Homeಮುಖಪುಟಭಾರತ್ ಜೋಡೋ ನ್ಯಾಯ ಯಾತ್ರೆ: ಲಖಿಂಪುರದಲ್ಲಿ ನಾಗರಿಕರ ಜೊತೆ ರಾಹುಲ್‌ ಸಂವಾದ

ಭಾರತ್ ಜೋಡೋ ನ್ಯಾಯ ಯಾತ್ರೆ: ಲಖಿಂಪುರದಲ್ಲಿ ನಾಗರಿಕರ ಜೊತೆ ರಾಹುಲ್‌ ಸಂವಾದ

- Advertisement -
- Advertisement -

ಭಾರತ್ ಜೋಡೋ ನ್ಯಾಯ ಯಾತ್ರೆ 7ನೇ ದಿನಕ್ಕೆ ಕಾಲಿಟ್ಟಿದೆ. ಅಸ್ಸಾಂನ ಲಖಿಂಪುರ ಜಿಲ್ಲೆಯಲ್ಲಿ ರಾಹುಲ್‌ ಗಾಂಧಿ ನಾಗರಿಕರ ಜೊತೆ ಸಂವಾದ ನಡೆಸಿದ್ದು, ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ.

ಇಂದು ಅಸ್ಸಾಂನ ಲಖಿಂಪುರ ಜಿಲ್ಲೆಯಿಂದ ಭಾರತ್ ಜೋಡೋ ನ್ಯಾಯ ಯಾತ್ರೆ ಪುನರಾರಂಭವಾಗಿತ್ತು. ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ, ಬಿಜೆಪಿ ಮತ್ತು ಆರೆಸ್ಸೆಸ್ ಹಿಂದೂಸ್ತಾನವನ್ನು ದೆಹಲಿಯಿಂದ ಒಂದೇ ಭಾಷೆ, ಒಬ್ಬ ನಾಯಕನಿಂದ ನಡೆಸಬೇಕು ಎಂದು ಬಯಸುತ್ತದೆ. ಅಸ್ಸಾಂ ಮುಖ್ಯಮಂತ್ರಿ ಹೇಮಂತ್ ಬಿಸ್ವ ಶರ್ಮಾ ಅವರು ದೇಶದ ಅತ್ಯಂತ ಭ್ರಷ್ಟ ಸಿಎಂ ಎಂದು ಹೇಳಿದ್ದಾರೆ.

ಅಸ್ಸಾಂನ ಮಜುಲಿಯಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಭಾರತೀಯ ಜನತಾ ಪಕ್ಷವು ಆದಿವಾಸಿಗಳನ್ನು ಅರಣ್ಯಕ್ಕೆ ಸೀಮಿತಗೊಳಿಸಲು ಮತ್ತು ಶಿಕ್ಷಣ ಮತ್ತು ಅವಕಾಶಗಳಿಂದ ವಂಚಿತರನ್ನಾಗಿಸಲು ಬಯಸುತ್ತದೆ. ಕಾಂಗ್ರೆಸ್, ಬುಡಕಟ್ಟು ಜನಾಂಗದವರನ್ನು ‘ಆದಿವಾಸಿಗಳು’ (ಮೊದಲ ನಿವಾಸಿಗಳು) ಎಂದು ಉಲ್ಲೇಖಿಸಿದರೆ, ಬಿಜೆಪಿ ಅವರನ್ನು ಕೇವಲ ‘ವನವಾಸಿಗಳು’ (ಅರಣ್ಯವಾಸಿಗಳು) ಎಂದು ಸೀಮಿತಗೊಳಿಸುತ್ತದೆ ಎಂದು ಅವರು ಹೇಳಿದರು.

ಕಳೆದ ವರ್ಷ ಮೇ ತಿಂಗಳಿನಿಂದ ಮಣಿಪುರದಲ್ಲಿ ಜನಾಂಗೀಯ ಕಲಹ ಮುಂದುವರಿದಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರಕ್ಕೆ ಭೇಟಿ ನೀಡದಿರುವ ಬಗ್ಗೆ ರಾಹುಲ್‌ ವಾಗ್ದಾಳಿ ನಡೆಸಿದರು. ಮಣಿಪುರದಲ್ಲಿ ಭಾರತದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಅಂತರ್ಯುದ್ಧದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಪ್ರಧಾನಿ ಒಂದೇ ಒಂದು ಬಾರಿಯೂ ರಾಜ್ಯಕ್ಕೆ ಭೇಟಿ ನೀಡಿಲ್ಲ. ಅಸ್ಸಾಂ ಸಿಎಂ ದೇಶದ ಅತ್ಯಂತ ಭ್ರಷ್ಟ ಸಿಎಂ, ಅವರು ಬಿಜೆಪಿಯ ಇತರ ಸಿಎಂಗಳಿಗೆ ಭ್ರಷ್ಟಾಚಾರ ನಡೆಸಲು ಕಲಿಸಬಹುದು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಜೆಂಗ್ರೈಮುಖ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗೌರವ್‌ ಗೊಗೋಯ್, ಯಾತ್ರೆ ಮೂಲಕ ನಾವು ಜನರ ಪ್ರಮುಖ ಸಮಸ್ಯೆಯನ್ನು ಎತ್ತಿ ತೋರಿಸುತ್ತೇವೆ. ಮಣಿಪುರದಲ್ಲಿ ನಾವು ಯಾತ್ರೆ ಪ್ರಾರಂಭಿಸಿದ್ದೇವೆ,  ಅಲ್ಲಿ ಹಿಂಸಾಚಾರ ನಡೆಯುತ್ತಿದೆ. ನಾಗಾಲ್ಯಾಂಡ್‌ನಲ್ಲಿ ಯಾತ್ರೆ ಸಾಗಿದೆ ಅಲ್ಲಿ ಶಾಂತಿ ಒಪ್ಪಂದದ ಭರವಸೆ ಈಡೇರಿಸಿಲ್ಲ. ಅಸ್ಸಾಂನಲ್ಲಿ ಜನರು ನಮಗೆ ಉದ್ಯೋಗಗಳು ಸಿಗುತ್ತಿಲ್ಲ, ಬೆಲೆಗಳು ಹೆಚ್ಚಿವೆ ಆದರೆ ಇವುಗಳನ್ನು ಪರಿಹರಿಸುವ ಬದಲು ಸಿಎಂ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಮತ್ತು ಅವರ ಕುಟುಂಬ ಮತ್ತು ಅವರ ಆಪ್ತರನ್ನು ಶ್ರೀಮಂತರನ್ನಾಗಿ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ನಮಗೆ ಹೇಳಿದರು. ಅದಕ್ಕಾಗಿಯೇ ಭ್ರಷ್ಟಾಚಾರದತ್ತ ಗಮನ ಹರಿಸಲಾಗಿದೆ ಎಂದು  ಗೌರವ್‌ ಗೊಗೋಯ್ ಹೇಳಿದ್ದಾರೆ.

7ನೇ ದಿನದ ಭಾರತ್‌ ಜೋಡೋ ನ್ಯಾಯ ಯಾತ್ರೆ ಅರುಣಾಚಲ ಪ್ರದೇಶದಲ್ಲಿ ಸಮಾಪ್ತಿಯಾಗಲಿದೆ. ಜೋರ್ಹತ್ ಪಟ್ಟಣದಲ್ಲಿ ಅನುಮತಿಸಲಾದ ಮಾರ್ಗ ಬದಲಿಸಿದ್ದಕ್ಕೆ ಯಾತ್ರೆ ಮುಖ್ಯ ಸಂಘಟಕ ಕೆಬಿ ಬೈಜು ವಿರುದ್ಧ ಜೋರ್ಹತ್‌ನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಯಾತ್ರೆಯ ಹಾದಿಯಲ್ಲಿ ದಿಢೀರ್‌ ಬದಲಾವಣೆಯಿಂದಾಗಿ ಸಂಚಾರ ವ್ಯತ್ಯಯವುಂಟಾಗಿತ್ತಲ್ಲದೆ ಬೈಜಿಯು ಮತ್ತಿತರರು ಟ್ರಾಫಿಕ್‌ ಬ್ಯಾರಿಕೇಡುಗಳನ್ನು ಮುರಿಯಲು ನೆರೆದಿದ್ದವರನ್ನು ಪ್ರಚೋದಿಸಿದರು ಮತ್ತು ಕರ್ತವ್ಯದಲ್ಲಿದ್ದ ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಭಾರತ್‌ ಜೋಡೋ ನ್ಯಾಯ ಯಾತ್ರೆಯು 67 ದಿನಗಳಲ್ಲಿ 6,713 ಕಿಮೀ ಕ್ರಮಿಸಲಿದ್ದು, 15 ರಾಜ್ಯಗಳ 110 ಜಿಲ್ಲೆಗಳ ಮೂಲಕ ಸಾಗಲಿದೆ. ಮಾರ್ಚ್ 20 ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ.

ಇದನ್ನು ಓದಿ: ಇಂದೋರ್‌: ಅನಾಥಾಶ್ರಮದಲ್ಲಿ ಮಕ್ಕಳ ಮೇಲೆ ದೌರ್ಜನ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...