HomeUncategorizedರಾಹುಲ್ ಗಾಂಧಿ ಪಿಕ್ನಿಕ್ ಹೇಳಿಕೆ; ಹಿರಿಯ ನಾಯಕನಿಂದ ಅಂತರ ಕಾಯ್ದುಕೊಂಡ ಆರ್‌ಜೆಡಿ!

ರಾಹುಲ್ ಗಾಂಧಿ ಪಿಕ್ನಿಕ್ ಹೇಳಿಕೆ; ಹಿರಿಯ ನಾಯಕನಿಂದ ಅಂತರ ಕಾಯ್ದುಕೊಂಡ ಆರ್‌ಜೆಡಿ!

ಚುನಾವಣೆ ನಡೆಯುತ್ತಿದ್ದಾಗ ರಾಹುಲ್ ಗಾಂಧಿ ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿಯವರೊಂದಿಗೆ ಶಿಮ್ಲಾದಲ್ಲಿ ಪಿಕ್ನಿಕ್ ಮಾಡುತ್ತಿದ್ದರು ಎಂದು ಪಕ್ಷದ ಹಿರಿಯ ನಾಯಕ ಶಿವಾನಂದ್ ತಿವಾರಿ ಆಕ್ರೋಶ ವ್ಯಕ್ತಪಡಿಸಿದ್ದರು.

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆ ನಡೆಯುತ್ತಿದ್ದಾಗ ರಾಹುಲ್ ಗಾಂಧಿ ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿಯವರೊಂದಿಗೆ ಶಿಮ್ಲಾದಲ್ಲಿ ಪಿಕ್ನಿಕ್ ಮಾಡುತ್ತಿದ್ದರು ಎಂಬ ಹೇಳಿಕೆ ತಮ್ಮ ಪಕ್ಷದ ಹಿರಿಯ ನಾಯಕನ ಹೇಳಿಕೆಗೆ ಆರ್‌ಜೆಡಿ ಪ್ರತಿಕ್ರಿಯಿಸಿದ್ದು, “ಶಿವಾನಂದ್ ತಿವಾರಿ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯವಾಗಿದ್ದು, ಅದು ಪಕ್ಷದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ” ಎಂದು ಆರ್‌ಜೆಡಿ ವಕ್ತಾರ ಚಿತ್ತರಂಜನ್ ಗಗನ್ ಹೇಳಿದ್ದಾರೆ.

“ಶಿವಾನಂದ್ ತಿವಾರಿ ಹಿರಿಯ ನಾಯಕ ಮತ್ತು ನಮಗೆ ರಕ್ಷಕರಾಗಿದ್ದಾರೆ. ಆದರೆ ಅವರು ವ್ಯಕ್ತಪಡಿಸಿದ ಅಭಿಪ್ರಾಯಗಳು ವೈಯಕ್ತಿಕವಾಗಿವೆ. ತೇಜಶ್ವಿ ಯಾದವ್ ಮತ್ತು ಆರ್‌ಜೆಡಿಯ ಇತರ ಹಿರಿಯ ನಾಯಕರು ಚುನಾವಣಾ ಫಲಿತಾಂಶವನ್ನು ವಿಶ್ಲೇಷಿಸುತ್ತಾರೆ” ಎಂದು ಗಗನ್ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ಮಹಾಘಟಬಂಧನ್‌ನಲ್ಲಿ ಬಿರುಕು: ಚುನಾವಣೆಯ ಸಮಯದಲ್ಲಿ ರಾಹುಲ್ ಪಿಕ್‌ನಿಕ್‌ನಲ್ಲಿದ್ದರು ಎಂದ RJD ನಾಯಕ!

ಆ‌ರ್‌‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್‌ ಅವರಿಗೆ ಆಪ್ತವಾಗಿರುವ ಶಿವಾನಂದ್ ತಿವಾರಿ, “ರಾಹುಲ್ ಗಾಂಧಿ ಬಿಹಾರಕ್ಕೆ ಭೇಟಿ ನೀಡಿ ಮೂರು ದಿನಗಳಲ್ಲಿ, ದಿನಕ್ಕೆ ಎರಡು ರ್‍ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ್ದರು. ಪ್ರಿಯಾಂಕಾ ಗಾಂಧಿ ಎಲ್ಲೂ ಕಾಣಿಸಲಿಲ್ಲ. ಚುನಾವಣಾ ಉತ್ತುಂಗದಲ್ಲಿದ್ದಾಗ, ಅವರು ಶಿಮ್ಲಾದಲ್ಲಿ ಪ್ರಿಯಾಂಕಾ ಗಾಂಧಿಯವರೊಂದಿಗೆ ಪಿಕ್ನಿಕ್ ಮಾಡುತ್ತಿದ್ದರು” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‌ ಪಕ್ಷದ ಕಳಪೆ ಸಾಧನೆಯ ಕಾರಣಕ್ಕೆ ಮಿತ್ರರಾಷ್ಟ್ರ ಆರ್‌ಜೆಡಿಯಿಂದ ತೀವ್ರ ಟೀಕೆಗೆ ಗುರಿಯಾಗಿದ್ದು, 70 ಸ್ಥಾನಗಳನ್ನು ನಡೆಸಿದರೂ 70 ರ್‍ಯಾಲಿಯನ್ನು ನಡೆಸಲಿಲ್ಲ. ಕಾಂಗ್ರೆಸ್ ಅರೆ ಮನಸ್ಸಿನಿಂದ ಹೋರಾಟ ನಡೆಸಿದೆ ಎಂದು ತಿವಾರಿ ಆರೋಪಿಸಿದ್ದರು.

ಶಿವಾನಂದ್ ತಿವಾರಿ ಟೀಕೆಗೆ ಕಾಂಗ್ರೆಸ್ ಕೂಡಾ ತೀವ್ರವಾಗಿ ಪ್ರತಿಕ್ರಿಯಿಸಿದ್ದು, “ಅವರು ಆರ್‌ಜೆಡಿಯ ಅಧಿಕೃತ ವಕ್ತಾರರಲ್ಲ. ಅವರು ಬಿಜೆಪಿ ಮತ್ತು ಜೆಡಿಯು ಜೊತೆ ಸಂಬಂಧ ಹೊಂದಿದ್ದಾರೆ ಹಾಗೂ ಅವರ ಭಾಷೆಯನ್ನು ಮಾತನಾಡುತ್ತಿದ್ದಾರೆ” ಎಂದು ಎಐಸಿಸಿ ಮಾಧ್ಯಮ ಸಮಿತಿ ಸದಸ್ಯ ಪ್ರೇಮ್ ಚಂದ್ರ ಮಿಶ್ರಾ ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದ ಸ್ಥಿತಿ ಕಾಶ್ಮೀರಕ್ಕಿಂತ ಕೆಟ್ಟಿದೆ; ಭಯೋತ್ಪಾದಕರ ಕೇಂದ್ರವಾಗಿದೆ: ಬಿಜೆಪಿ ರಾಜ್ಯಾಧ್ಯಕ್ಷ

“ಗಿರಿರಾಜ್ ಸಿಂಗ್ ಮತ್ತು ಶಹನಾವಾಜ್ ಹುಸೇನ್ ಅವರ ಭಾಷೆ ಮಾತನಾಡುವ ಆರ್‌ಜೆಡಿ ನಾಯಕ ಕಾಂಗ್ರೆಸ್‌ಗೆ ಸ್ವೀಕಾರಾರ್ಹವಲ್ಲ. ಸಮ್ಮಿಶ್ರ ಧರ್ಮ ಎಂಬುವುದು ಇದೆ ಮತ್ತು ಎಲ್ಲಾ ಪಕ್ಷಗಳು ಇದನ್ನು ಅನುಸರಿಸಬೇಕು” ಎಂದು ಅವರು ಟ್ವೀಟ್ ಮಾಡಿ‌ದ್ದರು.

ಕೊರೊನಾ ನಂತರ ದೇಶದಲ್ಲಿ ನಡೆದ ಮೊದಲ ಚುನಾವಣೆಯಾದ ಬಿಹಾರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಯು ನೇತೃತ್ವದ ಎನ್‌ಡಿಎ ಕೂಟ ಭಾರಿ ಕಷ್ಟ ಪಟ್ಟು ಜಯಗಳಿಸಿದೆ. ಮಹಾಘಟಬಂಧನ್‌ನಲ್ಲಿ ಆರ್‌ಜೆಡಿ ಉತ್ತಮ ಸಾಧನೆ ಮಾಡಿದ್ದು ರಾಜ್ಯದ ಅತೀ ದೊಡ್ಡ ಪಕ್ಷವಾಗಿ ಹೊಮ್ಮಿದೆ. ಕಾಂಗ್ರೆಸ್ ತಮಗೆ ನೀಡಿದ್ದ 70 ಕ್ಷೇತ್ರದಲ್ಲಿ ಕೇವಲ 19 ಸ್ಥಾನಗಳನ್ನು ಗೆದ್ದು ಕಳಪೆ ಸಾಧನೆ ಮಾಡಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಬಿಹಾರದಲ್ಲಿ EVM ಮತಯಂತ್ರಗಳನ್ನು ಕದಿಯುತ್ತಿದ್ದಾರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...