Homeಮುಖಪುಟಬಿಜೆಪಿ ಸರ್ಕಾರ ಪ್ರಚಾರಕ್ಕೆ ಕೋಟ್ಯಂತರ ಖರ್ಚು ಮಾಡುತ್ತದೆ, ಆದರೆ ಮಕ್ಕಳಿಗೆ ಔಷಧಕ್ಕೆ ಹಣವಿಲ್ಲ: ರಾಹುಲ್ ಗಾಂಧಿ

ಬಿಜೆಪಿ ಸರ್ಕಾರ ಪ್ರಚಾರಕ್ಕೆ ಕೋಟ್ಯಂತರ ಖರ್ಚು ಮಾಡುತ್ತದೆ, ಆದರೆ ಮಕ್ಕಳಿಗೆ ಔಷಧಕ್ಕೆ ಹಣವಿಲ್ಲ: ರಾಹುಲ್ ಗಾಂಧಿ

- Advertisement -
- Advertisement -

ಮಹಾರಾಷ್ಟ್ರದ ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ 24 ಮಂದಿ ಸಾವನ್ನಪ್ಪಿರುವ ಬಗ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿ ಸರ್ಕಾರ ಪ್ರಚಾರಕ್ಕಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತದೆ ಆದರೆ ಮಕ್ಕಳಿಗೆ ಔಷಧಗಳಿಗೆ ಹಣವಿಲ್ಲ ಎಂದು ವಾಗ್ಧಾಳಿ ನಡೆಸಿದ್ದಾರೆ.

ಮಹಾರಾಷ್ಟ್ರದ ನಾಂದೇಡ್‌ನ ಸರಕಾರಿ ಆಸ್ಪತ್ರೆಯಲ್ಲಿ 12 ನವಜಾತ ಶಿಶುಗಳು ಸೇರಿ ಕಳೆದ 24 ಗಂಟೆಯಲ್ಲಿ 24 ಮಂದಿ ಮೃತಪಟ್ಟಿದ್ದರು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ರಾಹುಲ್‌ ಗಾಂಧಿ, ಸರಕಾರಿ ಆಸ್ಪತ್ರೆಯಲ್ಲಿ ಔಷಧಗಳ ಕೊರತೆಯಿಂದ ಸಂಭವಿಸಿದ 12 ನವಜಾತ ಶಿಶುಗಳು ಸೇರಿ 24 ಮಂದಿಯ ಸಾವು ಆಘಾತಕಾರಿಯಾಗಿದೆ. ಎಲ್ಲಾ ದುಃಖಿತ ಕುಟುಂಬಗಳಿಗೆ ಸಂತಾಪಗಳು ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರ ಪ್ರಚಾರಕ್ಕೆ ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ. ಆದರೆ ಮಕ್ಕಳಿಗೆ ಔಷಧಿ ಕೊಡಿಸಲು ಹಣವಿಲ್ಲ, ಬಿಜೆಪಿಯ ದೃಷ್ಟಿಯಲ್ಲಿ ಬಡವರ ಜೀವಕ್ಕೆ ಬೆಲೆ ಇಲ್ಲ ಎಂದು ರಾಹುಲ್‌ ವಾಗ್ಧಾಳಿ ನಡೆಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಈ ಘಟನೆಯ ಕುರಿತು ಮೋದಿ ಮೌನ ಮುರಿಯುವಂತೆ ಆಗ್ರಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಘಟನೆ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ವರದಿ ಪ್ರಕಾರ ಈ ಸಾವುಗಳಿಗೆ ಔಷಧಿಗಳ ಅಲಭ್ಯತೆ ಒಂದು ಪ್ರಮುಖ ಕಾರಣ ಎಂದು ವರದಿಯಾಗಿದೆ. ಇದು ಗಂಭೀರ ವಿಚಾರ. ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸರಕಾರ ಪ್ರಚಾರಕ್ಕಿಂತ ತಳಮಟ್ಟದಲ್ಲಿ ಕೆಲಸ ಮಾಡಬೇಕು ಎಂದು ಕಾಂಗ್ರೆಸ್ ಹೇಳಿದೆ.

ಇದನ್ನು ಓದಿ: ಬಿಹಾರ ಸರಕಾರದಂತೆ ಕರ್ನಾಟಕದಲ್ಲೂ ಜಾತಿ ಗಣತಿ ವರದಿ ಬಹಿರಂಗಪಡಿಸಬೇಕು: ಬಿ.ಕೆ ಹರಿಪ್ರಸಾದ್‌

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...