Homeಮುಖಪುಟ’ಹೇಳಿಕೆ ನೀಡುವಾಗ ರಾಹುಲ್‌ ಗಾಂಧಿ ಎಚ್ಚರಿಕೆಯಿಂದಿರಬೇಕು’: ಸುಪ್ರೀಂಕೋರ್ಟ್‌

’ಹೇಳಿಕೆ ನೀಡುವಾಗ ರಾಹುಲ್‌ ಗಾಂಧಿ ಎಚ್ಚರಿಕೆಯಿಂದಿರಬೇಕು’: ಸುಪ್ರೀಂಕೋರ್ಟ್‌

- Advertisement -
- Advertisement -

ರಫೇಲ್ ಯುದ್ಧ ವಿಮಾನ ಹಗರಣ ಪ್ರಕರಣದಲ್ಲಿ ಸರ್ಕಾರಕ್ಕೆ ನೀಡಿರುವ ಕ್ಲೀನ್ ಚಿಟ್ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್​ ತಿರಸ್ಕರಿಸಿದೆ. ತೀರ್ಪಿನಿಂದ ಕೇಂದ್ರ ಸರ್ಕಾರಕ್ಕೆ ಬಿಗ್​ ರಿಲೀಫ್​ ಸಿಕ್ಕಿದೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಸಲ್ಲಿಕೆಯಾಗಿದ್ದ ಮಾನಹಾನಿ ಕೇಸ್‌ನ್ನೂ ಸುಪ್ರೀಂಕೋರ್ಟ್‌ ಮುಕ್ತಾಯಗೊಳಿಸಿದೆ. ರಾಹುಲ್‌ ಗಾಂಧಿ ಹೇಳಿಕೆಗಳನ್ನು ನೀಡುವಾಗ ಎಚ್ಚರಿಕೆಯಿಂದಿರಬೇಕು ಮತ್ತು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಈ ಸಮಯದಲ್ಲಿ ಎಚ್ಚರಿಕೆ ನೀಡಿದೆ.

ಚುನಾವಣೆ ವೇಳೆ ಬಿಜೆಪಿ ವಿರುದ್ಧ ರಫೇಲ್‌ ಅಸ್ತ್ರ ಬಳಸಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಚೌಕಿದಾರ್‌‌ ಚೋರ್‌ ಹೈ ಎಂದು ಕೋರ್ಟ್‌ ಕೂಡ ಹೇಳಿದೆ ಎನ್ನುವ ಅರ್ಥದ ಮಾತುಗಳನ್ನಾಡಿದ್ದರು. ಆ ಮೂಲಕ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ರಾಹುಲ್‌ ಗಾಂಧಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿಯ ಮೀನಾಕ್ಷಿ ಲೇಖಿಯವರು ಮಾನಹಾನಿ ಕೇಸ್‌ ದಾಖಲಿಸಿದ್ದರು.

ಇದನ್ನೂ ಓದಿ: ರಫೇಲ್‌ ಮರುಪರಿಶೀಲನೆ ಅರ್ಜಿ ವಜಾ ಮಾಡಿದ ಸುಪ್ರೀಂ…

ಸುಪ್ರೀಂಕೋರ್ಟ್‌‌ನ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ಅವರನ್ನೊಳಗೊಂಡ ತ್ರಿಸದಸ್ಯ ಪೀಠ, ರಾಹುಲ್‌ ಕ್ಷಮೆಯಾಚನೆಯನ್ನು ಮನ್ನಿಸಿದೆ. ಹಾಗೂ ಭವಿಷ್ಯದಲ್ಲಿ ಹೇಳಿಕೆಗಳನ್ನು ನೀಡುವ ಮುನ್ನ ಸಾಕಷ್ಟು ಎಚ್ಚರಿಕೆ ವಹಿಸಿ ಎಂದು ಹೇಳಿದೆ.

ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿದ್ದ ರಾಹುಲ್‌ ಗಾಂಧಿ, ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಹೀಗಾಗಿ ನ್ಯಾಯಾಲಯದ ಎದುರು ಬೇಷರತ್ತಾಗಿ ರಾಹುಲ್‌ ಕ್ಷಮೆಯಾಚಿಸುತ್ತೇನೆಂದು ನ್ಯಾಯಪೀಠದಲ್ಲಿ ಹೇಳಿದ್ದರು. ರಾಹುಲ್‌ ಪರ ಹಿರಿಯ ವಕೀಲ ಎ.ಎಂ.ಸಿಂಘ್ವಿ, ರಾಹುಲ್‌ ಅವರು ತಾವು ತಪ್ಪು ಆರೋಪ ಮಾಡಿದ್ದಕ್ಕಾಗಿ ಕ್ಷಮೆಯಾಸಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದ್ದರು.

ಇತ್ತ ಬಿಜೆಪಿಯ ಮೀನಾಕ್ಷಿ ಲೇಖಿ ಪರ ವಕೀಲರಾದ ಹಿರಿಯ ವಕೀಲ ಮುಕುಲ್‌ ರೋಹಟಗಿ, ರಾಹುಲ್‌ ಗಾಂಧಿ ಕ್ಷಮೆಯಾಚನೆಯನ್ನು ತಿರಸ್ಕರಿಸಿ, ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಲ್ಲಿ ಬಹಿರಂಗವಾಗಿ ರಾಹುಲ್‌ ಕ್ಷಮೆ ಕೇಳಬೇಕು ಎಂದು ವಾದಿಸಿದ್ದರು.

ಮೇ 8ರಂದು ನ್ಯಾಯಾಲಯಕ್ಕೆ ಹಾಜರಾಗಿದ್ದ ರಾಹುಲ್‌ ಗಾಂಧಿ, ಬೇಷರತ್ತಾದ ಕ್ಷಮೆಯಾಚಿಸಿದ್ದರು. ನ್ಯಾಯಾಲಯದ ಬಗ್ಗೆ ಗೌರವವಿದೆ ಎಂದು ಹೇಳಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಬಿಜೆಪಿಗೆ ಮತ ಹಾಕುವಂತೆ...

0
ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಅಧೀರ್ ರಂಜನ್ ಚೌಧರಿ ಅವರಿ ಬಿಜೆಪಿ ಪರ ಮಾತನಾಡಿದ್ದಾರೆ ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ. ವಿಡಿಯೋದಲ್ಲಿ " ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷಕ್ಕೆ ಮತ...