Homeಕರೋನಾ ತಲ್ಲಣಪ್ರಧಾನಿಗಳ ಕಣ್ಣೀರು ದೇಶದ ಜನರ ಕಣ್ಣೀರನ್ನು ಒರೆಸುವುದಿಲ್ಲ: ರಾಹುಲ್ ಗಾಂಧಿ

ಪ್ರಧಾನಿಗಳ ಕಣ್ಣೀರು ದೇಶದ ಜನರ ಕಣ್ಣೀರನ್ನು ಒರೆಸುವುದಿಲ್ಲ: ರಾಹುಲ್ ಗಾಂಧಿ

- Advertisement -
- Advertisement -

ದೇಶದಲ್ಲಿ ಕೊರೊನಾ ಎರಡನೇಯ ಅಲೆಯ ಸಂದರ್ಭದಲ್ಲಿ ಸಂಭವಿಸಿದ 90% ಸಾವುಗಳನ್ನು ಸರ್ಕಾರ ತಡೆಯಬಹುದಿತ್ತು. ಪ್ರಧಾನಿಯವರ ಕಣ್ಣೀರಿನಿಂದ ದೇಶದ ಜನರ ಕಣ್ಣೀರನ್ನು ಒರೆಸಲು ಸಾಧ್ಯವಿಲ್ಲ. ಅವರ ಕಣ್ಣೀರಿನಿಂದ ಸಾವುಗಳನ್ನು ತಡೆಗಟ್ಟಲಾಗಲಿಲ್ಲ. ಆದರೆ ಸಕಾಲಕ್ಕೆ ಆಕ್ಸಿಜನ್ ಸಿಕ್ಕಿದರೆ ಸಾವುಗಳನ್ನು ತಡೆಗಟ್ಟಬಹುದಿತ್ತು. ಪ್ರಧಾನಿಗಳು ಪಶ್ಚಿಮ ಬಂಗಾಳ ಚುನಾವಣಾ ಪ್ರಚಾರದ ಭರಾಟೆಯಲ್ಲಿ ಆಕ್ಸಿಜನ್ ಕೊರತೆಯ ವಿಷಯವನ್ನು ಗಂಭೀರವಾಗಿ ಪರಿಗಣಿಸಲೇ ಇಲ್ಲ. ಇದರ ಪರಿಣಾಮ ದೇಶದಲ್ಲಿ ಸಾವಿರಾರು ಜನರು ವೈದ್ಯಕೀಯ ಆಮ್ಮಜನಕದ ಕೊರತೆಯಿಂದ ಪರದಾಡುವಂತಾಯಿತು ಎಂದು ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ಬೆಳಿಗ್ಗೆ ದೆಹಲಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ “ಸರ್ಕಾರದ ಕೊರೊನಾ ಸಾಂಕ್ರಾಮಿಕದ ನಿರ್ವಹಣೆಯ ಕುರಿತು ಶ್ವೇತಪತ್ರವನ್ನು ಹೊರಡಿಸುತ್ತಿದ್ದೇನೆ. ಕೊರೋನಾ ಮೂರನೇ ಅಲೆಯು ಶೀಘ್ರದಲ್ಲಿಯೇ ಭಾರತದಲ್ಲಿ ಕಾಣಿಸಿಕೊಳ್ಳಲಿದೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೊರೊನಾ 3ನೇ ಅಲೆ ವಿರುದ್ಧ ಹೋರಾಡಲು ಸಿದ್ಧತೆಗಳನ್ನು ಮಾಡಿಕೊಳ್ಳಲು ಸಹಾಯವಾಗಲಿ ಎಂದು ಈ ಶ್ವೇತಪತ್ರ ಹೊರಡಿಸಿದ್ದೇನೆ ಎಂದರು.

ಕೆಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಯಿಂದ 4 ಲಕ್ಷ ಕೋಟಿ ರೂಪಾಯಿ ಹಣವನ್ನು ಸಂಗ್ರಹಿಸುತ್ತಿದೆ. ಆದರೆ ಸರ್ಕಾರದ ಬಳಿ ಕೊರೋನಾದಿಂದ ಮೃತಪಟ್ಟ ಕುಟುಂಬಗಳ ವ್ಯಕ್ತಿಗಳಿಗೆ ಪರಿಹಾರ ನೀಡಲು ಹಣವಿಲ್ಲ. ದೇಶದಲ್ಲಿ ಕೊರೊನಾ ಸಾಂಕ್ರಾಮಿಕದಿಂದ ದುಡಿಯುವ ಸದಸ್ಯರನ್ನು ಕಳೆದುಕೊಂಡು ಸಾವಿರಾರು ಕುಟುಂಬಗಳು ಬೀದಿಗೆ ಬಿದ್ದಿವೆ. ಅಂತಹ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ರಾಹುಲ್ ಗಾಂಧಿ ಕೆಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೋವಿಡ್ ಕಾರಣದಿಂದ ಲಕ್ಷಾಂತರ ಜನ ಕಿರು ಉದ್ಯಮಿಗಳು, ಚಿಲ್ಲರೆ ವ್ಯಾಪಾರಿಗಳು, ಕೂಲಿ ಕಾರ್ಮಿಕರು, ಹಣ್ಣು ತರಕಾರಿ ಮಾರುವವರ ಬದುಕು ಬೀದಿಗೆ ಬಿದ್ದಿದೆ. ಕೆಂದ್ರ ಸರ್ಕಾರ ಇವರೆಲ್ಲರಿಗೆ ನೇರವಾಗಿ ನಗದು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ನಾವು ಹೊರಡಿಸಿರುವ ಶ್ವೇತಪತ್ರ ಕೊರೋನಾ ಸಾಂಕ್ರಾಮಿಕದ 3ನೇ ಅಲೆಯನ್ನು ಎದುರಿಸಲು ಸರ್ಕಾರ ಮಾಡಿಕೊಳ್ಳಬೇಕಾದ ಸಿದ್ಧತೆಯ ನೀಲನಕ್ಷೆಯಾಗಿದೆ. ಇದರಲ್ಲಿ ಯಾವುದೇ ರಾಜಕೀಯ ಉದ್ಧೇಶವಿಲ್ಲ. ತಜ್ಞರೊಂದಿಗಿನ ಸಮಾಲೋಚನೆಯ ನಂತರ ಈ ಶ್ವೇತಪತ್ರವನ್ನು ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೊರೋನಾ ಸಾಂಕ್ರಾಮಿಕವನ್ನು ಎದುರಿಸಲು ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳಿಂದಲೇ ಇದು ಸಾಬೀತಾಗಿದೆ. ಎರಡನೇ ಅಲೆಯ ಸಂದರ್ಭದಲ್ಲಿ ಸಂಭವಿಸಿದ ಘಟನೆಗಳು ಮತ್ತೆ ಮರುಕಳಿಸಬಾರದೆಂಬ ಕಾರಣಕ್ಕೆ ಶ್ವೇತಪತ್ರ ಹೊರಡಿಸುತ್ತಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.


ಇದನ್ನೂ ಓದಿ : ಪಂಜಾಬ್ ಕಾಂಗ್ರೆಸ್‌ನಲ್ಲಿ ಬಗೆಹರಿಯದ ಭಿನ್ನಮತ – ಹೈಕಮಾಂಡ್ ಅಂಗಳಕ್ಕೆ ಸಮಸ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...