Homeಮುಖಪುಟಮೋದಿ ಭಾರತ ಯುವಜನರಿಗೆ ಉದ್ಯೋಗ ಕೊಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ಮೋದಿ ಭಾರತ ಯುವಜನರಿಗೆ ಉದ್ಯೋಗ ಕೊಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ನರೇಂದ್ರ ಮೋದಿ ಸರ್ಕಾರವು ಪ್ರತಿವರ್ಷ ಎರಡು ಕೋಟಿ ಜನರಿಗೆ ಉದ್ಯೋಗ ನೀಡುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಜೊತೆಗೆ ಭಾರತದ ಆರ್ಥಿಕ ರಚನೆಯನ್ನು ನಾಶಪಡಿಸಿದೆ ಎಂದು ಆರೋಪಿಸಿದ್ದಾರೆ.

- Advertisement -
- Advertisement -

ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಮಾಡುತ್ತಿರುವ ಆರೋಪ ಮತ್ತು ಟೀಕೆಗಳ  ಮುಂದುವರಿದ ಭಾಗವಾಗಿ ‘ಮೋದಿ ಭಾರತ ಯುವಜನರಿಗೆ ಉದ್ಯೋಗ ನೀಡಲು ಸಾಧ್ಯವಿಲ್ಲ’ ಎಂದು ಟ್ವೀಟ್ ಮಾಡಿದ್ದಾರೆ.

ನರೇಂದ್ರ ಮೋದಿ ಸರ್ಕಾರವು ಪ್ರತಿವರ್ಷ ಎರಡು ಕೋಟಿ ಜನರಿಗೆ ಉದ್ಯೋಗ ನೀಡುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಜೊತೆಗೆ ಭಾರತದ ಆರ್ಥಿಕ ರಚನೆಯನ್ನು ನಾಶಪಡಿಸಿದೆ ಎಂದು ಆರೋಪಿಸಿದ್ದಾರೆ.

ಕೋಟ್ಯಂತರ ಜನರು ಉದ್ಯೋಗ ಕಳೆದುಕೊಳ್ಳುವಂತಹ ನೀತಿಗಳನ್ನು ಜಾರಿಗೆ ತಂದು ನಿರುದ್ಯೋಗ ಸಮಸ್ಯೆಯನ್ನು ಉಲ್ಬಣಗೊಳಿಸಿದ ಕೀರ್ತಿ ನರೇಂದ್ರ ಮೋದಿ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಟೀಕಿಸಿದ್ದಾರೆ.

“ರೊಜ್‌ಗಾರ್‌ ದೊ” (ಉದ್ಯೋಗವನ್ನು ಒದಗಿಸಿ) ಎಂಬ ಅಭಿಯಾನವನ್ನು ಪ್ರಾರಂಭಿಸಿರುವ ಅವರು ವಿಡಿಯೋವೊಂದನ್ನು ಪೋಸ್ಟ್‌ ಮಾಡಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಉದ್ಯೋಗವಿಲ್ಲದ ಯುವಜನರು ಮತ್ತು ಇತರರು ದನಿ ಎತ್ತಿ ಸರ್ಕಾರವನ್ನು ಜಾಗೃತಿಗೊಳಿಸುವಂತೆ ರಾಹುಲ್ ಒತ್ತಾಯಿಸಿದ್ದಾರೆ.

“ನರೇಂದ್ರ ಮೋದಿಜಿ ಪ್ರಧಾನಿಯಾದಾಗ, ಅವರು ಈ ದೇಶದ ಯುವಕರಿಗೆ ಪ್ರತಿ ವರ್ಷ ಎರಡು ಕೋಟಿ ಜನರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದರು. ಅವರು ಅವರಿಗೆ ಒಂದು ದೊಡ್ಡ ಕನಸನ್ನು ಸೃಷ್ಟಿಸಿದ್ದರು. ಆದರೆ ನಿಜವಾಗಿಯೂ ನರೇಂದ್ರ ಮೋದಿಯವರ ನೀತಿಗಳು, 14 ಕೋಟಿ ಜನರನ್ನು ಉದ್ಯೋಗರಹಿತರನ್ನಾಗಿ ಮಾಡಿದೆ” ಎಂದು ಅವರು ಹೇಳಿದ್ದಾರೆ.

“ನೋಟು ರದ್ದತಿ, ಜಿ ಎಸ್ ಟಿ ಮತ್ತು ತಯಾರಿಯಿಲ್ಲದ ಕೊರೊನಾ ಲಾಕ್ ಡೌನ್ ನಂತಹ ಅವೈಜ್ಞಾನಿಕ ನೀತಿಗಳಿಂದಾಗಿ ಸರ್ಕಾರವು ಭಾರತದ ಆರ್ಥಿಕ ರಚನೆಯನ್ನು ನಾಶಪಡಿಸಿದೆ. ಈಗ ಭಾರತವು ತನ್ನ ಯುವಜನರಿಗೆ ಉದ್ಯೋಗಗಳನ್ನು ನೀಡಲು ಸಾಧ್ಯವಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದರು.

ತಮ್ಮ ಪಕ್ಷದ ಯುವ ವಿಭಾಗವಾದ ಭಾರತೀಯ ಯುವ ಕಾಂಗ್ರೆಸ್ ಈ ವಿಷಯವನ್ನು ಕೈಗೆತ್ತಿಕೊಂಡು, “ರೋಜ್‌ಗಾರ್ ದೋ” ಚಳವಳಿಯ ಪ್ರಚಾರಕ್ಕಾಗಿ ಕಾರ್ಯಕ್ರಮಗಳನ್ನು ನಡೆಸುತ್ತದೆ ಎಂದು ಹೇಳಿದರು.

ಇದೇ ರೀತಿಯ ವೀಡಿಯೊವನ್ನು ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೆವಾಲಾ ಅವರು ಪೋಸ್ಟ್ ಮಾಡಿ, “ಉದ್ಯೋಗ ಪಡೆಯುವುದು ಯುವಕರ ಹಕ್ಕು. ಆ ಮೂಲಕ ಅವರು ಮತ್ತು ದೇಶ ಎರಡೂ ಪ್ರಗತಿ ಹೊಂದಬಹುದು” ಎಂದು ಹೇಳಿದ್ದಾರೆ.

ಸಿಎಮ್‌ಐಇ (ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ)ಯ ಅಂದಾಜಿನ ಪ್ರಕಾರ, ಮೊದಲ ಲಾಕ್‌ಡೌನ್ ಮಾಡಿದ ಒಂದು ತಿಂಗಳ ನಂತರ, ಏಪ್ರಿಲ್‌ ತಿಂಗಳಿನಲ್ಲಿ ಮಾತ್ರ ಸುಮಾರು 12 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ.

ಭಾರತದಲ್ಲಿ ನಿರುದ್ಯೋಗವು ಜೂನ್‌ನಲ್ಲಿ ಶೇಕಡಾ 11 ರಷ್ಟಿತ್ತು. ಇದು ಹಿಂದಿನ ತಿಂಗಳು ಶೇಕಡಾ 23.5 ರಷ್ಟಿತ್ತು. ಖಾಸಗಿ ಸಂಸ್ಥೆ ಸಿಎಮ್‌ಐಇ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಜೂನ್ ತಿಂಗಳಲ್ಲಿ 46 ಕೋಟಿಗೂ ಹೆಚ್ಚು ಜನರು ಉದ್ಯೋಗವನ್ನು ಹುಡುಕುತ್ತಿದ್ದಾರೆ.

ಕೊರೊನಾ ವೈರಸ್ ಬಿಕ್ಕಟ್ಟನ್ನು ಸರ್ಕಾರ ನಿಭಾಯಿಸುವ ಬಗ್ಗೆ ‘ಕೇಂದ್ರ ಸರ್ಕಾರದ ಆರ್ಥಿಕತೆಯ ನಿರ್ವಹಣೆಯು ಲಕ್ಷಾಂತರ ಕುಟುಂಬಗಳನ್ನು ನಾಶಪಡಿಸುವ ದುರಂತ’ ಎಂದು ರಾಹುಲ್ ಗಾಂಧಿಯವರು ಟೀಕಿಸಿದ್ದಾರೆ.

ಸಮೀಕ್ಷೆಗಳು ಸರ್ಕಾರದ 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ ಅನ್ನು ಟೀಕಿಸಿವೆ. ಇದು ಬಡವರಿಗೆ ನೇರ ಹಣಕಾಸಿನ ಬೆಂಬಲವನ್ನು ಒಳಗೊಂಡಿಲ್ಲ ಎಂದು ರಾಹುಲ್ ಗಾಂಧಿ ಪದೇ ಪದೇ ಒತ್ತಿ ಹೇಳಿದ್ದಾರೆ.


ಇದನ್ನೂ ಓದಿ: ಏಪ್ರಿಲ್‌ನಲ್ಲಿ ನಿರುದ್ಯೋಗ ದರ 27.1% ರಷ್ಟು ಏರಿಕೆ: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆಯೆಂದ CMIE

ಪಶ್ಚಿಮ ಬಂಗಾಳದ ನಿರುದ್ಯೋಗ ದರ, ದೇಶದ ಒಟ್ಟು ನಿರುದ್ಯೋಗ ದರಕ್ಕಿಂತ ಉತ್ತಮ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...