Homeಕರ್ನಾಟಕಗೌರಿ ಲಂಕೇಶ್ ಹೋರಾಟ ಸ್ಮರಿಸಿದ ರಾಹುಲ್ ಗಾಂಧಿ: ಐಕ್ಯತಾ ಯಾತ್ರೆಯಲ್ಲಿ ಹೆಜ್ಜೆಹಾಕಿದ ಕವಿತಾ, ಇಂದಿರಾ ಲಂಕೇಶ್

ಗೌರಿ ಲಂಕೇಶ್ ಹೋರಾಟ ಸ್ಮರಿಸಿದ ರಾಹುಲ್ ಗಾಂಧಿ: ಐಕ್ಯತಾ ಯಾತ್ರೆಯಲ್ಲಿ ಹೆಜ್ಜೆಹಾಕಿದ ಕವಿತಾ, ಇಂದಿರಾ ಲಂಕೇಶ್

- Advertisement -
- Advertisement -

ಭಾರತದ ನಿಜವಾದ ಆತ್ಮವನ್ನು ಪ್ರತಿನಿಧಿಸುವ ಗೌರಿ ಲಂಕೇಶ್ ಮತ್ತು ಅವರಂತಹ ಅಸಂಖ್ಯಾತ ಹೋರಾಟಗಾರರ ಪರವಾಗಿ ನಾನು ನಿಲ್ಲುತ್ತೇನೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಿಳಿಸಿದ್ದಾರೆ.

ಭಾರತ ಐಕ್ಯತಾ ಯಾತ್ರೆಯ ಕರ್ನಾಟಕ ಚರಣದ 6 ನೇ ದಿನ ಹುತಾತ್ಮ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ರವರ ತಾಯಿ ಇಂದಿರಾ ಲಂಕೇಶ್ ಮತ್ತು ಸಹೋದರಿ ಕವಿತಾ ಲಂಕೇಶ್‌ರವರೊಂದಿಗೆ ರಾಹುಲ್ ಗಾಂಧಿ ಹೆಜ್ಜೆ ಹಾಕಿದರು.

ತದನಂತರ ಟ್ವಿಟರ್‌ನಲ್ಲಿ ಭಾರತ ಐಕ್ಯತಾ ಯಾತ್ರೆಯ ಫೋಟೊ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, “ಗೌರಿ ಸತ್ಯದ ಪರ ನಿಂತರು. ಧೈರ್ಯದ ಪರ ನಿಂತರು ಮತ್ತು ಸ್ವಾತಂತ್ರ್ಯಕ್ಕಾಗಿ ನಿಂತರು. ಭಾರತದ ನಿಜವಾದ ಆತ್ಮವನ್ನು ಪ್ರತಿನಿಧಿಸುವ ಗೌರಿ ಲಂಕೇಶ್ ಮತ್ತು ಅವರಂತಹ ಅಸಂಖ್ಯಾತ ಇತರರ ಪರವಾಗಿ ನಾನು ನಿಲ್ಲುತ್ತೇನೆ. ಭಾರತ್ ಜೋಡೋ ಯಾತ್ರೆ ಅವರ ಧ್ವನಿಯಾಗಿದ್ದು, ಅದನ್ನು ಎಂದಿಗೂ ಮೌನಗೊಳಿಸಲು ಸಾಧ್ಯವಿಲ್ಲ” ಎಂದು ಬರೆದಿದ್ದಾರೆ.

ಪಾದಯಾತ್ರೆ ಬಳಿಕ ಈದಿನ.ಕಾಂ ಜೊತೆ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಕವಿತಾ ಲಂಕೇಶ್, “ನಮ್ಮ ತಾಯಿಯನ್ನು ಪ್ರೀತಿಯಿಂದ ಅಪ್ಪಿಕೊಂಡು ರಾಹುಲ್ ಕೈ ಹಿಡಿದು ಹೆಜ್ಜೆ ಹಾಕಿದರು. ದಾರಿಯುದ್ದಕ್ಕೂ ಗೌರಿ ಲಂಕೇಶ್‌ರವರ ಕುರಿತು ಮಾತನಾಡಿ, ವಿಚಾರಣೆಯ ಕುರಿತು ಮಾಹಿತಿ ಪಡೆದುಕೊಂಡರು. ಕೊನೆಗೆ ನಮ್ಮ ತಾಯಿಯನ್ನು ಕಾರಿನವರೆಗೂ ಕರೆದುಕೊಂಡು ಹೋಗಿ ಕಾರು ಹತ್ತುವವರೆಗೂ ಜೊತೆಗಿದ್ದರು. ಆಗ ನನಗೆ ಅವರ ತಾಯಿ ಸೋನಿಯಾ ಗಾಂಧಿಯವರನ್ನು ಕಳಿಸಿಕೊಟ್ಟಿದ್ದು ನೆನಪಿಗೆ ಬಂತು. ರಾಹುಲ್ ಒಬ್ಬ ಜನರೊಟ್ಟಿಗೆ ಬೆರೆಯುವ ಪ್ರಾಮಾಣಿಕ ವ್ಯಕ್ತಿ ಎಂಬ ಭಾವ ಮೂಡಿತು” ಎಂದಿದ್ದಾರೆ.

ಇದನ್ನೂ ಓದಿ; ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆ; ಆರೋಪಿಗಳನ್ನು ಗುರುತು ಹಚ್ಚಿದ ಪ್ರಮುಖ ಸಾಕ್ಷಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ವ್ಯಾಪಾರಿ ಇಂದ್ರಜಿತ್ ಲಂಕೇಶ್ ಎಲ್ಲಿ ಕಾಣ್ತಿಲ್ಲ!
    ಆಪ್ಪ ಈತನನ್ನು ತಲೆ ಮೇಲಿಟ್ಟು ಮೆರೆಸಿದ್ದರು.

LEAVE A REPLY

Please enter your comment!
Please enter your name here

- Advertisment -

Must Read

ದೇವಾಲಯ ಪ್ರವೇಶಿಸಿದ ದಲಿತ ಯುವಕನಿಗೆ ಡಿಎಂಕೆ ಮುಖಂಡನಿಂದ ಬೆದರಿಕೆ; ವಿಡಿಯೊ ವೈರಲ್‌

0
ಹಿಂದೂ ಮತ್ತು ಧಾರ್ಮಿಕ ದತ್ತಿ ಇಲಾಖೆ (ಎಚ್‌ಆರ್ ಮತ್ತು ಸಿಇ) ನಿರ್ವಹಿಸುತ್ತಿರುವ ದೇವಸ್ಥಾನಕ್ಕೆ ಪ್ರವೇಶಿಸಿದ್ದಕ್ಕಾಗಿ ದಲಿತ ಯುವಕನನ್ನು ಡಿಎಂಕೆ ಒಕ್ಕೂಟದ ಕಾರ್ಯದರ್ಶಿಯೊಬ್ಬರು ನಿಂದಿಸಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಪೊಲೀಸರ ಪ್ರಕಾರ, ತಮಿಳುನಾಡಿನ ತಿರುಮಲೈಗಿರಿ (ಸೇಲಂ ಜಿಲ್ಲೆ)ಯಲ್ಲಿರುವ...