Homeಮುಖಪುಟಕಾಂಗ್ರೆಸ್‌ನಲ್ಲಿದ್ದು ಬಿಜೆಪಿಗೆ ಕೆಲಸ ಮಾಡುವವರನ್ನು ಮೊದಲು ಹೊರಗಿಡಬೇಕಿದೆ : ರಾಹುಲ್ ಗಾಂಧಿ

ಕಾಂಗ್ರೆಸ್‌ನಲ್ಲಿದ್ದು ಬಿಜೆಪಿಗೆ ಕೆಲಸ ಮಾಡುವವರನ್ನು ಮೊದಲು ಹೊರಗಿಡಬೇಕಿದೆ : ರಾಹುಲ್ ಗಾಂಧಿ

- Advertisement -
- Advertisement -

ಬಿಜೆಪಿಗಾಗಿ ಕೆಲಸ ಮಾಡುತ್ತಿರುವ ತಮ್ಮ ಪಕ್ಷದ ಕಾರ್ಯಕರ್ತರು ಮತ್ತು ನಾಯಕರನ್ನು ಹೊರಗಿಡುವ ಅವಶ್ಯಕತೆಯಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ (ಮಾ.8) ಹೇಳಿದ್ದಾರೆ.

ಎರಡು ದಿನಗಳ ಗುಜರಾತ್ ಭೇಟಿಯ ಎರಡನೇ ದಿನದಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ನಮ್ಮ ಪಕ್ಷ ತನ್ನ ಜವಾಬ್ದಾರಿಗಳನ್ನು ಪೂರೈಸುವವರೆಗೆ ರಾಜ್ಯದ ಜನರು ಮತ ಚಲಾಯಿಸುವುದಿಲ್ಲ” ಎಂದಿದ್ದಾರೆ.

ಮೂರು ದಶಕಗಳಿಗೂ ಹೆಚ್ಚು ಕಾಲದ ಬಿಜೆಪಿ ಆಡಳಿತದಲ್ಲಿ ತೋರಿದ ದೃಷ್ಠಿಕೋನ ವಿಫಲವಾದ ಕಾರಣ ಗುಜರಾತ್ ಜನರು ಹೊಸ ದೃಷ್ಟಿಕೋನಕ್ಕಾಗಿ ಎದುರು ನೋಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ರಾಜ್ಯವು ಹೊಸ ದಾರಿಯನ್ನು ನೋಡುತ್ತಿಲ್ಲ. ಕಾಂಗ್ರೆಸ್‌ಗೆ ಹೊಸ ದಾರಿ ತೋರಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

“ಗುಜರಾತ್‌ ಕಾಂಗ್ರೆಸ್‌ನಲ್ಲಿ ಎರಡು ರೀತಿಯ ನಾಯಕರು ಮತ್ತು ಕಾರ್ಯಕರ್ತರಿದ್ದಾರೆ. ಒಂದು ಜನರೊಂದಿಗೆ ಪ್ರಾಮಾಣಿಕರಾಗಿರುವವರು, ಅವರಿಗಾಗಿ ಹೋರಾಡುವವರು, ಅವರನ್ನು ಗೌರವಿಸುವವರು ಮತ್ತು ಕಾಂಗ್ರೆಸ್‌ನ ಸಿದ್ಧಾಂತವನ್ನು ಹೃದಯದಲ್ಲಿ ಇಟ್ಟುಕೊಂಡಿರುವವರು. ಮತ್ತೊಂದು ಜನರಿಂದ ದೂರವಾಗಿರುವರು. ಅವರು ದೂರದಲ್ಲಿ ಕುಳಿತುಕೊಳ್ಳುತ್ತಾರೆ. ಜನರನ್ನು ಗೌರವಿಸುವುದಿಲ್ಲ ಮತ್ತು ಅವರಲ್ಲಿ ಅರ್ಧದಷ್ಟು ಜನರು ಬಿಜೆಪಿಯೊಂದಿಗಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ನಮ್ಮ ಮೊದಲ ಕೆಲಸ ಈ ಎರಡು ಗುಂಪುಗಳನ್ನು ಬೇರ್ಪಡಿಸುವುದು. ನಾವು ಕಠಿಣ ಕ್ರಮ ತೆಗೆದುಕೊಂಡು 30-40 ಜನರನ್ನು ತೆಗೆದು ಹಾಕಬೇಕಾದರೆ, ಅದನ್ನೂ ಮಾಡಬೇಕು. ಒಳಗಿನಿಂದ ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದರೆ, ಅವರನ್ನು ತೆಗೆದುಹಾಕಿ, ಅವರು ಹೊರಗಿನಿಂದ ಬಿಜೆಪಿಗಾಗಿ ಕೆಲಸ ಮಾಡಲು ಬಿಡಬೇಕು” ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ಜನರಿಂದ ಮತ ಕೇಳುವ ಮೊದಲು ತನ್ನ ಜವಾಬ್ದಾರಿಗಳನ್ನು ಪೂರೈಸಬೇಕು ಎಂದು ರಾಹುಲ್ ಒತ್ತಿ ಹೇಳಿದ್ದಾರೆ.

“ನಾವು ಇಲ್ಲಿ ಅಧಿಕಾರಕ್ಕೆ ಬಂದು ಹೋಗಿ ಸುಮಾರು 30 ವರ್ಷಗಳು ಕಳೆದಿವೆ. ನಾನು ಇಲ್ಲಿಗೆ ಬಂದಾಗಲೆಲ್ಲಾ, 2007, 2012, 2017, 2022, 2027 ರ ವಿಧಾನಸಭಾ ಚುನಾವಣೆಗಳ ಬಗ್ಗೆ ಚರ್ಚೆ ನಡೆಯುತ್ತದೆ. ಆದರೆ, ಇಲ್ಲಿ ಪ್ರಶ್ನೆ ಚುನಾವಣೆಗಳದ್ದಲ್ಲ. ನಾವು ನಮ್ಮ ಜವಾಬ್ದಾರಿಗಳನ್ನು ಪೂರೈಸುವವರೆಗೆ ಗುಜರಾತ್ ಜನರು ನಮ್ಮನ್ನು ಚುನಾವಣೆಯಲ್ಲಿ ಗೆಲ್ಲಿಸುವುದಿಲ್ಲ” ಎಂದು ರಾಹುಲ್ ಗಾಂಧಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ನಾವು ನಮ್ಮ ಜವಾಬ್ದಾರಿಗಳನ್ನು ಪೂರೈಸುವವರೆಗೆ ಗುಜರಾತ್ ಜನರನ್ನು ಅಧಿಕಾರಕ್ಕೆ ತನ್ನಿ ಎಂದು ಕೇಳಬಾರದು. ನಾವು ಇದನ್ನು ಮಾಡುವ ದಿನ ಗುಜರಾತ್ ಜನರು ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಬೆಂಬಲವನ್ನು ನೀಡುತ್ತಾರೆ ಎಂದು ನಾನು ನಿಮಗೆ ಖಾತರಿ ನೀಡುತ್ತೇನೆ” ಎಂದಿದ್ದಾರೆ.

ಗುಜರಾತ್‌ ಕಾಂಗ್ರೆಸ್‌ ಘಟಕದ ಕಾರ್ಯವೈಖರಿಯನ್ನು ಟೀಕಿಸಿದ ರಾಹುಲ್ ಗಾಂಧಿ, “ಗುಜರಾತ್ ಮುಂದುವರಿಯಲು ಸಿದ್ದವಿದೆ. ನಾನು ಕಾಂಗ್ರೆಸ್ ಪಕ್ಷದ ಸದಸ್ಯ, ಆದರೆ ನಾನು ದಾರಿ ತೋರಿಸಲು ಸಾಧ್ಯವಿಲ್ಲ ಎನ್ನುತ್ತಿದ್ದೇನೆ. ನಾನು ನಾಚಿಕೆಯಿಂದ, ಭಯದಿಂದ ಮಾತನಾಡುತ್ತಿಲ್ಲ” ಎಂದು ಹೇಳಿದ್ದಾರೆ.

“ನಮ್ಮ ಕಾರ್ಯಕರ್ತರಾಗಲಿ, ರಾಹುಲ್ ಗಾಂಧಿಯಾಗಲಿ, ನಮ್ಮ ಪ್ರಧಾನ ಕಾರ್ಯದರ್ಶಿಯಾಗಲಿ, ನಮ್ಮ ಪಿಸಿಸಿ ಅಧ್ಯಕ್ಷರಾಗಲಿ, ಗುಜರಾತ್‌ಗೆ ದಾರಿ ತೋರಿಸಲು ನಮಗೆ ಸಾಧ್ಯವಾಗುತ್ತಿಲ್ಲ ಎಂಬುದನ್ನು ನಾನು ನಿಮ್ಮ ಮುಂದೆ ಹೇಳಲು ಬಯಸುತ್ತೇನೆ. ಇಲ್ಲಿಯವರೆಗೆ, ಕಳೆದ 30 ವರ್ಷಗಳಲ್ಲಿ ಗುಜರಾತ್ ನಮ್ಮಿಂದ, ನನ್ನಿಂದ, ನಮ್ಮ ಪಿಸಿಸಿ ಅಧ್ಯಕ್ಷರಿಂದ, ನಮ್ಮ ಉಸ್ತುವಾರಿಯಿಂದ ಏನನ್ನು ನಿರೀಕ್ಷಿಸಿದೆಯೋ ಅದನ್ನು ನಾವು ಪೂರೈಸಲು ಸಾಧ್ಯವಾಗಿಲ್ಲ” ಎಂದು ರಾಹುಲ್ ಗಾಂಧಿ ಅಸಮಾಧಾನ ಹೊರಹಾಕಿದ್ದಾರೆ.

ಕಾಂಗ್ರೆಸ್‌ನ ಚುನಾವಣಾ ಬಲದ ಬಗ್ಗೆ ಮಾತನಾಡಿದ ಅವರು, “ಗುಜರಾತ್‌ನಲ್ಲಿ ವಿರೋಧ ಪಕ್ಷಗಳು ಶೇಕಡಾ 40 ರಷ್ಟು ಮತಗಳನ್ನು ಹೊಂದಿವೆ. ಗೆಲ್ಲಲು ನಮಗೆ ಕೇವಲ ಶೇಕಡಾ 5ರಷ್ಟು ಹೆಚ್ಚಳ ಮಾತ್ರ ಬೇಕು. ತೆಲಂಗಾಣದಲ್ಲಿ ನಾವು ಮತ ​​ಪಾಲನ್ನು ಶೇಕಡಾ 22ರಷ್ಟು ಹೆಚ್ಚಿಸಿದ್ದೇವೆ. ಇಲ್ಲಿಯೂ ಸಹ ಅದನ್ನು ಮಾಡಬಹುದು. ಆದರೆ ಪಕ್ಷವನ್ನು ಫಿಲ್ಟರ್ ಮಾಡದೆ, ಅದು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಜನರೊಂದಿಗೆ ಮತ್ತೆ ಸಂಪರ್ಕ ಸಾಧಿಸುವಂತೆ ರಾಹುಲ್ ಕಾಂಗ್ರೆಸ್ ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದ್ದಾರೆ ಮತ್ತು ಅವರ ಬದ್ಧತೆಯ ಭರವಸೆ ನೀಡಿದ್ದಾರೆ. “ನಾನು ಗುಜರಾತ್ ಅನ್ನು ಅರ್ಥಮಾಡಿಕೊಳ್ಳಲು ಬಯಸುತ್ತೇನೆ, ಗುಜರಾತ್ ಜನರೊಂದಿಗೆ ಸಂಬಂಧವನ್ನು ಬೆಳೆಸಲು ಬಯಸುತ್ತೇನೆ. ವಿಶ್ವಾಸವು ನಿಮ್ಮೊಳಗೆ ಇದೆ; ಅದನ್ನು ಹೊರತರುವುದು ನನ್ನ ಕೆಲಸ” ಎಂದು ಹೇಳಿದ್ದಾರೆ.

ಎನ್ಇಪಿ, ಕ್ಷೇತ್ರ ಪುನರ್ವಿಂಗಡನೆ, ವಕ್ಫ್‌ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Rahul Gandhiji… Am telling u behind ur Circle all Entire Leaders including #kcvenugopal #mallikarjunkarge#Change these people. They need Priyaka Gandhi to become prime minister not for u.. watch social media people like priyanka Gandhi
    My SUGGESTION TRY..

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...