Homeಮುಖಪುಟ'ರಾಹುಲ್ ಗಾಂಧಿ ಅವಿವಾಹಿತ, ಎಚ್ಚರಿಕೆಯಿಂದಿರಿ': ಮಾಜಿ ಸಂಸದನ ಹೇಳಿಕೆಗೆ ಭಾರಿ ವಿರೋಧ

‘ರಾಹುಲ್ ಗಾಂಧಿ ಅವಿವಾಹಿತ, ಎಚ್ಚರಿಕೆಯಿಂದಿರಿ’: ಮಾಜಿ ಸಂಸದನ ಹೇಳಿಕೆಗೆ ಭಾರಿ ವಿರೋಧ

- Advertisement -

ಕೆಲವು ದಿನಗಳ ಹಿಂದೆ ಕೇರಳದ ಚುನಾವಣಾ ಪ್ರಚಾರದ ವೇಳೆ ರಾಹುಲ್ ಗಾಂಧಿ ವಿರುದ್ಧ ಎಡಪಕ್ಷ ಸಿಪಿಎಂ ಬೆಂಬಲಿತ ಮಾಜಿ ಸಂಸದರು ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳು ಭಾರಿ ಆಕ್ರೋಶ ವ್ಯಕ್ತಪಡಿಸಿವೆ. ರಾಹುಲ್ ಗಾಂಧಿ ಅವಿವಾಹಿತ. ಅವರು ಮಹಿಳಾ ಕಾಲೇಜುಗಳಿಗೆ ತೆರಳುತ್ತಿದ್ದಾರೆ.. ಅವರಿಂದ ದೂರವಿರಿ ಎಂಬ ಹೇಳಿಕೆಗಳನ್ನು ನೀಡಿದ್ದರು.

ಉಡುಂಬಂಚೋಳ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ರಾಜ್ಯ ವಿದ್ಯುತ್ ಸಚಿವ ಎಂ.ಎಂ.ಮಣಿ ಅವರ ಚುನಾವಣಾ ರ್‍ಯಾಲಿಯಲ್ಲಿ ಇಡುಕ್ಕಿ ಕ್ಷೇತ್ರದ ಮಾಜಿ ಸ್ವತಂತ್ರ ಸಂಸದ ಜಾಯ್ಸ್ ಜಾರ್ಜ್ ಈ ಹೇಳಿಕೆಗಳನ್ನು ನೀಡಿದ್ದರು. ಈ ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕೇರಳದಲ್ಲಿ ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸಿದೆ.

ವಿವಾದಕ್ಕೆ ಪ್ರತಿಕ್ರಿಯಿಸಿರುವ, ಸಿಪಿಎಂ ಇಂತಹ ಹೇಳಿಕೆಗಳನ್ನು ನೀಡಬಾರದು ಎಂದು ಹೇಳುವ ಮೂಲಕ ವಿವಾದದಿಂದ ದೂರವಿರಲು ಪ್ರಯತ್ನಿಸಿದೆ.

ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

“ಅವರು (ರಾಹುಲ್ ಗಾಂಧಿ) ಮಹಿಳಾ ಕಾಲೇಜುಗಳಿಗೆ ಮಾತ್ರ ಭೇಟಿ ನೀಡುತ್ತಾರೆ. ಹುಡುಗಿಯರಿಗೆ ಹಲವು ಪಟ್ಟುಗಳನ್ನು ಹೇಳಿ ಕೊಡುತ್ತಾರೆ. ಆದರೆ, ನನ್ನ ಪ್ರೀತಿಯ ಮಕ್ಕಳೇ ಕೇಳಿ, ಅವರ ಮುಂದೆ ಬಾಗುವುದು ಮತ್ತು ತಿರುಗುವುದು ಮಾಡಬೇಡಿ. ಏಕೆಂದರೆ ಅವರು ಅವಿವಾಹಿತ” ಎಂದು ಎಚ್ಚರಿಕೆ ನೀಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಚುನಾವಣಾ ಪ್ರಚಾರಕ್ಕೆ ರಾಜ್ಯಕ್ಕೆ ತೆರಳಿದ್ದ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ, ಕೊಚ್ಚಿಯ ಪ್ರಸಿದ್ಧ ಸೇಂಟ್ ತೆರೇಸಾ ಕಾಲೇಜಿನಲ್ಲಿ ‘ಐಕಿಡೊ’ ಪಾಠ ಹೇಳಿಕೊಟ್ಟು, ಸಂವಾದ ನಡೆಸಿದ್ದರು. ಅಕಿಡೊ ಜಪಾನಿನ ಸಮರ ಕಲೆಯಾಗಿದೆ. ಇದನ್ನೇ ಇಟ್ಟುಕೊಂಡು ಜಾಯ್ಸ್ ಜಾರ್ಜ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.

“ಮಾಜಿ ಸಂಸದ ಜಾಯ್ಸ್ ಜಾರ್ಜ್ ಅವರ ಹೇಳಿಕೆ ಅತ್ಯಂತ ಶೋಚನೀಯವಾಗಿದೆ. ಅವರು ರಾಷ್ಟ್ರೀಯ ನಾಯಕನ ವಿರುದ್ಧ ಇಂತಹ ಭಾಷೆಯನ್ನು ಬಳಸಿದ್ದಾರೆ. ಕೇರಳದಲ್ಲಿ ರಾಹುಲ್ ಗಾಂಧಿಯವರ ಕಾರ್ಯಕ್ರಮಗಳಲ್ಲಿ ಲಕ್ಷಾಂತರ ಜನರು ಭಾಗವಹಿಸುತ್ತಿರುವುದರಿಂದ ಸಿಪಿಎಂ ಆತಂಕಕ್ಕೊಳಗಾಗಿದೆ” ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ರಮೇಶ್ ಚೆನ್ನಿಥಾಲಾ ಹೇಳಿದ್ದಾರೆ.

ಇದನ್ನೂ ಓದಿ: 50ನೇ ವರ್ಷದಲ್ಲಿಯೂ ಫಿಟ್ನೆಸ್ ತೋರಿಸಿದ ರಾಹುಲ್ ಗಾಂಧಿ: ಪುಷ್-ಅಪ್ ವಿಡಿಯೋ ವೈರಲ್

“ಮಾಜಿ ಸಂಸದರ ಹೇಳಿಕೆ ಮಹಿಳೆಯರಿಗೆ ಮಾಡಿದ ಅವಮಾನ ಮಾತ್ರವಲ್ಲ, ಒಟ್ಟಾರೆಯಾಗಿ ಕೇರಳದ ಸಮಾಜಕ್ಕೆ ಮಾಡಿದ ಅವಮಾನ. ಸಿಪಿಎಂ ಮಹಿಳಾ ವಿರೋಧಿ ಹೇಳಿಕೆಯನ್ನು ಹಿಂತೆಗೆದುಕೊಳ್ಳಬೇಕು ಮತ್ತು ಕ್ಷಮೆಯಾಚಿಸಬೇಕು” ಎಂದು ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಹೇಳಿದ್ದಾರೆ.

ಆದರೆ, ತಾವು ಯಾವುದೇ ಮಹಿಳಾ ವಿರೋಧಿ ಟೀಕೆಗಳನ್ನು ಮಾಡಿಲ್ಲ. ರಾಹುಲ್ ಗಾಂಧಿ ಅವರನ್ನು ಮಾತ್ರ ಟೀಕಿಸಿದ್ದೇನೆ ಎಂದು ಸಂಸದ ಜಾರ್ಜ್ ಅವರ ಸಮರ್ಥನೆಯನ್ನು ಪಿಟಿಐ ಉಲ್ಲೇಖಿಸಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ “ರಾಹುಲ್ ಗಾಂಧಿಯನ್ನು ವೈಯಕ್ತಿಕ ಮಟ್ಟದಲ್ಲಿ ಟೀಕಿಸುವುದು ನಮ್ಮ ಶೈಲಿಯಲ್ಲ. ರಾಜಕೀಯವಾಗಿ, ನಾವು ಅಗತ್ಯವಿರುವ ಕಡೆ ಅವರನ್ನು ವಿರೋಧಿಸುವುದನ್ನು ಮುಂದುವರಿಸುತ್ತೇವೆ. ಆದರೆ ಈ ರೀತಿಯಲ್ಲಿ ಅಲ್ಲ” ಎಂದಿದ್ದಾರೆ.


ಇದನ್ನೂ ಓದಿ: ಕೇರಳದಲ್ಲಿನ ಏಕೈಕ ಬಿಜೆಪಿ ಖಾತೆಯನ್ನೂ ಕ್ಲೋಸ್ ಮಾಡುತ್ತೇವೆ: ಪಿಣರಾಯಿ ವಿಜಯನ್

ನಾನು ಗೌರಿ ಡೆಸ್ಕ್
+ posts

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಂಗನಾ ಪೋಸ್ಟ್‌ಗಳಿಗೆ ಸೆನ್ಸಾರ್‌ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

0
ನಟಿ ಕಂಗನಾ ರಣಾವತ್ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಮಾಡುವ ಪೋಸ್ಟ್‌ಗಳನ್ನು ಇನ್ನು ಮುಂದೆ ಸೆನ್ಸಾರ್ ಮಾಡಬೇಕು ಎಂದು ಒತ್ತಾಯಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ ಎಂದು ಬಾರ್ ಅಂಡ್‌‌ ಬೆಂಚ್ ವರದಿ...
Wordpress Social Share Plugin powered by Ultimatelysocial
Shares