೂ ಬಿಜೆಪಿ ಬಹುಮತ ಸಾಧಿಸಲಿದ್ದು, ಆಪ್ ಎರಡನೇ ಸ್ಥಾನ ಪಡೆಯುತ್ತದೆ ಮತ್ತು ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ತಳ್ಳಲ್ಪಡುತ್ತದೆ ಎಂದು ಭವಿಷ್ಯ ನುಡಿದಿವೆ. ಹಾಗಾಗಿ ಗುಜರಾತ್ ಚುನಾವಣೆ ಬಗೆಗಿನ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

182 ವಿಧಾನಸಭಾ ಕ್ಷೇತ್ರಗಳಿರುವ ಗುಜರಾತ್‌ನಲ್ಲಿ ಸರಳ ಬಹುಮತಕ್ಕೆ 93 ಸ್ಥಾನಗಳ ಅಗತ್ಯವಿದೆ. 2017ರ ಕೊನೆಯ ಚುನಾವಣೆಯಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಕಾಳಗ ನಡೆದು ಕೊನೆಗೆ 99 ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಅಧಿಕಾರ ಉಳಿಸಿಕೊಂಡಿತು. ಅದು 2012ರ ಚುನಾವಣೆಗೆ ಹೋಲಿಸಿಕೊಂಡರೆ 16 ಸೀಟುಗಳನ್ನು ಕಳೆದುಕೊಂಡರೂ ಆಡಳಿತ ವಿರೋಧಿ ಅಲೆಯ ನಡುವೆಯೂ ಸತತ ಆರನೇ ಬಾರಿಗೆ ಅಧಿಕಾರ ದಕ್ಕಿಸಿಕೊಂಡಿದ್ದು ದಾಖಲೆಯೇ ಸರಿ. ಕಾಂಗ್ರೆಸ್ ಅಧಿಕಾರದ ಹತ್ತಿರಕ್ಕೆ ಬಂದು (77 ಸ್ಥಾನಗಳು) ಎಡವಿತು. ಅದು 16 ಹೆಚ್ಚುವರಿ ಸೀಟುಗಳನ್ನು ಗೆದ್ದುಕೊಂಡರೂ ಸಹ ಸರಳ ಬಹುಮತ ತಲುಪಲು ಸಾಧ್ಯವಾಗಲಿಲ್ಲ.

ಸದ್ಯ ಮಹಾರಾಷ್ಟ್ರ ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ಸಾಗುತ್ತಿದ್ದು ಉತ್ತಮ ಜನಬೆಂಬಲ ಗಳಿಸುತ್ತಿದೆ. ಕಾಂಗ್ರೆಸ್ ಮಿತ್ರ ಪಕ್ಷಗಳಾದ ಶಿವಸೇನೆ ಮತ್ತು ಎನ್‌ಸಿಪಿಯ ಮುಖಂಡರು ಸಹ ಯಾತ್ರೆಯಲ್ಲಿ ಹೆಜ್ಜೆ ಹಾಕಿ ಬೆಂಬಲ ಸೂಚಿಸಿದ್ದಾರೆ. ಶಿವಸೇನೆಯ ಆದಿತ್ಯ ಠಾಕ್ರೆ ಮತ್ತು ಎನ್‌ಸಿಪಿಯ ಸುಪ್ರಿಯ ಸುಳೆ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ.

ಇದನ್ನೂ ಓದಿ: ಗುಜರಾತ್ ಚುನಾವಣೆ: ನಗರಗಳಲ್ಲಿ ಪ್ರಬಲವಾಗಿರುವ ಬಿಜೆಪಿ ಮತ ಕಬಳಿಸಲಿದೆಯೇ ಆಪ್?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...