ಕರ್ನಾಟಕದ ಪಠ್ಯ ಪರಿಷ್ಕರಣೆ ವಿವಾದ ಮತ್ತುಷ್ಟು ಜೋರಾಗಿದ್ದು, ಇದೀಗ ರಾಷ್ಟ್ರಮಟ್ಟಕ್ಕೆ ವ್ಯಾಪಿಸಿದೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪಠ್ಯ ಪರಿಷ್ಕರಣೆಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಕರ್ನಾಟಕದ ಬಹುತ್ವಕ್ಕೆ ಮಾರಕವಾದ ಪಠ್ಯವನ್ನ ಮಕ್ಕಳ ಮೇಲೆ ಹೇರಲು ಕಾಂಗ್ರೆಸ್ ಬಿಡುವುದಿಲ್ಲ ಎಂದಿದ್ದಾರೆ.
ಈ ಕುರಿತು ಕನ್ನಡದಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, “ಕರ್ನಾಟಕದ ಜನ ಸದಾ ಸಾಮಾಜಿಕ ನ್ಯಾಯ, ಮಹನೀಯರ ಏಕತೆ ಹಾಗೂ ಮಾನವತಾವಾದದ ತತ್ವಗಳನ್ನ ಪಾಲಿಸಿಕೊಂಡು ಬಂದಿದ್ದಾರೆ. ಡಾ.ಬಿ.ಆರ್ ಅಂಬೇಡ್ಕರ್, ಬುದ್ಧ-ಬಸವಣ್ಣ, ನಾರಾಯಣ ಗುರು, ಕುವೆಂಪು ಮುಂತಾದ ಅನೇಕ ಮಹನೀಯರ ಜೀವನಕ್ಕೆ ಹಾಗೂ ಕರ್ನಾಟಕದ ಅಸ್ಮಿತೆಗೆ ವಿರುದ್ದವಾದ ಸಂದೇಶಗಳನ್ನು ಪಠ್ಯ ಪುಸ್ತಕದ ಮೂಲಕ ಮಕ್ಕಳಿಗೆ ಕಲಿಸಲು ಬಿಜೆಪಿ ಹೊರಟಿದೆ” ಎಂದು ಕಿಡಿಕಾರಿದ್ದಾರೆ.
ಕರ್ನಾಟಕದ ಮಕ್ಕಳ ಭವಿಷ್ಯದ ನಿರ್ಧಾರವನ್ನು ಅರ್ಹತೆಯಿಲ್ಲದ ಕೈಗಳಿಗೆ ವಹಿಸಲಾಗಿದೆ. ಸಾಮಾಜಿಕ ನ್ಯಾಯ, ಪ್ರಾದೇಶಿಕತೆ ಮತ್ತು ಲಿಂಗ ಸಮಾನತೆ ಸಾರುವ ಪಾಠಗಳನ್ನ, ಲೇಖಕರನ್ನ ಹೊರಗಿಟ್ಟು ಮಕ್ಕಳಿಗೆ ಕೇಸರೀಕರಣದ ಪಾಠ ಹೇಳಲು ಹೊರಟಿರುವುದು ವೈವಿಧ್ಯತೆಯ ತೊಟ್ಟಿಲಾದ ಭಾರತಕ್ಕೆ ಮಾಡುವ ಅಪಮಾನ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ರಾಜ್ಯದ ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಎಲ್ಲರೂ ಒಂದಾಗಿ ಅದನ್ನ ಮೆಟ್ಟಿನಿಲ್ಲುತ್ತಾರೆ ಎನ್ನುವುದನ್ನ ಕನ್ನಡಿಗರು ಹಲವು ಬಾರಿ ತೋರಿಸಿಕೊಟ್ಟಿದ್ದಾರೆ.
ಕರ್ನಾಟಕದ ಬಹುತ್ವಕ್ಕೆ ಮಾರಕವಾದ ಪಠ್ಯವನ್ನ ಮಕ್ಕಳ ಮೇಲೆ ಹೇರಲು ಕಾಂಗ್ರೆಸ್ ಬಿಡುವುದಿಲ್ಲ.
ಕನ್ನಡದ ನಾಡು, ನುಡಿ ಮತ್ತು ಸಾಹಿತಿಗಳ ರಕ್ಷಣೆಗೆ ಕಾಂಗ್ರೆಸ್ ಪಕ್ಷ ಸದಾ ಬದ್ಧವಾಗಿದೆ.
— Rahul Gandhi (@RahulGandhi) June 4, 2022
ರಾಜ್ಯದ ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಎಲ್ಲರೂ ಒಂದಾಗಿ ಅದನ್ನ ಮೆಟ್ಟಿನಿಲ್ಲುತ್ತಾರೆ ಎನ್ನುವುದನ್ನ ಕನ್ನಡಿಗರು ಹಲವು ಬಾರಿ ತೋರಿಸಿಕೊಟ್ಟಿದ್ದಾರೆ. ಕರ್ನಾಟಕದ ಬಹುತ್ವಕ್ಕೆ ಮಾರಕವಾದ ಪಠ್ಯವನ್ನ ಮಕ್ಕಳ ಮೇಲೆ ಹೇರಲು ಕಾಂಗ್ರೆಸ್ ಬಿಡುವುದಿಲ್ಲ. ಕನ್ನಡದ ನಾಡು, ನುಡಿ ಮತ್ತು ಸಾಹಿತಿಗಳ ರಕ್ಷಣೆಗೆ ಕಾಂಗ್ರೆಸ್ ಪಕ್ಷ ಸದಾ ಬದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಪಠ್ಯ ಬ್ರಾಹ್ಮಣೀಕರಣದ ಬಗ್ಗೆ ಹೇಳದೆ ‘ಮೂಗಿಗೆ ತುಪ್ಪ’ ಸವರಿದ ಬೊಮ್ಮಾಯಿ ಪತ್ರಿಕಾ ಹೇಳಿಕೆ!



ರಾಹುಲ್ ಗಾಂಧಿಯವರ ಈ ನಿಲುವು ಸ್ವಾಗತಾರ್ಹ.
Thats what protest was done by various educationist and even saints, literatureist and Kannada workers etc